ರಾಜ್ಯ

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ.. ಕಾರ್ಯಕ್ರಮದಲ್ಲಿ ಬಾಡೂಟ ಮಾಡಿದ ಅಧಿಕಾರಿಗಳು..!

ಸಮಗ್ರ ನ್ಯೂಸ್: ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ, ಈ ಬಾಗಿನ ಕಾರ್ಯಕ್ರಮದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಹೌದು…ಕೆಆರ್‌ಎಸ್‌  ಖಾಸಗಿ ಹೋಟೆಲ್ ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿದ್ದು, ಸಿಎಂ, ಡಿಸಿಎಂ ಬಾಗಿನ ಅರ್ಪಣೆ ಮಾಡಿ ಹೊರಟು ಹೋದ ಬಳಿಕ ಇಲಾಖೆಯ ಅಧಿಕಾರಿಗಳು ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಕಾವೇರಿ […]

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ.. ಕಾರ್ಯಕ್ರಮದಲ್ಲಿ ಬಾಡೂಟ ಮಾಡಿದ ಅಧಿಕಾರಿಗಳು..! Read More »

ಸಕಲೇಶಪುರ: ರೈಲು ಮಾರ್ಗದಲ್ಲಿ ಭೂಕುಸಿತ ಹಿನ್ನೆಲೆ| 8 ರೈಲುಗಳ ಸಂಚಾರ 15 ದಿನ ಬಂದ್| ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ

ಸಮಗ್ರ ನ್ಯೂಸ್: ಸಕಲೇಶಪುರ ತಾಲೂಕಿನ ಕಡಗರವಳ್ಳಿ- ಯಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು, ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಬಾರಿ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು

ಸಕಲೇಶಪುರ: ರೈಲು ಮಾರ್ಗದಲ್ಲಿ ಭೂಕುಸಿತ ಹಿನ್ನೆಲೆ| 8 ರೈಲುಗಳ ಸಂಚಾರ 15 ದಿನ ಬಂದ್| ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ Read More »

ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್: ಎಲ್ಲೆಡೆ ವೈರಲ್

ಸಮಗ್ರ ನ್ಯೂಸ್: ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟಿರುವ ಸುದ್ದಿ ಇದೀಗ ಭಾರೀ ವೈರಲ್ ಆಗುತ್ತಿದೆ. ಮೊನ್ನೇ ಶ್ರಾವಣ ಮಾಸದ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ಗರ್ಭಗುಡಿಯಲ್ಲೇ ಎಲ್ಲರ ಸಮ್ಮುಖದಲ್ಲೇ ಸಂಸದರು, ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು, ಇದೀಗ ಇವರಿಬ್ಬರ ಫೋಟೋ ಭಾರೀ ವೈರಲ್ ಆಗಿದೆ. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ನಾಮಪತ್ರದ

ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್: ಎಲ್ಲೆಡೆ ವೈರಲ್ Read More »

ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ..

ಸಮಗ್ರ ನ್ಯೂಸ್: ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಇಂದು ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಂದು ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಬಟ್ಟೆಯಿಂದ ಒರೆಸಿಕೊಂಡರು ರಕ್ತ ಕಡಿಮೆಯಾಗಲಿಲ್ಲ. ಸುದ್ದಿಗೋಷ್ಠಿ ಅರ್ಧಕ್ಕೆ ನಿಲ್ಲಿಸಿ ತಕ್ಷಣ ಅವರನ್ನು ನಿಖಿಲ್ ಕುಮಾರಸ್ವಾಮಿ ಆಸ್ಪತ್ರೆಗೆ ಕರೆದುಕೊಂಡು

ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ.. Read More »

ಎಡಕುಮೇರಿಯಲ್ಲಿ‌ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣುಕುಸಿತ| ಜು.29ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಬಂದ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಎಲ್ಲಾ ನದಿಗಳು ಕಾಲುವೆಗಳು ಕೆರೆಕಟ್ಟೆಗಳು ತುಂಬಿ ತುಳುಕಿವೆ. ಅಲ್ಲಲ್ಲಿ ಗುಡ್ಡ ಬೆಟ್ಟಗಳು ಕುಸಿದ ಪರಿಣಾಮ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ನಡುವಿನ ಪ್ರಯಾಣ ಕಡಿತಗೊಳ್ಳುತ್ತಿದೆ. ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ ನಿರಂತರ ಮಳೆಗೆ ಜಿಲ್ಲೆಯ ಜೀವನದಿ ಹೇಮಾವತಿ ಸೇರಿ ನದಿ ತೊರೆಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಈ ನಡುವೆ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಶುಕ್ರವಾರ ಸಂಜೆ

ಎಡಕುಮೇರಿಯಲ್ಲಿ‌ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣುಕುಸಿತ| ಜು.29ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಬಂದ್ Read More »

ಕರ್ತವ್ಯಕ್ಕೆ ಅಡ್ಡಿ ಆರೋಪ| ಪುನಿತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿದ್ದರು. ಆ ಬಳಿಕ ಅವರನ್ನು ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ

ಕರ್ತವ್ಯಕ್ಕೆ ಅಡ್ಡಿ ಆರೋಪ| ಪುನಿತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ Read More »

