ರೇಣುಕಾಸ್ವಾಮಿ ಕೊಲೆ ಕೇಸ್ ಜಾರ್ಜ್ ಶೀಟ್ ಗೌಪ್ಯ ಮಾಹಿತಿ ಮಾದ್ಯಮ ಪ್ರಸಾರಕ್ಕೆ ನಿರ್ಬಂಧ| ದರ್ಶನ್ ಮನವಿ ಪುರಸ್ಕರಿಸಿದ ನ್ಯಾಯಾಲಯ
ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಮಾಡಿದ್ದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸಲ್ಲಿರುವ ಚಾರ್ಜ್ಶೀಟ್ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ ಅಥವಾ ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ & ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಸೋಮವಾರ ನಟ ದರ್ಶನ್ ಪರ ವಕೀಲರು ಚಾರ್ಜ್ಶೀಟ್ನಲ್ಲಿದ್ದ ಮಾಹಿತಿ ಸೋರಿಕೆಯಾಗಿದ್ದು, ಅವುಗಳ ಪ್ರಸಾರಕ್ಕೆ ತಡೆ ಕೊಡಬೇಕು ಎಂದು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಸಿದ್ದರು. ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಾಲಯ










