ರಾಜ್ಯ

ಪಲ್ಸ್ ಪೋಲಿಯೋ ವಿತರಣಾ ಅಭಿಯಾನ/ 60.41 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಡ್ರಾಪ್ಸ್

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ವಿತರಣಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರಕಿದ್ದು, ಐದು ವರ್ಷದೊಳಗಿನ 60.41 ಲಕ್ಷ ಮಕ್ಕಳಿಗೆ ಎರಡು ಹನಿ ಪೋಲಿಯೋ ಡ್ರಾಪ್ಸ್ ಹಾಕಲಾಗಿದೆ. 62.84 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಇಲಾಖೆ ಹೊಂದಿತ್ತು. ಇದರಲ್ಲಿ ಶೇ.96ರಷ್ಟು ಗುರಿ ತಲುಪಿದ್ದು, ಉಳಿದ ಮಕ್ಕಳಿಗಾಗಿ ಮನೆ ಮನೆಗೆ ತೆರಳಿ ಲಸಿಕೆ ಹನಿ ಹಾಕಲಾಗುತ್ತದೆ. ಬರೀ ಅಂಗನವಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಷ್ಟೇ ಅಲ್ಲದೆ ಬಸ್ ನಿಲ್ದಾಣ, ಮೆಟ್ರೋ, ರೈಲ್ವೆ

ಪಲ್ಸ್ ಪೋಲಿಯೋ ವಿತರಣಾ ಅಭಿಯಾನ/ 60.41 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಡ್ರಾಪ್ಸ್ Read More »

ಯಾರನ್ನಾದರೂ ‘ಹೇ…ಡಾರ್ಲಿಂಗ್’ ಎಂದು ಕರೆಯುತ್ತೀರಾ? ಹಾಗಿದ್ರೆ ಜೈಲು ಕಂಬಿ ಎಣಿಸ್ತೀರಿ ಜೋಕೆ!!

ಸಮಗ್ರ ನ್ಯೂಸ್: ಇನ್ನು ಮುಂದೆ ನೀವು ಯಾರನ್ನಾದರೂ ‘ಹೇ ಡಾರ್ಲಿಂಗ್​​​’ಎಂದು ಕರೆದರೆ ಅವರು ನಿಮ್ಮ ಮೇಲೆ ಕೇಸು ದಾಖಲಿಸಿದರೆ ನೀವು ತಿಂಗಳುಗಟ್ಟಲೆ ಜೈಲು ಕಂಬಿ ಎಣಿಸಬೇಕಾದಿತು. ಡಾರ್ಲಿಂಗ್ ಎಂಬ ಪದವನ್ನು ಇನ್ನು ಮುಂದೆ ಬಳಸುವಂತಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು ‘ಡಾರ್ಲಿಂಗ್’ ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ

ಯಾರನ್ನಾದರೂ ‘ಹೇ…ಡಾರ್ಲಿಂಗ್’ ಎಂದು ಕರೆಯುತ್ತೀರಾ? ಹಾಗಿದ್ರೆ ಜೈಲು ಕಂಬಿ ಎಣಿಸ್ತೀರಿ ಜೋಕೆ!! Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡು ವಾರ ಭರ್ಜರಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮಳೆ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಮುಂದಿನ 2 ವಾರ ಭರ್ಜರಿ ಮಳೆ ಮುನ್ಸೂಚನೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಪ್ರಕಾರ ಕರ್ನಾಟಕದಲ್ಲಿ ಮುಂದಿನ ಕೆಲ ದಿನದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ ತಿಂಗಳ ಮೊದಲ 10 ದಿನ ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಚಿಕ್ಕಮಗಳೂರು, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ ವರೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಲಿದೆ. ಈಗಾಗಲೇ ಟ್ಯಾಂಕರ್

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡು ವಾರ ಭರ್ಜರಿ ಮಳೆ ಸಾಧ್ಯತೆ Read More »

