ರಾಜ್ಯ

ಇಂದು (ಮೇ.6) ರಾತ್ರಿಯಿಂದ‌ 108 ಅಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ| ಮುಷ್ಕರಕ್ಕಿಳಿದ ಆರೋಗ್ಯ ಕವಚ ಸಿಬ್ಬಂದಿ

ಸಮಗ್ರ ನ್ಯೂಸ್: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ ಸೇವೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ನೀಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ ಕೇವಲ 13,000 ರೂ. ನೀಡಿದೆ. ಹೀಗಾಗಿ ಸೋಮವಾರ ಸಂಜೆಯೊಳಗೆ

ಇಂದು (ಮೇ.6) ರಾತ್ರಿಯಿಂದ‌ 108 ಅಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ| ಮುಷ್ಕರಕ್ಕಿಳಿದ ಆರೋಗ್ಯ ಕವಚ ಸಿಬ್ಬಂದಿ Read More »

ಹಾಸನ ಕಾಮಕಾಂಡ ವಿಡಿಯೋ ಹಂಚಿಕೊಂಡರೆ ಕಠಿಣ ಕ್ರಮ| ಎಸ್ಐಟಿ‌ಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಝಿಕ ಜಾಲತಾಣದಲ್ಲಿ ಹಾಸನದ ಅಶ್ಲೀಲ ವಿಡಿಯೋ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ

ಹಾಸನ ಕಾಮಕಾಂಡ ವಿಡಿಯೋ ಹಂಚಿಕೊಂಡರೆ ಕಠಿಣ ಕ್ರಮ| ಎಸ್ಐಟಿ‌ಯಿಂದ ಮಹತ್ವದ ಆದೇಶ Read More »

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಇಬ್ಬರು ವೃದ್ಧರು ಮೃತ್ಯು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65), ಹುಬ್ಬಳ್ಳಿಯ ಪುಷ್ಟ (55) ಮೃತ ದುರ್ದೈವಿಗಳು. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಚಿತ್ರದುರ್ಗದಲ್ಲಿ ಮದುವೆ ಮುಗಿಸಿಕೊಂಡು ವಾಪಸ್‌ ಬರುವಾಗ ಈ ದುರ್ಘಟನೆ ನಡೆದಿದೆ. ಅತಿ ವೇಗದ ಚಾಲನೆಯಿಂದ‌ಲೇ ನಿಯಂತ್ರಣ

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಇಬ್ಬರು ವೃದ್ಧರು ಮೃತ್ಯು Read More »

ರೇವಣ್ಣರನ್ನ ಎಸ್ಐಟಿ ಕಸ್ಟಡಿಗೆ ನೀಡಿದ ಜಡ್ಜ್| 3 ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ ಅವರನ್ನು 3 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇಂದು ಕೋರ್ಟ್‌ ರಜೆ ಇರುವ ಹಿನ್ನೆಲೆ ಈ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ

ರೇವಣ್ಣರನ್ನ ಎಸ್ಐಟಿ ಕಸ್ಟಡಿಗೆ ನೀಡಿದ ಜಡ್ಜ್| 3 ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ Read More »

ಪೆನ್ ಡ್ರೈವ್ ಪ್ರಕರಣ ನಡುವೆ ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಭಾನುವಾರ ಅಂತ್ಯಗೊಂಡಿದ್ದು, ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಭಾರಿ ಸದ್ದು ಮಾಡಿದ್ದು, ಮತದಾರನ ಮೇಲೆ ಸಣ್ಣ ಪ್ರಮಾಣದಲ್ಲಿ ಪ್ರಭಾವ ಬೀರುವ ಸಾಧ್ಯತೆ ಇದೆ. ಕರ್ನಾಟಕ ಒಟ್ಟು 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಏಪ್ರಿಲ್ 26 ರಂದು 14 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದಿತ್ತು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ

ಪೆನ್ ಡ್ರೈವ್ ಪ್ರಕರಣ ನಡುವೆ ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ Read More »

