ರಾಜ್ಯ

ಮೂಡಿಗೆರೆ: ಕೃಷಿಕನ ಮೇಲೆ ಕಾಡುಕೋಣ ದಾಳಿ

ಸಮಗ್ರ ನ್ಯೂಸ್‌ : ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ನಡೆದಿದೆ. ದುರ್ಗದಹಳ್ಳಿ ಗ್ರಾಮದ ಹಲಗಡ್ಕ ನಿವಾಸಿ ರಾಜೇಶ್ ಕಾಡುಕೋಣದಿಂದ ದಾಳಿಗೊಳಗಾದ ರೈತ. ತನ್ನ ಜಮೀನಿನಲ್ಲಿ ಇದ್ದಾಗ ಕಾಡುಕೋಣವೊಂದು ರಾಜೇಶ್ ಮೇಲೆ ದಾಳಿ ನಡೆಸಿದ್ದು, ಕಾಡುಕೋಣ ದಾಳಿಯಿಂದ ರಾಜೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಕಾಡುಕೋಣದ ತಿವಿತದಿಂದ ರಾಜೇಶ್ ಅವರ ತಲೆ, ಹೊಟ್ಟೆ ಮತ್ತು ಕಾಲಿನ ಭಾಗಕ್ಕೆ ತೀವ್ರವಾಗ ಪೆಟ್ಟಾಗಿದೆ. ತಲೆ ಮತ್ತು ಹೊಟ್ಟೆ ಭಾಗದಲ್ಲಿ ಆಳವಾದ

ಮೂಡಿಗೆರೆ: ಕೃಷಿಕನ ಮೇಲೆ ಕಾಡುಕೋಣ ದಾಳಿ Read More »

ಚಿಕ್ಕಬಳ್ಳಾಪುರ: ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಡೆತ್‌ನೋಟ್‌ ಬರೆದು ನೇಣಿಗೆ ಶರಣು

ಸಮಗ್ರ ನ್ಯೂಸ್‌ : ನೇಣು ಬಿಗಿದುಕೊಂಡು ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ ನಡೆದಿದೆ. ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌. ಡಿ.ಎ.ಆರ್‌ನಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್‌, ಅವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನೂ ನಾಗರಾಜ್‌ ಬರೆದಿದ್ದ ಡೆತ್‌ ನೋಟ್ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಡೆತ್‌ನೋಟ್‌ ಬರೆದು ನೇಣಿಗೆ ಶರಣು Read More »

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ & ಡೈಮಂಡ್ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ಸ್ವತ್ತು ವಶಕ್ಕೆ ಪಡೆಯಲಾಗಿದೆ. ವಿವಿಧ ಆಭರಣ ಅಂಗಡಿಗಳಿಗೆ ಸರಿಯಾದ ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಕಳೆದ ಏ. 6, 9 ದಿನಾಂಕದ ಹಳೆಯ

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕುಂದಾಪುರ: ಈಜುಕೊಳದ ನೀರಿನಲ್ಲಿ ಮುಳುಗಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು

ಸಮಗ್ರ ನ್ಯೂಸ್‌ : ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ ಗೆ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ನಾಲ್ಕನೇ ತರಗತಿಯ ವಿದ್ಯಾರ್ಥಿಯೋರ್ವ ಈಜುಕೊಳದ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ. ಹೊಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ವಿದ್ಯಾರ್ಥಿ. ಈತ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ. ಗುರುವಾರ ಮನೆ ಮಂದಿಯೊಂದಿಗೆ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ಗೆ ಹೋಗಿದ್ದ ಸಂದರ್ಭದಲ್ಲಿ ಸ್ವಿಮಿಂಗ್ ಫುಲ್’ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ

ಕುಂದಾಪುರ: ಈಜುಕೊಳದ ನೀರಿನಲ್ಲಿ ಮುಳುಗಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು Read More »

ಕಲಬುರಗಿ: ವಿಜ್ಞಾನ ವಿಭಾಗದಲ್ಲಿ ಕಲಬುರಗಿ ಜಿಲ್ಲೆಗೆ ಸಮರ್ಥ ಪ್ರಥಮ|ಡಿಸಿಯಿಂದ ಸನ್ಮಾನ

ಸಮಗ್ರ ನ್ಯೂಸ್‌ : ಅಫಜಲಪೂರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕಿ ಅನಿತಾ ಹನ್ನೂರೆ ಅವರ ಸುಪುತ್ರ ಸಮರ್ಥ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದ್ದಕ್ಕೆ ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರು ಸನ್ಮಾನಿಸಿದರು. ಒಟ್ಟು 600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕೆ. ಅಫಜಲಪುರ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಮ್. ಸಾಲಿಮಠ ಮತ್ತು ಸಿಬ್ಬಂದಿ ವರ್ಗ

ಕಲಬುರಗಿ: ವಿಜ್ಞಾನ ವಿಭಾಗದಲ್ಲಿ ಕಲಬುರಗಿ ಜಿಲ್ಲೆಗೆ ಸಮರ್ಥ ಪ್ರಥಮ|ಡಿಸಿಯಿಂದ ಸನ್ಮಾನ Read More »

ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಎ.12) ಬೆಳಗ್ಗೆ ನಡೆದಿದೆ. ಮೃತ ನವೀನ್ (30) ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು. ನವೀನ್​ ಇಂದು ಬೆಳಿಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು

ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »

ಲೋಕಸಭಾ ಚುನಾವಣೆ/ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ನಾಮನಿರ್ದೇಶನ ಸಲ್ಲಿಕೆಗೆ ಇಂದಿನಿಂದ ಅವಕಾಶ ಲಭ್ಯವಿದೆ. ನಾಮನಿರ್ದೇಶನ ಸಲ್ಲಿಕೆ ಮಾಡಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ. ರಾಜ್ಯಾದ್ಯಂತ ಒಟ್ಟು 14 ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ,

ಲೋಕಸಭಾ ಚುನಾವಣೆ/ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ Read More »

ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಒಕ್ಕಲಿಗ ಪಾಲಿಟಿಕ್ಸ್‌| ಚಲುವರಾಯಸ್ವಾಮಿ, ಎಚ್‌ಡಿಕೆ ಮಧ್ಯೆ ಪೋನ್ ಟ್ಯಾಪಿಂಗ್ ಸಮರ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಒಕ್ಕಲಿಗ ಪಾಲಿಟಿಕ್ಸ್‌ ಇದೀಗ ಜೋರಾಗಿದೆ. ಒಕ್ಕಲಿಗ ಸಮುದಾಯದ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕೆಳಗೆ ಇಳಿಸಿದ್ದು ಯಾರು? ಇದನ್ನು ಕೇಳುವ ಶಕ್ತಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಇದೆಯಾ? ಎಂಬ ಡಿ.ಕೆ. ಶಿವಕುಮಾರ್‌ ಹೇಳಿಕೆಯು ಈಗ ಮತ್ತೊಂದು ತಿರುವನ್ನು ಪಡೆದುಕೊಂಡಿದೆ. ಎಚ್‌ಡಿಕೆ ಅವರು ನಿರ್ಮಲಾನಂದನಾಥ ಶ್ರೀಗಳ ಫೋನ್‌ ಟ್ಯಾಪ್‌ ಮಾಡಿಸಿದ್ದರು ಎಂದು ಸಚಿವ ಎನ್. ಚಲುವರಾಯಸ್ವಾಮಿ‌ ಆರೋಪ ಮಾಡಿದ್ದಾರೆ. ಇದಕ್ಕೆ ಎಚ್‌ಡಿಕೆ ತಿರುಗೇಟು ನೀಡಿದ್ದು, ನಾನು ಫೋನ್ ಟ್ಯಾಪಿಂಗ್

ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಒಕ್ಕಲಿಗ ಪಾಲಿಟಿಕ್ಸ್‌| ಚಲುವರಾಯಸ್ವಾಮಿ, ಎಚ್‌ಡಿಕೆ ಮಧ್ಯೆ ಪೋನ್ ಟ್ಯಾಪಿಂಗ್ ಸಮರ Read More »

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ| ಶಂಕಿತನನ್ನು ಪ.ಬಂಗಾಳದಲ್ಲಿ ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಪಡೆದಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಶಂಕಿತರನ್ನು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದೆ ಎಂದು ಅದು ಹೇಳಿದೆ. ಆದಾಗ್ಯೂ, ಉನ್ನತ ಮಟ್ಟದ ಪ್ರಕರಣದ ಬೆಳವಣಿಗೆಯನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಮೂಲಗಳ ಪ್ರಕಾರ, ಗುಪ್ತಚರ ಬ್ಯೂರೋ (ಐಬಿ) ನೀಡಿದ ಮಾಹಿತಿಯ ಮೇರೆಗೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಭಯಾನಕ ಘಟನೆಯ ಹಿಂದಿನ ಇಬ್ಬರು ಮಾಸ್ಟರ್ ಮೈಂಡ್ಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ| ಶಂಕಿತನನ್ನು ಪ.ಬಂಗಾಳದಲ್ಲಿ ಬಂಧಿಸಿದ ಎನ್ಐಎ Read More »

ಲೋಕಸಭಾ ಚುನಾವಣೆ/ ಬಳ್ಳಾರಿ ಮತ್ತು ರಾಯಚೂರಿನಲ್ಲಿ ನಟ ಪವನ್ ಕಲ್ಯಾಣ್ ಪ್ರಚಾರ

ಸಮಗ್ರ ನ್ಯೂಸ್: ಕರ್ನಾಟಕ ಲೋಕಸಭಾ ಚುನಾವಣಾ ಪ್ರಚಾರ ಭರಾಟೆ ಹೆಚ್ಚುತ್ತಿದ್ದು, ಕೇಂದ್ರದಿಂದ ಹಾಗೂ ಅಕ್ಕಪಕ್ಕದ ನಾಯಕರಿಂದ ಘಟನಾನುಘಟಿ ನಾಯಕರನ್ನೇ ಕರೆತಂದು ಪ್ರಚಾರ ನಡೆಸಲು ಎನ್‍ಡಿಎ ನಾಯಕರು ನಿರ್ಧರಿಸಿದ್ದಾರೆ. ಆ ಹಿನ್ನೆಲೆಯಲ್ಲಿ, ಏ. 14ರಂದು ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು, ಮಂಗಳೂರಿನಲ್ಲಿ ಪ್ರಚಾರ ನಡೆಸಿದರೆ, ಏ. 17ರಂದು ತೆಲುಗು ಸೂಪರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಬಳ್ಳಾರಿ ಹಾಗೂ ರಾಯಚೂರಿಗೆ ಹೋಗಿ ಅಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಬಿಜೆಪಿ ನಾಯಕ

ಲೋಕಸಭಾ ಚುನಾವಣೆ/ ಬಳ್ಳಾರಿ ಮತ್ತು ರಾಯಚೂರಿನಲ್ಲಿ ನಟ ಪವನ್ ಕಲ್ಯಾಣ್ ಪ್ರಚಾರ Read More »