ರಾಜ್ಯ

ಮಾ.8, 9ರಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ‘ಮಹಿಳಾ ಚೈತನ್ಯ ದಿನ’

ಸಮಗ್ರ ನ್ಯೂಸ್ : ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಈ ವರ್ಷದ ‘ಮಹಿಳಾ ಚೈತನ್ಯ ದಿನ’ವನ್ನು ಮಾ.8 ಮತ್ತು 9ರಂದು ಉಡುಪಿಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಒಕ್ಕೂಟದ ಅಖಿಲಾ ವಿದ್ಯಾಸಂದ್ರ ಬೆಂಗಳೂರು ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಪೆಬ್ ದಾಳಿ ಹಾಗೂ ಹೊಸದಿಲ್ಲಿಯ ನಿರ್ಭಯಾ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ವಿರೋಧಿಸಲು ಹಾಗೂ ಈ ಬಗ್ಗೆ ಜಾಗೃತಿ ಮೂಡಿಸಲು 2013ರಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ

ಮಾ.8, 9ರಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ‘ಮಹಿಳಾ ಚೈತನ್ಯ ದಿನ’ Read More »

ಕಾಂಗ್ರೆಸ್‍ನಿಂದ ಸ್ವಾತಂತ್ರ್ಯ ಹರಣ|ಸತೀಶ್ ಕುಂಪಲ

ಸಮಗ್ರ ನ್ಯೂಸ್ :ತುಮಕೂರಿನಲ್ಲಿ ನಡೆಯಬೇಕಾಗಿದ್ದ ಭಯೋತ್ಪಾದನೆ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರನ್ನು ಕುಣಿಗಲ್ ನಲ್ಲಿ ಪೋಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಸರಕಾರವು ಪೋಲೀಸ್ ಇಲಾಖೆಯ ಮುಖಾಂತರ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ದ.ಕ. ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದು, ಕಾಂಗ್ರೆಸ್ ಸರಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿಯುವ ಮೂಲಕ ಸಂವಿಧಾನ ವಿರೋಧಿಯಾಗಿದೆ ಎಂದಿದ್ದಾರೆ. ಹಸಂತಡ್ಕ ಅವರ ಬಂಧನವನ್ನು

ಕಾಂಗ್ರೆಸ್‍ನಿಂದ ಸ್ವಾತಂತ್ರ್ಯ ಹರಣ|ಸತೀಶ್ ಕುಂಪಲ Read More »

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳಿಗೆ ಸೂಚನೆ

ಸಮಗ್ರ ನ್ಯೂಸ್ :ನಾಡಿನಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಪ್ರಮುಖ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಕಾರ್ಯಕ್ರಮಗಳು ನಡೆಯಲಿದ್ದು, ಸಾಮಾನ್ಯವಾಗಿ ಶಿವರಾತ್ರಿಯ ಸಮಯದಲ್ಲಿ ದಕ್ಷಿಣ ಕನ್ನಡ ಪ್ರಮುಖ ದೇವಾಲಯಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತಾಧಿಗಳು ಪಾದಯಾತ್ರೆಯ ಮೂಲಕ ದೇವರ ದರ್ಶನವನ್ನು ಪಡೆಯುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ನೂರಾರು ಭಕ್ತರು ಧರ್ಮಸ್ಥಳ ಹಾಗೂ ಸುಬ್ರಮಣ್ಯದತ್ತ ಹೆಜ್ಜೆ ಹಾಕುತ್ತಿದ್ದು, ಮಹಾ ಶಿವರಾತ್ರಿಯ ದಿನ ದೇವಾಲಯಗಳನ್ನು

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳಿಗೆ ಸೂಚನೆ Read More »

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ: ಸಿಎಂ

ಸಮಗ್ರ ನ್ಯೂಸ್ :ರಾಜ್ಯದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಬುಧವಾರ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಷ್ಟೇ ಆಗಿದ್ದು, ಮಂಗನ ಕಾಯಿಲೆ ತಡೆಗೆ ಲಸಿಕೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಂಗನ ಕಾಯಿಲೆಯಿಂದ ಸಾವನ್ನಪ್ಪಿದವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ: ಸಿಎಂ Read More »

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ| ಬಾಂಬರ್ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ

ಸಮಗ್ರ ನ್ಯೂಸ್ :ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭಿಸಿದ್ದು, ಬೆಂಗಳೂರಿನ ಸುಜಾತ ಸರ್ಕಲ್‍ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದಾನೆ. ತುಮಕೂರಿನಿಂದ ಬಳ್ಳಾರಿಗೆ ಬಸ್‍ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ ಬಳ್ಳಾರಿ ಮತ್ತು ತುಮಕೂರು ಬಸ್ ನಿಲ್ದಾಣಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ. ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‍ಐಎ ತಂಡ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ| ಬಾಂಬರ್ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ Read More »

ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್:2022ರಲ್ಲಿ ಪಾಕ್ ವಿದೇಶಾಂಗ ಸಚಿವ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಅದರಂತೆ ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಗೊಂದಲಕ್ಕೀಡಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಆದರೆ ಇದೇ ವಿಚಾರ ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಸಂಬಂಧ ಎರಡು

ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು Read More »

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ 102 ವರ್ಷದ ವೃದ್ದೆ

ಸಮಗ್ರ ನ್ಯೂಸ್: ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕೆಂದು 102 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ಮೂಲದ ಪಾರ್ವತಮ್ಮ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಮಾದಪ್ಪನ ದರ್ಶನಕ್ಕೆ 18 ಕಿಲೋಮೀಟರ್ ಕಾಲ್ನಡಿಗೆ ನಡೆಸಿದ್ದಾರೆ. ಹೀಗೆ ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ, ಬೆಳೆ ಚೆನ್ನಾಗಿ ಆಗಬೇಕು. ಹಾಗೆ ಆದರೆ ಅಲ್ಲವೇ ರೈತರಿಗೆ ಒಳಿತಾಗುವುದು? ಅದೇ ರೀತಿ ಕಾಡು ಪ್ರಾಣಿಗಳಿಗೂ ಒಳ್ಳೆಯದಾಗಬೇಕು. ಅವುಗಳಿಗೆ ಕುಡಿಯುವ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ 102 ವರ್ಷದ ವೃದ್ದೆ Read More »

ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಜಿ.ಪರಮೇಶ್ವರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಮತ್ತು ಆ್ಯಸಿಡ್ ದಾಳಿ ಸಂತ್ರಸ್ತರಿಗೂ ರಕ್ಷಣೆ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ, ಇತ್ತೀಚೆಗಷ್ಟೇ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಘೋಷಣೆ ಮಾಡಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ವಿವಿಧ ಮಹಿಳಾ ಸಂಘಟನೆಗಳು ಮತ್ತು ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್ ಅವರು, ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ

ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಜಿ.ಪರಮೇಶ್ವರ್ Read More »

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಂತಕನ ಇಮ್ಯಾಜಿನರಿ ಸ್ಕೆಚ್ ಬಿಡುಗಡೆ ಮಾಡಿದ NIA

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, NIA ಟೀಂ ತುಮಕೂರಿನಲ್ಲಿ ಶಂಕಿತ ಭಯೋತ್ಪಾದಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಶಂಕಿತ ಬಾಂಬರ್ ಮಾರ್ಚ್​1ರಂದು ತುಮಕೂರಿನಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ತುಮಕೂರಿನ ಹಲವೆಡೆ ತೀವ್ರ ಹುಡುಕಾಟ ನಡೆಸಿದ್ದಾರೆ. ಸುಮಾರು 28 ವಾಹನಗಳಲ್ಲಿ ತುಮಕೂರಿಗೆ ಆಗಮಿಸಿರುವ ಪೊಲೀಸರು, ರೈಲ್ವೆ ನಿಲ್ದಾಣ, ಪಾಲಿಕೆ ಕಚೇರಿ, ಪೊಲೀಸ್ ಕಂಟ್ರೋಲ್ ರೂಂ ಸೇರಿ ನಗರದ ಹಲವೆಡೆಯಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಬೆಂಗಳೂರು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಂತಕನ ಇಮ್ಯಾಜಿನರಿ ಸ್ಕೆಚ್ ಬಿಡುಗಡೆ ಮಾಡಿದ NIA Read More »

ಸಂಪ್ ಒಳಗೆ ಬಿದ್ದ ಮಗುವನ್ನು ರಕ್ಷಿಸಿದ ಪಿಎಸ್ಐ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಎಸ್ಐ ಸಮಯ ಪ್ರಜ್ಞೆಯಿಂದಾಗಿ ಎರಡುವರೆ ವರ್ಷದ ಮಗುವಿನ ಜೀವ ಉಳಿದಿದೆ. ಸಂಪ್ ಒಳಗೆ ಬಿದ್ದಿದ್ದ ಎರಡುವರೆ ವರ್ಷದ ಮಗುವನ್ನು ಬ್ಯಾಟರಾಯನಪುರ ಸಂಚಾರ ಠಾಣೆ ಪಿಎಸ್ಐ ನಾಗರಾಜ್​ ರಕ್ಷಣೆ ಮಾಡಿದ್ದಾರೆ. ಪಿಎಸ್ಐ ನಾಗರಾಜ್ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಿಇಎಲ್​ನ ಬಳಿ 10 ಅಡಿ ಆಳದ ಸಂಪ್​​ಗೆ ಮಗು ಬಿದಿದ್ದೆ. ಸಹಾಯಕ್ಕಾಗಿ ಮಹಿಳೆಯರು ಕೂಗಿದ್ದಾರೆ. ಕರ್ತವ್ಯಕ್ಕೆ ಠಾಣೆಗೆ ತೆರಳುತ್ತಿದ್ದ ಪಿಎಸ್ಐ ನಾಗರಾಜ್​​ಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸಂಪ್​​ಗೆ ಇಳಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವಿನ ರಕ್ಷಣೆ

ಸಂಪ್ ಒಳಗೆ ಬಿದ್ದ ಮಗುವನ್ನು ರಕ್ಷಿಸಿದ ಪಿಎಸ್ಐ Read More »