ರಾಜ್ಯ

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ಆಪರೇಷನ್ ಹಸ್ತಕ್ಕೆ ಬಿ.ವೈ ವಿಜಯೇಂದ್ರ ಚೆಕ್ ಮೇಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ ಕುಳಿತುಕೊಂಡು ಸಿಎಂ ಸಿದ್ದರಾಮಯ್ಯ ಗಾಳ ಹಾಕಿದ್ದರು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಿಎಂಗೆ ಟಕ್ಕರ್ ನೀಡಿದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿಗೆ ತಲುಪಿರುವ ವಿಜಯೇಂದ್ರ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಿದ್ದಾರೆ. ಸಿದ್ದರಾಮಯ್ಯ ಮನವೊಲಿಸಿದ್ದರಿಂದ ಪಕ್ಷ ಬಿಟ್ಟು ಕಾಂಗ್ರೆಸ್​​ ಸೇರಲು ಮುಂದಾಗಿದ್ದ ಮುಖಂಡನನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್| ಆಪರೇಷನ್ ಹಸ್ತಕ್ಕೆ ಬಿ.ವೈ ವಿಜಯೇಂದ್ರ ಚೆಕ್ ಮೇಟ್ Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್| ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ 13 ಅಧಿಕಾರಿಗಳಿಗೆ ಸಂಬಂಧಪಟ್ಟ 60 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಧಾರವಾಡ, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ಮನೆ ಮೇಲೆ, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಚೀಫ್ ಇಂಜಿನಿಯರ್

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್| ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ Read More »

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಖಾಡ ಸಿದ್ಧ/ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಪ್ರಚಾರಕ್ಕೆ ವೇದಿಕೆ ಸಿದ್ಧಗೊಂಡಿದ್ದು, ಈ ಹಿನ್ನಲೆಯಲ್ಲಿ ಬಿಹಾರ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ರಾಜ್ಯ ಸಚಿವ ನಿತಿನ್ ಗಡ್ಕರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಮೂರು ರಾಜ್ಯಗಳ ಪಟ್ಟಿಯಲ್ಲಿ ಇದ್ದಾರೆ.

ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಖಾಡ ಸಿದ್ಧ/ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ Read More »

ಲೋಕಸಭಾ ಚುನಾವಣೆ/ ಭಿನ್ನಮತ ಶಮನದ ಮುಂದಾಳತ್ವ ವಹಿಸಿದ ಯಡಿಯೂರಪ್ಪ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಹಿನ್ನಲೆಯಲ್ಲಿ ಬಿಜೆಪಿಯಲ್ಲಿ ಉಂಟಾಗಿದ್ದ ಅಸಮಾಧಾನವನ್ನು ಪರಿಹರಿಸಲು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಾಳತ್ವ ವಹಿಸಿದ್ದಾರೆ. ಈ ಮೂಲಕ 82ರ ಹರೆಯದ ಯಡಿಯೂರಪ್ಪ ಅವರು ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಎದುರಾಗಿದ್ದ ಅಡೆತಡೆ, ಸವಾಲುಗಳನ್ನು ತಾವೇ ಮುಂದೆ ನಿಂತು ಒಂದೊಂದಾಗಿ ನಿವಾರಣೆ ಮಾಡುತ್ತಿದ್ದಾರೆ. ಕಳೆದೊಂದು ವಾರದಿಂದ ಯಡಿಯೂರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸತತವಾಗಿ ವಿವಿಧ ಕ್ಷೇತ್ರಗಳ ಮುಖಂಡರನ್ನು ಭೇಟಿ ಮಾಡುವ

ಲೋಕಸಭಾ ಚುನಾವಣೆ/ ಭಿನ್ನಮತ ಶಮನದ ಮುಂದಾಳತ್ವ ವಹಿಸಿದ ಯಡಿಯೂರಪ್ಪ Read More »

