ರಾಜ್ಯ

ಗುಡ್‌ನ್ಯೂಸ್‌ ಕೊಟ್ಟ ಕೊಡಗಿನ ಬೆಡಗಿ ನಟಿ ಹರ್ಷಿಕಾ ಪೂಣಚ್ಚ

ಸಮಗ್ರ ನ್ಯೂಸ್: ಕಳೆದ ವರ್ಷ ವಿವಾಹವಾಗಿದ್ದ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಈಗ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ಈ ಜೋಡಿ ಇದೀಗ ಪೋಷಕರಾಗುತ್ತಿದ್ದಾರೆ. ತಾಯಿಯಾಗುತ್ತಿರುವ ಸಂಭ್ರಮವನ್ನು ಹರ್ಷಿಕಾ ಪೂಣಚ್ಚ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಕ್ಟೋಬರ್​ನಲ್ಲಿ ಭುವನ್ ಹಾಗೂ ಹರ್ಷಿಕಾ ಮನೆಗೆ ಹೊಸ ಅಥಿತಿ ಆಗಮನವಾಗಲಿದೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಹರ್ಷಿಕಾ, ಭುವನ್ ಹಾಗೂ ಅವರ ಕುಟುಂಬದವರು ಕೊಡವ ಶೈಲಿಯ […]

ಗುಡ್‌ನ್ಯೂಸ್‌ ಕೊಟ್ಟ ಕೊಡಗಿನ ಬೆಡಗಿ ನಟಿ ಹರ್ಷಿಕಾ ಪೂಣಚ್ಚ Read More »

ಮದುವೆ ಮನೆಯಲ್ಲಿ ಕೋತಿ ಕಾಟ: ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!

ಸಮಗ್ರ ನ್ಯೂಸ್: ಮದುವೆ ಮನೆಗೆ ಕೋತಿಯೊಂದು ನುಗ್ಗಿ ರಂಪಾಟ ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರಿಗೂ ತೊಂದರೆ ಕೊಟ್ಟಿದೆ. ಅಷ್ಟೇ ಅಲ್ಲದೆ ಮದುವೆಗೆ ಬಂದವರಿಗೆ ಮಂಗ ಕಚ್ಚಿದೆ ಘಟನೆ ನಡೆದಿದ್ದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ. ಮದುವೆ ಮನೆಯಲ್ಲಿ ಕೋತಿ ಕಾಟಕ್ಕೆ ಜನರು ಹೈರಾಣಾಗಿ ಹೋಗಿದ್ದಾರೆ. ಡೈನಿಂಗ್ ಹಾಲ್‌ನಲ್ಲಿ ಊಟ ಮಾಡುತ್ತಿದ್ದವರಿಗೂ ಕಿರಿಕಿರಿ ಮಾಡಿ, ಊಟ ಕಸಿದುಕೊಂಡಿದೆ. 8-10 ಮಂದಿ ಮೇಲೆ ದಾಳಿ ಮಾಡಿ ಕಚ್ಚಿದೆ. ಸುಶೀಲಮ್ಮ, ಲೀಲಾವತಿ, ನಿಂಗೇಗೌಡ, ಗೌರಮ್ಮ,

ಮದುವೆ ಮನೆಯಲ್ಲಿ ಕೋತಿ ಕಾಟ: ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ! Read More »

ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಮನವಿ

ಸಮಗ್ರ ನ್ಯೂಸ್: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರ 80 ರಿಂದ 65% ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು, ಡಾಕ್ಟರ್ ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸಬೇಕು, ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಸತ್ಯಾಗ್ರಹ ಹಾಗೂ ಹೋರಾಟವನ್ನು ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ

ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಮನವಿ Read More »

ಹಾಸನ: ಎಸ್ಪಿ ಕಚೇರಿ ಎದುರೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್ ಸ್ಟೇಬಲ್| ದೂರು ನೀಡಲು ಬಂದಾಕೆಗೆ ಗುಂಡಿತೋಡಿದ ಪತಿ

