ರಾಜ್ಯ

ರಾಜ್ಯದಲ್ಲಿ ಸೆ.30ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆ ವರದಿಯಾಗಿದೆ. ಮುಂದುವರಿದಂತೆ ಭಾನುವಾರ(ಸೆ.29) ಕೂಡಾ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳಭಾಗದಿಂದ […]

ರಾಜ್ಯದಲ್ಲಿ ಸೆ.30ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29 ರಿಂದ ಅ.5ರವರೆಗೆ ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ಗ್ರಹಗಳು, ರಾಶಿ, ನಕ್ಷತ್ರಗಳು ಸಾಮಾನ್ಯರ ಮೇಲೆ ಅಸಾಮಾನ್ಯ ಪ್ರಭಾವ ಬೀರುತ್ತವೆ ಎಂಬುದು ಶಾಸ್ತ್ರ ನಂಬಿಕೆ. ದಿನಚರಿ ಆರಂಭದಲ್ಲಿ ಜ್ಯೋತಿಷ ಶಾಸ್ತ್ರವು ರಾಶಿಗಳ ಫಲವನ್ನು ತಿಳಿದುಕೊಳ್ಳಲು ಸಲಹೆ ನೀಡುತ್ತದೆ. ಈ ವಾರ (ಸೆ.29-ಅ.05) ಯಾವ ರಾಶಿಗಳಿಗೆ ಶುಭ? ಯಾರಿಗೆ ಲಾಭ? ತರುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ ರಾಶಿ:ಅಮಾವಾಸ್ಯೆ ನಂತರ ಕಾಲರಾತ್ರಿಯೆಂಬ ದೇವಿಯು ಶರದ್ರುತುವಿನಲ್ಲಿ ಉದಯಿಸಿ ನವರಾತ್ರಿ ಆರಂಭವಾಗುತ್ತದೆ. ಈ ಪರ್ವವು ಮೇಷ ರಾಶಿಯವರಿಗೆ ಅತ್ಯಂತ ಲಾಭವನ್ನು ತರುತ್ತದೆ. ಮಾತಾಪಿತರನ್ನು ವಂದಿಸಿ.

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29 ರಿಂದ ಅ.5ರವರೆಗೆ ನಿಮ್ಮ ರಾಶಿಗಳ ಗೋಚಾರಫಲ Read More »

ಗೃಹಲಕ್ಷ್ಮಿ ಹಣದ ನಿರೀಕ್ಷೆಯ ಮಹಿಳೆಯರಿಗೆ ಸಿಹಿಸುದ್ದಿ

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಹಣದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನ ಸಿಹಿಸುದ್ದಿ, ಒಂದು ತಿಂಗಳ ಹಣ ಜಮಾವಣೆ ಮಾಡಲು ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬ‌ರ್ ತಿಂಗಳು ಕೊನೆಗೆ ಬಂದರೂ ಜುಲೈ, ಆಗಸ್ಟ್ ತಿಂಗಳುಗಳ ಗೃಹಲಕ್ಷ ಹಣ ಮಾತ್ರ ಮಹಿಳೆಯರ ಖಾತೆಯನ್ನು ಸೇರಿಲ್ಲ. ಇದೀಗ ಜುಲೈ ತಿಂಗಳ ಹಣ ಒದಗಿಸಲು ಸಚಿವರು ಹಣಕಾಸು ಇಲಾಖೆಗೆ ತಾಕೀತು ಮಾಡಿದ್ದಾರೆ.ಹಣ ಜಮೆ ಆಗದಿರುವುದಕ್ಕೆ ಕಾರಣ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗದಿರುವುದು. ಸದ್ಯ ಇಲಾಖೆಯಿಂದ ಮೂರು ತಿಂಗಳ

ಗೃಹಲಕ್ಷ್ಮಿ ಹಣದ ನಿರೀಕ್ಷೆಯ ಮಹಿಳೆಯರಿಗೆ ಸಿಹಿಸುದ್ದಿ Read More »

ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ‌ಹಿಂತಿರುಗಿಸಿದ ಗ್ರಾಮ ಆಡಳಿತಾಧಿಕಾರಿ| ಪ್ರಶಸ್ತಿ ಹಿಂತಿರುಗಿಸಲು ಅಚ್ಚರಿಯ ಕಾರಣ ನೀಡಿದ ಪ್ರಥ್ವಿರಾಜ್‌

ಸಮಗ್ರ ನ್ಯೂಸ್: ರಾಜ್ಯ ಸರಕಾರದ ಕಂದಾಯ ಇಲಾಖೆಯ ನೀಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಆಡಳಿತ ಅಧಿಕಾರಿ ಹಿಂದಿರುಗಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮಪಂಚಾಯತ್ ಗ್ರಾಮ ಆಡಳಿತ ಅಧಿಕಾರಿ ಪೃಥ್ವಿರಾಜ್.ಪಿ.ಶೆಟ್ಟಿ ಪ್ರಶಸ್ತಿ ಹಿಂದಿರುಗಿಸಿದ ಅಧಿಕಾರಿ, ರಾಜ್ಯ ಕಂದಾಯ ಇಲಾಖೆ ಪ್ರತಿ ವರ್ಷ ನೀಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿ ಈ ಬಾರಿ ಪ್ರಥ್ವಿರಾಜ್ ಅವರಿಗೆ ಸಿಕ್ಕಿದೆ. ಆದರೆ ಅದನ್ನ ನಿರಾಕರಿಸಿ ಕಂದಾಯ ಇಲಾಖೆಯ ಆಯುಕ್ತರಿಗೆ

ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ‌ಹಿಂತಿರುಗಿಸಿದ ಗ್ರಾಮ ಆಡಳಿತಾಧಿಕಾರಿ| ಪ್ರಶಸ್ತಿ ಹಿಂತಿರುಗಿಸಲು ಅಚ್ಚರಿಯ ಕಾರಣ ನೀಡಿದ ಪ್ರಥ್ವಿರಾಜ್‌ Read More »

ಜೈಲಿನಲ್ಲಿರುವ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ

ಸಮಗ್ರ ನ್ಯೂಸ್: ಅತ್ಯಾಚಾರ, ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್ಎಸ್ಎಲ್ ತಂಡದ ಜತೆಗೇ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ಜೈಲಿನಲ್ಲಿರುವ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ Read More »

ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಆರೋಪ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಆದೇಶ ನೀಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ. ಚುನಾವಣಾ ಬಾಂಡ್​​​ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ

ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಆರೋಪ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ Read More »

ಪಂಜ: ಪೋಷಣ್ ಮಾಸಾಚರಣೆ

ಸಮಗ್ರ ನ್ಯೂಸ್:ಪೋಷಣ್‌ ಮಾಸಾಚರಣೆ ಕರ್ನಾಟಕ ಸರ್ಕಾರ ದ.ಕ ಜಿ.ಪಂ ಸುಳ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪಂಜ, ತುಳಸಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಪಂಜ ಇದರ ಸಂಯುಕ್ತ ಆಶ್ರಯದಲ್ಲಿ ಸೆ.24 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಾರ್ವತಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್

ಪಂಜ: ಪೋಷಣ್ ಮಾಸಾಚರಣೆ Read More »

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯ ಸೇರಿ ಐದು ಮಂದಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಆರ್‌ ಪಿಸಿ ಅಡಿಯಲ್ಲಿ ಎಫ್ ​ಐಆರ್​ ದಾಖಲಿಸಿ ಎಂದು ಕೋರ್ಟ್​

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯ ಸೇರಿ ಐದು ಮಂದಿ ವಿರುದ್ಧ ಎಫ್ಐಆರ್ Read More »

ತಿರುಪತಿ ಲಡ್ಡು ವಿವಾದ/ ಇಂದಿನಿಂದ ತಿರುಪತಿ ದೇವಾಲಯದ ಪವಿತ್ರೋತ್ಸವ

ಸಮಗ್ರ ನ್ಯೂಸ್‌: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ವಿವಾದಕ್ಕೆ ಸಂಬಂಧಿಸಿದಂತೆ ಇಂದಿನಿಂದ ನಾಲ್ಕು ದಿನ ತಿರುಪತಿ ದೇವಾಲಯದ ಪವಿತ್ರೋತ್ಸವ ನಡೆಯುತ್ತಿದೆ. ಇಂದಿನಿಂದ ಸೋಮವಾರದವರೆಗೆ, ಪ್ರತಿ ದಿನ ಸಂಜೆ 6:30 ರ ಹೊತ್ತಿಗೆ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ದೇವಾಲಯದಲ್ಲಿ ಶುದ್ಧಿಕಾರ್ಯ ನಡೆಯಲಿದೆ. ಮೊದಲ ದಿನ ಆಚಾರ್ಯವರನಮ್, ಎರಡನೇ ದಿನ ಹೋಮ, ಮೂರನೇ ದಿನ ಪವಿತ್ರ ಸಮರ್ಪಣ ಮತ್ತು ನಾಲ್ಕನೇ ದಿನ ಪವಿತ್ರೋತ್ಸವ ನಡೆಸಲಾಗುವುದು. ಈ ಕಾರ್ಯಕ್ರಮಗಳಿಗೆ ತಿರುಪತಿಯಿಂದ 10 ಅರ್ಚಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರ್ಚಕರು ಮೂರು ದಿನದ

ತಿರುಪತಿ ಲಡ್ಡು ವಿವಾದ/ ಇಂದಿನಿಂದ ತಿರುಪತಿ ದೇವಾಲಯದ ಪವಿತ್ರೋತ್ಸವ Read More »

ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..!

ಸಮಗ್ರ ನ್ಯೂಸ್: ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದ ಶಾಲೆಯಲ್ಲಿ, ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಸೆ.26 ರಂದು ನಡೆದಿದೆ. ಬಿಸಿಯೂಟ ಸೇವಿಸಿದ್ದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಷೇತ್ರಾಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! Read More »