ರಾಜ್ಯ

ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ತುಮಕೂರಿನ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಮಂಜುನಾಥ್.ವಿ ಕೆ ಎಂಬ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. 40 ಸಾವಿರ ಹಣ ತೆಗೆದುಕೊಳ್ಳುವಾಗ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಇವರು ಮಂಜುನಾಥ್ ರೆಡ್ಡಿ ಎಂಬುವವರ ಬಳಿ 50 ಸಾವಿರ ಲಂಚಕ್ಕೆ ಹಣಕ್ಕೆ ಬೇಡಿಕೆಯಿಟ್ಟಿದ್ದ‌ರು. ಈ ಕುರಿತು ಜಿ.ಮಂಜುನಾಥ್ ರೆಡ್ಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇವರ ದೂರಿನ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್​ ಮಾಡಿದ್ದಾರೆ.

ಲಂಚ ಸ್ವೀಕರಿಸುವ ವೇಳೆ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ Read More »

ಆಸ್ತಿಗಳ ನೋಂದಣಿಗೆ ಆಧಾರ್ ಲಿಂಕ್..!ಭಾನುವಾರವೂ ತೆರೆಯಲಿದೆ ಸಬ್ ರಿಜಿಸ್ಟ್ರಾರ್ ಕಚೇರಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

ಸಮಗ್ರ ನ್ಯೂಸ್: ನಕಲಿ ದಾಖಲೆ ಸೃಷ್ಟಿಸಿ ಇತರರ ಆಸ್ತಿಯನ್ನು ಕಬಳಿಕೆ ಮಾಡುವ ಪ್ರಕರಣವನ್ನು ತಡೆಗಟ್ಟಲು ಆಸ್ತಿಗಳ ನೋಂದಣಿಗೆ ಆಧಾರ್ ಲಿಂಕ್ ಮಾಡಲು ರಾಜ್ಯ ಸರ್ಕಾರ ಇದೀಗ ಮುಂದಾಗಿದೆ. ನನ್ನ ಆಸ್ತಿ ಎಂಬ ಯೋಜನೆಯನ್ನ ನನ್ನ ಭೂಮಿ, ನನ್ನ ಗುರುತು ಎಂಬ ಶೀರ್ಷಿಕೆಯಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿ ವೇಳೆ ಆಧಾರ್ ಪಡೆಯುವ ಸೇವೆ ಆರಂಭ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಕಡ್ಡಾಯ ಮಾಡುವುದಕ್ಕೆ ಆಗುವುದಿಲ್ಲ, ಆದರೆ ನೋಂದಣಿ ಮಾಡಬೇಕಾಗುತ್ತದೆ. ನೋಂದಣಿ

ಆಸ್ತಿಗಳ ನೋಂದಣಿಗೆ ಆಧಾರ್ ಲಿಂಕ್..!ಭಾನುವಾರವೂ ತೆರೆಯಲಿದೆ ಸಬ್ ರಿಜಿಸ್ಟ್ರಾರ್ ಕಚೇರಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ Read More »

ಯದುವೀರ್‌ ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ

ಸಮಗ್ರ ನ್ಯೂಸ್: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಸಂಸದ ಪ್ರತಾಪ್‌ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್‌ ಒಡೆಯರ್‌ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ರಾಜವಂಶಸ್ಥ ಯದುವೀರ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಡುವ ಕುರಿತಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡಮಟ್ಟದ ಚರ್ಚೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ ಎನ್ನುವ ಪೋಸ್ಟರ್ ಅಭಿಯಾನ ಆರಂಭವಾಗಿದೆ. ಯುವರಾಜರೇ ನಿಮಗೆ ನಿಮ್ಮದೇ ಘನತೆ ಇದೆ,

ಯದುವೀರ್‌ ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ Read More »

ಲೋಕಸಭೆಗೆ ಯದುವೀರ್/ ಅಪ್ಪಣೆ ನೀಡಿದರಾ ರಾಜಮಾತೆ?

