ರಾಜ್ಯ

ಕುಂದಾಪುರ: ರಿಕ್ಷಾ, ಕಾರು ನಡುವೆ ಅಪಘಾತ: ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್‌: :ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಹಂಗಳೂರಿನ ರಾ.ಹೆ. 66ರಲ್ಲಿ ನಡೆದಿದೆ. ರಿಕ್ಷಾ ಚಾಲಕ ಅರುಣ, ಪುತ್ರಿ ಶ್ರೇಯಾ , ಪುತ್ರ ರಂಜಯ ಸಂಬಂಧಿ ಉಷಾ ಗಾಯಗೊಂಡವರು. ಅರುಣ ಹಾಗೂ ರಂಜಯ್ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಶ್ರೇಯಾ ಹಾಗೂ ಉಷಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ರಿಕ್ಷಾ, ಕಾರು ನಡುವೆ ಅಪಘಾತ: ನಾಲ್ವರಿಗೆ ಗಾಯ Read More »

ಬ್ರಹ್ಮ ಬಂದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ/ ಏ.12ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದ ಕೆ.ಎಸ್. ಈಶ್ವರಪ್ಪ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಬ್ರಹ್ಮ ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಏ.12ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ. ಹಿಂದುತ್ವದ ಪ್ರಬಲ ಪ್ರತಿಪಾದಕರಿಗೆ ಹಿನ್ನಡೆಯಾಗುತ್ತಿದೆ. ಕಾರ್ಯಕರ್ತರಿಗೆ ಅನ್ಯಾಯ ಆಗುತ್ತಿದೆ. ಇದೆಲ್ಲದರ ವಿರುದ್ಧ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಸ್ಪರ್ಧೆಗೆ ಕಾಂಗ್ರೆಸ್ ಅನೇಕರು ಬೆಂಬಲ

ಬ್ರಹ್ಮ ಬಂದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ/ ಏ.12ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದ ಕೆ.ಎಸ್. ಈಶ್ವರಪ್ಪ Read More »

ಜೆಡಿಎಸ್ ಪಟ್ಟಿ ಫೈನಲ್/ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಮಲ್ಲೇಶ್ ಬಾಬುಗೆ ನೀಡಲಾಗಿದ್ದು, ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಸ್ಪರ್ಧೆ ಮಾಡಲಿದ್ದಾರೆ. ಇನ್ನು ತೀವ್ರ ಕುತೂಲಕ್ಕೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರದಿಂದ ಎಚ್.ಡಿ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಲಿದ್ದಾರೆ.

ಜೆಡಿಎಸ್ ಪಟ್ಟಿ ಫೈನಲ್/ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ Read More »

ಕಾವೇರಿ ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವು

ಸಮಗ್ರ ನ್ಯೂಸ್: ಕುಟುಂಬಸ್ಥರ ಜೊತೆ ಪ್ರವಾಸ ಹೋಗಿ,ಈಜಲು ಹೋದ ನಾಲ್ವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿ‌ನ ಮುತ್ತತ್ತಿಯಲ್ಲಿ ನಡೆದಿದೆ. ಕುಟುಂಬಸ್ಥರು, ಸ್ನೇಹಿತರು ಸೇರಿ ಒಂದೇ ಬಸ್‌ನಲ್ಲಿ 40 ಜನ ಮೈಸೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ನಾಲ್ವರು ಕಾವೇರಿ ನದಿಯಲ್ಲಿ ಈಜಾಡಲು ಹೋಗಿದ್ದು, ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ರಕ್ಷಣೆ ಮಾಡಲು ಉಳಿದ ಮೂವರು ಹೋಗಿ ದುರಂತ ಅಂತ್ಯ ಕಂಡಿದ್ದಾರೆ.

ಕಾವೇರಿ ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವು Read More »

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆ ಸಮಯದಲ್ಲಿ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿಯ ಉಡುಗೊರೆ ಕೊಟ್ಟು ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಬಳ್ಳಾರಿ ಪಾಲಿಕೆ ಮೇಯರ್‌, ಉಪಮೇಯರ್ ಚುನಾವಣೆ ಕಸರತ್ತು ನಡೆಸುತ್ತಿದ್ದು, ಮೇಯರ್ ಆಕಾಂಕ್ಷಿಗಳು ಭರ್ಜರಿ ಉಡುಗೊರೆ ನೀಡಿದ್ದಾರೆ. ಮಾರ್ಚ್ 28ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಬಹುಮತ ಇದ್ದರೂ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಇದೀಗ ಗಿಫ್ಟ್ ಕೊಟ್ಟು ಜನರನ್ನು ಸೆಳೆಯುತ್ತಿದ್ದಾರೆ. ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ Read More »

ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್ ಹಲ್ಲೆ|ಕಂಡಕ್ಟರ್ ಸಸ್ಪೆಂಡ್ ಮಾಡಲು BMTC ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಟಿಕೆಟ್ ವಿಚಾರವಾಗಿ ಮಹಿಳಾ ಪ್ರಯಾಣಿಕರಿಗೊಬ್ಬರಿಗೆ ಕಂಡಕ್ಟರ್ ಹಲ್ಲೆ ಮಾಡಿದ ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹಲ್ಲೆ ದೃಶ್ಯವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಪೋನ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಚಾರವಾಗಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನಿರ್ವಾಹಕ ಬಸವರಾಜ್ ನನ್ನು ಸಸ್ಪೆಂಡ್ ಮಾಡುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ.

ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್ ಹಲ್ಲೆ|ಕಂಡಕ್ಟರ್ ಸಸ್ಪೆಂಡ್ ಮಾಡಲು BMTC ಆದೇಶ Read More »

20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ ಮುಂದಾದ BWSSB

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಇದರ ಮದ್ಯೆ ಅನುಮತಿ ಇಲ್ಲದೆ 20 ಕೊಳವೆ ಬಾವಿಗಳನ್ನು ಕೊರೆದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಎಂಜಿನಿಯರ್‌ಗಳಿಗೆ ಸೂಚನೆ ನೀಡಿದೆ. ಬೋರ್‌ವೆಲ್ ಕೊರೆಯುವವರು ಮಂಡಳಿಯಿಂದ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಅನುಮತಿ ಪಡೆಯದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು BWSSB ಇತ್ತೀಚೆಗೆ ಆದೇಶದಲ್ಲಿ ತಿಳಿಸಿದೆ. ಆದರೆ ಈ ಆದೇಶವನ್ನು ಕೆಲವರು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ ಮುಂದಾದ BWSSB Read More »

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್‌ ; ನೀಟ್​ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನೀಟ್‌ಗೆ ತಯಾರಿ ನಡೆಸುತ್ತಿದ್ದ 20 ವರ್ಷದ ಉರುಜ್ ಖಾನ್ ಎಂಬಾತ ನಗರದ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 2024ರಲ್ಲಿ ಇಂತಹ ಘಟನೆ ಅನೇಕ ಸಂಭವಿಸಿದ್ದು, ಇದೀಗ 7ನೇ ಘಟನೆ ಇದಾಗಿದೆ. ಕಳೆದ ವರ್ಷದಲ್ಲಿ ವಿದ್ಯಾರ್ಥಿಗಳ ಸಾವಿನ ಸಂಖ್ಯೆ 29 ರಷ್ಟಿತ್ತು. ಉತ್ತರ ಪ್ರದೇಶದ ಕನೌಜ್ ನಿವಾಸಿಯಾಗಿರುವ ಮೃತ ಉರುಜ್ ಖಾನ್, ವಿಜ್ಞಾನನಗರ ಪ್ರದೇಶದ ಬಾಡಿಗೆ ಫ್ಲಾಟ್‌ನಲ್ಲಿ

ನೀಟ್​ ಆಕಾಂಕ್ಷಿ ನೇಣು ಬಿಗಿದು ಆತ್ಮಹತ್ಯೆ Read More »

‘ಯದುವೀರ್ ರಾಜರ ಬಾಯಿಂದ ರಾಜರ ಕಥೆಗಳು’ ರೇಡಿಯೋ ಕಾರ್ಯಕ್ರಮ/ ಪ್ರಸಾರ ನಿಲ್ಲಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ‘ಯದುವೀರ್ ರಾಜರ ಬಾಯಿಂದ ರಾಜರ ಕಥೆಗಳು’ ಎನ್ನುವ ಹೆಸರಿನಲ್ಲಿ ರೇಡಿಯೋ ಕಾರ್ಯಕ್ರಮವೊಂದನ್ನು ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮವನ್ನು ಈ ಕೂಡಲೇ ನಿಲ್ಲಿಸಿ ಎಂದು ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರೇಡಿಯೋದಲ್ಲಿ ಈ ಕಾರ್ಯಕ್ರಮ ಬರುತ್ತಿದೆ ಎಂದು ಹೇಳೋದಕ್ಕೂ ನಿಮಿಷ ನಿಮಿಷಕ್ಕೆ ಜಾಹೀರಾತು ಇಟ್ಟಿದ್ದಾರೆ. ವ್ಯಕ್ತಿಯಾಗಿ ರಾಜರ ಕಥೆಗಳನ್ನು ಹೇಳಲಿ ತಪ್ಪಿಲ್ಲ ಆದರೆ ಈಗ ಚುನಾವಣೆ ಸಂದರ್ಭದಲ್ಲಿ ಇದು ಅಪ್ರಸ್ತುತ. ಇಲ್ಲಿ ನೀತಿ ಸಂಹಿತೆ ಉಲ್ಲಂಘನೆ

‘ಯದುವೀರ್ ರಾಜರ ಬಾಯಿಂದ ರಾಜರ ಕಥೆಗಳು’ ರೇಡಿಯೋ ಕಾರ್ಯಕ್ರಮ/ ಪ್ರಸಾರ ನಿಲ್ಲಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು Read More »

ಕುಡಿಯುವ ನೀರಿನ ದುರ್ಬಳಕೆ/ ಬೆಂಗಳೂರಿನಲ್ಲಿ ಕಾರ್ ತೊಳೆದ 22 ಮಂದಿಗೆ ದಂಡ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕುಡಿಯುವ ನೀರಿಲ್ಲದೆ ಸಾಕಷ್ಟು ಮಂದಿ ಪರದಾಡುತ್ತಿರುವ ಸಂದರ್ಭದಲ್ಲಿ ಕುಡಿಯುವ ನೀರನ್ನು ಬಳಕೆ ಮಾಡಿ ಕಾರ್ ತೊಳೆದ 22 ಮಂದಿಗೆ ದಂಡ ವಿಧಿಸಲಾಗಿದೆ. ಕುಡಿಯುವ ನೀರನ್ನು ಕಾರ್ ತೊಳೆಯಲು ಬಳಸಬಾರದು ಎನ್ನುವ ಆದೇಶ ಇದ್ದರೂ ಕಾವೇರಿ ಹಾಗೂ ಕೊಳವೆ ಬಾವಿ ನೀರನ್ನು ಬಳಕೆ ಮಾಡಿದ್ದ 22 ಮಂದಿಯಿಂದ ಜಲಮಂಡಳಿ 1.10 ಲಕ್ಷ ರೂಪಾಯಿ ವಸೂಲಿ ಮಾಡಿದೆ. ಜಲಮಂಡಳಿ ಕಟ್ಟುನಿಟ್ಟಿನ ಆದೇಶ ಲೆಕ್ಕಿಸದ ಕೆಲವರು ಕುಡಿಯಲು ಮತ್ತು ಗೃಹ ಬಳಕೆಗೆ ಬಳಸಲಾಗುವ ನೀರಿನಲ್ಲಿಯೇ ವಾಹನಗಳನ್ನು ತೊಳೆಯುತ್ತಿರುವುದು

ಕುಡಿಯುವ ನೀರಿನ ದುರ್ಬಳಕೆ/ ಬೆಂಗಳೂರಿನಲ್ಲಿ ಕಾರ್ ತೊಳೆದ 22 ಮಂದಿಗೆ ದಂಡ Read More »