ರಾಜ್ಯ

ಧಾರವಾಡ: ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ರ್ಯಾಲಿ

ಸಮಗ್ರ ನ್ಯೂಸ್ : ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸ್ವರೂಪ ಟಿ.ಕೆ. ಅವರು ವಿಶೇಷ ಚೇತನರ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಈ ರ್ಯಾಲಿಯು ಕೆ.ಸಿ.ಡಿ ವೃತ್ತದಿಂದ ಪ್ರಾರಂಭವಾಗಿ ಸಪ್ತಾಪೂರ ಬಾವಿ, ಜಯನಗರ ಕ್ರಾಸ್, ಕೆ.ಯು.ಡಿ ವೃತ್ತ, ಶ್ರೀನಗರ ವೃತ್ತ ಮಾರ್ಗದ ಮೂಲಕ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತ್ತು. ಮೇ 7 ರಂದು

ಧಾರವಾಡ: ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ರ್ಯಾಲಿ Read More »

ವಿಜಯಪುರ: ನೇಹಾಳ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಸಮಗ್ರ ನ್ಯೂಸ್ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಪಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಯಿತು. ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ

ವಿಜಯಪುರ: ನೇಹಾಳ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ Read More »

ವಿಜಯನಗರ: ಏ29ರಂದು ಕೂಡ್ಲಿಗೆ ಸಿದ್ದರಾಮಯ್ಯ, ಡಿಕೆಶಿ ಆಗಮನ-ಎನ್.ಟಿ.ಶ್ರೀನಿವಾಸ್

ಸಮಗ್ರ ನ್ಯೂಸ್ : ಏ29ರಂದು ಪಟ್ಟಣಕ್ಕೆ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ, ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಪರ ಪ್ರಚಾರ, ಹಾಗೂ ಅಖಂಡ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ರವರ ಪರ ಮತಯಾಚನೆ ಮಾಡಲು ಇವರು ಆಗಮಿಸಲಿದ್ದಾರೆಂದು ಕೂಡ್ಲಿಗಿ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ರವರು, ಪಕ್ಷದ ಕಚೇರಿಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂದು ಜರುಗುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ, ಹಾಗೂ ಮತಯಾಚನೆ ಕಾರ್ಯಕ್ರಮದಲ್ಲಿ ಸಿಎಂ

ವಿಜಯನಗರ: ಏ29ರಂದು ಕೂಡ್ಲಿಗೆ ಸಿದ್ದರಾಮಯ್ಯ, ಡಿಕೆಶಿ ಆಗಮನ-ಎನ್.ಟಿ.ಶ್ರೀನಿವಾಸ್ Read More »

ನಂಜನಗೂಡು: ಸರ್ಕಾರದ ಬೊಕ್ಕಸಕ್ಕೆ ಟೋಪಿ ಹಾಕಿ ಟೆಂಡರ್ ಇಲ್ಲದೆ ನಡೆಯುತ್ತಿದೆ 20 ಲಕ್ಷ ರೂಗಳ ಅಂಗಡಿ ಮಳಿಗೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಸಂದರ್ಭವನ್ನೇ ಬಳಸಿಕೊಂಡು ಗ್ರಾಮ ಪಂಚಾಯಿತಿಯ 15ನೇಯ ಹಣಕಾಸಿನ ಅನುದಾನದಲ್ಲಿ ಯಾವುದೇ ಟೆಂಡರ್ ಕರೆಯದೆ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಹಣವನ್ನು ವಂಚಿಸಿ ಬರೋಬರಿ 4 ಅಂಗಡಿ ಮಳಿಗೆಗಳನ್ನು ಕಾನೂನು ಬಾಹಿರವಾಗಿ ನಿರ್ಮಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಶ್ರೀಧರ್ ಮತ್ತು ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಈರಯ್ಯ 20 ಲಕ್ಷದ ಮೊತ್ತದ ಕಾಮಗಾರಿಗೆ ಯಾವುದೇ ಟೆಂಡರ್ ಕರೆಯದೆ ಸರ್ಕಾರದ ಬೊಕ್ಕಸಕ್ಕೆ ಪಂಗನಾಮ ಹಾಕಿ ಕಾಮಗಾರಿ ನಿರ್ಮಾಣ

