ರಾಜ್ಯ

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆಗೈಯ್ಯುವವರು ಈ ಬಾರಿ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯ. ಮಂಡಲ-ಮಕರವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಕೇರಳ ಸರಕಾರ ಈ ಸಲ ಯಾತ್ರಾರ್ಥಿಗಳಿಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.ಪ್ರತಿದಿನ 80,000 ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಭಕ್ತರು ಶಬರಿಮಲೆ ದೇಗುಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕ್ಕಿಂಗ್ ಮಾಡಬೇಕಾಗುತ್ತದೆ.ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ. ಈ ಸಲ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯ ಇರುವುದಿಲ್ಲ.ಬುಕ್ಕಿಂಗ್ ರಹಿತರಾಗಿ […]

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ Read More »

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ/ ಇಂದು ೧೮ನೇ ಕಂತಿನ ಹಣ ಬಿಡುಗಡೆ

ಸಮಗ್ರ ನ್ಯೂಸ್‌: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 18 ನೇ ಕಂತನ್ನು ಮಹಾರಾಷ್ಟ್ರದ ವಾಶಿಮ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಈ ಕಂತನ್ನು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಲಾಭ ವರ್ಗಾವಣೆ(ಡಿಬಿಟಿ) ಮೂಲಕ ವಿತರಿಸಲಾಗುವುದು. ಫೆಬ್ರವರಿ 2019 ರಲ್ಲಿ ಪ್ರಾರಂಭವಾದ ಪಿಎಂ-ಕಿಸಾನ್ ಯೋಜನೆಯು ಭೂಹಿಡುವಳಿ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ, ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗಿದೆ. ಈ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ/ ಇಂದು ೧೮ನೇ ಕಂತಿನ ಹಣ ಬಿಡುಗಡೆ Read More »

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ದಸರಾ ಹಬ್ಬದ ಅಂಗವಾಗಿ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅಕ್ಟೋಬ‌ರ್ 4 ರಿಂದ 12 ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ. ಹೊರ ರಾಜ್ಯದ ಹಳದಿ ಬೋರ್ಡ್ ವಾಹನಗಳಿಗೆ ಪ್ರವೇಶ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.ರಾಜ್ಯ ಪ್ರವೇಶಕ್ಕೆ ಮೊದಲು ಗಡಿಭಾಗದಲ್ಲಿ ವಿಶೇಷ ರಹದಾರಿ ಪಡೆಯಬೇಕಿದೆ. ಮೈಸೂರು ನಗರ ಮತ್ತು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯ ವೀಕ್ಷಸಲು ಬರುವ ಪ್ರವಾಸಿ ವಾಹನಗಳಿಗೆ ಮಾತ್ರ ತೆರಿಗೆ ವಿನಾಯಿತಿ

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ Read More »

ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು

ಸಮಗ್ರ ನ್ಯೂಸ್: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಕಾರವಾರ ಮತ್ತು ಮೈಸೂರು ನಡುವೆ ಕೊಂಕಣ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. 06569 ಸಂಖ್ಯೆಯ ರೈಲು ಇದೇ 10ರಂದು ಮಧ್ಯರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡಲಿದ್ದು 11ರಂದು ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. 06570 ಸಂಖ್ಯೆಯ ರೈಲು 11ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ 4.40ಕ್ಕೆ ಮೈಸೂರು ತಲುಪಲಿದೆ. ಯಶವಂತಪುರದಿಂದ ಹೊರಡುವ ರೈಲಿಗೆ ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌,

ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು Read More »

ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ಅಬುಜ್ಮದ್ನಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 20 ಮಾವೋವಾದಿಗಳನ್ನ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಂತೇವಾಡ ಮತ್ತು ನಾರಾಯಣಪುರದ ಜಿಲ್ಲಾ ರಿಸರ್ವ್ ಗಾರ್ಡ್ಗಳು (DRG) ಅಬುಜ್ಮದ್ನಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ವಿವಿಧ ಪೊಲೀಸ್ ಶಿಬಿರಗಳಿಂದ ಕಾರ್ಯಾಚರಣೆಗೆ ಹೊರಟರು. “ಗೋವೆಲ್-ನೆಂಡೂರ್-ತುಲ್ತುಲಿ ಎಂಬ ಮೂರು ಗ್ರಾಮಗಳ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ” ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂರು

ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ Read More »

ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್.. ಖಾತೆಗೆ ಬೀಳಲಿದೆ 4 ಸಾವಿರ ರೂ.

ಸಮಗ್ರ ನ್ಯೂಸ್: ಎಲ್ಲೆಡೆ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಆದರೆ ಗೃಹ ಲಕ್ಷ್ಮೀಯರು ಮಾತ್ರ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಂದಿಲ್ಲ ಎಂಬ ಪಿಸುಮಾತುಗಳನ್ನು ಆಡುತ್ತಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀಯರಿಗೆ ಗುಡ್ನ್ಯೂಸ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ

ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್.. ಖಾತೆಗೆ ಬೀಳಲಿದೆ 4 ಸಾವಿರ ರೂ. Read More »

ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಯ್ಕೆಭಾರತಕ್ಕೆ ಭರ್ಜರಿ ಗೆಲುವು.

ಸಮಗ್ರ ನ್ಯೂಸ್: ವಿಶ್ವ ವೇದಿಕೆಯಲ್ಲಿ ಬ್ರಿಟನ್‌ನ ಸೋಲು,ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ. ಭಾರತದ ನ್ಯಾಯಮೂರ್ತಿ ದಲ್ವೀರ್ ಸಿಂಗ್ ಅವರು 193 ಮತಗಳಲ್ಲಿ 183 ಮತಗಳನ್ನು ಪಡೆದರು (ಪ್ರತಿ ದೇಶದಿಂದ ಒಬ್ಬರು ಪ್ರತಿನಿಧಿಸುತ್ತಾರೆ) ಮತ್ತು ಬ್ರಿಟನ್‌ನ ನ್ಯಾಯಮೂರ್ತಿ ಕ್ರಿಸ್ಟೋಫರ್ ಗ್ರೀನ್‌ವುಡ್ ಅವರನ್ನು ಸೋಲಿಸಿದರು. ಅವರು ಬ್ರಿಟನ್‌ನ ಈ ಹುದ್ದೆಯ ಮೇಲಿನ 71 ವರ್ಷಗಳ ಏಕಸ್ವಾಮ್ಯವನ್ನು ಮುರಿದರು. 11 ಸುತ್ತಿನ ಮತದಾನದಲ್ಲಿ, ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಸಾಮಾನ್ಯ ಸಭೆಯಲ್ಲಿ 193 ಮತಗಳಲ್ಲಿ 183

ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಯ್ಕೆಭಾರತಕ್ಕೆ ಭರ್ಜರಿ ಗೆಲುವು. Read More »

ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಾಸ್ಕ್​ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ತ್ರಿವಿಕ್ರಂಗೆ ಗಾಯ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿ ಆಗಿದೆ. ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬರಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ. ಇದೇ ವೇಳೆ ಗೋಲ್ಡ್ ಸುರೇಶ್​ಗೂ ಪೆಟ್ಟಾಗಿದೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ

ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು Read More »

ತಿರುಪತಿ ಲಡ್ಡು ವಿವಾದ| ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶ

ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಎಸ್ ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಿಶೇಷ ತನಿಖಾ ತಂಡದಲ್ಲಿ ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಹಿರಿಯ ಅಧಿಕಾರಿಗಳು ಇರಲಿದ್ದಾರೆ ಎಂದು ನ್ಯಾಯಾಲಯವು ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು, ಈ ವಿಷಯದಲ್ಲಿ ರಾಜಕೀಯ ಬಯಸುವುದಿಲ್ಲ, ಇದು ಪ್ರಪಂಚದಾದ್ಯಂತದ

ತಿರುಪತಿ ಲಡ್ಡು ವಿವಾದ| ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶ Read More »

ಸಚಿವರೊಂದಿಗಿನ ಮಾತುಕತೆ ಸಕ್ಸಸ್| ವಾರದಿಂದ ನಡೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ವಾಪಾಸ್

ಸಮಗ್ರ ನ್ಯೂಸ್: ಕಳೆದು ಒಂದು ವಾರಗಳಿಂದ ತಮ್ಮ ವಿವಿಧ ಭೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗಿನ ಮಾತುಕತೆ ಸಕ್ಸಸ್ ಆಗಿರುವ ಕಾರಣ, ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಕಳೆದ ಒಂದು ವಾರದಿಂದ ಪ್ರತಿಭಟನೆ ನಿರತರಾಗಿದ್ದ ಗ್ರಾಮ ಆಡಳಿತ ಅಧಿಕಾರಿಗಳು ಇಂದು ನನ್ನನ್ನು ಭೇಟಿಯಾಗಿ ಚರ್ಚಿಸಿದರು. ಎಲ್ಲರೂ ಒಟ್ಟಾಗಿ ಜನಪರ ಕೆಲಸಕ್ಕೆ ಮುಂದಾಗೋಣ ಎಂಬ ಮಾತನ್ನು

ಸಚಿವರೊಂದಿಗಿನ ಮಾತುಕತೆ ಸಕ್ಸಸ್| ವಾರದಿಂದ ನಡೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ವಾಪಾಸ್ Read More »