ಹವಾಮಾನ ವರದಿ|ಮೇ.7 ರಿಂದ ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಯ ಹಲವು ಕಡೆ ಭಾನುವಾರ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಮಳೆ ಜೊತೆಗೆ ಬಿಸಿ ಗಾಳಿಯೂ ಇರಲಿದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಹಾವೇರಿ, ಚಿತ್ರದುರ್ಗ, ದಾವಣಗೆರೆ,

ಹವಾಮಾನ ವರದಿ|ಮೇ.7 ರಿಂದ ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆ ಮುನ್ಸೂಚನೆ Read More »

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ… ಬೌರಿಂಗ್ ಆಸ್ಪತ್ರೆ ಬಳಿ ರೇವಣ್ಣ ಆಕ್ರೋಶ

ಸಮಗ್ರ ನ್ಯೂಸ್: ಇಂದು ಎಚ್.ಡಿ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ. ಇದೆ ಸಂದರ್ಭದಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಎಚ್.ಡಿ ರೇವಣ್ಣ ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ… ಬೌರಿಂಗ್ ಆಸ್ಪತ್ರೆ ಬಳಿ ರೇವಣ್ಣ ಆಕ್ರೋಶ Read More »

ಹಾಸನ ಅಶ್ಲೀಲ ವಿಡಿಯೋ ಪ್ರಕರಣ| ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಫುಲ್ ಟೆನ್ಷನ್

ಸಮಗ್ರ ನ್ಯೂಸ್: ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಈಗ ಟೆನ್ಷನ್ ಎದುರಾಗಿದೆ. ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಕಷ್ಟ ಶುರುವಾಗಿದೆ. ವಿಡಿಯೋದಲ್ಲಿರುವ ಓರ್ವ ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ ಹಾಗೂ ಬೆಂಗಳೂರಿನ ಎಇಇ, ಸೇರಿ 5ಕ್ಕೂ ಹೆಚ್ಚು ಅಧಿಕಾರಿಗಳಿಗೆ

ಹಾಸನ ಅಶ್ಲೀಲ ವಿಡಿಯೋ ಪ್ರಕರಣ| ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಫುಲ್ ಟೆನ್ಷನ್ Read More »

ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪ್ರಚಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ನಿಮಿತ್ತ ರಾಯಚೂರು ನಗರದ ತಿಮ್ಮಾಪುರ ಪೇಟೆ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ರವರು ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ, ವಿದ್ಯಾವಂತರನ್ನು ಲೋಕಸಭೆಗೆ ಆರಿಸಿ ಕಳುಹಿಸುವ ಜವಾಬ್ದಾರಿ ಜನರ ಮೇಲಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕಾಗಿದೆ ಎಂದು ಮನವಿ ಮಾಡಿದರು.

ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪ್ರಚಾರ Read More »

ನಂಜನಗೂಡು : ಬಿರುಗಾಳಿ ಮಳೆಗೆ ಮುರಿದು ಬಿದ್ದ ನಾಲ್ಕು ಎಕರೆ ಬಾಳೆ

ಸಮಗ್ರ ನ್ಯೂಸ್ : ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತರಾದ ಬಸವರಾಜಪ್ಪ ಎಂಬುವರಿಗೆ ಸೇರಿದ ಬಾಳೆ ಬೆಳೆ ಇದಾಗಿದ್ದು, ತಮ್ಮ ನಾಲ್ಕು ಎಕರೆ ಪ್ರದೇಶದಲ್ಲಿ ಸಾಲ ಸೋಲ ಮಾಡಿ ಬಾಳೆ ಬೆಳೆ ಬೆಳೆದಿದ್ದರು. ಹಗಲು ರಾತ್ರಿ ಎನ್ನದೆ ಕಾಡುಪ್ರಾಣಿಗಳ ಹಾವಳಿಯ ನಡುವೆಯೂ ಕೂಡ ಬೆಳೆಯನ್ನು ರಕ್ಷಣೆ ಮಾಡಿಕೊಂಡಿದ್ದರು. ಆದರೆ ಬಿರುಗಾಳಿ ಸಹಿತ ಸುರಿದ ಮಳೆಗೆ

ನಂಜನಗೂಡು : ಬಿರುಗಾಳಿ ಮಳೆಗೆ ಮುರಿದು ಬಿದ್ದ ನಾಲ್ಕು ಎಕರೆ ಬಾಳೆ Read More »