ರಾಜ್ಯ

ಮತ್ತೊಂದು ದಸರಾ ಆನೆಯ ದುರಂತ ಅಂತ್ಯ| ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ‘ಅಶ್ವತ್ಥಾಮ’ ಸಾವು

ಸಮಗ್ರ ನ್ಯೂಸ್: ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿರುವ ಘಟನೆ ನಡೆದಿದೆ. ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಆನೆಯು ಆಹಾರ ಅರಸಿ ಕಾಡಿಗೆ ತೆರಳಿತ್ತು. ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ‌ ಮೂಲಗಳು ತಿಳಿಸಿವೆ. 2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ […]

ಮತ್ತೊಂದು ದಸರಾ ಆನೆಯ ದುರಂತ ಅಂತ್ಯ| ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ‘ಅಶ್ವತ್ಥಾಮ’ ಸಾವು Read More »

ಅಂಗಡಿಯ ಪರದೆ ಸರಿಸಿ ಹಣ್ಣು ತಿಂದು ತೆರಳುವ ಕಾಡಾನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಹಲವೆಡೆ ಕಾಡಾನೆಗಳು ಕಾಫಿ ತೋಟ ಮತ್ತು ಜನವಸತಿ ಪ್ರದೇಶಗಳ ಮೇಲೆ ಲಗ್ಗೆಯಿಟ್ಟು ಕಂಟಕಪ್ರಾಯವಾಗಿ ಪರಿಣಮಿಸಿರುವುದರ ನಡುವೆ ಇದಕ್ಕೆ ವ್ಯತಿರಿಕ್ತವಾಗಿ ಇಲ್ಲೊಂದು ಸಲಗ ಸದ್ದಿಲ್ಲದೇ ಅಂಗಡಿಯೊಂದರಿಂದ ಹಣ್ಣು ಹಂಪಲುಗಳನ್ನು ತಿಂದು ಯಾವುದೇ ತೊಂದರೆ ಮಾಡದೇ ತನ್ನಪಾಡಿಗೆ ಹೊರಟು ಹೋಗುತ್ತಿದೆ. ಕಳೆದ ಎರಡು ದಿನಗಳಿಂದ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಕಾಡಾನೆಯೊಂದುಗೋಣಿಕೊಪ್ಪಲು ಪೊನ್ನಂಪೇಟೆ ಮುಖ್ಯರಸ್ತೆಯ ಅರ್ವತೋಕ್ಲು ವಿದ್ಯಾನಿಕೇತನ ಶಾಲೆಗೆ ಹೋಗುವ ರಸ್ತೆಯ ಸಮೀಪದಲ್ಲಿರುವ ಹಣ್ಣು, ತರಕಾರಿ ಅಂಗಡಿಗೆ ಖಾಯಂ ಗಿರಾಕಿ ಎನ್ನುವಂತೆ ಬರುತ್ತಿದೆ.

ಅಂಗಡಿಯ ಪರದೆ ಸರಿಸಿ ಹಣ್ಣು ತಿಂದು ತೆರಳುವ ಕಾಡಾನೆ Read More »

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ರದ್ದು ಮಾಡಿ/ ತಮಿಳುನಾಡು ಸರ್ಕಾರಕ್ಕೆ ಶಿಫಾರಸು ಮಾಡಿದ ಆಯೋಗ

ಸಮಗ್ರ ನ್ಯೂಸ್: ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್)ಯನ್ನು ಕಾನೂನು ಅಥವಾ ಶಾಸನ ರಚನೆ ಪ್ರಕ್ರಿಯೆಗಳ ಮೂಲಕ ರದ್ದುಪಡಿಸುವಂತೆ ಆಯೋಗವೊಂದು ತಮಿಳುನಾಡು ಸರ್ಕಾರಕ್ಕೆ ಶಿಫಾರಸು ಮಾಡಿದ್ದು, 12ನೇ ತರಗತಿಯ ಅಂಕಗಳನ್ನೇ ಆಧರಿಸಿ ವೈದ್ಯಕೀಯ ಕೋರ್ಸ್‍ಗಳಿಗೆ ಪ್ರವೇಶಾವಕಾಶ ಕಲ್ಪಿಸುವಂತೆಯೂ ಸಲಹೆ ಮಾಡಿದೆ. ವಿವಿಧ ಬೋರ್ಡ್‍ಗಳಡಿ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳು ಸಿಗುವಂತೆ ಸರ್ಕಾರ ಮಾಡಬೇಕು ಎಂದು ಮದ್ರಾಸ್ ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶ ನ್ಯಾ ಎ.ಕೆ. ರಾಜನ್ ನೇತೃತ್ವದ ಅತ್ಯುನ್ನತ ಸಮಿತಿ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ರದ್ದು ಮಾಡಿ/ ತಮಿಳುನಾಡು ಸರ್ಕಾರಕ್ಕೆ ಶಿಫಾರಸು ಮಾಡಿದ ಆಯೋಗ Read More »

