ರಾಜ್ಯ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್

ಸಮಗ್ರ ನ್ಯೂಸ್: ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾ.ಪಂ. ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ. ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ಒಬ್ಬ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ Read More »

ರಾಜ್ಯಸಭಾ ಚುನಾವಣೆ| ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡ ಮತದಾನ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು. ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಲಿಲ್ಲ’ ಎಂದು ಆರೋಪಿಸಿದರು.

ರಾಜ್ಯಸಭಾ ಚುನಾವಣೆ| ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡ ಮತದಾನ Read More »

ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ/ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆ ಸ್ವೀಕಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ ನೀಡಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಜನಸ್ನೇಹಿ ಯೋಜನೆಗಳು ಮತ್ತು ಅಭಿವೃದ್ಧಿ ಯೋಜನೆಗಳನ್ನು ಪ್ರಚುರಪಡಿಸುವ ವಿಕಸಿತ್ ಭಾರತ್ ಮೋದಿಯ ಗ್ಯಾರಂಟಿ ವಿಡಿಯೋ ಪ್ರಚಾರ ರಥಗಳಿಗೆ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದರು. ರಥಗಳಿಗೆ ಎಲ್‍ಸಿಡಿ ಸ್ಕ್ರೀನ್ ಹಾಕಲಾಗಿದ್ದು, ಮೋದಿ ಸಾಧನೆಗಳನ್ನು ಅದರ ಮೇಲೆ ಬಿತ್ತರಿಸಲಾಗುತ್ತದೆ. ಈ ಪ್ರಚಾರ ರಥಗಳು ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲೂ ಸಂಚರಿಸಿ ಸರ್ಕಾರದ ಯೋಜನೆ ಪ್ರಚಾರ ಮಾಡುತ್ತವೆ. ಜೊತೆಗೆ ಬಿಜೆಪಿಯ

ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ/ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆ ಸ್ವೀಕಾರ Read More »

ಪಡಿತರ ಚೀಟಿ ಅವ್ಯವಸ್ಥೆ ಸರಿಪಡಿಸಿ| ವಿಧಾನಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಆಗ್ರಹ

ಸಮಗ್ರ ನ್ಯೂಸ್: ಪಡಿತರ ಚೀಟಿ ಸಮಸ್ಯೆಗಳ ಬಗ್ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿಧಾನಸಭೆ ಯಲ್ಲಿ ಪ್ರಸ್ತಾವಿಸಿದ್ದು, ಅದಕ್ಕೆ ಆಹಾರ, ನಾಗರಿಕ ಸರಬರಾಜು ಇಲಾಖೆ ಸಚಿವರು ಶಾಸಕರು ಉತ್ತರಿಸಿದ್ದಾರೆ ಎಪಿಎಲ್‌ ಪಡಿತರ ಚೀಟಿದಾರ ರಿಗೆ ನಿರಂತರವಾಗಿ ಅಕ್ಕಿ ಪೂರೈಸಲು ಸರಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂದು ಶಾಸಕರು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಆಹಾರ ಸಚಿವರು, ವಿವಿಧ ಕಾರಣಗಳಿಂದಾಗಿ ಸರ್ವರ್‌ ಮೇಲೆ ಹೆಚ್ಚಿನ ಒತ್ತಡ ಇರುತ್ತದೆ. ಆದರೂ ಪ್ರತಿ ತಿಂಗಳ 1ರಿಂದ 10ನೇ ತಾರೀಕಿನವರೆಗೆ ಪಡಿತರ ಚೀಟಿ ತಿದ್ದುಪಡಿಗೆ

ಪಡಿತರ ಚೀಟಿ ಅವ್ಯವಸ್ಥೆ ಸರಿಪಡಿಸಿ| ವಿಧಾನಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಆಗ್ರಹ Read More »

