ರಾಜ್ಯ

ಕಾಪು: ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಿಸಿದ ಮೀನುಗಾರರು

ಸಮಗ್ರ ನ್ಯೂಸ್: ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕಾಪು ತಾಲೂಕಿನ ಕಡಲ ತೀರದಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್(31) ರಕ್ಷಿಸಲ್ಪಟ್ಟ ಯುವಕ. ಸಾಂಪ್ರದಾಯಿಕ ಮೀ‌ನುಗಾರಿಕೆಗಾಗಿ ಬಲೆ ಇಡಲೆಂದು ಬಲೆಯೊಂದಿಗೆ ತೆರಳಿದ್ದ ಸಚಿನ್ ಸಮುದ್ರದಲ್ಲಿ ಮುಳುಗಿ, ಸಮುದ್ರ ಪಾಲಾಗುವ ಭೀತಿಯಲ್ಲಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಬೊಬ್ಬೆ ಹಾಕಿದರು. ಈ ವೇಳೆ ಮೀನುಗಾರರಾದ ಶರ್ಮಾ, ಹರೀಶ್ ಕರ್ಕೇರ ಅವರು ಸಮುದ್ರಕ್ಕೆ ಇಳಿದು ಜೀವದ ಹಂಗು ತೊರೆದು ಯುವಕನನ್ನು ರಕ್ಷಿಸಿದ್ದಾರೆ. ಯುವಕನನ್ನು ರಕ್ಷಿಸಿ ಮೇಲಕ್ಕೆ ಕರೆತರುವಾಗ […]

ಕಾಪು: ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಿಸಿದ ಮೀನುಗಾರರು Read More »

ಸೆ.6: ಎತ್ತಿನಹೊಳೆ ಏತ ಕಾಮಗಾರಿ ಯೋಜನೆ ಉದ್ಘಾಟನೆ

ಸಮಗ್ರ ನ್ಯೂಸ್: ಬಯಲು ಸೀಮೆ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್ ನೀಡಿದೆ.ಕುಡಿಯುವ ನೀರಿನ ತೀವ್ರ ಆಭಾವ ಎದುರಿಸುತ್ತಿರುವ ರಾಜ್ಯದ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವ ಹಾಗೂ ಅಂತರ್ಜಲ ಮರುಪೂರಣಕ್ಕಾಗಿ ಕೈಗೆತ್ತಿಕೊಂಡಿರುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದ್ದು, ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು

ಸೆ.6: ಎತ್ತಿನಹೊಳೆ ಏತ ಕಾಮಗಾರಿ ಯೋಜನೆ ಉದ್ಘಾಟನೆ Read More »

ಸಿಎಂ ಸಿದ್ದರಾಮಯ್ಯ ಭವಿಷ್ಯ ಇಂದು ನಿರ್ಧಾರ| ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಸಮಗ್ರ ನ್ಯೂಸ್: ಸಿ.ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಲಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು

ಸಿಎಂ ಸಿದ್ದರಾಮಯ್ಯ ಭವಿಷ್ಯ ಇಂದು ನಿರ್ಧಾರ| ಹೈಕೋರ್ಟ್ ನತ್ತ ಎಲ್ಲರ ಚಿತ್ತ Read More »

ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಕಾಂಗ್ರೆಸ್ ಸರ್ಕಾರದಿಂದ ಗೃಹ ಲಕ್ಷ್ಮೀಯರಿಗೆ ಬಿಗ್ ಆಫರ್..!

