ರಾಜ್ಯ

ಡಿವೈಡರ್ ಗೆ ಡಿಕ್ಕಿ ಹೊಡೆದ ಲಾರಿ| ಚಾಲಕ ಪವಾಡ ಸದೃಶ ಪಾರು

ಸಮಗ್ರ ನ್ಯೂಸ್: ಮಹಾರಾಷ್ಟ್ರದಿಂದ ತರಕಾರಿ ಖರಿದಿಗಾಗಿ ಬಂದಿದ್ದ ಲಾರಿಯೊಂದು ವಿಪರೀತ ಮಳೆಯಿಂದಾಗಿ ರಸ್ತೆ ಕಾಣದೆ ಚಿಕ್ಕಮಗಳೂರು ನಗರದ ಎಐಟಿ ವೃತ್ತದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಸೆ.10 ರಂದು ನಡೆದದೆ. ಲಾರಿ ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ಕಂಬ ಲಾರಿಯ ಮೇಲೆಯೇ ಮುರಿದು ಬಿದ್ದಿದೆ. ಕಂಬಕ್ಕೆ ಡಿಕ್ಕಿ ಹೊಡೆದ ಕೂಡಲೇ ಪವರ್ ಕಟ್ ಆಗಿರುದರಿಂದ ಲಾರಿಯ ಡ್ರೈವರ್ ಕೂದಲೆಳೆ ಅಂತರದಲ್ಲಿ ಅನಾಹುತದಿಂದ ಪಾರಾಗಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. […]

ಡಿವೈಡರ್ ಗೆ ಡಿಕ್ಕಿ ಹೊಡೆದ ಲಾರಿ| ಚಾಲಕ ಪವಾಡ ಸದೃಶ ಪಾರು Read More »

ರೇಣುಕಾಸ್ವಾಮಿ ಕೊಲೆ ಕೇಸ್ ಜಾರ್ಜ್ ಶೀಟ್ ಗೌಪ್ಯ ಮಾಹಿತಿ ಮಾದ್ಯಮ ಪ್ರಸಾರಕ್ಕೆ ನಿರ್ಬಂಧ| ದರ್ಶನ್ ಮನವಿ ಪುರಸ್ಕರಿಸಿದ ನ್ಯಾಯಾಲಯ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಮಾಡಿದ್ದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸಲ್ಲಿರುವ ಚಾರ್ಜ್‌ಶೀಟ್‌ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ ಅಥವಾ ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ & ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಸೋಮವಾರ ನಟ ದರ್ಶನ್ ಪರ ವಕೀಲರು ಚಾರ್ಜ್‌ಶೀಟ್‌ನಲ್ಲಿದ್ದ ಮಾಹಿತಿ ಸೋರಿಕೆಯಾಗಿದ್ದು, ಅವುಗಳ ಪ್ರಸಾರಕ್ಕೆ ತಡೆ ಕೊಡಬೇಕು ಎಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಸಿದ್ದರು. ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಾಲಯ

ರೇಣುಕಾಸ್ವಾಮಿ ಕೊಲೆ ಕೇಸ್ ಜಾರ್ಜ್ ಶೀಟ್ ಗೌಪ್ಯ ಮಾಹಿತಿ ಮಾದ್ಯಮ ಪ್ರಸಾರಕ್ಕೆ ನಿರ್ಬಂಧ| ದರ್ಶನ್ ಮನವಿ ಪುರಸ್ಕರಿಸಿದ ನ್ಯಾಯಾಲಯ Read More »

ಕೊನೆಗೂ ಹೆಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್‌ಗೆ ಡೆಡ್‌ಲೈನ್‌/ ಸೆ.16ರಿಂದಲೇ ದಂಡ ಗ್ಯಾರಂಟಿ

ಸಮಗ್ರ ನ್ಯೂಸ್‌: ಹೆಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್‌ ಅಳವಡಿಕೆಗೆ ಸರ್ಕಾರ ಮತ್ತು ಕೋರ್ಟ್ ನೀಡಿದ್ದ ಡೆಡ್ ಲೈನ್‌ಗೆ ಕೇವಲ ಒಂದು ವಾರ ಮಾತ್ರ ಬಾಕಿ ಇದ್ದು, ಸೆಪ್ಟೆಂಬರ್ 15ಕ್ಕೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊಟ್ಟಿರುವ ಡೆಡ್ಲೈನ್ ಮುಗಿಯಲಿದೆ. ರಾಜ್ಯದಲ್ಲಿ ಒಟ್ಟಾರೆ 2 ಕೋಟಿಯಷ್ಟು ವಾಹನಗಳಿದ್ದು. ಇದರಲ್ಲಿ ಇಲ್ಲಿಯವರೆಗೆ 51 ಲಕ್ಷ ವಾಹನಗಳು ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಹಾಕಿಸಿದ್ದಾರೆ. ಉಳಿದ 1.49 ಕೋಟಿ ವಾಹನಗಳು ಇನ್ನೂ ಹೆಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್‌ ಹಾಕಿಸಿಲ್ಲ. ಸೆ.16ರಿಂದಲೇ ನಮ್ಮ ಇಲಾಖೆಯಿಂದ ಎಲ್ಲಾ ಜಿಲ್ಲೆಗಳಲ್ಲೂ

