ಅಮೆರಿಕದ ಗುಪ್ತಚರ ವಿಭಾಗದ ನಿರ್ದೇಶಕ ಸ್ಥಾನಕ್ಕೆ ತುಳಸಿ ಗಬ್ಬಾರ್ಡ್ ರಾಜೀನಾಮೆ
ಸಮಗ್ರ ನ್ಯೂಸ್: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಭಾವಿ ನಾಯಕಿ ತುಳಸಿ ಗಬ್ಬಾರ್ಡ್ ತಮ್ಮ ಉನ್ನತ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತಿಯ ಆರೈಕೆ ಹಾಗೂ ಸದ್ಯದ ಕೌಟುಂಬಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ತಾವು ಈ ಕಠಿಣ ನಿರ್ಧಾರ ಕೈಗೊಂಡಿರುವುದಾಗಿ ಅವರು ಪ್ರಕಟಿಸಿದ್ದಾರೆ. ವಿಶ್ವದ ಅತ್ಯಂತ ಶಕ್ತಿಶಾಲಿ ಗುಪ್ತಚರ ಸಂಸ್ಥೆಯ ಮುಖ್ಯಸ್ಥೆಯಾಗಿದ್ದ ತುಳಸಿ ಅವರ ಈ ನಡೆ ಅಂತರರಾಷ್ಟ್ರೀಯ ರಾಜತಾಂತ್ರಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಅಮೆರಿಕದ ಗುಪ್ತಚರ ವಿಭಾಗದ ನಿರ್ದೇಶಕ ಸ್ಥಾನಕ್ಕೆ ತುಳಸಿ ಗಬ್ಬಾರ್ಡ್ ರಾಜೀನಾಮೆ Read More »










