ರಾಜ್ಯ

ಬಂಟ್ವಾಳ: ಚಲಿಸುತ್ತಿದ್ದ ರೈಲಿನಲ್ಲೇ ಮಗುವಿನ ಜನ್ಮ ನೀಡಿದ ಮಹಿಳೆ| ಸಹ ಪ್ರಯಾಣಿಕ ಮಹಿಳೆಯರಿಂದಲೇ ನಡೆಯಿತು ಹೆರಿಗೆ!!

ಸಮಗ್ರ ನ್ಯೂಸ್: ಅಪರೂಪದಲ್ಲೇ ಅಪರೂಪದ ಮತ್ತು ಮಾನವೀಯತೆಯ ದೃಶ್ಯವೊಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ರೈಲ್ವೇ ನಿಲ್ದಾಣ ಸಾಕ್ಷಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಯಶವಂತಪುರಕ್ಕೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ, ಸೂಕ್ತ ವೈದ್ಯಕೀಯ ನೆರವು ಸಿಗದ ಕಾರಣ ಸಹಪ್ರಯಾಣಿಕ ಮಹಿಳೆಯರೇ ದಾದಿಯರಾಗಿ ಬದಲಾಗಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಮೈಸೂರು ಮೂಲದ ಗರ್ಭಿಣಿಯೊಬ್ಬರು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳುವ ರೈಲನ್ನೇರಿದ್ದರು. ರೈಲು ಬಿಸಿ ರೋಡ್ ಬಳಿ ತಲುಪುತ್ತಿದ್ದಂತೆ ಮಹಿಳೆಗೆ ತೀವ್ರ ಹೆರಿಗೆ ನೋವು […]

ಬಂಟ್ವಾಳ: ಚಲಿಸುತ್ತಿದ್ದ ರೈಲಿನಲ್ಲೇ ಮಗುವಿನ ಜನ್ಮ ನೀಡಿದ ಮಹಿಳೆ| ಸಹ ಪ್ರಯಾಣಿಕ ಮಹಿಳೆಯರಿಂದಲೇ ನಡೆಯಿತು ಹೆರಿಗೆ!! Read More »

ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಉಪ್ಪಿನಂಗಡಿ- ಕೊಯಿಲಾ ರಸ್ತೆಯ ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ​ಮೃತರನ್ನು ಹಿರೇಬಂಡಾಡಿಯ ರವೀಂದ್ರ ರೈ ಮುರದಮೇಲುರವರ ಪುತ್ರ ಕಾಲೇಜ್ ವಿದ್ಯಾರ್ಥಿ ಲಿಖಿತ್ ರೈ ಎಂದು ಗುರುತಿಸಲಾಗಿದೆ. ಏ 22ರಂದು ಸಂಜೆ ಲಿಖಿತ್ ರೈ ಅವರು ತಮ್ಮ ಕೆಎ-21-ಇಸಿ-7292 ಸಂಖ್ಯೆಯ ಮೋಟಾರ್ ಸೈಕಲ್‌ನಲ್ಲಿ ಉಪ್ಪಿನಂಗಡಿ – ಕೊಯಿಲ ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ತಲುಪಿದಾಗ ಬೈಕ್ ಸವಾರನ ನಿಯಂತ್ರಣ

ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಿಸದೇ ಸಾವು Read More »

ಭಾರತಕ್ಕೆ ಈ ವರ್ಷ ‌ಎಲ್ ನಿನೋ ಭೀತಿ| ಮಳೆ ಕೊರತೆಯ ಆತಂಕ

ಸಮಗ್ರ ನ್ಯೂಸ್: ಭಾರತ ಸೇರಿದಂತೆ ವಿಶ್ವದ ಹಲವು ಭಾಗಗಳಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮತ್ತು ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಸಿದೆ. ಪೆಸಿಫಿಕ್ ಸಾಗರದಲ್ಲಿ ಸೃಷ್ಟಿಯಾಗುತ್ತಿರುವ ‘ಎಲ್ ನಿನೋ’ ವಿದ್ಯಮಾನವು ಮೇ ತಿಂಗಳಿನಿಂದಲೇ ಪ್ರಭಾವ ಬೀರಲಿದ್ದು, ಇದು ಭಾರತದ ಮುಂಗಾರು ಮಳೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಆತಂಕ ಮೂಡಿಸಿದೆ. ಮೇ, ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಲಿದೆ. ಉತ್ತರ ಮತ್ತು

