ರಾಜ್ಯ

ಚಿಕ್ಕಮಗಳೂರು: ಧರ್ಮಸ್ಥಳ ಯಾತ್ರಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ಮಧುಸೂದನ್(52) ಎಂದು ಗುರುತಿಸಲಾಗಿದೆ. ಅವರು ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು.

ಚಿಕ್ಕಮಗಳೂರು: ಧರ್ಮಸ್ಥಳ ಯಾತ್ರಿ ಹೃದಯಾಘಾತದಿಂದ ಸಾವು Read More »

ಮಡಿಕೇರಿಯಲ್ಲಿ ನೂತನ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಮಡಿಕೇರಿ ನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಜಿಲ್ಲಾ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್‌ನಿಂದ ಬಿದ್ದಿದ್ದಾರೆ. 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಶವಗಾರಕ್ಕೆ ರವಾನಿಸಿದ್ದಾರೆ. ಸುರಕ್ಷತಾ

ಮಡಿಕೇರಿಯಲ್ಲಿ ನೂತನ ಆಸ್ಪತ್ರೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು Read More »

ಆಡಳಿತತ್ಮಾಕ ಸುಧಾರಣೆ/ ಕೇಂದ್ರ ಸರ್ಕಾರದಿಂದ ಖಾಸಗಿ ವಲಯದ ಪರಿಣತರ ನೇಮಕ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಆಡಳಿತ ಸುಧಾರಣೆ ತರುವ ನಿಟ್ಟಿನಲ್ಲಿ ಖಾಸಗಿ ವಲಯದ ಪರಿಣತರನ್ನು ಶೀಘ್ರದಲ್ಲಿ 25 ಜನರನ್ನು ನೇಮಿಸಿಕೊಳ್ಳಲಿದೆ. ವಿವಿಧ ಇಲಾಖೆಗಳ ನಿರ್ದೇಶಕರು, ಹೆಚ್ಚುವರಿ ಕಾರ್ಯದರ್ಶಿಗಳ ಸ್ಥಾನದಲ್ಲಿ ಇವರು ಕೆಲಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಂಪುಟ ನೇಮಕ ಸಮಿತಿ (ಎಸಿಸಿ) ಇವರ ನೇಮಕಕ್ಕೆ ಅನುಮೋದನೆ ನೀಡಿದ್ದು, ಮೂವರು ಜಂಟಿ ಕಾರ್ಯದರ್ಶಿ, 22 ನಿರ್ದೇಶಕರು ಹಾಗೂ ಉಪ ನಿರ್ದೇಶಕರ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರನ್ನು ನೇಮಕ ಮಾಡಲಾಗುತ್ತದೆ. ಈಗಾಗಲೇ 38 ಪರಿಣತರು 2018ರಲ್ಲಿ ಜಾರಿಯಾದ

ಆಡಳಿತತ್ಮಾಕ ಸುಧಾರಣೆ/ ಕೇಂದ್ರ ಸರ್ಕಾರದಿಂದ ಖಾಸಗಿ ವಲಯದ ಪರಿಣತರ ನೇಮಕ Read More »

ಫೆಬ್ರವರಿಯಲ್ಲಿ 168337 ಕೋಟಿ ರು.ನಷ್ಟು ಜಿಎಸ್‍ಟಿ ಸಂಗ್ರಹ

ಸಮಗ್ರ ನ್ಯೂಸ್: 2024ರ ಫೆಬ್ರವರಿ ತಿಂಗಳಲ್ಲಿ 168337 ಕೋಟಿ ರು.ನಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವಾಗಿದೆ ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಇದು 2023ರ ಫೆಬ್ರವರಿಗೆ ಹೋಲಿಸಿದರೆ ಶೇ.12.5ರಷ್ಟು ಹೆಚ್ಚು. ದೇಶೀಯ ವಹಿವಾಟಿನಲ್ಲಿ ಕಂಡುಬಂದ ಏರಿಕೆ ಒಟ್ಟಾರೆ ಜಿಎಸ್‍ಟಿ ಸಂಗ್ರಹ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಈ ಮೂಲಕ ಪ್ರಸಕ್ತ ಹಣಕಾಸು ವರ್ಷದಲ್ಲಿ (2023 ಏಪ್ರಿಲ್- 2024 ಫೆಬ್ರವರಿ) ಅವಧಿಯಲ್ಲಿ ಒಟ್ಟಾರೆ 18.40 ಲಕ್ಷ ಕೋಟಿ ರು.ನಷ್ಟು ಜಿಎಸ್‍ಟಿ ಸಂಗ್ರಹವಾದಂತೆ ಆಗಿದೆ.