ನಂಜನಗೂಡು: ಸರ್ಕಾರದ ಬೊಕ್ಕಸಕ್ಕೆ ಟೋಪಿ ಹಾಕಿ ಟೆಂಡರ್ ಇಲ್ಲದೆ ನಡೆಯುತ್ತಿದೆ 20 ಲಕ್ಷ ರೂಗಳ ಅಂಗಡಿ ಮಳಿಗೆ Read More »

ಗುಂಡ್ಲುಪೇಟೆ: ಹುಲಿದಾಳಿಗೆ ಮೃತಪಟ್ಟ ಮೂರು ತಿಂಗಳ ಕಂದನಿಗಾಗಿ ತಾಯಿ ಆನೆ ಚೀರಾಟ

ಸಮಗ್ರ ನ್ಯೂಸ್ : ಕಂದನಿಗಾಗಿ ಗಂಟೆಗಟ್ಟಲೆ ರಸ್ತೆ ಬದಿಯಲ್ಲೇ ನಿಂತು ಮೃತಪಟ್ಟ ಕರುಳ ಬಳ್ಳಿಗಾಗಿ ತಾಯಿಯಾನೆ ಚೀರಾಟ, ಇತ್ತ ಸುಮಾರು 4 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತ ಈ ಮನಕಲಕುವ ದೃಶ್ಯ ಕಂಡುಬಂದಿದ್ದು ಗುಂಡ್ಲುಪೇಟೆ ತಾಲೂಕಿನ ಪ್ರತಿಷ್ಠಿತ ವನ್ಯಜೀವಿ ತಾಣ ಬಂಡೀಪುರದಲ್ಲಿ ಮರಿಯನ್ನ ಕಳೆದುಕೊಂಡ ತಾಯಿ ಆನೆ ರೋಧನೆಯನ್ನ ಕಣ್ಣಾರೆ ಕಂಡ ಜನರು ಮರುಗಿದ್ದಾರೆ. ಈ ದೃಶ್ಯ ಕಂಡುಬಂದಿದ್ದು ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ, ಮೂರು ತಿಂಗಳ ಮರಿಯಾನೆ ಮೇಲೆ ಎರಗಿದ ಹುಲಿ ಭೀಕರ ದಾಳಿ

ಗುಂಡ್ಲುಪೇಟೆ: ಹುಲಿದಾಳಿಗೆ ಮೃತಪಟ್ಟ ಮೂರು ತಿಂಗಳ ಕಂದನಿಗಾಗಿ ತಾಯಿ ಆನೆ ಚೀರಾಟ Read More »

ವಿಜಯಪುರ: ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆ

ಸಮಗ್ರ ನ್ಯೂಸ್‌ : ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಇವರ ಅಧ್ಯಕ್ಷತೆಯಲ್ಲಿ ವಿಜಯಪುರ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸರಕಾರದಿಂದ ನಾಮನಿರ್ದೇಶನಗೊಂಡು ಜಿಲ್ಲಾ ಅನುಷ್ಠಾನ ಸಮಿತಿ ಹಾಗೂ ತಾಲೂಕಾ ಸಮಿತಿಗಳ ಸಭೆಯನ್ನು ಕರೆಯಲಾಗಿತ್ತು. ಸಭೆಯನ್ನುದ್ದೇಶಿಸಿ ಎಸ್.ಆರ್. ಪಾಟೀಲ (ಬ್ಯಾಡಗಿ) ಇವರು ಮಾತನಾಡುತ್ತಾ ೨೦೨೩ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೫ ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ

ವಿಜಯಪುರ: ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆ Read More »

