ರಾಜ್ಯ

ತಿರುಪತಿ ಲಡ್ಡು ವಿವಾದ/ ಪುರಿಯ ಜಗನ್ನಾಥ ದೇವಸ್ಥಾನದಲ್ಲೂ ತುಪ್ಪದ ಪರೀಕ್ಷೆಗೆ ಸಿದ್ಧತೆ

ಸಮಗ್ರ ನ್ಯೂಸ್‌: ತಿರುಪತಿ ಲಡ್ಡು ಪ್ರಸಾದದ ವಿವಾದದ ಬೆನ್ನಲ್ಲೇ ಒಡಿಶಾದ ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ಪ್ರಸಾದಕ್ಕೆ ಬಳಸಲಾಗುವ ತುಪ್ಪದ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪುರಿಯ ಜಗನ್ನಾಥ ದೇವಸ್ಥಾನದಲ್ಲಿ ನೈವೇದ್ಯ ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಒಡಿಶಾ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಗನ್ನಾಥ ದೇಗುಲದಲ್ಲಿ ಕಲಬೆರಕೆಯಂತಹ ಯಾವುದೇ ಆರೋಪಗಳಿಲ್ಲ. ಅದಾಗ್ಯೂ ಆಡಳಿತ ಮಂಡಳಿಯು ‘ಕೋತ ಬೋಗ’ (ದೇವತೆಗಳಿಗೆ ಪ್ರಸಾದ) ಮತ್ತು ‘ಬಾರಾಡಿ ಭೋಗ’ (ಆದೇಶದ ಮೇರೆಗೆ ಪ್ರಸಾದ) ತಯಾರಿಸಲು ಬಳಸುವ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು […]

ತಿರುಪತಿ ಲಡ್ಡು ವಿವಾದ/ ಪುರಿಯ ಜಗನ್ನಾಥ ದೇವಸ್ಥಾನದಲ್ಲೂ ತುಪ್ಪದ ಪರೀಕ್ಷೆಗೆ ಸಿದ್ಧತೆ Read More »

ಮಹಾಲಕ್ಷ್ಮಿ ಕೊಲೆ ಪ್ರಕರಣ| ಆರೋಪಿ ಮುಕ್ತಿ‌ರಂಜನ್ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು ವರದಿಯಾಗಿತ್ತು. ಆದರೆ ಆರೋಪಿ ಒಡಿಶಾದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಇದೆ. ಪೊಲೀಸರು ಆರೋಪಿಯ ಜಾಡು ಹಿಡಿದು ಒಡಿಶಾಗೆ ತೆರಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದರು. ಇದೀಗ ಆರೋಪಿ

ಮಹಾಲಕ್ಷ್ಮಿ ಕೊಲೆ ಪ್ರಕರಣ| ಆರೋಪಿ ಮುಕ್ತಿ‌ರಂಜನ್ ಆತ್ಮಹತ್ಯೆಗೆ ಶರಣು Read More »

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿದ್ದ ಅರ್ಜುನ್ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಆರನೇ ದಿನವೂ ಕಾರ್ಯಾಚರಣೆ ಮುಂದುವರಿದಿದ್ದು, ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ ಪತ್ತೆಯಾಗಿದೆ ಎಂದು ಕಾರ್ಯಾಚರಣೆ ಮಾಡುತ್ತಿರುವ ತಂಡ ತಿಳಿಸಿದೆ. ಡ್ರಜ್ಜಿಂಗ್ ಯಂತ್ರ ಹಾಗೂ ಕ್ರೇನ್ ಮೂಲಕ ಲಾರಿ ಮೇಲೆತ್ತುವ ಪ್ರಕ್ರಿಯೆ ಕೆಲವೇ ಕ್ಷಣದಲ್ಲಿ ಆರಂಭವಾಗಲಿದೆ.

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿದ್ದ ಅರ್ಜುನ್ ಮೃತದೇಹ ಪತ್ತೆ Read More »

ಸಿಎಂ ವಿರುದ್ದದ ಮುಡಾ ಹಗರಣ| ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಲು ‌ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು.

ಸಿಎಂ ವಿರುದ್ದದ ಮುಡಾ ಹಗರಣ| ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಲು ‌ಕೋರ್ಟ್ ಆದೇಶ Read More »

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ – ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ ಕಲಾಪದ ಎರಡು ವೀಡಿಯೊ ತುಣುಕುಗಳು ವೈರಲ್ ಆಗಿತ್ತು.

