ರಾಜ್ಯ

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| 7ನೇ ವೇತನ ಆಯೋಗದ ಶಿಫಾರಸ್ಸು ಅಧಿಕೃತ ಜಾರಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ-

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| 7ನೇ ವೇತನ ಆಯೋಗದ ಶಿಫಾರಸ್ಸು ಅಧಿಕೃತ ಜಾರಿ Read More »

ಕೇರಳದಲ್ಲಿ ನಿಫಾ ವೈರಸ್ ಆರ್ಭಟ| ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಲಾಕ್ ಡೌನ್ ಹೇರಿಕೆ

ಸಮಗ್ರ ನ್ಯೂಸ್: ದೇವರನಾಡು ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಆರ್ಭಟಿಸುತ್ತಿದೆ. ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದ ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕ ಭಾನುವಾರ ಕೋಝಿಕ್ಕೋಡ್‌ನಲ್ಲಿ ಸಾವನ್ನಪ್ಪಿದ್ದಾನೆ. ಜೊತೆಗೆ ನಿಫಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೇರಳದಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಮಲಪ್ಪುರಂನ ಬಾಲಕನ ಸಾವಿನ ಬೆನ್ನಲ್ಲೇ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯು ಫಾ ಸೋಂಕು ಸಾವಿಗೆ ಕಾರಣ ಅನ್ನೋದನ್ನು ಪತ್ತೆ ಹಚ್ಚಿದೆ. ನಿಫಾ ಸೋಂಕಿನಿಂದ ಸಾವನ್ನಪ್ಪಿರುವ ಬಾಲಕನ ಅಂತ್ಯಕ್ರಿಯೆಯನ್ನು ಸರಕಾರದ ಮಾರ್ಗಸೂಚಿಯಂತೆಯೇ ನಡೆಸಲಾಗಿದೆ. ಬಾಲಕ

ಕೇರಳದಲ್ಲಿ ನಿಫಾ ವೈರಸ್ ಆರ್ಭಟ| ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಲಾಕ್ ಡೌನ್ ಹೇರಿಕೆ Read More »

ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗಿ/ ಸರ್ಕಾರಿ ಅಧಿಕಾರಿಗಳಿಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಿದ ಮೋದಿ ಸರ್ಕಾರ

ಸಮಗ್ರ ನ್ಯೂಸ್‌: ಸರ್ಕಾರಿ ಅಧಿಕಾರಿಗಳು ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಮೋದಿ ಸರ್ಕಾರ ತೆಗೆದುಹಾಕಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. 58 ವರ್ಷಗಳ ಹಿಂದೆ ನೀಡಲಾದ ಸಾಂವಿಧಾನಿಕ ನಿರ್ದೇಶನವನ್ನು ಮೋದಿ ಸರ್ಕಾರವು ಹಿಂಪಡೆದಿದೆ ಎಂದು ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹೇಳಿಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು

ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗಿ/ ಸರ್ಕಾರಿ ಅಧಿಕಾರಿಗಳಿಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಿದ ಮೋದಿ ಸರ್ಕಾರ Read More »

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ| ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಸೋಮವಾರ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಎರಡು ಪ್ರಕರಣಗಳು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ| ಸೂರಜ್ ರೇವಣ್ಣಗೆ ಜಾಮೀನು ಮಂಜೂರು Read More »

ಮಾಜಿ ಸಚಿವ ಬಿ.ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ (ED) ಕಸ್ಟಡಿ ಇಂದು ಅಂತ್ಯವಾಗಿದು, ಮಾಜಿ ಸಚಿವ ಬಿ. ನಾಗೇಂದ್ರಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3ರವರೆಗೆ ಅಂದರೇ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ವಾಲ್ಮೀಕಿ ಹಗರಣದಲ್ಲಿ

ಮಾಜಿ ಸಚಿವ ಬಿ.ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ Read More »

ಪತ್ರಕರ್ತ ಶಶಿಧರ್ ಭಟ್ ಚಿಕಿತ್ಸೆಗೆ ಸರ್ಕಾರದ ನೆರವು – ಸಿಎಂ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ

ಪತ್ರಕರ್ತ ಶಶಿಧರ್ ಭಟ್ ಚಿಕಿತ್ಸೆಗೆ ಸರ್ಕಾರದ ನೆರವು – ಸಿಎಂ Read More »