ಚಿಕನ್ ಬೆಲೆಯಲ್ಲಿ ದಿಢೀರ್ ಏರಿಕೆ| ಕಂಗಾಲಾದ ಗ್ರಾಹಕ

ಸಮಗ್ರ ನ್ಯೂಸ್: ಮಾಂಸ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿಕನ್ ಬೆಲೆ ಧಿಡೀರ್ ಆಗಿ ಏರಿಕೆಯಾಗುತ್ತಿದೆ. ತಾಪಮಾನ ಏರಿಕೆ ಹಿನ್ನೆಲೆ ಬಿಸಿಲ ತಾಪಕ್ಕೆ ಕೋಳಿ ಬೆಳವಣಿಗೆ ಕುಂಠಿತವಾಗುತ್ತಿದ್ದು, ಕೋಳಿಗಳ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಹೀಗಾಗಿ ಕೋಳಿ ಮಾಂಸ ಉತ್ಪಾದನೆ ಕುಸಿದಿದ್ದು, ಚಿಕನ್ ದರ ಧಿಡೀರ್ ಏರಿಕೆಯಾಗಿದೆ. ಒಂದು ವಾರದ ಹಿಂದೆ 180 ರೂಪಾಯಿ ಇದ್ದ ಒಂದು ಕೆಜಿ ಕೋಳಿ ಮಾಂಸದ ಬೆಲೆ 250 ರೂಪಾಯಿಗೆ ತಲುಪಿದೆ.ಕೆಲವು ಕಡೆ 240 ರೂಗೆ ಮಾರಾಟವಾಗುತ್ತಿದೆ. ಈ ಮೂಲಕ ಚಿಕನ್ ಪ್ರಿಯರಿಗೆ

ಚಿಕನ್ ಬೆಲೆಯಲ್ಲಿ ದಿಢೀರ್ ಏರಿಕೆ| ಕಂಗಾಲಾದ ಗ್ರಾಹಕ Read More »

ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ

ಸಮಗ್ರ ನ್ಯೂಸ್: ಅಕ್ರಮವಾಗಿ ಮಣ್ಣನ್ನು ಸಾಗಿಸುತ್ತಿದ್ದರು, ಈ ವಿಚಾರವಾಗಿ ತಹಶೀಲ್ದಾರ್ ಪ್ರಶ್ನಿಸಿದ್ದಾರೆ. ಅದಕ್ಕೆ ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಭೀಮಸಂದ್ರ ಬಳಿ ನಡೆದಿದೆ. ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ ಕೇಳಿಬಂದಿದೆ. ನಿಲ್ಲಿಸು ಎಂದಿದ್ದಕ್ಕೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆಂದು ಹಾರೋಹಳ್ಳಿ ಠಾಣೆಯಲ್ಲಿ ವಿಜಯಣ್ಣ ದೂರು ದಾಖಲಿಸಿದ್ದಾರೆ. ಚೇಸ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ Read More »

ವೃದ್ಧ ದಂಪತಿಯ ಮೇಲೆ ಚರ್ಚ್ ಧರ್ಮಗುರುವೊಬ್ಬರಿಂದ ಹಲ್ಲೆ

ಸಮಗ್ರ ನ್ಯೂಸ್: ವೃದ್ಧ ದಂಪತಿಯ ಮೇಲೆ ಕ್ರೈಸ್ತರ ಚರ್ಚ್ ಧರ್ಮಗುರುವೊಬ್ಬರು ಮನಬಂದಂತೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ವಿಡಿಯೋವು ಎಲ್ಲೆಡೆ ವೈರಲ್ ಆಗುತ್ತಿದೆ. ಈ ಘಟನೆ ನಡೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚದ ಎರ್ಮೆತ್ತಡ್ಕ ಎಂಬಲ್ಲಿ. ಮನೆಲ ಚರ್ಚ್ ನ ಧರ್ಮಗುರು ಫಾದರ್​ ನೆಲ್ಸನ್ ಓಲಿವೆರಾ ಹಲ್ಲೆ ನಡೆಸಿದ ಪಾದ್ರಿ ಎಂದು ತಿಳಿದುಬಂದಿದೆ. ಗ್ರೆಗರಿ ಮೊಂತೆರೋ (79) ಮತ್ತು ಅವರ ಪತ್ನಿ ಫಿಲೋಮಿನಾ(72) ಹಲ್ಲೆಗೊಳಗಾದ ವೃದ್ಧ ದಂಪತಿ. ಸದರಿ ಪಾದ್ರಿ ಆ ವೃದ್ಧರನ್ನು

ವೃದ್ಧ ದಂಪತಿಯ ಮೇಲೆ ಚರ್ಚ್ ಧರ್ಮಗುರುವೊಬ್ಬರಿಂದ ಹಲ್ಲೆ Read More »

