ರಾಜ್ಯ

ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ/ ಆದೇಶ ಹೊರಡಿಸಿದ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹೆಲ್ಕೆಟ್ ಧರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಅವರು, ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಕೆಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕೆಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ ಎಂದು ಎಡಿಜಿಪಿ

ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ/ ಆದೇಶ ಹೊರಡಿಸಿದ ಸರ್ಕಾರ Read More »

ಇಂದು ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ/ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷ ಬಾಕಿ ಉಳಿದಿರುವ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಮಾ20ರಂದು ಪ್ರಕಟಿಸುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಕರ್ನಾಟಕದ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುವುದಾಗಿ ತಿಳಿಸಿದರು. ಸಭೆಯಲ್ಲಿ ಕರ್ನಾಟಕದ ಉಳಿದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಯಿತು. ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಪಟ್ಟಿಯನ್ನು ಪ್ರಕಟಿಸುವುದಾಗಿ ಘೋಷಿಸಿದರು.

ಇಂದು ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ/ ಸಿದ್ದರಾಮಯ್ಯ ಘೋಷಣೆ Read More »

ಪೊನ್ನಂಪೇಟೆ:ಟಿಪ್ಪರ್ ಹಾಗೂ ಗೂಡ್ಸ್ ಆಟೋ ನಡುವೆ ಡಿಕ್ಕಿ| ಇಬ್ಬರಿಗೆ ಗಂಭೀರ ಸ್ವರೂಪದ ಗಾಯ

ಸಮಗ್ರ ನ್ಯೂಸ್: ಪೊನ್ನಂಪೇಟೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬೆಳಿಗ್ಗೆ 9:ಗಂಟೆಗೆ ಆಟೋ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಗೂಡ್ಸ್ ಆಟೋದಲ್ಲಿ ಇದ್ದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳು ಉಂಟಾಗಿ ಗೋಣಿಕೊಪ್ಪಲು ಆಸ್ಪತ್ರೆಗೆ ದಾಖಲಪಡಿಸಲಾಗಿದೆ. ಕೇರಳ ನೋಂದಣಿ ಹೊಂದಿರುವ ಗೂಡ್ಸ್ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಆಟೋ ಚಾಲಕರ ಬಗ್ಗೆ ಮಾಹಿತಿ ಇನ್ನು ಲಭ್ಯವಾಗಿಲ್ಲ. ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊನ್ನಂಪೇಟೆಯಲ್ಲಿ ಬಸ್ ನಿಲ್ದಾಣದಿಂದ ರಾಮಕೃಷ್ಣ ಆಶ್ರಮದವರೆಗೆ ಕೆಲವರು ಎರಡು ಬದಿ ಪಾರ್ಕಿಂಗ್ ಮಾಡುವುದರಿಂದ

ಪೊನ್ನಂಪೇಟೆ:ಟಿಪ್ಪರ್ ಹಾಗೂ ಗೂಡ್ಸ್ ಆಟೋ ನಡುವೆ ಡಿಕ್ಕಿ| ಇಬ್ಬರಿಗೆ ಗಂಭೀರ ಸ್ವರೂಪದ ಗಾಯ Read More »

ತವರು ಜಿಲ್ಲೆಯಲ್ಲೇ ಬರಿದಾದ ಜೀವನದಿ ಕಾವೇರಿ

ಸಮಗ್ರ ನ್ಯೂಸ್: ತವರು ಜಿಲ್ಲೆ ಕೊಡಗು ಜಿಲ್ಲೆಯಲ್ಲಿ ಈ ಬಾರಿ ತೀವ್ರ ಮಳೆ ಕೊರತೆ ಎದುರಾಗಿದೆ. ಪರಿಣಾಮ ಬೇಸಿಗೆಯ ಆರಂಭದಲ್ಲಿಯೇ ಜೀವನದಿ ಎಂದು ಕರೆಸಿಕೊಳ್ಳುತ್ತಿದ್ದ ಕಾವೇರಿ ತನ್ನ ಹರಿಯುವಿಕೆಯನ್ನೇ ನಿಲ್ಲಿಸಿದ್ದಾಳೆ. ಪರಿಣಾಮ ಈ ಪಟ್ಟಣ ನದಿತಟದ ಮೇಲೆ ನೆಲೆ ನಿಂತಿದ್ದರೂ ಈಗ ಕುಡಿಯುವ ನೀರಿಗೆ ಹಾಹಾಕಾರ ಎದುರಿಸುತ್ತಿದೆ. ಕೊಡಗಿನಲ್ಲಿ ಹುಟ್ಟಿ ಜಿಲ್ಲೆಯ ನೂರಾರು ಗ್ರಾಮಗಳ ಮೂಲಕ ಹರಿಯುವ ಕಾವೇರಿ ಸಮೃದ್ಧಿಯಾಗಿಸಿತ್ತು. ಆದರೆ ಈಗ ತವರು ಬಿಟ್ಟು ಮುಂದೆ ಹರಿಯದ ಪರಿಸ್ಥಿತಿ ಎದುರಾಗಿದೆ. ನದಿಯ ಬಹುತೇಕ ಕಡೆ ಸಂಪೂರ್ಣ

ತವರು ಜಿಲ್ಲೆಯಲ್ಲೇ ಬರಿದಾದ ಜೀವನದಿ ಕಾವೇರಿ Read More »

ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಹಲ್ಲೆ| ಈ ಗೂಂಡಾಗಿರಿ ಸಹಿಸಲಾಗದು ಎಂದ ಪ್ರಕಾಶ ರಾಜ್

ಸಮಗ್ರ ನ್ಯೂಸ್: ಬೆಂಗಳೂರು ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಯುವಕರು ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿನ ಗೂಂಡಾಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಅಂತ ನಟ ಪ್ರಕಾಶ್ ರಾಜ್ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ನಟ ಪ್ರಕಾಶ್ ರಾಜ್ ಎಕ್ಸ್ ಮಾಡಿದ್ದು, ಈ ಗೂಂಡಾಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಯಾವುದೇ ಧರ್ಮದ ಯಾವುದೇ ವ್ಯಕ್ತಿಯಿಂದ ಇಂತಹ ಗೂಂಡಾಗಿರಿ ಕೃತ್ಯಗಳು ನಡೆದರೂ ಅದನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಹೇಳಿದ್ದಾರೆ. ಈ ಮೂಲಕ

ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಹಲ್ಲೆ| ಈ ಗೂಂಡಾಗಿರಿ ಸಹಿಸಲಾಗದು ಎಂದ ಪ್ರಕಾಶ ರಾಜ್ Read More »

ಮಕ್ಕಳಿಗೆ ಬೆಂಕಿ ಹಚ್ಚಿ ತಾನು ಬೆಂಕಿಗೆ ಆಹುತಿಯಾದ ತಾಯಿ

ಸಮಗ್ರ ನ್ಯೂಸ್: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊನೆಗೆ ತಾನೂ ಅಗ್ನಿ ಪ್ರವೇಶ ಮಾಡಿದ್ದ ಭಯಾನಕ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲ ಸಮುದ್ರ ಗ್ರಾಮದಲ್ಲಿ ನಡೆದಿದೆ. ಮಾರಕ್ಕ ಎಂಬ 24 ವರ್ಷದ ಮಹಿಳೆಯೇ ತನ್ನ ಇಬ್ಬರು ಪುಟ್ಟ ಕಂದಮ್ಮಗಳಾದ ನಯನ (4) ಮತ್ತು ಹರ್ಷ ವರ್ಧನ್ (2)ಗೆ ಪೆಟ್ರೋಲ್‌ ಹಾಕಿ ಬೆಂಕಿ ಹಚ್ಚಿ ತಾನೂ ಸಾವನ್ನಪ್ಪಿದವರು. ಮಕ್ಕಳನ್ನು ಮನೆಯಿಂದ ಹೊರಡಿಸಿ ಗ್ರಾಮದ ಹೊರವಲಯಕ್ಕೆ ಹೋಗಿ ಅಲ್ಲಿ ಈ

ಮಕ್ಕಳಿಗೆ ಬೆಂಕಿ ಹಚ್ಚಿ ತಾನು ಬೆಂಕಿಗೆ ಆಹುತಿಯಾದ ತಾಯಿ Read More »

ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಸಾವು| ಶಿಕ್ಷಕರು ಸಸ್ಪೆಂಡ್

ಸಮಗ್ರ ನ್ಯೂಸ್: ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ವಿದ್ಯಾರ್ಥಿನಿಯ ಬಟ್ಟೆಗೆ ಬೆಂಕಿ ತಗುಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ಆಕೆ ಶಾಲೆಯ ಪಕ್ಕದಲ್ಲೇ ಇರುವ ದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದಳು. ತನ್ನ ಜತೆಗೆ ತರಗತಿಯ ಇತರ ಕೆಲವು ಮಕ್ಕಳನ್ನು ಕೂಡಾ ಆಕೆ ಕರೆದುಕೊಂಡು ಹೋಗಿದ್ದಳು.

ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಸಾವು| ಶಿಕ್ಷಕರು ಸಸ್ಪೆಂಡ್ Read More »

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ| ನಗರ್ತಪೇಟೆಯಲ್ಲಿ ಭುಗಿಲೆದ್ದ ಬಿಜೆಪಿ ಆಕ್ರೋಶ

ಸಮಗ್ರ ನ್ಯೂಸ್: ಬೆಂಗಳೂರಿನ ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು, ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಕೂಡ ಭಾಗಿಯಾಗಿದ್ದರು.ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ಕಾರ್ಯಕರ್ತರು ಮತ್ತು​ ಪೊಲೀಸರ ನಡುವೆ ವಾಗ್ವಾದ

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ| ನಗರ್ತಪೇಟೆಯಲ್ಲಿ ಭುಗಿಲೆದ್ದ ಬಿಜೆಪಿ ಆಕ್ರೋಶ Read More »

ಮೈಸೂರು ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ

ಮೈಸೂರು, ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 23ರಿಮದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೀದರ್​ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ* ಮಳೆಯಾಗುವ ಸಾಧ್ಯತೆ ಇದೆ* ಕೊಪ್ಪಳದಲ್ಲಿ ಮಾರ್ಚ್​ 21ರಿಂದ 2 ದಿನಗಳ ಕಾಲ ಮಳೆಯಾಗಲಿದೆ, ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ

ಮೈಸೂರು ಕೊಡಗು ಸೇರಿದಂತೆ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ Read More »

ಎಮ್ಮೆ ಹಾಲಿಗೆ ಬೇಡಿಕೆ ಕುಸಿತ/ ಮಾರಾಟ ನಿಲ್ಲಿಸಿದ ಕೆಎಂಎಫ್

ಸಮಗ್ರ ನ್ಯೂಸ್: ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಮತ್ತೆ ಎಮ್ಮೆ ಹಾಲು ಮಾರಾಟ ನಿಲ್ಲಿಸಲು ಕೆಎಂಎಫ್ ನಿರ್ಧರಿಸಿದೆ. ಕಳೆದ ವರ್ಷ ಡಿಸೆಂಬರ್‍ನಿಂದ ಕೆಎಂಎಫ್ ಎಮ್ಮೆ ಹಾಲು ಉತ್ಪಾದನೆ ಆರಂಭಿಸಿದ್ದು, ಇದೀಗ ಬೇಡಿಕೆ ಕುಸಿಯುತ್ತಿರುವುದರಿಂದ ಮಾರಾಟ ಮಾಡುವುದನ್ನು ನಿಲ್ಲಿಸುವುದಾಗಿ ತಿಳಿಸಲಾಗಿದೆ. ರಾಜ್ಯದಲ್ಲಿ ಪ್ರತಿನಿತ್ಯ ಕೇವಲ 2 ಸಾವಿರ ಲೀಟರ್ ಎಮ್ಮೆ ಹಾಲು ಮಾರಾಟವಾಗುತ್ತಿದ್ದು, ಬೆಂಗಳೂರು, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಪೂರೈಕೆಯಾಗುತ್ತಿದೆ. ಕೆಎಂಎಫ್ ಪ್ರತಿ ಲೀಟರ್ ಗೆ 60 ರೂ. ನೀಡುತ್ತಿದೆ. ಆದರೆ ಇನ್ನು ಮುಂದೆ ಎಮ್ಮೆ ಹಾಲು ಮಾರಾಟ ಮಾಡದಿರಲು

ಎಮ್ಮೆ ಹಾಲಿಗೆ ಬೇಡಿಕೆ ಕುಸಿತ/ ಮಾರಾಟ ನಿಲ್ಲಿಸಿದ ಕೆಎಂಎಫ್ Read More »