ಶಿರಾಡಿ‌ ಘಾಟ್ ನಲ್ಲಿ ಮತ್ತೆ ಕುಸಿತ| ಮಣ್ಣಿನಡಿ ಸಿಲುಕಿದ ಹೈವೇ ಪಟ್ರೋಲ್ ವಾಹನ

ಸಮಗ್ರ ನ್ಯೂಸ್: ಬೆಂಗಳೂರು ಮಂಗಳೂರು ರಾ.ಹೆದ್ದಾರಿಯ ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದಲ್ಲಿ ಪೊಲೀಸ್ ವಾಹನ ಸಿಲುಕಿಕೊಂಡ ಘಟನೆ ಇಂದು ನಡೆದಿದೆ. ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲೆ ಬಳಿ ಘಟನೆ ನಡೆದಿದು ಪೊಲೀಸರು ನಿಲ್ಲಿಸಿದ್ದ ವಾಹನದ ಬಳಿಯೇ ಭೂಕುಸಿತ ಸಂಭವಿಸಿದೆ. KA-13 G-1713 ನಂಬರ್‌ನ ಹೈವೇ ಪಾಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ನಡೆಸಲಾಗಿದೆ.

ಶಿರಾಡಿ‌ ಘಾಟ್ ನಲ್ಲಿ ಮತ್ತೆ ಕುಸಿತ| ಮಣ್ಣಿನಡಿ ಸಿಲುಕಿದ ಹೈವೇ ಪಟ್ರೋಲ್ ವಾಹನ Read More »

ಶಿರೂರು ಗುಡ್ಡ ಪ್ರಕರಣ| ‘ ನೀವ್ ಹೇಳ್ದಂಗೆ ಕೇಳೋಕೆ ಆಗಲ್ಲ’| ಐಆರ್ ಬಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಐಆರ್‌ಬಿಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಕಾರವಾರ ನಗರದ ಸಿಇಒ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐಆರ್‌ಬಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸಖತ್‌ ಕ್ಲಾಸ್ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೇ ಟೋಲ್ ಸಂಗ್ರಹ ಸರಿಯಿಲ್ಲ. 2016ಕ್ಕೆ ಮುಕ್ತಾಯವಾಗಬೇಕಿದ್ರೂ ಈವರೆಗೂ ಮುಕ್ತಾಯಗೊಳಿಸಿಲ್ಲ. ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುತ್ತಿದ್ದೀರಿ. ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ. ನೀವು ಹೇಳಿದ ಹಾಗೆ ಕೇಳುವುದಕ್ಕೆ

ಶಿರೂರು ಗುಡ್ಡ ಪ್ರಕರಣ| ‘ ನೀವ್ ಹೇಳ್ದಂಗೆ ಕೇಳೋಕೆ ಆಗಲ್ಲ’| ಐಆರ್ ಬಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ Read More »

ಇಂದು ಪ್ರಜ್ವಲ್‌, ಸೂರಜ್‌ ರೇವಣ್ಣ ಜಾಮೀನು ಭವಿಷ್ಯ: ಸಹೋದರರಿಗೆ ಸಿಗುತ್ತಾ ಬಿಗ್ ರಿಲೀಫ್..!

ಸಮಗ್ರ ನ್ಯೂಸ್: ಅತ್ಯಾಚಾರ ಕೇಸ್ ನಲ್ಲಿ ಜೈಲಿನಲ್ಲಿ ಇರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪುತ್ರರಾದ ಪ್ರಜ್ವಲ್‌ ರೇವಣ್ಣ ಮತ್ತು ಸೂರಜ್‌ ರೇವಣ್ಣ ಪಾಲಿಗೆ ಇಂದು ಮಹತ್ವದ ದಿನ ಆಗಲಿದೆ. ಇಂದು ಸಹೋದರರ ಜಾಮೀನು ಕುರಿತಾದ ಆದೇಶ ಇಂದು ಪ್ರಕಟವಾಗಲಿದೆ. ಹೀಗಾಗಿ ಇಬ್ಬರಿಗೂ ರಿಲೀಫ್‌ ಸಿಗುತ್ತಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಜೈಲು ಕಂಬಿ ಎಣಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ. ಸಿಐಡಿ

ಇಂದು ಪ್ರಜ್ವಲ್‌, ಸೂರಜ್‌ ರೇವಣ್ಣ ಜಾಮೀನು ಭವಿಷ್ಯ: ಸಹೋದರರಿಗೆ ಸಿಗುತ್ತಾ ಬಿಗ್ ರಿಲೀಫ್..! Read More »

ಉತ್ತರ ಕನ್ನಡ: ಗುಡ್ಡ ಕುಸಿತ ಸ್ಥಳ ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭಾನುವಾರ (ಜು.21) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ, ಉನ್ನತ ಮೆಟಲ್ ಡಿಟೆಕ್ಟರ್ ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ಮತ್ತು ಸೂಚನೆ. ಜೊತೆಗೆ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯವರಿಗೆ ಸಿಎಂ ಶ್ಲಾಘನೆ

ಉತ್ತರ ಕನ್ನಡ: ಗುಡ್ಡ ಕುಸಿತ ಸ್ಥಳ ಶಿರೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ Read More »