ರಾಜ್ಯ

ವಿಧಾನ ಪರಿಷತ್ ಚುನಾವಣೆ/ ಒಟ್ಟು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಸೋಮವಾರ ಸಲ್ಲಿಕೆಯಾದ 17 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್ 2, ಜೆಡಿಎಸ್ 1, ಪಕ್ಷೇತರರ

ವಿಧಾನ ಪರಿಷತ್ ಚುನಾವಣೆ/ ಒಟ್ಟು 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಮುಂಗಾರು ಮಳೆ/ ಮೇ 19ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಎಂಟ್ರಿ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯ ಆಗ್ನೆಯ ಭಾಗಕ್ಕೆ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಮೇ 19ರಂದು ಮುಂಗಾರು ಮಳೆ ಎಂಟ್ರಿಕೊಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮೂನ್ಸೂಚನೆ ಕೊಟ್ಟಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಬರುವ ಮಾರುತಗಳು ಏಳೆಂಟು ದಿನಗಳ ಬಳಿಕ ವಾಡಿಕೆಗಿಂತ ಮುನ್ನವೇ ಕೇರಳಕ್ಕೆ ಪ್ರವೇಶಿಸಲಿವೆ. ನಂತರ, ಕೇರಳಕ್ಕೆ ಆಗಮಿಸಿರುವ ಮಾರುತಗಳು ಪ್ರಬಲವಾಗೊಂಡರೆ ಅದೇ ದಿನ ಕರ್ನಾಟಕದ ಕರಾವಳಿ ಭಾಗಗಕ್ಕೆ ಕಾಲಿಡಲಿದೆ. ಮಾರುತಗಳು ಪ್ರಬಲಗೊಂಡರೆ ವಾಡಿಕೆಗಿಂತ ಮುನ್ನ ಅಥವಾ ವಾಡಿಕೆಯಂತೆ ರಾಜ್ಯಕ್ಕೆ ಮಾರುತಗಳು ಆಗಮಿಸಲಿವೆ.

ಮುಂಗಾರು ಮಳೆ/ ಮೇ 19ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಎಂಟ್ರಿ Read More »

ಬೆಂಗಳೂರಿನಲ್ಲಿ ಮತ್ತೆ ಬಾಂಬ್ ದಾಳಿ ಬೆದರಿಕೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಮತ್ತೊಮ್ಮೆ ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ರವಾನೆಯಾಗಿದೆ. ಎರಡು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಆರು ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿದ್ದು, ನಂತರ ಅದು ನಕಲಿ ಬಾಂಬ್ ಬೆದರಿಕೆ ಕರೆ ಎಂದು ಖಚಿತವಾಗಿತ್ತು. ಇದೀಗ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಧ್ಯರಾತ್ರಿ ಶಾಲೆಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಮೇಲ್

ಬೆಂಗಳೂರಿನಲ್ಲಿ ಮತ್ತೆ ಬಾಂಬ್ ದಾಳಿ ಬೆದರಿಕೆ Read More »

ಭಾರೀ ಬಿರುಗಾಳಿ ಸಹಿತ ಮಳೆ| ಶಿರಾಡಿ ಘಾಟ್ ನಲ್ಲಿ ಮರ ಬಿದ್ದು ಸಂಚಾರ ಬಂದ್

ಸಮಗ್ರ ನ್ಯೂಸ್: ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ ಸಂಚಾರ ಬಂದ್ ಆಗಿದೆ. ತಿಂಗಳುಗಳ ಬಳಿಕ ಬಿರುಗಾಳಿ ಸಹಿತ ಅಬ್ಬರದ ಮಳೆಯಾಗಿದೆ. ಪರಿಣಾಮ ಮರ ರಸ್ತೆಗೆ ಉರುಳಿ ಬಿದ್ದಿದ್ದು, ವಾಹನ ಸಚಾರ ಮಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಗೆ ಬಿದ್ದ

ಭಾರೀ ಬಿರುಗಾಳಿ ಸಹಿತ ಮಳೆ| ಶಿರಾಡಿ ಘಾಟ್ ನಲ್ಲಿ ಮರ ಬಿದ್ದು ಸಂಚಾರ ಬಂದ್ Read More »

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು

ಸಮಗ್ರ ನ್ಯೂಸ್: ಕೆಲವರಿಗೆ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದರೆ ಸಾಧನೆ, ಇನ್ನು ಕೆಲವರಿಗೆ ತೇರ್ಗಡೆಯಾದರೆ ಅದೇ ಸಾಧನೆ. ನಿಜದ ಅರ್ಥದಲ್ಲಿ ಎರಡೂ ಸಂಭ್ರಮವೇ, ಆದ್ಯತೆಯೆ ಬೇರೆ. ಕುಡುಪಿನ ಮಂಗಳಾನಗರದಲ್ಲಿ ಇಂಥದ್ದೇ ಒಂದು ಅಪರೂಪದ ಸಂಭ್ರಮಾಚರಣೆ ನಡೆದಿದೆ. ಇತ್ತೀಚಿನ ಎಸ್‌ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೇ (ಜಸ್ಟ್‌ ಪಾಸ್‌) ವಿದ್ಯಾರ್ಥಿಯೋರ್ವನಿಗೆ ಯುವ ಫ್ರೆಂಡ್ಸ್‌ನ ಗೆಳೆಯರು ಹಿತೈಷಿಗಳು ಸೇರಿ ಬ್ಯಾನರ್‌ ಹಾಕಿ ಅಭಿನಂದಿಸಿದ್ದಾರೆ. ಬ್ಯಾನರ್‌ ಹೀಗಿದೆ ನೋಡಿ : ವಿದ್ಯಾರ್ಥಿಯ ಫೋಟೋ ಇರುವ ಬ್ಯಾನರ್‌ನಲ್ಲಿ ಆತನಿಗೆ ಅಭಿನಂದನೆಗಳನ್ನು ಸಲ್ಲಿಸಿ ಪಕ್ಕದಲ್ಲೇ

