ರಾಜ್ಯ

ರಾಜಧಾನಿ ಬೆಂಗಳೂರಿಗೆ ಪೂರೈಕೆಯಾಗ್ತಿದೆಯಾ ನಾಯಿಮಾಂಸ? ರಾಜಸ್ಥಾನದಿಂದ ಸರಬರಾಜು ಆಯ್ತಾ 4500 ಕೆಜಿ ಮಾಂಸ ?

ಸಮಗ್ರ ನ್ಯೂಸ್: ರಾಜಸ್ಥಾನದಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ರೈಲಿನಲ್ಲಿ ವಾರದ ಮೂರು ದಿನಗಳು ಸರಬರಾಜು ಆಗುತ್ತಿದ್ದ 4,500 ಕೆ.ಜಿ. ಮಟನ್ ಮಾಂಸ ನಾಯಿ ಮಾಂಸ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಮಾಂಸ ಮಾರಾಟ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಯಶವಂತಪುರಕ್ಕೆ ಆಗಮಿಸಿದ ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿದ್ದಾರೆ. ಈ ವೇಳೆ ಒಂದೆರಡು ಬಾಕ್ಸ್‌ಗಳನ್ನು ತೆರೆದು […]

ರಾಜಧಾನಿ ಬೆಂಗಳೂರಿಗೆ ಪೂರೈಕೆಯಾಗ್ತಿದೆಯಾ ನಾಯಿಮಾಂಸ? ರಾಜಸ್ಥಾನದಿಂದ ಸರಬರಾಜು ಆಯ್ತಾ 4500 ಕೆಜಿ ಮಾಂಸ ? Read More »

ಮುಂದುವರಿದ ವರುಣಾರ್ಭಟ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಮಳೆ ಮುಂದುವರಿದಿದ್ದು ಹಲವು ಅನಾಹುತಗಳು ಸೃಷ್ಟಿಯಾಗುತ್ತಿವೆ. ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.27ರಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು‌ ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ‌ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ,‌ ಎನ್.ಆರ್. ಪುರ, ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿಪೂರ್ವ, ಪದವಿ ಕಾಲೇಜುಗಳಿಗೆ ಜು.27ರಂದು ರಜೆ ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ.

ಮುಂದುವರಿದ ವರುಣಾರ್ಭಟ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ನಾಳೆ(ಜು.27) ಕೊಡಗು ಜಿಲ್ಲೆಯ ಎರಡು‌ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 27ರಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ‌ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ನಾಳೆ(ಜು.27) ಕೊಡಗು ಜಿಲ್ಲೆಯ ಎರಡು‌ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್ ಗೋಯಲ್ ಅವರ ಪತ್ನಿಯೂ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ Read More »

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ| ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ| ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು Read More »

ಬೀದಿ ನಾಯಿಗಳಿಗೆ ಆಹಾರ/ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಸಮಗ್ರ ನ್ಯೂಸ್‌: ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸಲಹೆ, ಕರ್ನಾಟಕ ಸಾಕುಪ್ರಾಣಿಗಳ ಸುತ್ತೋಲೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ಆಧರಿಸಿ ಬೀದಿ ನಾಯಿಗಳಿಗೆ ಅಥವಾ ಬೆಕ್ಕುಗಳಿಗೆ ಆಹಾರ ನೀಡಲು ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ. ನಾಯಿ, ಬೆಕ್ಕುಗಳಿಗೆ ಆಹಾರ ನೀಡುವಾಗ ಅಂತರವನ್ನು ಕಾಪಾಡಿಕೊಳ್ಳಬೇಕು. ನಾಯಿ, ಬೆಕ್ಕುಗಳು ಆಹಾರಕ್ಕಾಗಿ ಆಕ್ರಮಣ ಮಾಡದಂತೆ ನೋಡಿಕೊಳ್ಳಲು ಸಾಧ್ಯವಾದರೆ ಮಾತ್ರ ಸಾರ್ವಜನಿಕರು ಅವುಗಳಿಗೆ ಆಹಾರ ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದೆ. ರಾತ್ರಿ 11.30ರ ನಂತರ, ಬೆಳಿಗ್ಗೆ 5ರ ಮೊದಲು ಆಹಾರ

ಬೀದಿ ನಾಯಿಗಳಿಗೆ ಆಹಾರ/ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ Read More »

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮಳೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು, ಚಿಕ್ಕಮಗಳೂರು, ಹಾವೇರಿ, ಧಾರವಾಡ ಮುಂತಾದ ಜಿಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ಶಾಲಾ ಪಿಯು ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜೆಲ್ಲೆಯ ಎಲ್ಲಾ ಅಂಗನವಾಡಿ, ಶಾಶೆ, ಪಿಯು ಕಾಲೇಜುಗಳಿಗೆ ದಿನಾಂಕ 26-7-2024 ರಂದು ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಧಿಕಗೊಂಡಿದೆ. ಇದರಿಂದ ಸಂಚಾರಕ್ಕೆ ಮಳೆ ಅಡ್ಡಿಯನ್ನುಂಟು ಮಾಡಿದ್ದು ಅಲ್ಲಲ್ಲಿ ಮರ

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮಳೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read More »

ಕೊಡಗಿನಲ್ಲಿ ಮುಂದುವರಿದ ವರ್ಷಧಾರೆ| ಜು.26ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್ : ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ. ಹಾರಂಗಿ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರು ಹೊರಬಿಡಲಾಗುತ್ತಿದೆ. ಅಲ್ಲಲ್ಲಿ ಮಳೆ ಕಾರಣದಿಂದ ಅವಘಡಗಳು, ಹಾನಿ ಸಂಭವಿಸಿದೆ.

ಕೊಡಗಿನಲ್ಲಿ ಮುಂದುವರಿದ ವರ್ಷಧಾರೆ| ಜು.26ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಶಿರೂರು ಗುಡ್ಡ ದುರಂತ ಪ್ರಕರಣ| ಕಾಣೆಯಾಗಿದ್ದ ತಮಿಳುನಾಡಿನ ಚಾಲಕನ ಅರ್ಧ ಶವ ಪತ್ತೆ

ಸಮಗ್ರ ನ್ಯೂಸ್: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಮೃತದೇಹ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್​ಪಿ ನಾರಾಯಣ್ ದೃಢ ಪಡಿಸಿದ್ದಾರೆ. ಗುಡ್ಡ ಕುಸಿತವಾದ ಪಕ್ಕದಲ್ಲೆ

ಶಿರೂರು ಗುಡ್ಡ ದುರಂತ ಪ್ರಕರಣ| ಕಾಣೆಯಾಗಿದ್ದ ತಮಿಳುನಾಡಿನ ಚಾಲಕನ ಅರ್ಧ ಶವ ಪತ್ತೆ Read More »

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ 6 ತಾಲೂಕಿನ ‌ಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಆರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು. ೨೬) ರಜೆ ಘೋಷಣೆ ಮಾಡಲಾಗಿದೆ. ಜು.26ರಂದು ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಿಗೆ ರಜೆ ಘೋಷಿಸಿ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಏರಿಕೆಯಾಗುತ್ತಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ‌ಯಲ್ಲಿ ಆರು ಕ್ರಸ್ಟ್ ಗೇಟ್‌ಗಳ ಮೂಲಕ 65 ಕ್ಯೂಸೆಕ್ ನೀರು

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ 6 ತಾಲೂಕಿನ ‌ಶಾಲೆಗಳಿಗೆ ರಜೆ ಘೋಷಣೆ Read More »