ರಾಜ್ಯ

ಸ್ವಿಸ್ ಬ್ಯಾಂಕ್ ನಿಂದ ಭಾರತದ ಕಪ್ಪು ಹಣ ತರುತ್ತೇವೆ ಎಂದ ಮೋದಿ ಸರ್ಕಾರ ತಂದ್ರ ಹೇಳಿ: ಯತೀಂದ್ರ ಸಿದ್ದರಾಮಯ್ಯ

ಸಮಗ್ರ ನ್ಯೂಸ್‌ : ಮೋದಿ ಸರ್ಕಾರ ಆಡಳಿತಕ್ಕೆ ಬಂದು 10 ವರ್ಷ ಕಳೆದಿವೆ ಇಡೀ ದೇಶದ ಆರ್ಥಿಕ ಪರಿಸ್ಥಿತಿ ಹಿಂದೆ ಸರಿದಿದೆ. ಕಪ್ಪು ಹಣ ತರುತ್ತೇವೆ ಸುಖದ ಜೀವಮಾನ ನಿಮ್ಮದಾಗಬಹುದು ಎಂದ ಮೋದಿ ಕಪ್ಪು ಹಣ ತರಲೇ ಇಲ್ಲ, ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಅವರು ವಿರಾಜಪೇಟೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಟೀಕಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೊಡಗು ಮೈಸೂರು ಕ್ಷೇತ್ರದಿಂದ ಸರಳ ವ್ಯಕ್ತಿತ್ವ ಇರುವ ಜನರೊಂದಿಗೆ ಸದಾ ಬೆರೆಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ

ಸ್ವಿಸ್ ಬ್ಯಾಂಕ್ ನಿಂದ ಭಾರತದ ಕಪ್ಪು ಹಣ ತರುತ್ತೇವೆ ಎಂದ ಮೋದಿ ಸರ್ಕಾರ ತಂದ್ರ ಹೇಳಿ: ಯತೀಂದ್ರ ಸಿದ್ದರಾಮಯ್ಯ Read More »

ಶಿವಮೊಗ್ಗ: ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ಈಶ್ವರಪ್ಪ ತೆರಳಿದ್ದ ವೇಳೆ ಮತಪ್ರಚಾರ ಮಾಡಿದ್ದರು. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಈಶ್ವರಪ್ಪರ ವಿರುದ್ಧ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಈಶ್ವರಪ್ಪ ವಿರುದ್ಧ ತುಂಗಾನಗರ ಠಾಣೆಗೆ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದಾರೆ. ಈ ಕುರಿತು ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಶಿವಮೊಗ್ಗ: ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು Read More »

ಬಿಜೆಪಿ ದೂರಿನಿಂದ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಪತ್ನಿ ಅಂಜಲಿ ನಿಂಬಾಳ್ಕರ್ ಪರವಾಗಿ ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪದಡಿ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ. ಹೇಮಂತ್ ನಿಂಬಾಳ್ಕರ್ ತಮ್ಮ ಕಚೇರಿಯಲ್ಲಿ ಪತ್ನಿ ಅಂಜಲಿ ನಿಂಬಾಳ್ಕರ್ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೇಮಂತ್ ನಿಂಬಾಳ್ಕರ್ ವಿರುದ್ಧ

ಬಿಜೆಪಿ ದೂರಿನಿಂದ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ Read More »

ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ/ ಚುನಾವಣೋತ್ತರ ಸಮೀಕ್ಷೆ ಬ್ರೇಕ್ ಹಾಕಿದ ಆಯೋಗ

ಸಮಗ್ರ ನ್ಯೂಸ್: ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.19ರ ಬೆಳಿಗ್ಗೆ 7 ರಿಂದ ಜೂ.1ರ ಸಂಜೆ 6.30ರವರೆಗೆ ಯಾವುದೇ ಚುನಾವಣೋತ್ತರ ಸಮೀಕ್ಷೆ ನಡೆಸುವುದಾಗಲಿ, ಪ್ರಕಟಿಸುವುದಾಗಲಿ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶ ನೀಡಿದೆ. ಅಭಿಪ್ರಾಯ ಸಂಗ್ರಹಗಳು, ಚುನಾವಣಾ ಸಮೀಕ್ಷೆ ಫಲಿತಾಂಶ ಸೇರಿದಂತೆ ಯಾವುದೇ ಚುನಾವಣೆ ಸಂಬಂಧಿ ಮಾಹಿತಿಗಳನ್ನು ಚುನಾವಣೆ ಮುಗಿಯುವವರೆಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿನ ಪ್ರಸಾರಕ್ಕೆ ಜನಪ್ರತಿನಿಧಿಗಳ ಕಾಯ್ದೆ ಅನುಸಾರ ನಿಬರ್ಂಧಿಸಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ/ ಚುನಾವಣೋತ್ತರ ಸಮೀಕ್ಷೆ ಬ್ರೇಕ್ ಹಾಕಿದ ಆಯೋಗ Read More »

ಇಂದು ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ

ಸಮಗ್ರ ನ್ಯೂಸ್: ಜಿಲ್ಲಾಡಳಿತ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮ ದಿನಾಚರಣೆಯು ಮಾ. 31ರಂದು ಬೆಳಗ್ಗೆ 10.30 ಗಂಟೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