ಸಮಗ್ರ ನ್ಯೂಸ್: ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ರೂಪಾಯಿ ಪ್ರತಿ ಮನೆಯ ಯಜಮಾನಿಗೂ ಬರುತ್ತಿವೆ. ಈ ಯೋಜನೆ ಪ್ರಾರಂಭವಾಗಿ ಇದೀಗ ಒಂದು ವರ್ಷ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಮಗೆ ಮತ್ತೊಂದು ಭರ್ಜರಿ ಆಫರ್ ಕೊಡುತ್ತಿದೆ. ಇದನ್ನು ಖುದ್ದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಹೇಳಿದ್ದಾರೆ. ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಕಾಂಗ್ರೆಸ್ ಸರ್ಕಾರದಿಂದ ಗೃಹ ಲಕ್ಷ್ಮೀಯರಿಗೆ ಬಿಗ್ ಆಫರ್..! Read More »

ಸಚಿವ ಆಗಿ ಆಗಿ ದಣಿದಿದ್ದೇನೆ, ಇನ್ನು ಸಿಎಂ ಆಗಬೇಕಷ್ಟೆ: ಆರ್.ವಿ ದೇಶಪಾಂಡೆ

ಸಮಗ್ರ ನ್ಯೂಸ್ : ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂಗೆ ಕಾನೂನು ಸಂಕಷ್ಟ ಎದುರಾಗಿದು ಇದರಿಂದ ಸಿಎಂ ಕುರ್ಚಿಗೂ ಕಂಟಕ ಎದುರಾಗಿದೆ. ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೆ ಸಿಎಂ ಕುರ್ಚಿಗೆ ಈಗಾಗಲೇ ಹಲವರು ಆಸಕ್ತಿ ತೋರಿಸಿದು, ಆದರಲ್ಲಿ ಮೈಸೂರಲ್ಲೆ ನಿಂತು ಕಾಂಗ್ರೆಸ್ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಅಷ್ಟೆ ಅಲ್ಲದೆ ಸಿಎಂ ರಾಜೀನಾಮೆ ಕೊಡಬೇಕು ಎಂದು ಪರೋಕ್ಷವಾಗಿ ಹೇಳಿದ್ದಾರೆ. ಆರ್.ವಿ ದೇಶಪಾಂಡೆ ಅವರಿಗೆ ಸಚಿವ ಸ್ಥಾನ‌ ಕೈ

ಸಚಿವ ಆಗಿ ಆಗಿ ದಣಿದಿದ್ದೇನೆ, ಇನ್ನು ಸಿಎಂ ಆಗಬೇಕಷ್ಟೆ: ಆರ್.ವಿ ದೇಶಪಾಂಡೆ Read More »

“ಗ್ಯಾರಂಟಿ” ಯೋಜನೆಗಳು ಶ್ರೀಮಂತರಿಗಲ್ಲ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: “ಗ್ಯಾರಂಟಿ’ ಸಹಿತ ಸರಕಾರದ ಯೋಜನೆಗಳು ಬಡವರು, ಶೋಷಿತರ ಉದ್ಧಾರಕ್ಕಾಗಿಯೇ ಹೊರತು ಶ್ರೀಮಂತರಿಗಲ್ಲ. ಗ್ಯಾರಂಟಿ ಯೋಜನೆಗಳನ್ನು ಶ್ರೀಮಂತರು ಪಡೆಯುತ್ತಿದ್ದು, ಅದಕ್ಕೆ ನಿಯಂತ್ರಣ ಹಾಕುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಮಂಗಳೂರಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾರಿಗೆ ನಿಜಕ್ಕೂ ಅರ್ಹತೆ ಹಾಗೂ ಅಗತ್ಯವಿದೆಯೋ ಅವರಿಗೆ ಗ್ಯಾರಂಟಿ ಯೋಜನೆ ತಲುಪಬೇಕು. ಅಗತ್ಯವಿಲ್ಲದವರಿಗೆ ಕೊಟ್ಟು ಪ್ರಯೋಜನವಿಲ್ಲ ಎಂದರು. ದಾವಣಗೆರೆಯಲ್ಲಿ ಕಾಲರಾ ಪ್ರಕರಣದ

“ಗ್ಯಾರಂಟಿ” ಯೋಜನೆಗಳು ಶ್ರೀಮಂತರಿಗಲ್ಲ – ಸಚಿವ ದಿನೇಶ್ ಗುಂಡೂರಾವ್ Read More »