ನಾಳೆ ರಾಜ್ಯಸಭೆ ಚುನಾವಣೆ| ಜೆಡಿಎಸ್ ಶಾಸಕನ ಮನವೊಲಿಸುವಲ್ಲಿ ಎಚ್​.ಡಿ.ಕೆ ಯಶಸ್ವಿ

ಸಮಗ್ರ ನ್ಯೂಸ್: ಇಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಇಲ್ಲಿ ಜೆಡಿಎಸ್ ಗೆ ಒಂದು ಮತವು ಅಮೂಲ್ಯವಾಗಿದೆ. ಇಲ್ಲಿ ಮುಖ್ಯವಾಗಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ಮನವೋಲಿಸುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​.ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಕಾರಣದಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿರುವ ಶರಣಗೌಡ ಸಹೋದರ ಮಲ್ಲಿಕಾರ್ಜುನ್ ರೆಡ್ಡಿ ಅವರ ನಿವಾಸದಲ್ಲಿ ಕುಮಾರಸ್ವಾಮಿ

ನಾಳೆ ರಾಜ್ಯಸಭೆ ಚುನಾವಣೆ| ಜೆಡಿಎಸ್ ಶಾಸಕನ ಮನವೊಲಿಸುವಲ್ಲಿ ಎಚ್​.ಡಿ.ಕೆ ಯಶಸ್ವಿ Read More »

ಪತಿ-ಪತ್ನಿ ಕಾನ್ಸ್‌ಟೇಬಲ್ ವರ್ಗಾವಣೆ| ಗೃಹ ಸಚಿವರಿಂದ ಸೂಚನೆ

ಸಮಗ್ರ ನ್ಯೂಸ್: ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಈಗ ಅಸ್ತು ಎಂದಿದೆ. ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಪರಮೇಶ್ವರ್​, ಡಿಜಿ&ಐಜಿಪಿ ಅಲೋಕ್‌ ಮೋಹನ್‌ಗೆ ಸೂಚಿಸಿದ್ದರು. ಅರ್ಹ ಪತಿ-ಪತ್ನಿ ಒಂದೇ ಘಟಕ, ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ದೊರಕಿದೆ. ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿತ್ತು. ಕಾನ್ಸ್‌ಟೇಬಲ್ ಈ ವಿಚಾರವಾಗಿ ಮನವಿ ಸಲ್ಲಿಸಿದರು. ಆದರೆ ಭರವಸೆ ಈಡೇರಲಿಲ್ಲ, ನೊಂದ ಕಾನ್ಸ್‌ಟೇಬಲ್ ಗಳು ದಯಾಮರಣ ಕೋರಿ ರಾಷ್ಟ್ರಪತಿ

ಪತಿ-ಪತ್ನಿ ಕಾನ್ಸ್‌ಟೇಬಲ್ ವರ್ಗಾವಣೆ| ಗೃಹ ಸಚಿವರಿಂದ ಸೂಚನೆ Read More »

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್; ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್

ಸಮಗ್ರ ನ್ಯೂಸ್: ಯುವಜನರನ್ನು ಕಾಡುತ್ತಿರುವ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ. ಈ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್ ಇದೆ. ಉದ್ಯೋಗ ಸೃಷ್ಟಿ ಕಡಿಮೆಯಾದಂತೆ ಅಪರಾಧೀಕರಣ, ಕೋಮುವಾದ, ಭಯೋತ್ಪಾದನೆ, ವೇಶ್ಯಾವಾಟಿಕೆ ಮೊದಲಾದವು ಹೆಚ್ಚಾಗುತ್ತದೆ ಎಂದು ಜಸ್ಟೀಸ್ ಎಚ್. ಎನ್. ನಾಗಮೋಹನ ದಾಸ ಹೇಳಿದ್ದಾರೆ. ನಗರದ ಕಲ್ಲಾಪಿನಲ್ಲಿರುವ ಯುನಿಟಿ ಹಾಲ್‌ನಲ್ಲಿ ಫೆ. 25ರಂದು ನಡೆದ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ನ 12ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತಾನಾಡಿದರು. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ

ನಿರುದ್ಯೋಗ ಸಮಸ್ಯೆಗೂ ಕೋಮುವಾದಕ್ಕೂ ಲಿಂಕ್; ಜಸ್ಟೀಸ್ ಎಚ್.ಎನ್. ನಾಗಮೋಹನ ದಾಸ್ Read More »

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಕನ್ಫರ್ಮ್ ಆಗಿದೆ; ಶಾಸಕ ಜಿಟಿ ದೇವೇಗೌಡ