ಹೆತ್ತ ತಾಯಿಯಿಂದಲೆ ಮಗುವಿನ ಮೇಲೆ ಹಲ್ಲೆ.. ಕಟುಕಿ ತಾಯಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮನಕಲಕುವ ಘಟನೆಯೊಂದು ನಡೆದು ಹೋಗಿದೆ. ಹೌದು ತಾಯಿಯಾದವಳು ಎಳೆ ವಯಸ್ಸಿನ ಮಗುವನ್ನು ಲಾಲನೆ ಪಾಲನೆ ಮಾಡುವುದನ್ನು ಬಿಟ್ಟು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಹೊಡೆದು ಬಡಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ. ಗಂಡನಿಂದ ವಿಚ್ಛೇದನೆ ಪಡೆದುಕೊಂಡಿರುವ ಸ್ಟ್ಯಾಲಿನ್ ಎನ್ನುವ ಮಹಿಳೆ ತನ್ನ ಪ್ರಿಯಕರನ ಜೊತೆ ಸೇರಿ ಎರಡ್ಮೂರು ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಗುವಿನ ಮೈತುಂಬ ಗಾಯಗಳಾಗಿವೆ. 2-3 ವರ್ಷದ ಮಗುವು ತೊದಲನುಡಿಯಲ್ಲೇ ತನಗೆ

ಹೆತ್ತ ತಾಯಿಯಿಂದಲೆ ಮಗುವಿನ ಮೇಲೆ ಹಲ್ಲೆ.. ಕಟುಕಿ ತಾಯಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ಮುನಿಸು ಮರೆತು ಮತ್ತೆ ಒಂದಾದ ಬಿಎಸ್ ವೈ ಮತ್ತು ವಿ.ಸೋಮಣ್ಣ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ದ ವಿ.ಸೋಮಣ್ಣ ಅವರು ಸೋಲುಕಂಡಿದ್ದರು. ಇದಾದ ಬಳಿಕ ಬಿ.ಎಸ್​ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ನಡುವೆ ವೈಮನಸ್ಸು ಬೆಳೆದಿತ್ತು. ಇದೀಗ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ನಿನ್ನೆ ಡಾಲರ್ಸ್ ಕಾಲನಿಯ ಬಿ.ಎಸ್ ಯಡಿಯೂರಪ್ಪನವರ ನಿವಾಸಕ್ಕೆ ವಿ ಸೋಮಣ್ಣ ಅವರು ಆಗಮಿಸಿದ್ದು, ಇಬ್ಬರು ಕೂಡ ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ. ಇಬ್ಬರ ರಾಜಿ ಸಂಧಾನದಲ್ಲಿ ಎಂ.ಡಿ.ಲಕ್ಷ್ಮಿನಾರಾಯಣ್, ಶೆಟ್ಟರ್ ಯಶಸ್ವಿಯಾಗಿದ್ದಾರೆ. ಹೈಕಮಾಂಡ್​ ಮಟ್ಟದಲ್ಲಿ ಸೋಮಣ್ಣ, ಬಿಎಸ್​ವೈ

ಮುನಿಸು ಮರೆತು ಮತ್ತೆ ಒಂದಾದ ಬಿಎಸ್ ವೈ ಮತ್ತು ವಿ.ಸೋಮಣ್ಣ Read More »

ಚಿಕ್ಕಮಗಳೂರು: ಧರ್ಮಸ್ಥಳ ಯಾತ್ರಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ಮಧುಸೂದನ್(52) ಎಂದು ಗುರುತಿಸಲಾಗಿದೆ. ಅವರು ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು.

ಚಿಕ್ಕಮಗಳೂರು: ಧರ್ಮಸ್ಥಳ ಯಾತ್ರಿ ಹೃದಯಾಘಾತದಿಂದ ಸಾವು Read More »

ಮಡಿಕೇರಿಯಲ್ಲಿ ನೂತನ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಮಡಿಕೇರಿ ನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಜಿಲ್ಲಾ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್‌ನಿಂದ ಬಿದ್ದಿದ್ದಾರೆ. 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಶವಗಾರಕ್ಕೆ ರವಾನಿಸಿದ್ದಾರೆ. ಸುರಕ್ಷತಾ

ಮಡಿಕೇರಿಯಲ್ಲಿ ನೂತನ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು Read More »