ರಾಜ್ಯ

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಏ.10 ಕ್ಕೆ ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ನಡೆಸುವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ನೋಡೋದು ಹೇಗೆ ಗೊತ್ತಾ? Read More »

ಬಂದೂಕುಧಾರಿ ರಿಯಾಜ್ ಒಳ್ಳೆಯ ಹುಡುಗ/ ಮಾಜಿ ಶಾಸಕ ಆರ್ ವಿ ದೇವರಾಜ್ ಹೇಳಿಕೆ

ಸಮಗ್ರ ನ್ಯೂಸ್: ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂಬಾತ ಸೊಂಟದಲ್ಲಿ ಗನ್ ಇರಿಸಿಕೊಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಲಾರ್ಪಣೆ ಮಾಡಿದ ಕುರಿತು ಕಾಂಗ್ರೆಸ್ ಮಾಜಿ ಶಾಸಕ ಆರ್. ವಿ. ದೇವರಾಜ್ ಹೇಳಿಕೆ ನೀಡಿದ್ದು, ರಿಯಾಜ್ ಸಿದ್ದಾಪುರ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದ. ಆತ ತುಂಬಾ ಒಳ್ಳೇ ಹುಡುಗ, ಅವನಿಗೆ ಗನ್ ಲೈಸೆನ್ಸ್ ಇದೆ ಎಂದು ಹೇಳಿದ್ದಾರೆ. ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ. ಸಿದ್ದರಾಮಯ್ಯ ಅವರು ಸೋಮವಾರ ಪ್ರಚಾರ ನಡೆಸುವಾಗ

ಬಂದೂಕುಧಾರಿ ರಿಯಾಜ್ ಒಳ್ಳೆಯ ಹುಡುಗ/ ಮಾಜಿ ಶಾಸಕ ಆರ್ ವಿ ದೇವರಾಜ್ ಹೇಳಿಕೆ Read More »

ಹುಬ್ಬಳ್ಳಿ:ಪ್ಲೈ ಓವರ್ ಕೆಳಗೆ ಪಾದಾಚಾರಿಗಳು ಓಡಾಡಲು ಸಂಕಷ್ಟ

ಸಮಗ್ರ ನ್ಯೂಸ್‌ : ವಾಣಿಜ್ಯ ನಗರಿಯಲ್ಲಿ ಒಂದೆಡೆ ಪ್ಲೈ ಓವರ್‌ನ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಸಾಯಂಕಾಲ ಆದ್ರೆ ಪ್ಲೈ ಓವರ್ ಕೆಳಗೆ ಹೋಗಬೇಕಾದ್ರೆ ಪಾದಾಚಾರಿಗಳು ಭಯದಲ್ಲಿ‌‌ ಸಾಗುವಂತೆ ಆಗಿದೆ. ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಹುಬ್ಬಳ್ಳಿಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡುತ್ತಿದ್ದಾರೆ. ಆದ್ರೆ ಹೊಸೂರಿನ ಗಾಳಿ ದುರ್ಗಮ್ಮ ದೇವಸ್ಥಾನ, ಐಟಿ ಪಾರ್ಕ್ ಮುಂಭಾಗದಲ್ಲಿ ಬೃಹತ್ ಪ್ಲೈ ಓವರ್ ನಿರ್ಮಾಣ ಮಾಡಿದ್ದಾರೆ. ಆದ್ರೆ ಅಲ್ಲಿ ಸಾಯಂಕಾಲ ಆದ್ರೆ ಸಾಕು ಪಾದಾಚಾರಿಗಳು ಹೋಗಲು ಭಯ ಪಡುತ್ತಿದ್ದಾರೆ. ಯಾಕೆಂದ್ರೆ ಬೀದಿ ದೀಪಗಳು ಇಲ್ಲದೆ

ಹುಬ್ಬಳ್ಳಿ:ಪ್ಲೈ ಓವರ್ ಕೆಳಗೆ ಪಾದಾಚಾರಿಗಳು ಓಡಾಡಲು ಸಂಕಷ್ಟ Read More »

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್

ಸಮಗ್ರ ನ್ಯೂಸ್: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ 52 ಮಂದಿ ಹಾಗೂ ಏ.6 ರಂದು ಒಬ್ಬರು ಸೇರಿದಂತೆ 53 ಮಂದಿ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 270 ಪುರುಷ 21 ಮಹಿಳೆಯರು ಸೇರಿದಂತೆ 300 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ 53 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, 247 ಮಂದಿ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 226 ಪುರುಷ

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್ Read More »

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ

ಸಮಗ್ರ ನ್ಯೂಸ್: ದೇಶಾದ್ಯಂತ ಹಿಂದೂಗಳು ಸಂಭ್ರಮದಿಂದ ಯುಗಾದಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ Read More »

ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ| ಬೈಕ್ ಸವಾರ ಜಸ್ಟ್ ಮಿಸ್!