ಸಮಗ್ರ ನ್ಯೂಸ್: ಬಿಜೆಪಿ ಹೈಕಮಾಂಡ್ ಸಂಸದ ಪ್ರತಾಪ್ ಸಿಂಹ ಅವರ ಬದಲಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಅಖಾಡಕ್ಕಿಳಿಸಲು ಮುಂದಾಗಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಮೈಸೂರು ಮಹಾರಾಜರಿಗೆ ಬಿಜೆಪಿ ಹೈಕಮಾಂಡ್ ಆಹ್ವಾನ ನೀಡಿದೆ ಎಂಬ ಸುದ್ದಿಯ ನಡುವೆಯೇ ಯದುವೀರ್ ಚುನಾವಣಾ ರಾಜಕೀಯಕ್ಕೆ ಬರಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದ ಬಳಿಕ ರಾಜಮಾತೆ ಪ್ರಮೋದಾದೇವಿ ಇದೀಗ ಮಹತ್ವದ ಸೂಚನೆ ನೀಡಿದ್ದಾರೆ. ರಾಜಮಾತೆ

ಲೋಕಸಭೆಗೆ ಯದುವೀರ್/ ಅಪ್ಪಣೆ ನೀಡಿದರಾ ರಾಜಮಾತೆ? Read More »

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: 5,8,9 ನೇ ಮತ್ತು 11ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಗೆ ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಪುರಸ್ಕರಿಸಿದ್ದು, ಪರೀಕ್ಷೆ ನಡೆಸದಂತೆ ತಡೆ ನೀಡಿದೆ. ಬೋರ್ಡ್ ಪರೀಕ್ಷೆ ವಿಚಾರವಾಗಿ ಸರ್ಕಾರದ ಸುತ್ತೋಲೆ ರದ್ದು ಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಇದನ್ನು ವಿಭಾಗೀಯ ಪೀಠದಲ್ಲಿ ಮೇಲ್ಮನವಿ

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ Read More »

ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ? ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಫೈಟ್ ಜೋರಾಗಿದೆ. ಕೆಲ ನಾಯಕರಿಗೆ ಟಿಕೆಟ್ ಸಿಗುತ್ತದೆ, ಸಿಗಲ್ಲ ಎಂಬ ಗೊಂದಲಗಳು ಹೆಚ್ಚಾಗಿದೆ. ಇದೇ ವಿಚಾರವಾಗಿ ಮೈಸೂರಿನಲ್ಲಿ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಸಿಗಲ್ಲ ಯದುವೀರ್ ಒಡೆಯರಿಗೆ ಟಿಕೆಟ್ ಕೊಡಲಾಗುತ್ತದೆ ಎಂಬ ಮಾಹಿತಿಗಳು ಹೊರಬೀಳುತ್ತಿದೆ. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಈಗಲೂ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಒಂದು ವೇಳೆ ಟಿಕೆಟ್ ಕೈ ತಪ್ಪಿದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ ಎಂದು

ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ? ಪ್ರತಾಪ್ ಸಿಂಹ Read More »

ಕಾಪು: 1,25,000 ರೂ. ಹಣ ಸುಲಿಗೆ ಪ್ರಕರಣ: ಆರೋಪಿ ಓರ್ವನ ಬಂಧನ

ಸಮಗ್ರ ನ್ಯೂಸ್ : ದ್ವಿಚಕ್ರ ವಾಹನವನ್ನು ನಿಲ್ಲಿಸಿ ಉಮೇಶ್ ಪ್ರಭು ಅವರ ಬಳಿಯಿದ್ದ 1,25,000 ರೂ. ಹಣ ಇದ್ದ ಬ್ಯಾಗನ್ನು ಕದ್ದು ಆರೋಪಿ ಪರಾರಿಯಾಗಿರುವ ಘಟನೆ ಕಾಪು ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಸಂತೋಷ ಕುಮಾರ್(28) ಎಂದು ಗುರುತಿಸಲಾಗಿದೆ ಉಡುಪಿ ಜಿಲ್ಲೆಯ ಸಂತೆಕಟ್ಟೆ ನಿವಾಸಿ ಉಮೇಶ ಪ್ರಭು ರವರು ವಾಹನದಲ್ಲಿ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಲೈನ್ ಸೇಲ್ ಮಾಡುವ ವೃತ್ತಿ ಮಾಡಿಕೊಂಡಿದ್ದು, ಮಾ. 02 ರಂದು ಎಂದಿನಂತೆ ಲೈನ್ ಸೇಲ್ ಮಾಡಿ ಬಂದ ಹಣ 1,25,000 ರೂ.