ಭಾರತಕ್ಕೆ ಈ ವರ್ಷ ‌ಎಲ್ ನಿನೋ ಭೀತಿ| ಮಳೆ ಕೊರತೆಯ ಆತಂಕ Read More »

ಪೊನ್ನಂಪೇಟೆ: ವಿದೇಶಿ ಮಹಿಳೆ ಮೇಲೆ‌ ಲೈಂಗಿಕ ದೌರ್ಜನ್ಯ| ಹೋಂ ಸ್ಟೇ ಮಾಲೀಕ ಸೇರಿ‌ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ್ದರು. ಅವರು ಕುಟ್ಟ ಗ್ರಾಮದಲ್ಲಿರುವ ‘ದೇವಿ ವಿಲ್ಲಾ ಹೋಮ್ ಸ್ಟೇ’ ನಲ್ಲಿ ತಂಗಿದ್ದರು. ವರದಿಗಳ ಪ್ರಕಾರ, ಕಳೆದ ಏಪ್ರಿಲ್ 19 ರಂದು ಈ ಘಟನೆ ನಡೆದಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆ ನೀಡಿದ

ಪೊನ್ನಂಪೇಟೆ: ವಿದೇಶಿ ಮಹಿಳೆ ಮೇಲೆ‌ ಲೈಂಗಿಕ ದೌರ್ಜನ್ಯ| ಹೋಂ ಸ್ಟೇ ಮಾಲೀಕ ಸೇರಿ‌ ಇಬ್ಬರು ಅರೆಸ್ಟ್ Read More »

ತಾನು ದುಡಿಯುತ್ತಿರುವ ಸರ್ಕಾರಿ ಶಾಲೆಯಲ್ಲಿ ಓದಿಸಿ ಮಗಳನ್ನು ರಾಜ್ಯಕ್ಕೆ ಟಾಪರ್ ಮಾಡಿದ ಶಿಕ್ಷಕ

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಪ್ರಾರ್ಥನಾ ಬಿರಾದಾರ್ ಅವರ ತಂದೆ ನಾಗಪ್ಪ ಬಿರಾದಾರ್ ಸರ್ಕಾರಿ ಶಾಲೆಯ ಶಿಕ್ಷಕ. ಮಗಳನ್ನು ತಮ್ಮ ಶಾಲೆಯಲ್ಲಿಯೇ ಓದಿಸಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸುವಂತೆ ಮಾರ್ಗದರ್ಶನ ಮಾಡಿ ಸಾಕಷ್ಟು ಪೋಷಕರಿಗೆ ಸ್ಫೂರ್ತಿಯಾಗಿದ್ದಾರೆ. ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿದರೆ ಮಾತ್ರವೇ ಉತ್ತಮ ಅಂಕ ಗಳಿಸುತ್ತಾರೆ ಎಂಬ ಭ್ರಮೆ ಬಹುತೇಕ ಪೋಷಕರಲ್ಲಿದೆ. ಇನ್ನೂ ಸಾಕಷ್ಟು ಸರ್ಕಾರಿ ನೌಕರರು ಕೂಡ ತಮ್ಮ ಮಕ್ಕಳನ್ನು ದುಬಾರಿ ಶುಲ್ಕ ನೀಡಿ ಖಾಸಗಿ ಶಾಲೆಯಲ್ಲಿ ಓದಿಸುತ್ತಾರೆ.