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ. ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು. ಆದರೆ ರಸ್ತೆಯ ಒಂದು ಬದಿಯಲ್ಲಿ

ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಕಾಡಾನೆ ಸಂಚಾರ| ಬೈಕ್ ಸವಾರ ಜಸ್ಟ್ ಮಿಸ್! Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್

ಸಮಗ್ರ ನ್ಯೂಸ್: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹಾಗೂ ಮಾಜೀ ಸ್ಪೀಕರ್ ರಮೇಸ್ ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಕುರಿತಂತೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮೊಯ್ಲಿ ಅವರು, ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದರು. ಕೇವಲ ರಾಜಕಾರಣಿಯಾಗದ ವೀರಪ್ಪ ಮೊಯ್ಲಿ ಅವರು, ಸಾಹಿತಿ ಕೂಡ ಆಗಿದ್ದಾರೆ. ಅವರ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ Read More »

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್/ ರಾಜ್ಯದಲ್ಲಿ ಏರಿಕೆ ಕಂಡ ನೋಂದಣಿ

ಸಮಗ್ರ ನ್ಯೂಸ್: ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್ ಅಳವಡಿಕೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ತಿಂಗಳಲ್ಲಿ 34 ಲಕ್ಷ ವಾಹನ ಮಾಲೀಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನೋಂದಾಯಿಸಿಕೊಂಡಿದ್ದಾರೆ. ದೇಶಾದ್ಯಂತ ಏಕರೂಪದ ವಾಹನ ನೋಂದಣಿ ಫಲಕ ಮತ್ತು ವಾಹನ ಸುರಕ್ಷತೆ ಅಗತ್ಯತೆಗಳ ಪರಿಚಯದೊಂದಿಗೆ, ಸಾರಿಗೆ ಇಲಾಖೆಯು ಏಪ್ರಿಲ್ 2019 ರ ಮೊದಲು ನೋಂದಾಯಿಸಲಾದ ವಾಹನಗಳಿಗೆ HSRP ಅನ್ನು ಕಡ್ಡಾಯಗೊಳಿಸಿದೆ. ಏಪ್ರಿಲ್ 2019 ರ ಮೊದಲು ರಾಜ್ಯದಲ್ಲಿ ನೋಂದಾಯಿಸಲಾದ 2 ಕೋಟಿಗಿಂತಲೂ ಹೆಚ್ಚು ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳುವ ಅಗತ್ಯವಿದೆ. ಎಚ್‌ಎಸ್‌ಆರ್‌ಪಿ ಅಳವಡಿಸಲು

ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್/ ರಾಜ್ಯದಲ್ಲಿ ಏರಿಕೆ ಕಂಡ ನೋಂದಣಿ Read More »

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ/ ನಾಮಪತ್ರ ಹಿಂತೆಗೆಯಲು ಇಂದು‌ ಕಡೆಯ ದಿನ

ಸಮಗ್ರ ನ್ಯೂಸ್: ಕರ್ನಾಟಕದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ 358 ಅಭ್ಯರ್ಥಿಗಳು ಒಟ್ಟು 492 ನಾಮಪತ್ರ ಸಲ್ಲಿಸಿದ್ದಾರೆ. ಈ ಪೈಕಿ 300 ನಾಮಪತ್ರಗಳು ಕ್ರಮಬದ್ಧವಾಗಿದ್ದು ಉಳಿದವು ಅಮಾನ್ಯವಾಗಿವೆ. ಸಂಜೆಯ ವೇಳೆಗೆ 14 ಜಿಲ್ಲೆಗಳಲ್ಲಿ ಯಾವ ಅಭ್ಯರ್ಥಿಗಳು ಕಣದಲ್ಲಿ ಉಳಿಯುತ್ತಾರೆ ಎಂಬುದು ಸ್ಪಷ್ಟವಾಗಲಿದೆ. ಚುನಾವಣಾ ಪ್ರಚಾರ, ರೋಡ್‌ಶೋ ಇತ್ಯಾದಿ ಈಗಾಗಲೇ ಆರಂಭವಾಗಿದ್ದು, ಮಂಗಳವಾರದಿಂದ ಚುನಾವಣಾ ಪ್ರಚಾರ ಇನ್ನಷ್ಟು ಬಿರುಸಾಗಲಿದೆ. ವಿವಿಧ ಪಕ್ಷಗಳ ರಾಷ್ಟ್ರೀಯ ನಾಯಕರು

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ/ ನಾಮಪತ್ರ ಹಿಂತೆಗೆಯಲು ಇಂದು‌ ಕಡೆಯ ದಿನ Read More »

ಮಡಿಕೇರಿ:ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ: ಯದುವೀರ್‌

ಸಮಗ್ರ ನ್ಯೂಸ್‌ : ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧನಿದ್ದೇನೆ, ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕು. ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಅವರು ಭಾನುವಾರ ಕೊಡಗಿನ ಹಲವೆಡೆಗಳಲ್ಲಿ ಬಿರುಬಿಸಿಲಿನಲ್ಲೂ ಸಂಚಾರ ನಡೆಸಿ ಜನರಿಂದ ಮತ ಯಾಚಿಸುತ್ತಿದ್ದಾರೆ. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಹತ್ತಾರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಹಗಲು-ರಾತ್ರಿ ಎನ್ನದೇ ಮತಯಾಚನೆಯಲ್ಲಿ ತೊಡಗಿದ್ದಾರೆ. ಅಂದಿನ ಕಾಲದಲ್ಲಿ ಅರಸರು

ಮಡಿಕೇರಿ:ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ: ಯದುವೀರ್‌ Read More »