ರಾಜ್ಯ

ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ|ಚಕ್ರವರ್ತಿ ಸೂಲಿಬೆಲೆ

ಸಮಗ್ರ ನ್ಯೂಸ್: ಒಂದು ವೇಳೆ ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಅವರು ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿ, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು

ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ|ಚಕ್ರವರ್ತಿ ಸೂಲಿಬೆಲೆ Read More »

ಅಸಿಸ್ಟೆಂಟ್ ಪ್ರೊಫೆಸರ್ ಜಾಬ್ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ವಿದ್ಯಾರ್ಹತೆ:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಾರ್ಮ್ ಪವರ್ & ಮೆಷಿನರಿ/ ಬಯೋ ಎನರ್ಜಿಯಲ್ಲಿ ಸ್ನಾತಕೋತ್ತರ ಪದವಿ, ಎಂ.ಟೆಕ್,

ಅಸಿಸ್ಟೆಂಟ್ ಪ್ರೊಫೆಸರ್ ಜಾಬ್ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ Read More »

ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಔರಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಎದೆ ಬಡಿತದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಬಾಂದ್ರಾದ ಹೋಲಿ ಫ್ಯಾಮಿಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಪ್ರಭು ಚೌಹಾಣ್ ಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಪ್ರಭು ಚೌಹಾಣ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು

ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು Read More »

ಉಡುಪಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ವಸೂಲು ಮಾಡಿದ ಬಗ್ಗೆ ದೂರು ದಾಖಲಾಗಿದೆ. ಪಡುಅಲೆವೂರಿನ ವೀರೇಶ್ ಅವರಿಗೆ ಆರೋಪಿ ಅಭಿಷೇಕ್ ಎನ್. ಎಂಬಾತ ಬೆಂಗಳೂರಿನಲ್ಲಿ ಪರಿಚಯವಾಗಿದ್ದ. ತಾನು ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್‌ಸ್ಪೆಕ್ಟರ್ ಆಗಿರುವುದಾಗಿ ತಿಳಿಸಿದ್ದ. ವೀರೇಶ್ ಮತ್ತು ಆತನ ಸ್ನೇಹಿತ ರವೀಂದ್ರ ಅವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ವೀರೇಶ್ ಅವರಿಂದ 18 ಲ.ರೂ. ಹಾಗೂ ರವೀಂದ್ರ ಅವರಿಂದ 10 ಲ.ರೂ.ಗಳನ್ನು ತನ್ನ ಬ್ಯಾಂಕ್ ಖಾತೆಗೆ 2021ರಿಂದ 2023ರ ನಡುವೆ ವರ್ಗಾಯಿಸಿಕೊಂಡಿದ್ದ.

ಉಡುಪಿ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಎಟಿಎಂ ಕಾರ್ಡ್ ಬಳಸಲು ತಿಳಿಯದೆ ಇದ್ದ ವ್ಯಕ್ತಿಗೆ ಅಪರಿಚಿತ ವ್ಯಕ್ತಿಯಿಂದ ಲಕ್ಷಾಂತರ ರೂಪಾಯಿ ಲಪಟಾಯಿಸಿದ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದಲ್ಲಿ ನಡೆದಿದೆ. ಮೆಲಂತಬೆಟ್ಟು ನಿವಾಸಿ ಶರೀಫ್ (53) ಎಂಬವರು ಬೆಳ್ತಂಗಡಿ ಕಸಬಾ ಗ್ರಾಮದ ಎಸ್.ಬಿ.ಐ ಎಟಿಎಂ ಯಂತ್ರದಿAದ ಹಣ ಪಡೆಯಲು ಬಂದಿದ್ದು, ಈ ವೇಳೆ ತನಗೆ ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ, ಅಲ್ಲೇ ಪಕ್ಕದಲ್ಲಿದ್ದ ಅಪರಿಚಿತ ವ್ಯಕ್ತಿಯ ಕೈಯಲ್ಲಿ ಎಟಿಎಂ ಕಾರ್ಡ್ ನೀಡಿ ಆತನಿಗೆ ಎ.ಟಿ.ಎಂ ಪಿನ್ ಸಂಖ್ಯೆಯೂ ತಿಳಿಸಿ

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ರೂ. ವಂಚನೆ Read More »

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ಬಿಜೆಪಿ ವಿರುದ್ಧ ಬಂಡಾಯ ಸಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಪುತ್ತೂರಿನ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.‌ ಈ ಮೂಲಕ ಮತ್ತೆ ಮರಳಿ ಗೂಡಿಗೆ ವಾಪಾಸ್ಸಾಗಿದ್ದಾರೆ. ಮಾ.14ರ ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಉಪಸ್ಥಿತರಿದ್ದರು. ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅರುಣ್ ಕುಮಾರ್ ಪುತ್ತಿಲ