ಪೋನ್ ಕದ್ದಾಲಿಕೆ ಪ್ರಕರಣ/ ರೇವಂತ್ ರೆಡ್ಡಿ ಪೋನ್ ಕದ್ದಾಲಿಸಲು ಇಸ್ರೇಲಿನಿಂದ ತಂದ ಉಪಕರಣ ಬಳಕೆ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆಸಲಾದ ಪೋನ್ ಕದ್ದಾಲಿಕೆ ಪ್ರಕರಣ ಮತ್ತಷ್ಟು ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಇದೀಗ ತನಿಖಾಧಿಕಾರಿಗಳು, ಹಾಲಿ ಸಿಎಂ ರೇವಂತ್ ರೆಡ್ಡಿ ಅವರಪೋನ್ ಕದ್ದಾಲಿಕೆ ಮಾಡಲು, ಅವರ ಮನೆ ಸಮೀಪದಲ್ಲೇ ಕಚೇರಿಯೊಂದನ್ನು ತೆರೆಯಲಾಗಿತ್ತು ಮತ್ತು ಇಸ್ರೇಲಿನಿಂದ ತಂದ ಉಪಕರಣ ಇರಿಸಿ ಫೆÇೀನ್ ಕದ್ದಾಲಿಸಲಾಗುತ್ತಿತ್ತು. ಈ ಉಪಕರಣ 300 ಮೀಟರ್ ವ್ಯಾಪ್ತಿಯ ಯಾವುದೇ ಕರೆ ಆಲಿಸುವ ಶಕ್ತಿ ಹೊಂದಿತ್ತು ಎಂದು ತಿಳಿಸಿದ್ದಾರೆ. ಇಂಥ ಗೂಢಚರ್ಯ ಉಪಕರಣದ ತರಿಸಲು ಕೇಂದ್ರದ ಅನುಮತಿ ಕಡ್ಡಾಯವಾಗಿದ್ದು, ಆದರೆ ಸಾಫ್ಟ್‍ವೇರ್

ಪೋನ್ ಕದ್ದಾಲಿಕೆ ಪ್ರಕರಣ/ ರೇವಂತ್ ರೆಡ್ಡಿ ಪೋನ್ ಕದ್ದಾಲಿಸಲು ಇಸ್ರೇಲಿನಿಂದ ತಂದ ಉಪಕರಣ ಬಳಕೆ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ 5 ಕಡೆ ಎನ್​​ಐಎ ದಾಳಿ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ಳಂಬೆಳಗೆ NIA ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳ (NIA) ಬುಧವಾರ ಬೆಂಗಳೂರು ನಗರದ ಐದು ಕಡೆ ದಾಳಿ ನಡೆಸಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿರುವ ವಿಚಾರ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್​ಐಎ ಅಧಿಕಾರಿಗಳು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ 5 ಕಡೆ ಎನ್​​ಐಎ ದಾಳಿ Read More »

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇಂದು ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ನಾಡಿನ ಹೆಸರಾಂತ ಸಾಹಿತಿಯಾಗಿದ್ದ ಕಾಪಸೆ ಅವರು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಧಾರವಾಡ ಸಪ್ತಾಪುರ ದುರ್ಗಾ ಕಾಲೋನಿಯ ನಿವಾಸಿಯಾಗಿದ್ದ ಇವರು, ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮದವರು. 1928ರ ಎಪ್ರಿಲ್ 2ರಂದು ಜನಿಸಿದ್ದರು. ಬೇಂದ್ರೆ, ಮಧುರ ಚೆನ್ನ ಸೇರಿದಂತೆ ಪ್ರಖ್ಯಾತ ಸಾಹಿತಿಗಳ ಒಡನಾಡಿಯಾಗಿದ್ದ ಕಾಪಸೆ, 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನಲ್ಲಿ

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ Read More »

ಕೇಸರಿ ಪಡೆಗೆ ಬಿಗ್ ಶಾಕ್| ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೇಜಸ್ವಿನಿ ರಮೇಶ್ ರಾಜೀನಾಮೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿಗೌಡ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಅವರು ಸ್ವ ಇಚ್ಛೆಯಿಂದ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ. ತೇಜಸ್ವಿನಿಯವರು ಮತ್ತೆ ಕಾಂಗ್ರೆಸ್ ಗೆ ಮರಳುವ ಕುರಿತಂತೆ ಊಹಾಪೋಹಗಳು ಹರಿದಾಡಿದ್ದು, ಇದಕ್ಕೆ ರಾಜೀನಾಮೆ ಪುಷ್ಟಿ‌ ನೀಡಿದೆ.