ಅಕ್ರಮ – ಸಕ್ರಮ ಅರ್ಜಿದಾರರಿಗೆ ಗುಡ್ ನ್ಯೂಸ್ ನೀಡಿದ ಕಂದಾಯ ಸಚಿವರು| ಸೆ.2ರಿಂದಲೇ ಪೋಡಿ ದುರಸ್ತಿಗೆ ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಅಕ್ರಮ ಸಕ್ರಮ ಅರ್ಜಿದಾರರಿಗೆ ಕಂದಾಯ ಸಚಿವರಿಂದ ಗುಡ್ ನ್ಯೂಸ್ ಸಿಕ್ಕಿದೆ. ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ

ಅಕ್ರಮ – ಸಕ್ರಮ ಅರ್ಜಿದಾರರಿಗೆ ಗುಡ್ ನ್ಯೂಸ್ ನೀಡಿದ ಕಂದಾಯ ಸಚಿವರು| ಸೆ.2ರಿಂದಲೇ ಪೋಡಿ ದುರಸ್ತಿಗೆ ಸೂಚನೆ Read More »

ಶಾಪಿಂಗ್ ಗೆ ತೆರಳಿದ್ದ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಪತ್ನಿ ಕುಸಿದು ಬಿದ್ದು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಶಾಪಿಂಗ್ ಗೆ ತೆರಳಿದ್ದ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಕುಸಿದು ಬಿದ್ದು, ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಇರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಕುಸಿದು ಬಿದ್ದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಂತ ಅವರನ್ನು

ಶಾಪಿಂಗ್ ಗೆ ತೆರಳಿದ್ದ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಪತ್ನಿ ಕುಸಿದು ಬಿದ್ದು ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

KSRTC ಗೆ ಒಲಿದ 16 ರಾಷ್ಟ್ರಮಟ್ಟದ ಪ್ರಶಸ್ತಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ವು ಒಂದಿಲ್ಲೊಂದು ಸಾಧನೆಯ ಮೂಲಕ ಪ್ರಶಸ್ತಿಯನ್ನು ಮೂಡಿಗೇರಿಸಿಕೊಳ್ಳುತ್ತಲೇ ಇರುತ್ತದೆ. ಅದರಂತೆ ಇದೀಗ ಕೆಎಸ್​ಆರ್​ಟಿಸಿ ಗೆ ರಾಷ್ಟ್ರ ಮಟ್ಟದ 8 ವೀಡಿಯಾ (ViDEA), 5 ಎಮ್ಕ್ಯೂಬ್(mCUBE) ಮತ್ತು 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಹಾಗೂ 1 ಸ್ಕೋಚ್ ಪ್ರಶಸ್ತಿಗಳು ಲಭಿಸಿದೆ. ಈ ಕೆಳಗಿನ ವಿಭಾಗಗಳಲ್ಲಿ ವೀಡಿಯಾ ಪ್ರಶಸ್ತಿ ಪಡೆದುಕೊಂಡ ನಿಗಮ ೧) ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.೨) ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ

KSRTC ಗೆ ಒಲಿದ 16 ರಾಷ್ಟ್ರಮಟ್ಟದ ಪ್ರಶಸ್ತಿ Read More »

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾಷ್ಟ್ರೀಯ ತನಿಖಾ ದಳ (ಎನ್‌ ಐಎ) ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಭಯೋತ್ಪಾದಕ ತಮಿಳುನಾಡು ಹಿಜ್ಬ್-ಉತ್-ತಹ್ರೀರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ವರದಿ ತಿಳಿಸಿದೆ. ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ, ಶಂಕಿತ ಭಯೋತ್ಪಾದಕ ನಿನ್ನೆ ಬೆಳಿಗ್ಗೆ 11.45 ಕ್ಕೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಪರಾರಿಯಾಗಲು ಯೋಜಿಸಿದ್ದ.‌ ಈ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ Read More »