ಕುರಿ ಮಾಂಸ ಬದಲು ನಾಯಿ ಮಾಂಸ ಸರಬರಾಜು ಆರೋಪ| ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ಶಿಪ್ಟ್

ಸಮಗ್ರ ನ್ಯೂಸ್: ಹೊರ ರಾಜ್ಯದಿಂದ ರೈಲಿನಲ್ಲಿ ಪ್ರತಿದಿನ ಸಾವಿರಾರು ಕೆಜಿ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಇದನ್ನು ನಗರದಲ್ಲಿರುವ ಬಹುತೇಕ ಹೋಟೆಲ್​ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಲ ತಿಂಗಳ ಹಿಂದೆ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್, ಸಾಕ್ಷಿ ಸಮೇತ ಬಿಬಿಎಂಪಿ, ಪೊಲೀಸರಿಗೆ ಮತ್ತು ಆರೋಗ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಈ ಸಂಬಂಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಶುಕ್ರವಾರ (ಜೂನ್ 26) ಸಂಜೆ ಹಿಂದೂ

ಕುರಿ ಮಾಂಸ ಬದಲು ನಾಯಿ ಮಾಂಸ ಸರಬರಾಜು ಆರೋಪ| ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ಶಿಪ್ಟ್ Read More »

ಚಿನ್ನದ ಧಾರಣೆ ಇನ್ನಷ್ಟು ಕುಸಿಯುತ್ತಾ? ಮಾರುಕಟ್ಟೆಯಲ್ಲಿ ಹಳದಿ ಲೋಹದ ಮುಂದಿನ ನಡೆಯೇನು?

ಸಮಗ್ರ ನ್ಯೂಸ್: ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿರುವುದರಿಂದ ಆಭರಣ ಪ್ರಿಯರು ಸಂತಸಗೊಂಡಿದ್ದಾರೆ. ಚಿನ್ನದ ಮೇಲೆ ಹೂಡಿಕೆ ಮಾಡುವವರೂ ಆಭರಣ ಅಂಗಡಿಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಆಷಾಢ ಇರುವುದರಿಂದ ಆಭರಣ ಖರೀದಿಗೆ ಜನ ಅಷ್ಟಾಗಿ ಆಸಕ್ತಿ ತೋರುವುದಿಲ್ಲ. ಆದರೆ ಇನ್ನು ಕೆಲವೇ ದಿನಗಳಲ್ಲಿ ಶ್ರಾವಣ ಬರಲಿದ್ದು, ಗ್ರಾಹಕರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣ ಖರೀದಿಗೆ ಆಸಕ್ತಿ ತೋರುತ್ತಾರೆ. ಮದುವೆಯ ಶುಭ ಕಾರ್ಯಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತವೆ. ಶ್ರಾವಣ ಮಾಸದ ನಂತರ ಭಾದ್ರಪದ ಆಶ್ವಿಯುಜ ಮಾಸದಲ್ಲಿ ಅನೇಕ ಹಬ್ಬಗಳು

ಚಿನ್ನದ ಧಾರಣೆ ಇನ್ನಷ್ಟು ಕುಸಿಯುತ್ತಾ? ಮಾರುಕಟ್ಟೆಯಲ್ಲಿ ಹಳದಿ ಲೋಹದ ಮುಂದಿನ ನಡೆಯೇನು? Read More »

ಇಂದು ನೀತಿ ಆಯೋಗದ ಸಭೆ/ ವಿರೋಧ ಪಕ್ಷಗಳಿಂದ ಬಹಿಷ್ಕಾರ

ಸಮಗ್ರ ನ್ಯೂಸ್‌: ನ್ಯಾಷನಲ್ ಇನ್ಸಿಟ್ಯೂಷನ್ ಫಾರ್ ಟ್ರಾನ್ಸಾರ್ಮಿಂಗ್ ಇಂಡಿಯಾ (NITI ಆಯೋಗ್) ನ ಒಂಬತ್ತನೇ ಆಡಳಿತ ಮಂಡಳಿ ಸಭೆಯು ಇಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. NITI ಆಯೋಗ್‌ನ ಅತ್ಯುನ್ನತ ಸಂಸ್ಥೆಯಾದ ಕೌನ್ಸಿಲ್, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಒಕ್ಕೂಟದ ಲೆಫ್ಟಿನೆಂಟ್ ಗವರ್ನ‌ರ್ಗಳನ್ನು ಒಳಗೊಂಡಿದೆ. ಪ್ರಾಂತ್ಯಗಳು ಮತ್ತು ಹಲವಾರು ಕೇಂದ್ರ ಮಂತ್ರಿಗಳು ಒಳಗೊಂಡಿದ್ದಾರೆ.ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇನ್ನೂ

ಇಂದು ನೀತಿ ಆಯೋಗದ ಸಭೆ/ ವಿರೋಧ ಪಕ್ಷಗಳಿಂದ ಬಹಿಷ್ಕಾರ Read More »

ಕೆಆರ್‌ಎಸ್‌ ಭರ್ತಿ/ ಇಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ

ಸಮಗ್ರ ನ್ಯೂಸ್‌: ಎರಡು ವರ್ಷಗಳ ನಂತರ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ. ಕೊಡಗು ಹಾಗೂ ಹಾಸನದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಕೆಆರ್‌ಎಸ್‌ ಭರ್ತಿ/ ಇಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ Read More »