ನೀಟ್ ರದ್ದು/ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಸಮಗ್ರ ನ್ಯೂಸ್: ವಿಧಾನಸಭೆಯಲ್ಲಿ ಕೇಂದ್ರದ ನೀಟ್ ಪರೀಕ್ಷೆಯನ್ನ ರದ್ದುಗೊಳಿಸುವ ಸಂಬಂಧ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಮಂಡಿಸಿದ್ದ ಮಸೂದೆ ಅಂಗೀಕಾರಗೊಂಡಿದೆ. ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಬಡ ಮಕ್ಕಳಿಗೆ ಹಿನ್ನಡೆ ಆಗುತ್ತಿದೆ. ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಹಿನ್ನಡೆ ಆಗುತ್ತಿದೆ. ಕೇಂದ್ರದ ನೀಟ್ ವ್ಯವಸ್ಥೆಯಿಂದ ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದು ಮಾಡಬೇಕೆಂದು ನಿರ್ಣಯ ಮಂಡಿಸಿದರು.
ನೀಟ್ ರದ್ದು/ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ Read More »