ಇಂದು ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ Read More »

ನಾಳೆ ಮಡಿಕೇರಿಯಲ್ಲಿ ಕಾರು ರ್‍ಯಾಲಿ

ಸಮಗ್ರ ನ್ಯೂಸ್:ಮಡಿಕೇರಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ.ಆ ನಿಟ್ಟಿನಲ್ಲಿ ಈಗಾಗಲೇ ರಂಗೋಲಿ ಸ್ಪರ್ಧೆ ಆರಂಭವಾಗಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಪೂರ್ಣಗೊಂಡಿದೆ. ಹಲವು ಯುವಜನರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿದ್ದಾರೆ. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗಿದೆ. ಶನಿವಾರ ಸೋಮವಾರಪೇಟೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ರಂಗೋಲಿ ಸ್ಪರ್ಧೆ ನಡೆದಿದೆ. ಇದೇ

ನಾಳೆ ಮಡಿಕೇರಿಯಲ್ಲಿ ಕಾರು ರ್‍ಯಾಲಿ Read More »

ವಿರಾಜಪೇಟೆ:ವ್ಯಕ್ತಿ ಮೇಲೆ ಕಾಡಾನೆ ದಾಳಿ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್:ವಿರಾಜಪೇಟೆ ಹೊರವಲಯದ ಅರಮೇರಿ ಗ್ರಾಮದಲ್ಲಿ ಇಂದು(ಮಾ.30) ಸಂಜೆ ಆರು ಗಂಟೆಯ ಸಮಯದಲ್ಲಿ ಕಾಡಾನೆಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ನಟೇಶ್ ಕಾಳಪ್ಪ (50) ಎಂಬುವವರ ಮೇಲೆ ಕಾಡನೆ ಎರಗಿದ್ದು, ಗಾಯಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ವಿರಾಜಪೇಟೆ:ವ್ಯಕ್ತಿ ಮೇಲೆ ಕಾಡಾನೆ ದಾಳಿ| ಆಸ್ಪತ್ರೆಗೆ ದಾಖಲು Read More »

ಬೀದರ್: ಸಾಲದ ಹೊರೆಯಿಂದ ಬಾವಿಗೆ ಬಿದ್ದು ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ ಜಿಲ್ಲೆಯ ಔರದ್‌ ತಾಲ್ಲೂಕಿನ ಮುಸ್ತಾಪುರ ಗ್ರಾಮದಲ್ಲಿ ‌ ನಡೆದಿದೆ. ಉಮೇಶ ಹುಲ್ಲೆಪ್ಪ (45) ಆತ್ಮಹತ್ಯೆಗೆ ಶರಣಾಗಿರುವ ರೈತ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಮೃತದೇಹ ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮೃತ ರೈತನಿಗೆ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾನೆ. ಲಾಧಾ ಪಿಕೆಪಿಎಸ್‌ನಿಂದ ₹1 ಲಕ್ಷ ಹಾಗೂ ಖಾಸಗಿ ಬ್ಯಾಂಕನಿಂದ ₹2 ಲಕ್ಷ ಸಾಲ

ಬೀದರ್: ಸಾಲದ ಹೊರೆಯಿಂದ ಬಾವಿಗೆ ಬಿದ್ದು ರೈತ ಆತ್ಮಹತ್ಯೆ Read More »

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಬೆಂಕಿ

ಸಮಗ್ರ ನ್ಯೂಸ್‌ : ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಅರಣ್ಯಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ. ಶನಿವಾರ ಬೆಳಗ್ಗೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಬೈಲೂರು ವಲಯದ ಕೆ.ಕೆ.ಡ್ಯಾಂ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಈ ವೇಳೆ ಮತ್ತೊಂದು ಕಡೆ ಬೆಂಕಿ ಕಾಣಿಸಿಕೊಂಡಿದ್ದು 60ಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಗಾಳಿ ಇರುವುದರಿಂದ ಬೆಂಕಿಯ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಬೆಂಕಿ Read More »

ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ/ ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ; ಸುಮಲತಾ

ಸಮಗ್ರ ನ್ಯೂಸ್: ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದ್ದಕ್ಕೆ ಸಂಸದೆ ಸುಮಲತಾ ಬೇಸರಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸುಮಲತಾರನ್ನು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಕೂಡ ಮಾಡಲಾಗಿತ್ತು. ಆದರೆ ಇದ್ಯಾವದಕ್ಕೂ ತಮ್ಮ ನಡೆ ತಿಳಿದಿದ್ದಾಗ ಜೆಪಿ ನಗರದ ನಿವಾಸದ ಮುಂದೆ ಅಭಿಮಾನಿಗಳು ಜಮಾವಣೆಗೊಂಡಿದ್ದರು. ಬಳಿಕ ಬೆಂಬಲಿಗರ ಜೊತೆ ಸಭೆ ಮಾಡಿದ್ದು, ಏಪ್ರಿಲ್ 3ರಂದು ಮಂಡ್ಯದಲ್ಲಿ ಸಭೆ

ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ/ ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ; ಸುಮಲತಾ Read More »