ಕೇಸರಿ ಪಡೆಗೆ ಬಿಗ್ ಶಾಕ್| ಪರಿಷತ್ ಸದಸ್ಯತ್ವ ಸ್ಥಾನಕ್ಕೆ ತೇಜಸ್ವಿನಿ ರಮೇಶ್ ರಾಜೀನಾಮೆ Read More »

ಬೆಂಗಳೂರು: ಬಡವರನ್ನು ಹಿಂಡುತ್ತಿರುವ ಬಿಬಿಎಂಪಿ ಮಾರ್ಷಲ್ ಗಳು| ಬಡಪಾಯಿಗಳ ಮೇಲೆ ಅಧಿಕಾರಿಗಳ ಅಟ್ಟಹಾಸ

ಸಮಗ್ರ ನ್ಯೂಸ್: ಅದೆಷ್ಟೋ ಬಡಪಾಯಿ ವ್ಯಾಪಾರಿಗಳು ಫುಟ್‌ಪಾತ್‌ನಲ್ಲೇ ಜೀವನ ಕಟ್ಟಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬಿಬಿಎಂಪಿ ಮಾರ್ಷಲ್‌ಗಳು ಬೀದಿ ಬದಿ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿರುವ ಆರೋಪವು ಮತ್ತೆ ಕೇಳಿ ಬಂದಿದೆ. ಬೆಂಗಳೂರಿನ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಸುಮಾರು 70 ವರ್ಷದ ವೃದ್ಧರೊಬ್ಬರು ರಸ್ತೆ ಬದಿಯಲ್ಲಿ ಬ್ಯಾಗ್‌ಗಳನ್ನು ಹಿಡಿದು ಮಾರಾಟ ಮಾಡುತ್ತಿದ್ದರು. ಅಲ್ಲಿಗೆ ಬಂದ ಮಾರ್ಷಲ್‌ಗಳು ವ್ಯಾಪಾರ ಮಾಡದಂತೆ ತಡೆದಿದ್ದಾರೆ. ಮಾತ್ರವಲ್ಲದೆ ವೃದ್ಧನಿಂದ ಬ್ಯಾಗ್ ಕಸಿಯಲು ಮುಂದಾಗಿದ್ದಾರೆ. ಈ ವೇಳೆ ವೃದ್ಧನ ಅಸಹಾಯಕತೆಯನ್ನು

ಬೆಂಗಳೂರು: ಬಡವರನ್ನು ಹಿಂಡುತ್ತಿರುವ ಬಿಬಿಎಂಪಿ ಮಾರ್ಷಲ್ ಗಳು| ಬಡಪಾಯಿಗಳ ಮೇಲೆ ಅಧಿಕಾರಿಗಳ ಅಟ್ಟಹಾಸ Read More »

ಕಾಸರಗೋಡು: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

ಸಮಗ್ರ ನ್ಯೂಸ್‌ : ಮನೆಯ ಬಾಗಿಲು ಮುರಿದು ಕಳ್ಳರು ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಘಟನೆ ಕುಂಬಳೆ ಶಾಂತಿಪಳ್ಳಯ ಬದ್ರಿಯಾ ನಗರದ ಝುಬೈರ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಪವನ್ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಲಾಗಿದೆ. ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮನೆಯ ಚಲನವಲನ ಅರಿತವರು ಈ ಕೃತ್ಯ ನಡೆಸಿರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ

ಕಾಸರಗೋಡು: ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು Read More »