ತಾನು ದುಡಿಯುತ್ತಿರುವ ಸರ್ಕಾರಿ ಶಾಲೆಯಲ್ಲಿ ಓದಿಸಿ ಮಗಳನ್ನು ರಾಜ್ಯಕ್ಕೆ ಟಾಪರ್ ಮಾಡಿದ ಶಿಕ್ಷಕ Read More »

ಪಶ್ಚಿಮ ಬಂಗಾಳದ ಮೊದಲನೇ ಹಂತದ ಹಾಗೂ ತಮಿಳುನಾಡಿನ ವಿಧಾನಸಭೆಗೆ ಇಂದು ಚುನಾವಣೆ

ಸಮಗ್ರ ನ್ಯೂಸ್: ದೇಶದಲ್ಲೇ ಅತಿ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ಚುನಾವಣೆಯ ಹಂತ-1 ಗುರುವಾರ ನಡೆಯಲಿದೆ. ಅಂತೆಯೇ ತಮಿಳುನಾಡು ಚುನಾವಣೆ ಕೂಡ ಏಕಹಂತದಲ್ಲಿ ಇದೇ ದಿನ ಜರುಗಲಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 234 ಸ್ಥಾನಗಳಿಗೆ 5.73 ಕೋಟಿಗೂ ಹೆಚ್ಚು ಮತದಾರರು 4,023 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಮಾಡಲಿದ್ದಾರೆ. ಡಿಎಂಕೆ-ಕಾಂಗ್ರೆಸ್‌ ಕೂಟ, ಅಣ್ಣಾಡಿಎಂಕೆ-ಬಿಜೆಪಿ ಕೂಟ ಹಾಗೂ ವಿಜಯ್‌ ಅವರ ಟಿವಿಕೆ ನಡುವೆ ತ್ರಿಕೋನ ಕದನ ಏರ್ಪಟ್ಟಿದೆ. ಇನ್ನು ಪ.ಬಂಗಾಳದ 294 ಸ್ಥಾನಗಳ ಪೈಕಿ 152 ಸ್ಥಾನಗಳಿಗೆ ಗುರುವಾರ ಮತದಾನ

ಪಶ್ಚಿಮ ಬಂಗಾಳದ ಮೊದಲನೇ ಹಂತದ ಹಾಗೂ ತಮಿಳುನಾಡಿನ ವಿಧಾನಸಭೆಗೆ ಇಂದು ಚುನಾವಣೆ Read More »

ನಾಳೆ(ಎ.23) ಎಸ್ಎಸ್ಎಲ್ ಸಿ ಫಲಿತಾಂಶ – ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ನಾಳೆ (ಎ.24) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಫಲಿತಾಂಶ ವೀಕ್ಷಿಸುವುದು ಹೇಗೆ? (ಹಂತ-ಹಂತದ ಮಾಹಿತಿ) ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಸರಳ ಹಂತಗಳ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:karresults.nic.in ಅಥವಾ kseab.karnataka.gov.in.

ನಾಳೆ(ಎ.23) ಎಸ್ಎಸ್ಎಲ್ ಸಿ ಫಲಿತಾಂಶ – ಸಚಿವ ಮಧು ಬಂಗಾರಪ್ಪ Read More »

