ರಾಜ್ಯ

ರಾಜ್ಯಾದ್ಯಂತ ಮೈಕೊರೆವ ಚಳಿ| 8 ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (IMD) ಬರೋಬ್ಬರಿ 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್‌ನಲ್ಲಿ ರಾಜ್ಯದ ಅತೀ ಕನಿಷ್ಠ ತಾಪಮಾನ ದಾಖಲಾಗಿದೆ. ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಿಗೆ […]

ರಾಜ್ಯಾದ್ಯಂತ ಮೈಕೊರೆವ ಚಳಿ| 8 ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ Read More »

ತಿರುಪತಿ ತಿಮ್ಮಪ್ಪನಿಗೇ 54 ಕೋಟಿ ನಾಮ| ‘ಫೇಕ್ ದುಪ್ಪಟ್ಟಾ’ ಹೆಸರಲ್ಲಿ ಭಾರೀ ಗೋಲ್ ಮಾಲ್

ಸಮಗ್ರ ನ್ಯೂಸ್: ತಿರುಮಲ ದೇವಸ್ಥಾನದಲ್ಲಿ ಮತ್ತೊಂದು ಭಾರಿ ಹಗರಣ ಬೆಳಕಿಗೆ ಬಂದಿದೆ. ನಕಲಿ ತುಪ್ಪ, ದೇಣಿಗೆ ಕಳ್ಳತನ ಪ್ರಕರಣಗಳ ಬಳಿಕ ಈಗ ಹೊರಬಿದ್ದಿರುವ ‘ಫೇಕ್ ಸಿಲ್ಕ್ ದುಪ್ಪಟ್ಟಾ’ ಹಗರಣ ಭಕ್ತರಲ್ಲಿ ಆಘಾತ ಮೂಡಿಸಿದೆ. ತಿಮ್ಮಪ್ಪನ ಸನ್ನಿಧಿಗೆ ಅರ್ಪಿಸುವ ರೇಷ್ಮೆ ದುಪ್ಪಟ್ಟಗಳ ಖರೀದಿಯಲ್ಲೇ ಕೋಟಿ ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. 2015ರಿಂದ 2025ರವರೆಗೆ ಸುಮಾರು 10 ವರ್ಷಗಳ ಅವಧಿಯಲ್ಲಿ 54 ಕೋಟಿ ರೂಪಾಯಿ ಮೌಲ್ಯದ ರೇಷ್ಮೆ ದುಪ್ಪಟ್ಟಗಳ ಖರೀದಿಯಲ್ಲಿ ಅಗ್ಗದ ಪಾಲಿಸ್ಟರ್ ವಸ್ತ್ರಗಳನ್ನು ‘ರೇಷ್ಮೆ

ತಿರುಪತಿ ತಿಮ್ಮಪ್ಪನಿಗೇ 54 ಕೋಟಿ ನಾಮ| ‘ಫೇಕ್ ದುಪ್ಪಟ್ಟಾ’ ಹೆಸರಲ್ಲಿ ಭಾರೀ ಗೋಲ್ ಮಾಲ್ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ವರದಿಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರೋದಾಗಿ ಮಾಸ್ಕ್​​ಮ್ಯಾನ್​​ ಚಿನ್ನಯ್ಯ ಆರೋಪಿಸಿದ್ದ ಹಿನ್ನಲೆ ಎಸ್​ಐಟಿ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಧರ್ಮಸ್ಥಳದ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್​ಐಟಿ ದೃಢಪಡಿಸಿದೆ. ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ವರದಿಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ Read More »

ಋತುಚಕ್ರ ರಜೆ| ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ ಕಾಯ್ದೆಯಲ್ಲಿ ಇಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ. ಸರ್ಕಾರದ ಏಕಪಕ್ಷ ಆದೇಶದಿಂದ ಹೋಟೆಲ್

ಋತುಚಕ್ರ ರಜೆ| ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »

ಕೆಂಪುಕಲ್ಲು ಸಮಸ್ಯೆ: 74 ಕಾರ್ಯಾದೇಶ, 21 ಪರವಾನಗಿ ಮಂಜೂರು – ಸಚಿವ ಎಸ್ ಎಸ್ ಮಲ್ಲಿಕಾರ್ಜುನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ತೆಗೆಯಲು 74 ಕಾರ್ಯಾದೇಶ ಹಾಗೂ 21 ಪರವಾನಿಗೆ ಮಂಜೂರು ಮಾಡಲಾಗಿದೆ. ಪರವಾನಿಗೆ ಕೋರಿ ಸಲ್ಲಿಸಿರುವ ಒಟ್ಟು 63 ಅರ್ಜಿಗಳ ವಿಲೇವಾರಿ ಬಾಕಿ ಇದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು(ಲ್ಯಾಟರೈಟ್‌ ಇಟ್ಟಿಗೆ) ಸಮಸ್ಯೆಯ ಕುರಿತು ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜಾ ಸೋಮವಾರದಂದು ವಿಧಾನಪರಿಷತ್‌ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕ

ಕೆಂಪುಕಲ್ಲು ಸಮಸ್ಯೆ: 74 ಕಾರ್ಯಾದೇಶ, 21 ಪರವಾನಗಿ ಮಂಜೂರು – ಸಚಿವ ಎಸ್ ಎಸ್ ಮಲ್ಲಿಕಾರ್ಜುನ Read More »