ಕೊನೆಗೂ ಹೆಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್‌ಗೆ ಡೆಡ್‌ಲೈನ್‌/ ಸೆ.16ರಿಂದಲೇ ದಂಡ ಗ್ಯಾರಂಟಿ Read More »

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ದಮ್ಮಯ್ಯ ಹಾಕಿದರೂ ಕೇಳದೆ ಪ್ರಜ್ವಲ್ ನಿಂದ 60ರ ವೃದ್ದೆ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ CIDವಿಶೇಷ ತನಿಖಾ ತಂಡ (SIT)ವು ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2ನೇ ಆರೋಪಪಟ್ಟಿಯನ್ನು ಸಲ್ಲಿಸಿದೆ. 60 ವರ್ಷದ ಮನೆ ಕೆಲಸದಾಕೆ ಕೈ ಮುಗಿದು ಬೇಡಿಕೊಂಡರೂ ಬಿಡದೆ ಅತ್ಯಾಚಾರ ಎಸಗಿದ್ದಲ್ಲದೆ, ವೀಡಿಯೋ ಮಾಡಿಕೊಂಡಿರುವ ಬಗ್ಗೆ ಅದರಲ್ಲಿ ಉಲ್ಲೇಖೀಸಲಾಗಿದೆ. ತನ್ನ ಮನೆಯಲ್ಲಿ ಕೆಲಸಕ್ಕಿದ್ದ ಸುಮಾರು 60 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ವೀಡಿಯೋ ಮಾಡಿಕೊಂಡಿದ್ದರ ಸಹಿತ ಪ್ರಜ್ವಲ್‌

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ| ದಮ್ಮಯ್ಯ ಹಾಕಿದರೂ ಕೇಳದೆ ಪ್ರಜ್ವಲ್ ನಿಂದ 60ರ ವೃದ್ದೆ ಮೇಲೆ ಅತ್ಯಾಚಾರ Read More »

ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು/ ಗ್ರೀನ್‌ ಸಿಗ್ನಲ್‌ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್‌: ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಯವ್ ಅವರು ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ. ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ

ಹುಬ್ಬಳ್ಳಿ – ಪುಣೆ ಮಧ್ಯೆ 2ನೇ ವಂದೇ ಭಾರತ್ ರೈಲು/ ಗ್ರೀನ್‌ ಸಿಗ್ನಲ್‌ ನೀಡಿದ ಕೇಂದ್ರ ಸರ್ಕಾರ Read More »

ವಾಯು ಮಾಲಿನ್ಯ ಹೆಚ್ಚಳದ ಸಾಧ್ಯತೆ/ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

ಸಮಗ್ರ ನ್ಯೂಸ್‌: ಮುಂಬರುವ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯು ಮಾಲಿನ್ಯ ಮತ್ತೆ ಹೆಚ್ಚಾಗಲಿರುವ ಸಾಧ್ಯತೆ ಇರುವುದರಿಂದ, ಅದನ್ನು ನಿಯಂತ್ರಿಸಲು ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. ಆನ್‌ಲೈನ್‌ನಲ್ಲೂ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ಸಹ ನಿಷೇಧಿಸಲಾಗಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಕ್ರಿಯಾ ಯೋಜನೆಯನ್ನು

ವಾಯು ಮಾಲಿನ್ಯ ಹೆಚ್ಚಳದ ಸಾಧ್ಯತೆ/ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ Read More »