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ – ಸುಪ್ರೀಂ ಕೋರ್ಟ್ Read More »

KSRTC ಮಂಗಳೂರು ವಿಭಾಗದಿಂದ ‘ದಸರಾ ದರ್ಶಿನಿ’ ವಿಶೇಷ ಪ್ಯಾಕೇಜ್| ಇಲ್ಲಿದೆ ಸಂಪೂರ್ಣ ವಿವರ…

ಸಮಗ್ರ ನ್ಯೂಸ್: ಕೆ.ಎಸ್.ಅರ್.ಟಿ.ಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣ ದರದ ವಿವರ ಇಂತಿದೆ… ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ :ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ

KSRTC ಮಂಗಳೂರು ವಿಭಾಗದಿಂದ ‘ದಸರಾ ದರ್ಶಿನಿ’ ವಿಶೇಷ ಪ್ಯಾಕೇಜ್| ಇಲ್ಲಿದೆ ಸಂಪೂರ್ಣ ವಿವರ… Read More »

ಮುಡಾ ಅಕ್ರಮ ಹಗರಣ|ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಅಕ್ರಮ ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪು ಪ್ರಕಟಿಸಿದ್ದು ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆದಿತ್ತು. 30 ಗಂಟೆಗೂ ಅಧಿಕ ಸಮಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಾದ-ಪ್ರತಿವಾದವನ್ನು ನ್ಯಾಯಾಧೀಶರು ಆಲಿಸಿದ್ದರು. ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದ ಸಿಎಂ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ನೇತೃತ್ವದ ತಂಡ ವಾದ ಮಂಡಿಸಿತ್ತು. ರಾಜ್ಯಪಾಲರ ಕಚೇರಿ ಪರ ಸುಪ್ರೀಂ ಕೋರ್ಟ್ ಸಾಲಿಸಿಟರ್‌ ಜನರಲ್

ಮುಡಾ ಅಕ್ರಮ ಹಗರಣ|ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್ Read More »

ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹ ವೀಕ್ಷಣೆ ಗಂಭೀರ ಅಪರಾಧ: ಐತಿಹಾಸಿಕ ತೀರ್ಪು ಪ್ರಕಟಿಸಿದ ಸುಪ್ರೀಂ

ಸಮಗ್ರ ನ್ಯೂಸ್‌: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ ಲೋಡ್ ಮಾಡುವುದಷ್ಟೇ ಅಲ್ಲ ನೋಡುವುದು ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಿಸುವ (ಪೋಕ್ಸ್) ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಉದ್ದೇಶವಿಟ್ಟುಕೊಂಡು ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ಪ್ರಕಟಿಸಿದೆ. 28 ವರ್ಷದ ಯುವಕನೊಬ್ಬ ತನ್ನ ಫೋನ್‌ಲ್ಲಿ ಮಕ್ಕಳ ಅಶ್ಲೀಲ ಚಿತ್ರ ಡೌನ್ ಲೋಡ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ ಲೋಡ್ ಮಾಡುವುದು ಮತ್ತು

ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹ ವೀಕ್ಷಣೆ ಗಂಭೀರ ಅಪರಾಧ: ಐತಿಹಾಸಿಕ ತೀರ್ಪು ಪ್ರಕಟಿಸಿದ ಸುಪ್ರೀಂ Read More »

ಕಾವೇರಿ ನೀರು ಮನೆ ಬಾಗಿಲಿಗೆ/ ಶೀಘ್ರದಲ್ಲೆ ನನಸಾಗಲಿದೆ ಬಿಬಿಎಂಪಿಯಲ್ಲಿ ವಿಲೀನಗೊಂಡ 110 ಗ್ರಾಮಗಳ ಜನರ ಕನಸು

ಸಮಗ್ರ ನ್ಯೂಸ್‌: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾವೇರಿ 5ನೇ ಹಂತದ ಯೋಜನೆ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ವಿಜಯದಶಮಿ ವೇಳೆ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಕೆಂಗೇರಿಯಲ್ಲಿ ನಡೆಯುತ್ತಿರುವ ಪೈಪ್‌ಲೈನ್ ಕಾಮಗಾರಿ, ಕನಕಪುರ ತಾಲೂಕಿನ ಹಾರೋಹಳ್ಳಿ ಪಂಪ್ ಸ್ಟೇಷನ್, ಮಳವಳ್ಳಿ ತಾಲೂಕಿನ ತೊರೆ ಕಡ್ಡಹಳ್ಳಿಯ ನೀರು ಶುದ್ದೀಕರಣ ಘಟಕ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ಡಿಕೆ.ಶಿವಕುಮಾರ್ ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಕಾವೇರಿ ನೀರು ಮನೆ ಬಾಗಿಲಿಗೆ/ ಶೀಘ್ರದಲ್ಲೆ ನನಸಾಗಲಿದೆ ಬಿಬಿಎಂಪಿಯಲ್ಲಿ ವಿಲೀನಗೊಂಡ 110 ಗ್ರಾಮಗಳ ಜನರ ಕನಸು Read More »

ರಾಜ್ಯದಲ್ಲಿ ಮತ್ತೆ ಮುಂದುವರಿದ ಮಳೆಯಬ್ಬರ| ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಪಶ್ಚಿಮದ ಸಮುದ್ರದ ಮೇಲಿಂದ ಗಂಟೆಗೆ 35ರಿಂದ 45ಕಿ.ಮೀ. ವೇಗದ ಗಾಳಿ

ರಾಜ್ಯದಲ್ಲಿ ಮತ್ತೆ ಮುಂದುವರಿದ ಮಳೆಯಬ್ಬರ| ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ Read More »