ಕಾಪು: 1,25,000 ರೂ. ಹಣ ಸುಲಿಗೆ ಪ್ರಕರಣ: ಆರೋಪಿ ಓರ್ವನ ಬಂಧನ Read More »

ಬೆಂಗಳೂರಿನಲ್ಲಿ ರಿಯಲ್‌ಎಸ್ಟೇಟ್ ಉದ್ಯಮಿ ಕೊಲೆ: ಕಾರಿನಲ್ಲಿ ಶವ ಬಿಟ್ಟು ಹಂತಕರು ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನ ಬಾಗಲೂರು ಕ್ರಾಸ್​​ ಬಳಿಕಾರೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ ಕೃಷ್ಣ ಯಾದವ್ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು. ಕೆಲಸಕ್ಕೆಂದು ಹೊರ ಹೋಗಿದ್ದವರು

ಬೆಂಗಳೂರಿನಲ್ಲಿ ರಿಯಲ್‌ಎಸ್ಟೇಟ್ ಉದ್ಯಮಿ ಕೊಲೆ: ಕಾರಿನಲ್ಲಿ ಶವ ಬಿಟ್ಟು ಹಂತಕರು ಪರಾರಿ Read More »

ಮುರಿದು ಬಿದ್ದ ಬಿಜೆಪಿ – ಜೆಜೆಪಿ ಮೈತ್ರಿ| ಹರಿಯಾಣ ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಅವರು ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ನೀಡಿದ್ದಾರೆ ಅಂತ ತಿಳಿದುಬಂದಿದೆ. ಮನೋಹರ್ ಲಾಲ್ ಖಟ್ಟರ್ ಅವರು ರಾಜೀನಾಮೆ ಹಿನ್ನಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕರ್ಣದಿಂದ ಕಣಕ್ಕಿಳಿಸಬಹುದು ಮತ್ತು ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರನ್ನು ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬಹುದು ಎಂದು ಮೂಲಗಳು ತಿಳಿಸಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ

ಮುರಿದು ಬಿದ್ದ ಬಿಜೆಪಿ – ಜೆಜೆಪಿ ಮೈತ್ರಿ| ಹರಿಯಾಣ ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ Read More »

ಲೋಕಸಭೆ ಚುನಾವಣೆಗೆ ಖಂಡಿತ ಸ್ಪರ್ಧಿಸುತ್ತೇನೆ: ಶೋಭಾ ಕರಂದ್ಲಾಜೆ

ಸಮಗ್ರ ನ್ಯೂಸ್: ಮುಂಬರುವ ಲೋಕಸಭೆ ಚುನಾವಣೆಗೆ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಐಸಿಎಆರ್-ಸಿಪಿಸಿಆರ್‍ಐ ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ರಾಜಕೀಯದಲ್ಲಿ ಅಸಮಾಧಾನ ಸಾಮಾನ್ಯ. ಗೆಲುವು ಖಚಿತವಾದ ಕ್ಷೇತ್ರದಿಂದ ಆಕಾಂಕ್ಷಿಗಳು ಟಿಕೆಟ್ ಬಯಸಿದ್ದಾರೆ. ಇದು ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾವೆಲ್ಲರೂ ಬದ್ಧರಾಗಿದ್ದೇವೆ ಮತ್ತು ಪಕ್ಷದ ಕೇಂದ್ರ ಸಂಸದೀಯ ಮಂಡಳಿಯ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು

ಲೋಕಸಭೆ ಚುನಾವಣೆಗೆ ಖಂಡಿತ ಸ್ಪರ್ಧಿಸುತ್ತೇನೆ: ಶೋಭಾ ಕರಂದ್ಲಾಜೆ Read More »