ತಾಂತ್ರಿಕ ದೋಷ/ ಗದ್ದೆಗೆ ಇಳಿದ ಸೇನಾ ಹೆಲಿಕಾಪ್ಟರ್‌

ಸಮಗ್ರ ನ್ಯೂಸ್‌: ಐಎಎಫ್‌ನ ತರಬೇತಿ ಹೆಲಿಕಾಪ್ಟರ್, ತಾಂತ್ರಿಕ ದೋಷದಿಂದಾಗಿ ಚೆನ್ನೈ ಬಳಿಯ ಪೊಪರಂದಲ್‌ನ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇಬ್ಬರು ಸಿಬ್ಬಂದಿ ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಸಲವಕ್ಕಂ ಪೊಲೀಸ್ ಠಾಣಾ ವ್ಯಾಪ್ತಿಯ ಪೊಪರಂದಲ್ ಪ್ರದೇಶಕ್ಕೆ ಸಮೀಪಿಸಿದಾಗ ಹಠಾತ್ತನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮವಾಗಿ ಪೈಲಟ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಸ್ವಲ್ಪ ಸಮಯದ ನಂತರ ಮತ್ತೊಂದು ಸೇನಾ ಹೆಲಿಕಾಪ್ಟರ್ ಮೂಲಕ ಸಿಬ್ಬಂದಿ ಬಂದು ತಾಂತ್ರಿಕ ದೋಷ ಸರಿಪಡಿಸಿ ಸೇನಾ ನೆಲೆಗೆ ಕೊಂಡೊಯ್ಯರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಂತ್ರಿಕ ದೋಷ/ ಗದ್ದೆಗೆ ಇಳಿದ ಸೇನಾ ಹೆಲಿಕಾಪ್ಟರ್‌ Read More »

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೂ ಮೊದಲೇ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು..!

ಸಮಗ್ರ ನ್ಯೂಸ್: ಬೆಂಗಳೂರನ್ನೆ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳಿಂದ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವೀರ್ ಹುಸೇನ್, ಶೋಯೆಬ್ ಮಿರ್ಜಾ ಸೇರಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. 2024ರ ಜ.22ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲ್ಯಾನ್ ವಿಫಲವಾದ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಮೇಶ್ವರಂ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೂ ಮೊದಲೇ ಬಿಜೆಪಿ ಕಚೇರಿ ಸ್ಫೋಟಕ್ಕೆ ಸಂಚು..! Read More »

ಸೌಹಾರ್ದತೆ ಸಾರುತ್ತಿದ್ದ ಬೋಳಂತೂರು ಗಣೇಶೋತ್ಸವಕ್ಕೆ ಬ್ರೇಕ್| ಮುಸ್ಲಿಂ ಬಾಂಧವರು ಪಾನೀಯ, ಸಿಹಿ‌ ಹಂಚದಂತೆ ಮನವಿ ಮಾಡಿದ ಪತ್ರ ವೈರಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೋಳಂತೂರು ಗಣೇಶೋತ್ಸವದಲ್ಲಿ ಹಿಂದೂ ಮುಸ್ಲಿಂ -ಸೌಹಾರ್ದತೆಗೆ ಬ್ರೇಕ್ ಬಿದ್ದಿದೆ! ಕೋಮು ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿರುವ ಜಿಲ್ಲೆಯ ಈ ಭಾಗದಲ್ಲಿ ಕಳೆದ ವರ್ಷ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ಹಂಚಿದ್ದರು. ಆ ಮೂಲಕ ಸೌಹಾರ್ದತೆ ಮೆರೆದಿದ್ದು ಸುದ್ದಿಯಾಗಿತ್ತು. ಆದರೆ, ಈ ಬಾರಿ ಕಳೆದ ವರ್ಷದಂತೆ ಸಿಹಿ ತಿಂಡಿ, ಪಾನೀಯ ಹಂಚಬಾರದು ಎಂದು ಗಣೇಶೋತ್ಸವ ಆಯೋಜಿಸುವ ಸಮಿತಿಯವರೇ ಮುಸ್ಲಿಂ ಸಮುದಾಯದವರಿಗೆ ಪತ್ರ ಬರೆದಿದ್ದಾರೆ. ಮಸೀದಿಯೊಂದಕ್ಕೆ ಗಣೇಶೋತ್ಸವ ಆಯೋಜಕರು

ಸೌಹಾರ್ದತೆ ಸಾರುತ್ತಿದ್ದ ಬೋಳಂತೂರು ಗಣೇಶೋತ್ಸವಕ್ಕೆ ಬ್ರೇಕ್| ಮುಸ್ಲಿಂ ಬಾಂಧವರು ಪಾನೀಯ, ಸಿಹಿ‌ ಹಂಚದಂತೆ ಮನವಿ ಮಾಡಿದ ಪತ್ರ ವೈರಲ್ Read More »

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್/ ಸೆ.19 ಕ್ಕೆ ವಿಚಾರಣೆ ಮುಂದೂಡಿಕೆ

ಸಮಗ್ರ ನ್ಯೂಸ್‌: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪೋಕೋ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದ್ದು, ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣ ರದ್ದುಪಡಿಸುವಂತೆ ಹಾಗೂ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿದ್ದು.. ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅಪ್ರಾಪ್ತಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್/ ಸೆ.19 ಕ್ಕೆ ವಿಚಾರಣೆ ಮುಂದೂಡಿಕೆ Read More »