ರಸ್ತೆ ಗುಂಡಿಗಳನ್ನು ಮುಚ್ಚಲು ದುಬಾರಿ ಪೋರ್ಷೆ ಕಾರಿನಲ್ಲಿ ಸಿಮೆಂಟ್ ಕಲಸಿದ ಉದ್ಯಮಿ

ಸಮಗ್ರ ನ್ಯೂಸ್: ಬೆಂಗಳೂರಿನ ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳ ಸಮಸ್ಯೆ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈ ರಸ್ತೆ ಗುಂಡಿಗಳನ್ನು ಮುಚ್ಚಲು ಜನರು ಕಂಡುಕೊಳ್ಳುವ ದಾರಿಗಳು ಮಾತ್ರ ಕೆಲವೊಮ್ಮೆ ಅಚ್ಚರಿ ಮೂಡಿಸುತ್ತವೆ. ಇತ್ತೀಚೆಗೆ ಬೆಂಗಳೂರಿನ ಉದ್ಯಮಿಯೊಬ್ಬರು ರಸ್ತೆ ಗುಂಡಿಯನ್ನು ಮುಚ್ಚಲು ತಮ್ಮ ದುಬಾರಿ ಪೋರ್ಷೆ ಕಾರನ್ನು ಬಳಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಅಖಿಲ್ ಹೇಮಾದ್ರಿ ಎಂಬುವವರು ಇಂತಹ ಅಚ್ಚರಿಯ ಕೆಲಸಕ್ಕೆ ಕೈಹಾಕಿದ ಯುವಕ. ರಸ್ತೆಯಲ್ಲಿದ್ದ ಗುಂಡಿಯನ್ನು ನೋಡಿ ಬೇಸತ್ತ ಅವರು, ತಮ್ಮ ಕೆಂಪು ಬಣ್ಣದ

ರಸ್ತೆ ಗುಂಡಿಗಳನ್ನು ಮುಚ್ಚಲು ದುಬಾರಿ ಪೋರ್ಷೆ ಕಾರಿನಲ್ಲಿ ಸಿಮೆಂಟ್ ಕಲಸಿದ ಉದ್ಯಮಿ Read More »

ಗೃಹಸಚಿವ ಪರಮೇಶ್ವರ್ ಗೆ ₹500 ಬೆಟ್ಟಿಂಗ್ ಸಂಕಷ್ಟ| ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಕಬಡ್ಡಿ ಪಂದ್ಯಾವಳಿಯ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ನಡೆದ ಕಬಡ್ಡಿ ಟೂರ್ನಿಯೊಂದರಲ್ಲಿ ಭಾಗವಹಿಸಿದ್ದ ಗೃಹ ಸಚಿವರು, ಆಟದ ಭರದಲ್ಲಿ 500 ರೂಪಾಯಿ ಬೆಟ್ಟಿಂಗ್ ಕಟ್ಟುವುದಾಗಿ ಹೇಳಿಕೆ ನೀಡಿದ್ದರು. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಬೆಟ್ಟಿಂಗ್ ಪ್ರೋತ್ಸಾಹಿಸುವುದು ಅಥವಾ ಅದರಲ್ಲಿ

ಗೃಹಸಚಿವ ಪರಮೇಶ್ವರ್ ಗೆ ₹500 ಬೆಟ್ಟಿಂಗ್ ಸಂಕಷ್ಟ| ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಆದೇಶ Read More »

ಎಸ್ಎಸ್ಎಲ್ ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಿ| ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್ ಸಿ ಹಿಂದಿ ವಿಷಯಕ್ಕೆ ಅಂಕವನ್ನೇ ಕೊಡುವಂತೆ ಹೈಕೋರ್ಟ್ ಮತ್ತೊಮ್ಮೆ ಆದೇಶ ನೀಡಿದೆ. ಈ ಹಿಂದೆ ಹೈಕೋರ್ಟ್ ಅಂಕ ಕೊಡಲು ಸೂಚನೆ ನೀಡಿದ್ದ ಹಿನ್ನೆಲೆ, ಹೈಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ್ದ ಸರಕಾರ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಲು ನ್ಯಾಯಾಲಯ ಆದೇಶ ನೀಡಿದೆ. ನಿಯಮ ರೂಪಿಸಿದ ಬಳಿಕ ಸರಕಾರ ಸೂಕ್ತವೆನಿಸಿದ ಕ್ರಮ ಕೈಗೊಳ್ಳಬಹುದು, ನಿಯಮ ರೂಪಿಸುವ ಮುಂಚಿನ ಪರೀಕ್ಷೆಯ ಅಂಕ ಪದ್ದತಿ ಬದಲಾವಣೆ ಸೂಕ್ತವಲ್ಲ ಎಂದು

ಎಸ್ಎಸ್ಎಲ್ ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಿ| ಹೈಕೋರ್ಟ್ ನಿಂದ ಮಹತ್ವದ ಆದೇಶ Read More »