ಹವಾಮಾನ ವರದಿ| ಭಾರೀ ಮಳೆ‌ ಹಿನ್ನೆಲೆ| ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ,

ಹವಾಮಾನ ವರದಿ| ಭಾರೀ ಮಳೆ‌ ಹಿನ್ನೆಲೆ| ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ Read More »

‘ಶಕ್ತಿ’ ಯೋಜನೆಗೆ ವರ್ಷದ ಹರುಷ| 225 ಕೋಟಿ ಮಹಿಳೆಯರಿಗೆ ಲಾಭ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೊಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲ ಜೂನ್‌ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ. ಕಳೆದೊಂದು ವರ್ಷದಲ್ಲಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲೂ ಉಚಿ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಜೂ.9 ರವರೆಗೆ ಒಟ್ಟು5481.40 ಕೋಟಿ ರೂ.ಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ

‘ಶಕ್ತಿ’ ಯೋಜನೆಗೆ ವರ್ಷದ ಹರುಷ| 225 ಕೋಟಿ ಮಹಿಳೆಯರಿಗೆ ಲಾಭ Read More »

ಪ್ರಜ್ವಲ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ.. ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌

ಸಮಗ್ರ ನ್ಯೂಸ್: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಇದೀಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಷ್ಟರವರೆಗೆ ಅಂದರೆ 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ, ಇದೀಗ ಪ್ರಜ್ವಲ್‌ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ. ಇಂದು ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ನಂತರ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ

ಪ್ರಜ್ವಲ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ.. ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ Read More »

ಮೈಸೂರಿನ ಅನ್ನದಾನೇಶ್ವರ ಮಠದಲ್ಲಿ ಭೀಕರ ಕೊಲೆ| ಮಠಾಧಿಪತಿಯನ್ನೇ ಕೊಚ್ಚಿ ಕೊಲೆಗೈದ ದುಷ್ಕರ್ಮಿ!!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇಲ್ಲಿಯ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ಧಾರ್ಥನಗರ ಸಮೀಪದ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಎಂಬಾತನನ್ನು ಬಂಧಿಸಿದ್ದು, ಆರೋಪಿ ಸ್ವಾಮೀಜಿಯ ಬಳಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ‌ ಎಂದು ಹೇಳಲಾಗಿದೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ

ಮೈಸೂರಿನ ಅನ್ನದಾನೇಶ್ವರ ಮಠದಲ್ಲಿ ಭೀಕರ ಕೊಲೆ| ಮಠಾಧಿಪತಿಯನ್ನೇ ಕೊಚ್ಚಿ ಕೊಲೆಗೈದ ದುಷ್ಕರ್ಮಿ!! Read More »

ಯುವ ದಾಂಪತ್ಯದಲ್ಲಿ ಬಿರುಕು… ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಜ್ ಕುಟುಂಬದ ಕುಡಿ…

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ವಿಚಾರದ ಬೆನ್ನಲ್ಲೇ ಇದೀಗ ಮತ್ತೊಂದು ಜೋಡಿಯು ವಿಚ್ಛೇದನಕ್ಕೆ ಮುಂದಾಗಿದೆ. ಹೌದು ರಾಜ್ ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಯುವ ಹಾಗೂ ಶ್ರೀದೇವಿ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹ ಆಗಿದ್ದರು. ಅನೇಕ ಸೆಲೆಬ್ರಿಟಿಗಳು

ಯುವ ದಾಂಪತ್ಯದಲ್ಲಿ ಬಿರುಕು… ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಜ್ ಕುಟುಂಬದ ಕುಡಿ… Read More »

ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾಗಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ Read More »

‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…!

ಸಮಗ್ರ ನ್ಯೂಸ್: ಇಂದು ನರೇಂದ್ರ ಮೋದಿ ಅವರು ಸಂಜೆ 7.15ಕ್ಕೆ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಸಂಸದರು ಮೋದಿ ಸಂಪುಟದ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಹೀಗಾಗಿ ಸಚಿವರಾಗುವ ಸಂಸದರಿಗೆ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ. ಅದರಲ್ಲೂ ಪ್ರಮುಖವಾಗಿ ಕರ್ನಾಟಕದ ಐವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಕ್ಕಿದೆ ಎಂದು ತಿಳಿದುಬಂದಿದೆ. ಮುಖ್ಯವಾಗಿ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್, ಎಚ್.ಡಿ ಕುಮಾರಸ್ವಾಮಿಗೆ ಈ ಬಾರಿ

‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…! Read More »