ದ.ಕ‌ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿಕನ್‌ ಪಾಕ್ಸ್| ಮುನ್ನೆಚ್ಚರಿಕೆ ವಹಿಸಲು ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಶಾಲಾ ಮಕ್ಕಳಲ್ಲಿ ಅಥವಾ ಸಾರ್ವಜನಿಕರಲ್ಲಿ ಖಾಯಿಲೆಯ ಲಕ್ಷಣಗಳು ಕಂಡುಬ0ದಲ್ಲಿ ತಕ್ಷಣಕ್ಕೆ ಚಿಕಿತ್ಸೆಯನ್ನು ಪಡೆಯುವುದರೊಂದಿಗೆ ಸೋಂಕು ಹರಡದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಚಿಕನ್ ಪಾಕ್ಸ್ ಮಕ್ಕಳಲ್ಲಿ, ಯಾವುದೇ ತೊಂದರೆ ಇಲ್ಲದೆ ಸಂಪೂರ್ಣವಾಗಿ ಗುಣವಾಗುತ್ತದೆ. ಒಮ್ಮೆ ಚಿಕನ್ ಪಾಕ್ಸ್ನಿಂದ ಬಳಲಿದ ವ್ಯಕ್ತಿ ಜೀವಿತಾವಧಿಯವರೆಗೂ ಅದರ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೊಂದುತ್ತಾನೆ. ಪೌಷ್ಠಿಕ ಆಹಾರ

ದ.ಕ‌ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಿಕನ್‌ ಪಾಕ್ಸ್| ಮುನ್ನೆಚ್ಚರಿಕೆ ವಹಿಸಲು ಸೂಚನೆ Read More »

ಪುತ್ತೂರು: ಗಡೀಪಾರು ಆದೇಶ ಕುರಿತು ಮೌನ ಮುರಿದ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣದ ಎಸ್ ಐಟಿ ತನಿಖೆ ಕುರಿತಂತೆ ಇದೇ ಮೊದಲ ಬಾರಿಗೆ ಮಾಧ್ಯಮಗಳ ಎದುರು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ನಾನು ಮತ್ತು ಚಿನ್ನಯ್ಯ ಆದಿಚುಂಚನಗಿರಿ ಮಠಕ್ಕೆ ಹೋಗಿರೋದು ಸತ್ಯ, ಈ ವೇಳೆ ನಮ್ಮ ಜೊತೆಗೆ ಸೌಜನ್ಯನ ಮನೆಯವರಿದ್ದರು,ಸೌಜನ್ಯ ಪರ ಹೋರಾಟಗಾರರಿದ್ದರು. ಈ ವೇಳೆ ಆದಿಚುಂಚನಗಿರಿ ಮಠದಲ್ಲಿ ಒಂದೂವರೆ ಗಂಟೆ ಕಾಲ ಸ್ವಾಮೀಜಿಯ ಮುಂದೆಯೇ ಚಿನ್ನಯ್ಯ ಎಲ್ಲವನ್ನೂ ಅವನು ಬಿಡಿಸಿ ಹೇಳಿದ್ದಾನೆ. ನಾನು ಬಿಡುಗಡೆ ಮಾಡಿದ ಒಂದೂವರೆ

ಪುತ್ತೂರು: ಗಡೀಪಾರು ಆದೇಶ ಕುರಿತು ಮೌನ ಮುರಿದ ಮಹೇಶ್ ಶೆಟ್ಟಿ ತಿಮರೋಡಿ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ

ಸಮಗ್ರ‌ ನ್ಯೂಸ್: ರಾಜ್ಯದ ನಾಯಕತ್ವ ಬದಲಾವಣೆ ತಿಕ್ಕಾಟದ ಮಧ್ಯ ಒಗ್ಗಟ್ಟಿನ ಮಂತ್ರ ಜಪಿಸಿರುವ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ವಿಪಕ್ಷಗಳ ಟೀಕೆಗಳಿಗೆ, ಪ್ರಶ್ನೆಗಳು ಮತ್ತು ಆರೋಪಗಳಿಗೆ ತಕ್ಕ ಉತ್ತರ ಕೊಡಲು ಸಜ್ಜಾಗಿದ್ದಾರೆ. ಬೆಂಬಲ ಬೆಲೆ, ರೈತರು ಬೆಳೆದ ಕಬ್ಬು, ಮಕ್ಕೆಜೋಳ ಇತರ ಬೆಳೆಗೆ ಸೂಕ್ತ ಬೆಲೆ, ನೆರೆ-ಪ್ರವಾಹ ಪರಿಹಾರ, ಸರ್ಕಾರ ನೇಮಕಾತಿ, ಪೊಲೀಸ್ ವೈಫಲ್ಯ, ನೀರಾವರಿ ವಿಷಯಗಳು ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಹಲವು ಸಮಸ್ಯೆಗಳು, ಬೇಡಿಕೆಗಳ ಪ್ರಸ್ತಾಪಿಸಿ ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಅಣಿಯಾಗಿವೆ.

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 07.12.25 ರಿಂದ 13.12.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷರಾಶಿ:ಮೇಷ ರಾಶಿಯವರಿಗೆ ಈ ವಾರ ಮಿಶ್ರ ಫಲ ನೀಡಲಿದೆ. ನೀವು ಸ್ವಲ್ಪ ಸಮಯದಿಂದ ಸಮಸ್ಯೆಯಿಂದ ಬಳಲುತ್ತಿದ್ದರೆ, ಈ ವಾರ ಅದು ಮುಂದುವರಿಯಬಹುದು. ಯೋಜಿತ ಕೆಲಸಗಳಿಗೆ ಅಡೆತಡೆಗಳು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಧಾರವಾಡ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ‌ ಉರಿದ ಕಾರು| ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ

ಸಮಗ್ರ ನ್ಯೂಸ್: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ. ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು.

ಧಾರವಾಡ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ‌ ಉರಿದ ಕಾರು| ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಸಜೀವ ದಹನ Read More »