ರಾಜ್ಯ

ಮಂಗಳೂರು: ತುಳು ಲಿಪಿಗೆ ಯುನಿಕೋಡ್ ಮಾನ್ಯತೆ

ಸಮಗ್ರ ನ್ಯೂಸ್: ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿ ಅಕಾಡೆಮಿ ವತಿಯಿಂದ ಸಹಕಾರ ನೀಡಲಾಗಿತ್ತು. ತುಳು ಲಿಪಿಯನ್ನು ಯೂನಿಕೋಡ್ ಅಂಗೀಕರಿಸುವ […]

ಮಂಗಳೂರು: ತುಳು ಲಿಪಿಗೆ ಯುನಿಕೋಡ್ ಮಾನ್ಯತೆ Read More »

ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್​ ನಾಡಿಗೇರ ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ

ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ Read More »

ಡಿಕೆಶಿ ಅಮೇರಿಕಾ ಭೇಟಿ/ ವೈಯುಕ್ತಿಕ ಕಾರಣಕ್ಕೆ ಭೇಟಿ ಎಂದರು ಉಪಮುಖ್ಯಮಂತ್ರಿ

ಸಮಗ್ರ ನ್ಯೂಸ್‌: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೇರಿದಂತೆ ಕೆಲವು ಉನ್ನತ ನಾಯಕರನ್ನು ಭೇಟಿ ಮಾಡಲು ಅಮೆರಿಕಕ್ಕೆ ಭೇಟಿ ನೀಡಿದ್ದೇನೆ ಎಂಬ ವದಂತಿಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಳ್ಳಿಹಾಕಿದ್ದು, ಅಮೇರಿಕಾ ಭೇಟಿ ಸಂಪೂರ್ಣವಾಗಿ ವೈಯಕ್ತಿಕ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ನನ್ನ ಕುಟುಂಬದೊಂದಿಗೆ ಸೆಪ್ಟೆಂಬರ್ 15 ರವರೆಗೆ ಯುಎಸ್‌ಗೆ ಪ್ರಯಾಣಿಸುತ್ತಿದ್ದೇನೆ. ಇದು ವೈಯಕ್ತಿಕ ಭೇಟಿ,” ಎಂದು ತಿಳಿಸಿದ್ದಾರೆ. ಅಮೆರಿಕ ಪ್ರವಾಸದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ಪತ್ರವನ್ನೂ

ಡಿಕೆಶಿ ಅಮೇರಿಕಾ ಭೇಟಿ/ ವೈಯುಕ್ತಿಕ ಕಾರಣಕ್ಕೆ ಭೇಟಿ ಎಂದರು ಉಪಮುಖ್ಯಮಂತ್ರಿ Read More »

ಕನ್ನಡದಲ್ಲೇ ಔಷಧಿ ಚೀಟಿ ಬರೆದು ಮಾದರಿಯಾದ ವೈದ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದೇ ಔಷಧಿ ಚೀಟಿಯನ್ನು ಬರೆಯಲು ಆದೇಶ ನೀಡಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲೇ ಔಷಧಿ ಚೀಟಿಯನ್ನು ಬರೆದು ಮಾದರಿಯಾಗಿದ್ದಾರೆ. ಬೆಂಗಳೂರಿನ ಕೆ.ವಿ.ಡೆಂಟಲ್ ಕ್ಲಿನಿಕ್ ಆಸ್ಪತ್ರೆಯ ವೈದ್ಯ ಡಾ.ಹರಿಪ್ರಸಾದ್ ಸಿ.ಎಸ್. ಎಂಬುವರು ಔಷಧಿ ಚೀಟಿಯನ್ನು ಕನ್ನಡದಲ್ಲೇ ಬರೆದುಕೊಟ್ಟು ಮಾದರಿಯಾಗಿದ್ದಾರೆ. ಈಗಾಗಲೇ ರಾಯಚೂರಿನಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲೇ ಬರೆಯಲು ಆದೇಶ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಇನ್ಮುಂದೆ ವೈದ್ಯರು ಕನ್ನಡದೇ ಔಷಧಿ ಚೀಟಿಯನ್ನು ಬರೆಯಲು

ಕನ್ನಡದಲ್ಲೇ ಔಷಧಿ ಚೀಟಿ ಬರೆದು ಮಾದರಿಯಾದ ವೈದ್ಯ Read More »

ಇಂದಿನ ಹವಾಮಾನ ವರದಿ| ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ| ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ದೊರೆತಿದೆ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಪ್ರತಿ ವರ್ಷವೂ ಚೌತಿ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗುತ್ತಿತ್ತು ಆದರೆ ಈ ಬಾರಿ ಚೌತಿ ಕಳೆದರೂ ಮಳೆ ಹೆಚ್ಚಾಗುವ ಸೂಚನೆ ಇದೆ. ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ,

ಇಂದಿನ ಹವಾಮಾನ ವರದಿ| ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ| ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ಮೋಹಕತಾರೆ ರಮ್ಯಾಗೆ ಕೂಡಿ ಬಂತೇ ಕಂಕಣ ಭಾಗ್ಯ!? ಸ್ಯಾಂಡಲ್ ವುಡ್ ನ ಗಲ್ಲಿಗಳಲ್ಲಿ ಕೇಳಿ ಬಂದ ಗಾಸಿಪ್

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದ ಮೋಹಕತಾರೆ ರಮ್ಯಾ‌ ಮದುವೆಯಾಗಲಿದ್ದಾರೆ!. ಹೌದು ಹೀಗೊಂದು ಸುದ್ದಿ ಹರಿದಾಡುತ್ತಿದೆ. ರಾಜಸ್ಥಾನ ಮೂಲದ ಟೆಕ್ಸ್‌ಟೈಲ್ ಉದ್ಯಮಿ ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ ಅನ್ನೋ ವಿಚಾರ ಗಾಂದಿನಗರದ ಗಲ್ಲಿಗಲ್ಲಿಗಳಲ್ಲಿ ಇವತ್ತು ಕೇಳಿ ಬಂತು. ಆಪ್ತರು ಹೇಳುವಂತೆ ಅಕ್ಟೋಬರ್ ನಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರಂತೆ. ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ರಮ್ಯಾ, ಇದೊಂದು ರೂಮರ್ಸ್ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ. ಹಲವಾರು ಬಾರಿಯೂ

ಮೋಹಕತಾರೆ ರಮ್ಯಾಗೆ ಕೂಡಿ ಬಂತೇ ಕಂಕಣ ಭಾಗ್ಯ!? ಸ್ಯಾಂಡಲ್ ವುಡ್ ನ ಗಲ್ಲಿಗಳಲ್ಲಿ ಕೇಳಿ ಬಂದ ಗಾಸಿಪ್ Read More »

ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಸಮಗ್ರ ನ್ಯೂಸ್: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ವೀರ್ ಸಿಂಗ್ ಪೋಷಕರಾಗಿದ್ದಾರೆ. ದೀಪಿಕಾ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆಯಷ್ಟೇ ದೀಪಿಕಾ ಪಡುಕೋಣೆ ಮುಂಬೈನ ಅಂಬಾನಿ ಮಾಲೀಕತ್ವದ ಹೆಚ್‌ಎನ್‌ ರಿಲಯನ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 28ರಂದು ದೀಪಿಕಾಗೆ ಡೆಲಿವರಿ ಡೇಟ್ ಇತ್ತು. ಆದರೆ ನಿಗದಿಗಿಂತ 20 ದಿನ ಮೊದಲೇ ದೀಪಿಕಾ ರಣ್ವೀರ್ ಮನೆಗೆ ಗೌರಿಯ ಆಗಮನವಾಗಿದೆ. ಒಂದು ದಿನದ ಹಿಂದಷ್ಟೇ ದೀಪಿಕಾ ಪಡುಕೋಣೆ ತಮ್ಮ ಪತಿ ರಣ್ವೀರ್ ಸಿಂಗ್ ಹಾಗೂ ಕುಟುಂಬದವರ ಜೊತೆಗೆ

ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ Read More »