ನಂಜನಗೂಡು: ನೇಹಾ ಹಿರೇಮಠ ಪ್ರಕರಣ|ನಂಜನಗೂಡಿನಲ್ಲಿ ಕ್ರಾಂತಿಕಾರಿ ಲಿಂಗಾಯತ ವೀರಶೈವ ಮುಖಂಡರ ಆಕ್ರೋಶ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿಗೆ ಉಗ್ರ ಶಿಕ್ಷೆ ನೀಡುವಂತೆ ನಂಜನಗೂಡಿನ ಕ್ರಾಂತಿಕಾರಿ ಲಿಂಗಾಯಿತ ವೀರಶೈವ ಬಳಗದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಳಗದ ಅಧ್ಯಕ್ಷ ಜಗದೀಶ್ ಹಾಗೂ ವೀರಶೈವ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಬಸವಣ್ಣ, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ ಇಂದು ತಾಲ್ಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಇದೊಂದು ಹೇಯ ಕೃತ್ಯ ಯಾವುದೇ ಸಮಾಜದ ಹೆಣ್ಣು ಮಕ್ಕಳಿಗೂ ಇಂತಹ ಪರಿಸ್ಥಿತಿ ಬರಬಾರದು. ಕಾಂಗ್ರೆಸ್ ಸರ್ಕಾರ

ನಂಜನಗೂಡು: ನೇಹಾ ಹಿರೇಮಠ ಪ್ರಕರಣ|ನಂಜನಗೂಡಿನಲ್ಲಿ ಕ್ರಾಂತಿಕಾರಿ ಲಿಂಗಾಯತ ವೀರಶೈವ ಮುಖಂಡರ ಆಕ್ರೋಶ Read More »

ಕಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ

ಸಮಗ್ರ ನ್ಯೂಸ್‌ : ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು. ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿದ್ದಾರೆ. ಕಟೀಲಿನಿಂದ ಶಿಬರೂರಿಗೆ ನಡೆದ ಮೆರವಣಿಗೆಗೆ ಪಲಿಮಾರು ಶ್ರೀ ವಿದ್ಯಾಧೀಶ ಸ್ವಾಮೀಜಿ, ವೇದವ್ಯಾಸ ತಂತ್ರಿ ಕಟೀಲಿನ ಅಸ್ರಣ್ಣರು, ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ, ಜೀರ್ಣೋದ್ದಾರ

ಕಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ Read More »

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ|ರಸ್ತೆಗಿಳಿದು ಚೊಂಬು ಪ್ರದರ್ಶಿಸಿದ ನಲಪಾಡ್

ಸಮಗ್ರ ನ್ಯೂಸ್: ಲೋಕ ಚುನಾವಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅದರಂತೆ ಬೆಂಗಳೂರಿನ ಮೇಖ್ರಿ ಸರ್ಕಲ್​ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಭದ್ರತಾ ಲೋಪ ಉಂಟಾಗಿದೆ. ಹೌದು ಮೋದಿಯವರು ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ನುಗ್ಗಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಚೊಂಬು ಪ್ರದರ್ಶಿಸಿದ್ದಾರೆ. ಕೂಡಲೇ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಡಿಫೆಂಡರ್

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ|ರಸ್ತೆಗಿಳಿದು ಚೊಂಬು ಪ್ರದರ್ಶಿಸಿದ ನಲಪಾಡ್ Read More »

ಉಡುಪಿ : ಮೃತ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್ : ಇತ್ತೀಚೆಗೆ ಕೊಲೆಯಾದ ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಭೇಟಿ ನೀಡಿದರು. ನೇಹಾ ಹಿರೇಮಠ ತಂದೆ ನಿರಂಜನ್ ಹಾಗೂ ಕುಟುಂಬ ಸದಸ್ಯರಿಗೆ ಸಚಿವರು ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನೇಹಾ ಪಾಲಕರು ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ. ದೊಡ್ಡ ಸಮಾಜ ನಾವೆಲ್ಲಾ ಜೊತೆಯಲ್ಲಿ ಇರ್ತೀವಿ ಅಂತ ಹೇಳಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ

ಉಡುಪಿ : ಮೃತ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »