ರಾಜ್ಯ

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ| ಇಬ್ಬರು ಸಾವು

ಸಮಗ್ರ ನ್ಯೂಸ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ನಡೆದಿದೆ. ಬೈಕ್ ನಲ್ಲಿದ್ದ ಓರ್ವ ಮಹಿಳೆ ಹಾಗೂ ಬೈಕ್ ಚಾಲಕ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಗಡಿ ತಾಲ್ಲೂಕಿನ ಹೊನ್ನಾಪುರ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. ಇವರು ಕನಕಪುರದಿಂದ ರಾಮನಗರ ಕಡೆ ತೆರಳುತ್ತಿದ್ದರು. ರಾಮನಗರದಿಂದ ಕನಪುರಕ್ಕೆ ತೆರಳುತ್ತಿದ್ದ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ […]

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ| ಇಬ್ಬರು ಸಾವು Read More »

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು 12.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಮಧ್ಯಾಹ್ನ 1.05 ಕ್ಕೆ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಧರ್ಮಸ್ಥಳದಿಂದ ಹೊರಟು ಮಂಗಳೂರು

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ Read More »

ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ ಫೈನ್ ಹಾಕಿದ ಪೋಲಿಸರು…!

ಸಮಗ್ರ ನ್ಯೂಸ್: ಉತ್ತರ ಕನ್ನಡದಲ್ಲೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹೌದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು ವಿಥೌಟ್ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಚಂದ್ರಕಾಂತ್ ಹಳ್ಳೇರ ಎಂಬವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್

ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ ಫೈನ್ ಹಾಕಿದ ಪೋಲಿಸರು…! Read More »

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಡ್ರೈವರ್, ಕಂಡಕ್ಟರ್ ಸಸ್ಪೆಂಡ್..!

ಸಮಗ್ರ ನ್ಯೂಸ್: ಇತ್ತೀಚೆಗೆ ಸಾರಿಗೆ ಬಸ್‌ನಲ್ಲಿ ಚಾಲಕ ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ್ದ ವಿಡಿಯೊ ವೈರಲ್ ಆಗಿತ್ತು . ಈ ವಿಡಿಯೋ ನೋಡಿ ಸಾರ್ವಜನಿಕರು ಕಳಪೆ ನಿರ್ವಹಣೆ ಬಗ್ಗೆ ಸಾರಿಗೆ ನಿಗಮದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಆದರೆ, ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆ ಮಾಡಿದಾಗ, ಸತ್ಯ ಸಂಗತಿ ಹೊರಬಿದ್ದಿದೆ. ಮಳೆಯಿಂದ ಬಸ್ ಸೋರಿಲ್ಲ, ಮೋಜಿಗಾಗಿ ಡ್ರೈವರ್ ಕೊಡೆ ಹಿಡಿದು ಚಾಲನೆ ಮಾಡಿದ್ದ ಎನ್ನುವ ವಿಷಯ ಬೆಳಕಿಗೆ ಬಂದಿದೆ. ಹೀಗಾಗಿ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಡ್ರೈವರ್, ಕಂಡಕ್ಟರ್ ಸಸ್ಪೆಂಡ್..! Read More »

ನಂಜನಗೂಡು: ಕಾಫಿ ತುಂಬಿದ ಲಾರಿಯ ಟೈಯರ್ ಸಿಡಿದು ಬೆಂಕಿ| ಸುಟ್ಟು ಕರಕಲಾದ ಲಾರಿ

ಸಮಗ್ರ ನ್ಯೂಸ್‌ : ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈಯರ್ ಸಿಡಿದು ಸಂಪೂರ್ಣವಾಗಿ ಲಾರಿ ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಣೇನೂರು ಗ್ರಾಮದ ಬಳಿ ನಡೆದಿದೆ. ಚಾಮರಾಜನಗರದಿಂದ ಹುಲ್ಲಹಳ್ಳಿ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ವೇಳೆ ಕಣೇನೂರು ಗ್ರಾಮದ ಬಳಿ ಲಾರಿಯ ಮುಂಭಾಗದ ಚಕ್ರವೊಂದು ಸಿಡಿದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಲಾರಿ ಭಸ್ಮವಾಗಿದೆ. ಲಾರಿಯಲ್ಲಿದ್ದ ಕಾಫಿ ಬೀಜ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಚಾಲಕ ಪಾರಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಹುಲ್ಲಹಳ್ಳಿ

ನಂಜನಗೂಡು: ಕಾಫಿ ತುಂಬಿದ ಲಾರಿಯ ಟೈಯರ್ ಸಿಡಿದು ಬೆಂಕಿ| ಸುಟ್ಟು ಕರಕಲಾದ ಲಾರಿ Read More »

ಮದ್ಯಪ್ರಿಯರಿಗೆ ಶಾಕ್: ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ

ಸಮಗ್ರ ನ್ಯೂಸ್: ಮದ್ಯಪ್ರಿಯರಿಗೆ ಜೂನ್ ನಲ್ಲಿ ಇದೀಗ ಶಾಕ್​ ಎದುರಾಗಿದೆ. ಹೌದು ಮಳೆ ಇದೇ ಆರಾಮಾಗಿ ಎಣ್ಣೆ ಹೋಡ್ಕೋಂಡು ಜಾಲಿಯಾಗಿ ಇರಬಹುದು ಎಂದು ಪ್ಲಾನ್ ಮಾಡಿರುವ ಎಣ್ಣೆ ಲವರ್ ಗಳು ಈ ಸುದ್ದಿಯನ್ನು ಒಮ್ಮೆ ಓದಲೇಬೇಕು. ಜೂನ್​​ ಮೊದಲ ವಾರ ನೀವು ಮದ್ಯದ ಮಳಿಗೆಗಳ ಬಳಿ ಹೋದರೆ ನಿರಾಸೆಯಿಂದ ವಾಪಸ್​ ಬರಬೇಕಾಗುತ್ತದೆ. ಏಕೆಂದರೆ ವಿಧಾನ ಪರಿಷತ್​ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಮತ ಎಣಿಕೆ ಇರುವುದರಿಂದ ಜೂನ್​ 1 ರಿಂದ 6ರ ವರೆಗೆ ಮದ್ಯದ ಮಾರಾಟವನ್ನು ಬಂದ್​​

ಮದ್ಯಪ್ರಿಯರಿಗೆ ಶಾಕ್: ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ Read More »

ಅಂತ್ಯಕ್ರಿಯೆ ವೇಳೆ ಕೆಮ್ಮಿದ ಮಗು| ಇಳಕಲ್​ನಲ್ಲಿ ವಿಚಿತ್ರ ಘಟನೆ

ಸಮಗ್ರ ನ್ಯೂಸ್: ಬಾಗಲಕೋಟೆಯಲ್ಲಿ ಒಂದು ವಿಚಿತ್ರ ಘಟನೆ ವರದಿಯಾಗಿದೆ. ಪ್ರಜ್ಞೆ ತಪ್ಪಿದ್ದ ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ ಅಷ್ಟರಲ್ಲಿ ಮಗು ಕೆಮ್ಮಿದೆ . ಈ ಘಟನೆ ಬಾಗಲಕೋಟೆ ‌ಜಿಲ್ಲೆಯ ಇಳಕಲ್​ನಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಮಗು ಸಮಸ್ಯೆ ಎದುರಿಸುತ್ತಿತ್ತು. ಕಳೆದ ನಾಲ್ಕು

ಅಂತ್ಯಕ್ರಿಯೆ ವೇಳೆ ಕೆಮ್ಮಿದ ಮಗು| ಇಳಕಲ್​ನಲ್ಲಿ ವಿಚಿತ್ರ ಘಟನೆ Read More »

ಎಲ್ಲಿದ್ದರೂ ಬೇಗ ಬಾ.. ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ| ಪ್ರಜ್ವಲ್ ಗೆ ದೇವೇಗೌಡರ ಖಡಕ್ ವಾರ್ನಿಂಗ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪೆನ್ ಡ್ರೈವ್ ಪ್ರಕರಣ ಜೋರಾಗಿ ನಡೆಯುತ್ತಿದ್ದು ಇತ್ತ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡು ಓಡಾಡುತ್ತಿದ್ದಾನೆ ಎಂಬ ಮಾಹಿತಿಯೂ ಇದೆ. ಅದರಂತೆ ಪ್ರಜ್ವಲ್ ಗಾಗಿ ಹುಡುಕಾಟ ನಡೆಯುತ್ತಿದೆ. ಇತ್ತ ಮಾಜಿ ಪ್ರಧಾನಿ ದೇವೇಗೌಡ ಅವರು ಅಸಮಾಧಾನ ಹೊರಹಾಕಿದ್ದಾರೆ. ಪ್ರಜ್ವಲ್‌ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಫರ್ಮಾನು ಹೊರಡಿಸಿದ್ದಾರೆ. ನನ್ನ ಮಾತು ಮೀರಿದರೆ ನೀನು ಒಬ್ಬಂಟಿಯಾಗುತ್ತೀಯಾ. ಎಲ್ಲಿದ್ದರೂ ಬೇಗ ಬಂದು ತಕ್ಷಣ ವಿಚಾರಣೆಗೆ ಹಾಜರಾಗು. ಇಲ್ಲವಾದರೆ

ಎಲ್ಲಿದ್ದರೂ ಬೇಗ ಬಾ.. ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ| ಪ್ರಜ್ವಲ್ ಗೆ ದೇವೇಗೌಡರ ಖಡಕ್ ವಾರ್ನಿಂಗ್ Read More »

ಟಿಕೆಟ್ ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ಮೈಸೂರು ಅರಮನೆ ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಇಂದು ಮೈಸೂರು ಅರಮನೆ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಈ ವೇಳೆ ಪ್ರವೇಶ ದ್ವಾರ, ಪಾರ್ಕಿಂಗ್ ಲಾಟ್​ನಲ್ಲಿ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ದೂರು ಆಧರಿಸಿ ಲೋಕಾಯುಕ್ತ ಎಸ್​ಪಿ ಸಚಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮ ಹಣವನ್ನ ಜಪ್ತಿ ಮಾಡಲಾಗಿದೆ. ಇನ್ನು ಕಾರ್ಯಾಚರಣೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್​​ಪಿಗಳು, ಅಧಿಕಾರಿಗಳು

ಟಿಕೆಟ್ ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಸಮಗ್ರ ನ್ಯೂಸ್: ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದುತಿರುಪತಿಗೆ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ. 6 ಜನರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಇವರೆಲ್ಲ ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ. ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22),

ರಾಣೇಬೆನ್ನೂರಿನಲ್ಲಿ ಭೀಕರ ಅಪಘಾತ: ನಾಲ್ವರು ಸಾವು Read More »