ಸಮಗ್ರ ನ್ಯೂಸ್: ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿದ್ದಾನೆ. ಎಸ್ಪಿ ಕಚೇರಿ ಗೆ ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಕಾನ್ಸ್ ಟೇಬಲ್ ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದಾತ. ಈತ ಶಾಂತಿಗ್ರಾಮ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ, ಕಳೆದ ಕೆಲವು ದಿನಗಳಿಂದ ಗಂಡ ಹೆಂಡತಿ ಗಲಾಟೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಗಂಡನ ವಿರುದ್ಧ ದೂರು ನೀಡಲು ಪತ್ನಿ ಮಮತಾ ಹಾಸನ ಪೊಲೀಸ್‌

ಹಾಸನ: ಎಸ್ಪಿ ಕಚೇರಿ ಎದುರೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್ ಸ್ಟೇಬಲ್| ದೂರು ನೀಡಲು ಬಂದಾಕೆಗೆ ಗುಂಡಿತೋಡಿದ ಪತಿ Read More »

ಮಾಜಿ ಸಿಎಂ ವೀರಪ್ಪ‌ ಮೊಯ್ಲಿ ಪುತ್ರಿ‌ ಹಂಸ ನಿಧನ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿಯನ್ನು ಪಡೆದಿದ್ದರು. ಇದಲ್ಲದೇ ದೇವದಾಸಿಯರ ಜೀವನವನ್ನು ಆಧರಿಸಿದಂತಹ ತಮಿಳಿನ ಖ್ಯಾತ ಚಲನಚಿತ್ರ ಶೃಂಗಾರಂನಲ್ಲಿ ಕೂಡ ಅಭಿನಯಿಸಿ ನಟಿ ಅಂತನೂ ಕರೆಸಿಕೊಂಡಿದ್ದರು.

ಮಾಜಿ ಸಿಎಂ ವೀರಪ್ಪ‌ ಮೊಯ್ಲಿ ಪುತ್ರಿ‌ ಹಂಸ ನಿಧನ Read More »

KSRTC ಬಸ್ ಹಾಗೂ ಕಾರು ಡಿಕ್ಕಿ: ಇಬ್ಬರು ಸಾವು

ಸಮಗ್ರ ನ್ಯೂಸ್: ಕೆ‌ಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ನಡೆದಿದೆ. ಮಡಬ ಗ್ರಾಮದ ಮಂಜುನಾಥ್ (26) ಮೃತ ದುರ್ದೈವಿ, ಮತ್ತೋಬ್ಬರ ಗುರುತು ಪತ್ತೆಯಾಗಿಲ್ಲ. ಚನ್ನರಾಯಪಟ್ಟಣದ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ KA-11-F-0511 ನಂಬರ್‌ನ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಕಾರು ಬಸ್ಸಿನಡಿಗೆ ನುಗ್ಗಿದೆ. ಕಾರನ್ನು ಹೊರಗೆಳೆದು ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

KSRTC ಬಸ್ ಹಾಗೂ ಕಾರು ಡಿಕ್ಕಿ: ಇಬ್ಬರು ಸಾವು Read More »

171 ಲಕ್ಷ ಕೋಟಿಗೆ ಏರಿದ ಕೇಂದ್ರ ಸರ್ಕಾರದ ಸಾಲ| ನಿರ್ವಹಣಾ ತ್ರೈಮಾಸಿಕ ವರದಿ ಹೇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ಒಟ್ಟು ಸಾಲವು 2024ರ ಮಾರ್ಚ್‌ ಅಂತ್ಯದ ವೇಳೆಗೆ ₹171.78 ಲಕ್ಷ ಕೋಟಿಗೆ ಏರಿಕೆಯಾಗಿದೆ. 2023ರ ಡಿಸೆಂಬರ್‌ ಅಂತ್ಯದಿಂದ ಆರಂಭಗೊಂಡು 2024ರ ಮಾರ್ಚ್‌ ಅಂತ್ಯದ ವೇಳೆದ ವೇಳೆ ಶೇ 3.4ರಷ್ಟು ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯದ ಸಾರ್ವಜನಿಕ ಸಾಲದ ನಿರ್ವಹಣಾ ತ್ರೈಮಾಸಿಕ ವರದಿಯಲ್ಲಿ (ಜನವರಿ-ಮಾರ್ಚ್‌, 2024) ಹೇಳಲಾಗಿದೆ. ಈ ಆರ್ಥಿಕ ವರ್ಷದ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿನ ಕೇಂದ್ರ ಬಜೆಟ್‌ನ ವಿತ್ತೀಯ ಕೊರತೆಯು ಶೇ 3ರಷ್ಟಾಗಿದೆ. ಲೋಕಸಭೆ ಚುನಾವಣೆಯ ಕಾರಣ ನೀತಿ ಸಂಹಿತೆ