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಕನ್ಫರ್ಮ್ ಆಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಸ್ಥಳೀಯ ನಾಯಕರ ಸಭೆ ನಡೆಸಿ ಚುನಾವಣೆ ಸಿದ್ಧತೆ ಮಾಡುತ್ತಿದ್ದೇವೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭ್ಯರ್ಥಿ ಯಾರೆಂದು ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಿದ್ದಾರೆ. ಟಿಕೆಟ್ ಗಾಗಿ ಸಂಸದೆ ಸುಮಲತಾ ಸಭೆ ವಿಚಾರವಾಗಿ ಮಾತನಾಡಿದ ಅವರು, ಸುಮಲತಾರವರು ಅಧಿಕೃತ ಬಿಜೆಪಿ ಮೆಂಬರ್ ಅಲ್ಲ. ಆದರೂ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ.

ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಕನ್ಫರ್ಮ್ ಆಗಿದೆ; ಶಾಸಕ ಜಿಟಿ ದೇವೇಗೌಡ Read More »

ಉತ್ತರ ಕನ್ನಡ: ಮಂಗನ ಕಾಯಿಲೆಗೆ 2ನೇ ಬಲಿ

ಸಮಗ್ರ ನ್ಯೂಸ್: ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಬಲಿಯಾಗಿದ್ದಾರೆ. 20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲೂಕಿನಲ್ಲಿ KFD ಪ್ರಕರಣಗಳ ಸಂಖ್ಯೆ 43ಕ್ಕೇರಿದೆ. ಮತ್ತೊಂದೆಡೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನಲ್ಲಿ ನುಗ್ಗಿ ಗ್ರಾಮ ಪಂಚಾಯಿತಿಯ ಎರಡು ಹಳ್ಳಿಗಳು ಮಂಗನ ಕಾಯಿಲೆಯ ಕೇಂದ್ರ ಬಿಂದುವಾಗಿವೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಒಟ್ಟು 26 ಪ್ರಕರಣಗಳಿದ್ದು, ಈ

ಉತ್ತರ ಕನ್ನಡ: ಮಂಗನ ಕಾಯಿಲೆಗೆ 2ನೇ ಬಲಿ Read More »

ಗಲೀಜು ಬಟ್ಟೆ ಹಾಕಿದ್ದಾನೆ ಎಂದು ರೈತನ ‘ನಮ್ಮ ಮೆಟ್ರೋ’ಗೆ ಬಿಡದ ಸಿಬ್ಬಂದಿ|ಭಾರೀ ಆಕ್ರೋಶ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ ಯಾವಗಲೂ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತದೆ. ಮೂಟೆ ಹೊತ್ತುಕೊಂಡಿದ್ದ ರೈತನೋರ್ವ ಹಳೆಯ ಬಟ್ಟೆ ಹಾಕಿದ್ದಾನೆ ಎಂಬ ಕಾರಣಕ್ಕೆ ಮೆಟ್ರೋ ಸಿಬ್ಬಂದಿಯನ್ನು ಒಳಗೆ ಬಿಟ್ಟಿಲ್ಲ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು VIPಗಳಿಗೆ ಮಾತ್ರಾ ಮೇಟ್ರೋನಾ. ಬಸವಣ್ಣ ಹುಟ್ಟಿದ ನಾಡಲ್ಲಿ ಸಮಾನತೆ ಎಲ್ಲಿ ಹೋಯಿತು ಎಂದು ಪ್ರಶ್ನಿಸುತ್ತಿದ್ದಾರೆ. ಹಿಂದಿ ಭಾಷೆಯನ್ನಾಡುವ ರೈತನೊಬ್ಬ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ವೇಳೆ ಲಗೇಜ್

ಗಲೀಜು ಬಟ್ಟೆ ಹಾಕಿದ್ದಾನೆ ಎಂದು ರೈತನ ‘ನಮ್ಮ ಮೆಟ್ರೋ’ಗೆ ಬಿಡದ ಸಿಬ್ಬಂದಿ|ಭಾರೀ ಆಕ್ರೋಶ Read More »