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು Read More »

ಪ್ರಧಾನಿ ನರೇಂದ್ರ ಮೋದಿಯಿಂದ ಬಾಗಲಕೋಟೆ ಯುವತಿಗೆ ಪತ್ರ

ಸಮಗ್ರ ನ್ಯೂಸ್: ಇತ್ತೀಚೆಗೆ ಕರುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಅದೇ ಸಂದರ್ಭದಲ್ಲಿ ಪ್ರಚಾರದ ರ್ಯಾಲಿ ನಡೆಯುತ್ತಿತ್ತು. ಆಗಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಇದೀಗ ಮೋದಿ ಪತ್ರ ಬರೆದಿದ್ದಾರೆ. ಏಪ್ರಿಲ್ 29 ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಮೋದಿ ಬಾಗಲಕೋಟೆಗೆ ಆಗಮಿಸಿದ್ದಾಗ ತಾನು ಚಿತ್ರಿಸಿದ ಸ್ಕೆಚ್ ಹಿಡಿದು ಯುವತಿ ವೇದಿಕೆ ಮುಂಭಾಗದಲ್ಲಿ ನಿಂತಿದ್ದಳು. ತಾಯಿಯ ಫೋಟೋ ಫ್ರೆಮ್ ನೋಡಿ ಎಸ್​ಪಿಜಿ ಸಿಬ್ಬಂದಿಗೆ ಹೇಳಿ ಮೋದಿ ತರಿಸಿಕೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿಯಿಂದ ಬಾಗಲಕೋಟೆ ಯುವತಿಗೆ ಪತ್ರ Read More »

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಪ್| ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್

ಸಮಗ್ರ ನ್ಯೂಸ್: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಪ್| ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್ Read More »

ಶಿವಮೊಗ್ಗ : ಜಮೀನು ವಿವಾದ ತಾರಕಕ್ಕೇರಿ ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ

ಸಮಗ್ರ ನ್ಯೂಸ್‌ : ಜಮೀನು ವಿವಾದ ತಾರಕಕ್ಕೇರಿ ಹಾಡಹಗಲೇ ವ್ಯಕ್ತಿಯೊಬ್ಬರ ಬರ್ಬರ ಕೊಲೆಯಾಗಿದ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ವಿರುದ್ಧ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಹಲವು ವರ್ಷಗಳಿಂದ ಇವರಿಬ್ಬರ ಮಧ್ಯೆ ಜಮೀನು ವಿವಾದ ಇತ್ತು. ವಿವಾದ ಹಿನ್ನೆಲೆಯಲ್ಲಿ ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಕೋರ್ಟ್ ಆದೇಶ

ಶಿವಮೊಗ್ಗ : ಜಮೀನು ವಿವಾದ ತಾರಕಕ್ಕೇರಿ ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ Read More »

ಉಡುಪಿ : ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿದ ನಗರಸಭಾ ಸದಸ್ಯ

ಸಮಗ್ರ ನ್ಯೂಸ್‌ : ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ಸೇರಿದಂತೆ ಇತರ 6 ಮಂದಿ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಕಕ್ಕುಂಜೆಯ ಸವಿತಾ ಎಂಬವರು ಮಹಿಳಾ ಠಾಣೆಯಲ್ಲಿ ದೂರ ದಾಖಲಿಸಿದ್ದಾರೆ. ಸವಿತಾ ಹಾಗೂ ಬಾಲಕೃಷ್ಣ ಶೆಟ್ಟಿ ಅವರಿಗೆ ಸುಮಾರು 4 ವರ್ಷಗಳಿಂದ ಸವಿತಾ ಅವರ ಮನೆ ಜಾಗ ಹಾಗೂ ಸವಿತಾ ಅವರ ಪತಿಯ ಗ್ಯಾರೇಜ್ ವಿಚಾರದಲ್ಲಿ ತಕರಾರು ಇದ್ದು, ಈ

ಉಡುಪಿ : ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿದ ನಗರಸಭಾ ಸದಸ್ಯ Read More »

ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು

ಸಮಗ್ರ ನ್ಯೂಸ್‌ : ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟಿ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ. ಮೆಹನಾಜ್ (17) ಮೃತ ದುರ್ದೈವಿ.ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್‌ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ

ಮೈಸೂರು : ನೀರಿನಲ್ಲಿ ಮುಳುಗಿ ಯುವತಿ ಮೃತ್ಯು Read More »