171 ಲಕ್ಷ ಕೋಟಿಗೆ ಏರಿದ ಕೇಂದ್ರ ಸರ್ಕಾರದ ಸಾಲ| ನಿರ್ವಹಣಾ ತ್ರೈಮಾಸಿಕ ವರದಿ ಹೇಳಿಕೆ Read More »

‘ಗೃಹಲಕ್ಷ್ಮಿ’ ಹಣ ಬಂದಿಲ್ಲವೆಂದು ಮಹಿಳಾಮಣಿಗಳ ಪ್ರತಿಭಟನೆ| ಇಂದು ಅಥವಾ ನಾಳೆ ಹಣ ಬಿಡುಗಡೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ, ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ

‘ಗೃಹಲಕ್ಷ್ಮಿ’ ಹಣ ಬಂದಿಲ್ಲವೆಂದು ಮಹಿಳಾಮಣಿಗಳ ಪ್ರತಿಭಟನೆ| ಇಂದು ಅಥವಾ ನಾಳೆ ಹಣ ಬಿಡುಗಡೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read More »

ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ತ್ರಿ ಆಯ್ಕೆ

ಸಮಗ್ರ ನ್ಯೂಸ್‌: ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ 1989ರ ಐಎಫ್‌ಎಸ್ ಬ್ಯಾಚ್ ಅಧಿಕಾರಿ ವಿಕ್ರಮ್ ಮಿಸ್ತ್ರಿ ಅವರನ್ನು ಆಯ್ಕೆ ಮಾಡಲಾಗಿದೆ. ಹಾಲಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾಟ್ರಾ ಅವರ ಅವಧಿಯು ಜುಲೈ 14ರಂದು ಮುಗಿಯುವ ಕಾರಣ ವಿಕ್ರಮ್ ಮಿಸ್ತ್ರಿ ಅವರನ್ನು ನೇಮಿಸಲಾಗಿದೆ. ಜುಲೈ 15ರಂದು ವಿಕ್ರಮ್ ಮಿಸ್ತ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ವಿನಯ್ ಕ್ವಾಟ್ರಾ ಅವರ ಅಧಿಕಾರದ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿತ್ತು. ವಿನಯ್ ಕ್ವಾಟ್ರಾ ಅವರನ್ನು ಅಮೆರಿಕಕ್ಕೆ ಭಾರತದ ರಾಯಭಾರಿಯನ್ನಾಗಿ ನೇಮಿಸಲಾಗುತ್ತದೆ

ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ತ್ರಿ ಆಯ್ಕೆ Read More »

ಹೇಮಾವತಿ ನದಿಗೆ ಬಿದ್ದ ಕಾರು|ಇಬ್ಬರು ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಕೆಳಕ್ಕೆ ಹಳ್ಳಕ್ಕೆ ಬಿದ್ದಿದೆ. ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈ ವರೆಗೆ ಸುಮಾರು ಮೂರು ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ. ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ.

ಹೇಮಾವತಿ ನದಿಗೆ ಬಿದ್ದ ಕಾರು|ಇಬ್ಬರು ಪ್ರಾಣಾಪಾಯದಿಂದ ಪಾರು Read More »