ಫೆಬ್ರವರಿಯಲ್ಲಿ 168337 ಕೋಟಿ ರು.ನಷ್ಟು ಜಿಎಸ್‍ಟಿ ಸಂಗ್ರಹ Read More »

ಮೂರು ಕಂಪನಿಗಳಿಂದ ರಕ್ಷಣಾ ಉಪಕರಣಗಳ ಖರೀದಿಗೆ ಒಪ್ಪಂದ

ಸಮಗ್ರ ನ್ಯೂಸ್: ರಕ್ಷಣಾ ಸಚಿವಾಲಯವು, ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್‍ಎಎಲ್) ಸೇರಿದಂತೆ ದೇಶದ ಪ್ರಮುಖ ಮೂರು ಕಂಪನಿಗಳಿಂದ ರಕ್ಷಣಾ ಉಪಕರಣಗಳ ಖರೀದಿಗೆ 39,125 ಕೋಟಿ ರು. ಮೌಲ್ಯದ ಐದು ಒಪ್ಪಂದಗಳನ್ನು ಮಾಡಿಕೊಂಡಿದೆ. ಪ್ರಮುಖವಾಗಿ ಹೆಚ್‍ಎಎಲ್‍ನಿಂದ ಮಿಗ್-29 ವಿಮಾನಗಳಿಗೆ ಎಂಜಿನ್‍ಗಳನ್ನು ಪೂರೈಸಲು ಒಪ್ಪಂದ ಮಾಡಿಕೊಂಡಿದೆ. ಹಾಗೆಯೇ ಲಾರ್ಸೆನ್ ಅಂಡ್ ಟರ್ಬೋ ಕಂಪನಿಯ ಜೊತೆಗೆ ಸಿಐಡಬ್ಲ್ಯೂಎಸ್ ಶಸ್ತ್ರಾಸ್ತ್ರ ಮತ್ತು ಸುಸಜ್ಜಿತ ರಾಡಾರ್ ಪೂರೈಸುವ ಎರಡು ಒಪ್ಪಂದಕ್ಕೆ ಅಂಕಿತ ಹಾಕಿದೆ. ಇದರ ಜೊತೆಗೆ ಬ್ರಹ್ಮೋಸ್ ಏರೋಸ್ಪೇಸ್ ಕಂಪನಿಯ ಜೊತೆಗೆ ಬ್ರಹ್ಮೋಸ್ ಕ್ಷಿಪಣಿಗಳನ್ನು

ಮೂರು ಕಂಪನಿಗಳಿಂದ ರಕ್ಷಣಾ ಉಪಕರಣಗಳ ಖರೀದಿಗೆ ಒಪ್ಪಂದ Read More »

ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಡಿದ್ದು ದೃಢ| ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ್ದು ದೃಢ ಎಂದು FSL ವರದಿಯಲ್ಲಿ ಬಹಿರಂಗವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದ್ದರು. ನಾಸೀರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಮಾಹಿತಿ ಇದೀಗ ಬಹಿರಂಗವಾಗಿದೆ ಎಂದು ಹೇಳಲಾಗುತ್ತಿದೆ. “ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ರೆಕಾರ್ಡ್‌ ಆದ ವಿಡಿಯೊ

ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಡಿದ್ದು ದೃಢ| ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗ Read More »

ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ: ಆರ್.ಅಶೋಕ್

ಸಮಗ್ರ ನ್ಯೂಸ್: ಇಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ವಿಚಾರವಾಗಿ ಮಾತನಾಡಿದವಿರೋಧ ಪಕ್ಷದ ನಾಯಕ ಆರ್​. ಅಶೋಕ ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಸಮಾಜಘಾತುಕ ಶಕ್ತಿಗಳಿಗೆ ರೆಕ್ಕೆಪುಕ್ಕ ಬಂದಿದೆ. ಶರ್ಟ್ ಗುಂಡಿ ಬಿಚ್ಚಿಕೊಂಡು ಎದೆ ಉಬ್ಬಿಸಿಕೊಂಡು ಓಡಾಡುತ್ತಿದ್ದಾರೆ. ದೇಶದ ಕಾನೂನು ಇವರಿಗೆ ಅನ್ವಯವಾಗಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಗಲಾಟೆ ಆದಾಗಲೂ ಯಾವುದೇ ಕ್ರಮಕೈಗೊಳ್ಳಲಿಲ್ಲ.

ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ: ಆರ್.ಅಶೋಕ್ Read More »

ಸುಪ್ರೀಂಕೋರ್ಟ್ ಸೂಚನೆಯಂತೆ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತ ಸಮಿತಿ ಅಧ್ಯಕ್ಷರ ನೇಮಕ

ಸಮಗ್ರ ನ್ಯೂಸ್: ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ನಡೆದ ನಂತರ ಚಿತ್ರದುರ್ಗದ ಐತಿಹಾಸಿಕ ಮುರುಘಾಮಠಕ್ಕೆ ಆಡಳಿತ ಸಮಿತಿ ನೇಮಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 3 ದಿನದಲ್ಲಿ ಆಡಳಿತ ಸಮಿತಿ ನೇಮಿಸಲು ಫೆಬ್ರವರಿ 28ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಆಡಳಿತ ಸಮಿತಿ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ನೇಮಕ ಮಾಡಲಾಗಿದೆ. ಸದ್ಯ ಮುರುಘಾ ಸ್ವಾಮೀಜಿ ಜಾಮೀನು ಮೇಲಿದ್ದು, ಅವರ ನಿಯಂತ್ರಣದಲ್ಲಿರುವ ಆಡಳಿತ ಪ್ರಶ್ನಿಸಿ ಮಾಜಿ ಸಚಿವ ಹೆಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿ ಮಧ್ಯಂತ ಆದೇಶ

ಸುಪ್ರೀಂಕೋರ್ಟ್ ಸೂಚನೆಯಂತೆ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತ ಸಮಿತಿ ಅಧ್ಯಕ್ಷರ ನೇಮಕ Read More »

ಕುಟ್ಟ, ಮಡಿಕೇರಿ ಮರು ನಿರ್ಮಾಣಗೊಂಡ ರಸ್ತೆ ಉದ್ಘಾಟನೆ|ಕ್ಷೇತ್ರದ ಸಂಪೂರ್ಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ;ಎ.ಎಸ್. ಪೊನ್ನಣ್ಣ

ಸಮಗ್ರ ನ್ಯೂಸ್: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರು ಕುಟ್ಟ, ಮಡಿಕೇರಿ ರಸ್ತೆಯ ಮರುನಿರ್ಮಾಣ ಗೊಂಡ ಕಾಮಗಾರಿಯನ್ನು ಪೊನ್ನಂಪೇಟೆ ಮುಗುಟಗೇರಿಯಲ್ಲಿ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಎ.ಎಸ್ .ಪೊನ್ನಣ್ಣ ನವರು 1 ಕೋಟಿ 75 ಲಕ್ಷ ರೂಗಳಲ್ಲಿ ಸದರಿ ಕಾಮಗಾರಿ ನಡೆದಿದ್ದು ಉತ್ತಮ ಗುಣಮಟ್ಟದ ಕಾಮಗಾರಿ ನಡೆದಿದೆ. ಈ ನಿಟ್ಟಿನಲ್ಲಿ ಕಾಮಗಾರಿಯ ಬಗ್ಗೆ ನಿಗಾವಹಿಸಿದ ಗ್ರಾಮಸ್ಥರು ಅಭಿನಂದನಾರ್ಹರು ಎಂದು ತಿಳಿಸಿದರು. ಕ್ಷೇತ್ರದ ಸಂಪೂರ್ಣ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ತಾವು

ಕುಟ್ಟ, ಮಡಿಕೇರಿ ಮರು ನಿರ್ಮಾಣಗೊಂಡ ರಸ್ತೆ ಉದ್ಘಾಟನೆ|ಕ್ಷೇತ್ರದ ಸಂಪೂರ್ಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ;ಎ.ಎಸ್. ಪೊನ್ನಣ್ಣ Read More »

ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್:ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ನಲ್ಲಿ 28 ಪ್ರಯಾಣಿಕರು ಇದ್ದರು. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣ ಬಸ್ ಚಾಲಕ ಬಸ್ ನ್ನು ರಸ್ತೆ ಬದಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಲಗಿಸಿದ್ದಾರೆ. ಕ್ಷೇಣಾರ್ಧದಲ್ಲಿ ಬೆಂಕಿಯ ಕೆನ್ನಾಳಿಗೆ ಸಂಪೂರ್ಣ ಬಸ್ ಆವರಿಸಿದ್ದು,

ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು Read More »