ಪಶ್ಚಿಮದಿಂದ ಪೂರ್ವಕ್ಕೆ ಹರಿದ ನೇತ್ರಾವತಿ| ಎತ್ತಿನಹೊಳೆ ಯೋಜನೆಗೆ ಅಧಿಕೃತ ಚಾಲನೆ

ಸಮಗ್ರ ನ್ಯೂಸ್: ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ನೀರೆತ್ತುವ ಪಂಪ್‌ಗಳಿಗೆ ಶುಕ್ರವಾರ ಚಾಲನೆ ದೊರಕಿದ ಕೆಲ ಹೊತ್ತಿನಲ್ಲಿ ಸುಮಾರು 6 ಕಿಲೋಮೀಟರ್‌ ದೂರದ ಹೆಬ್ಬನಹಳ್ಳಿಯಲ್ಲಿರುವ ನೀರು ವಿತರಣೆಯ ನಾಲ್ಕು ತೊಟ್ಟಿಗಳಲ್ಲಿ ನೀರು ಉಕ್ಕೇರಿತು. ಇದರೊಂದಿಗೆ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯ ದಶಕದ ಕನಸು ನನಸಾದ ಸಂಭ್ರಮ ಜನರಲ್ಲಿ ಉಕ್ಕಿ ಹರಿಯಿತು. ಪಶ್ಚಿಮಕ್ಕೆ ಹರಿದು ನೇತ್ರಾವತಿ ನದಿಯಾಗಿ ಕರಾವಳಿಯಲ್ಲಿ ಸಾಗುತ್ತಿದ್ದ ಎತ್ತಿನ ಹೊಳೆ, ಕಾಡುಮನೆ ಹೊಳೆ, ಹೊಂಗಡ ಹಳ್ಳ, ಕೇರಿ ಹೊಳೆ ಶುಕ್ರವಾರದಿಂದ

ಪಶ್ಚಿಮದಿಂದ ಪೂರ್ವಕ್ಕೆ ಹರಿದ ನೇತ್ರಾವತಿ| ಎತ್ತಿನಹೊಳೆ ಯೋಜನೆಗೆ ಅಧಿಕೃತ ಚಾಲನೆ Read More »

ಇನ್ಸ್ಟಾಗ್ರಾಮ್ ಸೆಲೆಬ್ರಿಟಿ ಯೂನೀಸ್ ಪೊಲೀಸರ ವಶ

ಸಮಗ್ರ ನ್ಯೂಸ್: ಇನ್ಸ್ಟಾಗ್ರಾಮ್ ಸ್ಟಾರ್ ಯೂನೀಸ್ ಝರೂರಾ ಎಂಬಾತನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ ಬೇರೆ ಬೇರೆ ದೇಶಗಳಿಗ ತೆರಳಿ ಸರ್ಪ್ರೈಸ್ ಗಿಫ್ಟ್ಗಳನ್ನ ಕೊಡುತ್ತಿದ್ದ. ಹೀಗಾಗಿ ಬೆಂಗಳೂರಿನ ಎಂಜಿ ರಸ್ತೆಗೂ ಬಂದಿದ್ದ. ಸರಿಯಾದ ಉತ್ತರ ನೀಡಿದವರಿಗೆ ದುಬಾರಿ ಬೆಲೆಯ ಐಫೋನ್ನನ್ನು ಗಿಫ್ಟ್ ಕೊಡುತ್ತಿದ್ದ. ಅಷ್ಟೇ ಅಲ್ಲದೆ ಎಂಜಿ ರಸ್ತೆಯಲ್ಲಿ ದಿ.ಪುನೀತ್ ರಾಜ್ ಕುಮಾರ್ ಅವರ ಫೋಟೋ ಅನಾವರಣ ಮಾಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಬೆಂಗಳೂರಿಗೆ ಬಂದಿದರಿಂದ ಇತನ ಅಭಿಮಾನಿಗಳು ನಡು ರಸ್ತೆಯಲ್ಲಿಯೇ ಗುಂಪು

ಇನ್ಸ್ಟಾಗ್ರಾಮ್ ಸೆಲೆಬ್ರಿಟಿ ಯೂನೀಸ್ ಪೊಲೀಸರ ವಶ Read More »

ದ.ಕ ಜಿಲ್ಲೆಯ 386 ಕಡೆ ಸಾರ್ವಜನಿಕ ಗಣೇಶೋತ್ಸವ ಆಚರಣೆ| 30 ಕಡೆ ಅತಿ ಸೂಕ್ಷ್ಮ ಮೆರವಣಿಗೆ ಗುರುತು| ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್‌ ಇಲಾಖೆ ಗುರುತಿಸಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.17ರ ವರೆಗೆ ಒಟ್ಟು 165 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಇದರಲ್ಲಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ ಮತ್ತು 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಯೆಂದು ಪರಿಗಣಿಸಲಾಗಿದೆ. ದ.ಕ ಜಿಲ್ಲಾ

ದ.ಕ ಜಿಲ್ಲೆಯ 386 ಕಡೆ ಸಾರ್ವಜನಿಕ ಗಣೇಶೋತ್ಸವ ಆಚರಣೆ| 30 ಕಡೆ ಅತಿ ಸೂಕ್ಷ್ಮ ಮೆರವಣಿಗೆ ಗುರುತು| ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ Read More »