ಬಿಜೆಪಿ ವಿರುದ್ಧ ಬಂಡಾಯವೆದ್ದು ಥಂಡಾ ಹೊಡೆದ ಪುತ್ತಿಲ ಮರಳಿ ಬಿಜೆಪಿಗೆ ಸೇರ್ಪಡೆ Read More »

ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ/ ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ

ಸಮಗ್ರ ನ್ಯೂಸ್: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರಿಗೆ ಈ ಬಾರಿ ಟಿಕೆಟ್ ಕೈತಪ್ಪಿ ಹೋಗಿದ್ದು, ಈ ಬಾರಿ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದಾದ ಬಳಿಕ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ, ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ ಎಂದು ಸಂದೇಶ ರವಾನಿಸಿದ್ದಾರೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ

ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ/ ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ Read More »

ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧ ಸ್ಪರ್ಧೆ/ ಬಿಜೆಪಿಗೆ ತಿರುಗಿ ಬಿದ್ರಾ ಈಶ್ವರಪ್ಪ?

ಸಮಗ್ರ ನ್ಯೂಸ್; ತಮ್ಮ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಸಿಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಇದೀಗ ತನ್ನ ಪುತ್ರನಿಗೆ ಟಿಕೆಟ್ ನೀಡದ ಕಾರಣಕ್ಕಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರ ವಿರುದ್ಧವೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ನಾನು ಲೋಕಸಭಾ ಚುನಾವಣೆಗೆ ಹಾವೇರಿಯಿಂದ ನನ್ನ ಮಗ ಕೆ.ಇ ಕಾಂತೇಶ್ ಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಕೋರಿದ್ದೆ. ಆದ್ರೆ ಅವನಿಗೂ

ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧ ಸ್ಪರ್ಧೆ/ ಬಿಜೆಪಿಗೆ ತಿರುಗಿ ಬಿದ್ರಾ ಈಶ್ವರಪ್ಪ? Read More »

ಕನ್ನಡದಲ್ಲಿಯೇ ಪ್ರಮಾಣ ವಚನ ಮಾಡಿದ ಸುಧಾಮೂರ್ತಿ

ಸಮಗ್ರ ನ್ಯೂಸ್: ರಾಜ್ಯಸಭಾ ಸದಸ್ಯೆಯಾಗಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ, ಸಮಾಜ ಸೇವಕಿ ಸುಧಾ ಮೂರ್ತಿ ಅವರು ಇಂದು ಕನ್ನಡದಲ್ಲಿಯೇ ಪ್ರಮಾಣ ವಚನ ಮಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಧಾಮೂರ್ತಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಮಾಡಿದ್ದಾರೆ. ಈ ವೇಳೆ ಸುಧಾಮೂರ್ತಿ ಪತಿ ನಾರಾಯಣ ಮೂರ್ತಿ, ನಂದನ್ ನೀಲಕೇಣಿ ಹಾಗೂ ಕೇಂದ್ರ ಸಚಿವ ಪಿಯುಷ್ ಗೋಯಲ್ ಹಾಜರಿದ್ದರು.

ಕನ್ನಡದಲ್ಲಿಯೇ ಪ್ರಮಾಣ ವಚನ ಮಾಡಿದ ಸುಧಾಮೂರ್ತಿ Read More »

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ

ಸಮಗ್ರ ನ್ಯೂಸ್: 23 ಕೋಟಿ ವೆಚ್ಚದಲ್ಲಿ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೆಂಗಲ್ ಹನುಮಂತಯ್ಯ ಪ್ರತಿಯ ರಸ್ತೆಯ ಪಕ್ಕದಲ್ಲಿ ಸ್ಥಾಪನೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು. ಬೆಂಗಳೂರಿನ ಪೂರ್ವಭಾಗದ ವಿಶಾಲವಾದ ಪ್ರದೇಶದಲ್ಲಿ ಟೀ ಪಾರ್ಕ್ ಮಾಡಲಾಗುತ್ತದೆ. ಅದರಲ್ಲಿ ಆಟದ ಮೈದಾನ, ಸೈಕಲ್ ಟ್ರ್ಯಾಕ್ ನಿರ್ಮಿಸಲಾಗುತ್ತದೆ. ಇದಕ್ಕೆ 11 ಕೋಟಿ ವೆಚ್ಚ ತಗುಲಲಿದ್ದು, ಇದಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ ಎಂದರು ರೈತರ ಉತ್ಪಾದನೆ, ಲಾಭಾಂಶ ಜಾಸ್ತಿ ಆಗಬೇಕು. ಬೆಳೆ

ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ Read More »