ರಾಜ್ಯ

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಎನ್.ಎಸ್.ಭೋಸರಾಜು ಚಾಲನೆ

ಸಮಗ್ರ ನ್ಯೂಸ್: ಆಕರ್ಷಣೀಯ ಹಾಗೂ ಗಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ ಅವರು ಇಂದು (ಜ. 26) ಚಾಲನೆ ನೀಡಿದರು. ರಾಜಾಸೀಟು ಉದ್ಯಾನವನದಲ್ಲಿ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯ ಸೇರಿದಂತೆ ಹಲವು ಫಲಪುಷ್ಪ ಪ್ರದರ್ಶನಗಳು ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಹೇಳಿದರು. ರಾಜಾಸೀಟನ್ನು

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಎನ್.ಎಸ್.ಭೋಸರಾಜು ಚಾಲನೆ Read More »

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ;ಸಿಎಂ

ಸಮಗ್ರ ನ್ಯೂಸ್: ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ.ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ – ಮಾನವ ಸಂಘರ್ಷ ನಿಲ್ಲಲಿದೆ. ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ;ಸಿಎಂ Read More »

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆಶಿಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಸಮಗ್ರ ನ್ಯೂಸ್: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮೊದಲೇ ಅವರು ಡಿ.ಕೆ ಶಿವಕುಮಾರ್​​ಗೆ ಎಚ್ಚರಿಕೆ ನೀಡಿದ್ದಾರೆ. ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವಾಗ ಯೋಚಿಸಬೇಕು. ಅವರ ಹಿನ್ನೆಲೆ, ಸಿದ್ಧಾಂತ ಏನೆಂದು ಅರಿತುಕೊಳ್ಳಬೇಕು. ಪಕ್ಷಕ್ಕೆ ನಿಷ್ಠಾವಂತರು ಮಾತ್ರ ಬರಬೇಕು. ಹೀಗೆ ಬಂದರು, ಹಾಗೆ ಹೋದರು

ಶೆಟ್ಟರ್ ಪಕ್ಷ ತೊರೆದಿದ್ದಕ್ಕೆ ಡಿಕೆಶಿಗೆ ಎಚ್ಚರಿಕೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ Read More »

8 ಡ್ರೋನ್​ ನೀಡುವಂತೆ ಒಪ್ಪಂದ ಮಾಡಿಕೊಂಡು ಅಡ್ವಾನ್ಸ್ ನೀಡಿದ್ದ ಸಿಇಓ… ಪ್ರತಾಪ್ ವಿರುದ್ಧ ಆರೋಪ

ಸಮಗ್ರ ನ್ಯೂಸ್: ಡ್ರೋನ್ ಪ್ರತಾಪ್ ಅಂತ ಫೇಮಸ್ ಆಗಿರುವ ಪ್ರತಾಪ್ ತಾವು ವಿದೇಶಗಳಲ್ಲಿ ಭಾರಿ ಗೌರವ, ಆದರಗಳನ್ನು ಪಡೆದಿದ್ದಾಗಿ ಸುಳ್ಳು ಹೇಳಿ ತೀವ್ರ ಟ್ರೋಲ್​ಗೆ ಒಳಗಾಗಿದ್ದರು. ಅದಾದ ಬಳಿಕ ತಾವೇ ಒಂದು ಡ್ರೋನ್ ಸಂಸ್ಥೆ ಪ್ರಾರಂಭಿಸಿ, ರೈತರಿಗೆ ಅನುಕೂಲಕರವಾಗುವಂತೆ ಡ್ರೋನ್ ನಿರ್ಮಿಸಿ ಮಾರಾಟ ಮಾಡುತ್ತಿರುವುದಾಗಿ ಹೇಳಿ ಹಲವು ವಿಡಿಯೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಪ್ರತಾಪ್, ತಮ್ಮ ಡ್ರೋನ್​ಗಳನ್ನು ಮಾರಾಟ ಮಾಡಿದ್ದ ಸಂಸ್ಥೆಯ ಸಿಇಓ ಪ್ರತಾಪ್ ವಿರುದ್ಧ ಆರೋಪ ಮಾಡಿದ್ದಾರೆ. ಪುಣೆಯ ಕ್ಯಾಸ್ಪರ್ ಡ್ರೊನೊಟಿಕ್ಸ್ ಹೆಸರಿನ

8 ಡ್ರೋನ್​ ನೀಡುವಂತೆ ಒಪ್ಪಂದ ಮಾಡಿಕೊಂಡು ಅಡ್ವಾನ್ಸ್ ನೀಡಿದ್ದ ಸಿಇಓ… ಪ್ರತಾಪ್ ವಿರುದ್ಧ ಆರೋಪ Read More »

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ| ಮೂವರು ಯುವಕರು ಸಾವು

ಸಮಗ್ರ ನ್ಯೂಸ್: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚೌಕನಗಾಳಾಯದಲ್ಲಿ ನಡೆದಿದೆ. ಮೃತರು ದಾಂಡೇಲಿ ನಗರದ ರಾಕೇಶ್​ ಮಹಾದೇವಪ್ಪ ಬಡಿಗೇರ, ರಿತೇಶ್ ಸುಬ್ರಹ್ಮಣ್ಯ ನಾಯರ್ ಹಾಗೂ ಕೃಷ್ಣ ವಣ್ಣುರಾಯ ಹರಿಜನ ಎಂದು ತಿಳಿದು ಬಂದಿದೆ. ಅತಿವೇಗದ ಚಾಲನೆಯಿಂದ ಈ ದುರ್ಘಟನೆ ಸಂಭವಿಸಿದ್ದು, ಜೋಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ| ಮೂವರು ಯುವಕರು ಸಾವು Read More »

ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಸಮಗ್ರ ನ್ಯೂಸ್: ನಾಳೆ 75ನೇ ಗಣರಾಜ್ಯೋತ್ಸವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತದೆ. ಈ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ವಿಶಿಷ್ಟ ಸೇವೆಗಾಗಿ ಎಡಿಜಿಪಿ ಸೌಮೇಂದ್ರ ಮುಖರ್ಜಿ ಹಾಗೂ ಡಿವೈಎಸ್​ಪಿ ಸುಧೀರ್ ಮಹದೇವ್ ಹೆಗ್ಡೆಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ. ಇನ್ನೂ ಗಮನಾರ್ಹ ಸೇವೆಯನ್ನು ಗುರುತಿಸಿ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. ಐಜಿಪಿ ಪ್ರವೀಣ್ ಮಧುಕರ್ ಪವಾರ್, ಐಜಿಪಿ ರಮಣ್ ಗುಪ್ತಾ, ಎಎಸ್​​ಪಿ ಅನಿಲ್​​ಕುಮಾರ್.ಎಸ್, ಎಸಿಪಿ ಶಿವಗಂಗೆ ಪುಟ್ಟರಂಗಪ್ಪ, ಡಿವೈಎಸ್​​ಪಿ

ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ Read More »

ಬಿ.ಎಸ್ ವೈ ಆಪರೇಷನ್ ಸಕ್ಸಸ್| ಶೆಟ್ಟರ್ ಮರಳಿ ಬಿಜೆಪಿಗೆ ವಾಪಾಸ್

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ್ದ ಜಗದೀಶ್ ಶೆಟ್ಟರ್ ಇದೀಗ ಮರಳಿ ಗೂಡಿಗೆ ಸೇರಿದ್ದು, ಬಿಎಸ್ವೈ ನೇತೃತ್ವದಲ್ಲಿ ಮತ್ತೆ ವಾಪಾಸ್ ಬಿಜೆಪಿಗೆ ಬಂದಿದ್ದಾರೆ. ಬಿಜೆಪಿಗೆ ಸೇರಿದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇದು ಸಂತಸದ ಸಂಗತಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದಾಗಿನಿಂದ ಕಾರ್ಯಕರ್ತರು, ಮುಖಂಡರು ಎಲ್ಲರ ಅಪೇಕ್ಷೆ ಇತ್ತು ವಾಪಾಸ್ ಬಿಜೆಪಿಗೆ ಬರಬೇಕು ಎಂಬುದು. ನಮ್ಮ ಹೈಕಮಾಂಡ್ ನಾಯಕರಿಗೂ ಆ ಅಪೇಕ್ಷೆ ಇತ್ತು.

ಬಿ.ಎಸ್ ವೈ ಆಪರೇಷನ್ ಸಕ್ಸಸ್| ಶೆಟ್ಟರ್ ಮರಳಿ ಬಿಜೆಪಿಗೆ ವಾಪಾಸ್ Read More »

ಹನಿಮೂನ್ ಗೆ ಹೋಗಬೇಕಿದ್ದ ದಂಪತಿ‌ ಬೀಚ್ ಸ್ವಚ್ಛ ಮಾಡಿದ್ರು| ಅವರ ಕೆಲಸಕ್ಕೆ ಸಿಕ್ತು ಭಾರೀ ಗೌರವ| ಏನದು ಕುಂದಾಪುರದ ಈ ಜೋಡಿ ಕಥೆ!?

ಸಮಗ್ರ ನ್ಯೂಸ್: ಮದುವೆಯಾದ ಬಳಿಕ ಹನಿಮೂನ್‌ಗೆ ಹೋಗಬೇಕಿದ್ದ ನವದಂಪತಿ ತಮ್ಮೂರಿನ ಬೀಚ್‌ ಸ್ವಚ್ಛಗೊಳಿಸಿ ಮಾದರಿಯಾಗಿದ್ದರು. ಇವರ ಈ ಕಾರ್ಯಕ್ಕೆ ಮೆಚ್ಚಿದ ಪ್ರಧಾನಿ ನರೆಂಂದ್ರ ಮೋದಿಯವರು ಮನ್‌ ಕಿ ಬಾತ್‌ನಲ್ಲಿ ಉಲ್ಲೇಖಿ ಶ್ಲಾಘಿಸಿದ್ದರು. ಇದೀಗ ಈ ದಂಪತಿಗೆ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಅಪರೂಪದ ಆಹ್ವಾನ ಸಿಕ್ಕಿದೆ. ನವೆಂಬರ್ 2020ರಲ್ಲಿ ಮದುವೆಯಾದ ಬೈಂದೂರಿನ ಅನುದೀಪ್‌ ಮತ್ತು ಮಿನುಷಾ ಅವರು ಹನಿಮೂನ್‌ಗೆ ದೂರದ ಊರುಗಳಿಗೆ ತೆರಳುವ ಬದಲು ಸ್ಥಳೀಯ ಸೋಮೇಶ್ವರ ಬೀಚ್‌ ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ದಂಪತಿಯ ಈ ಕಾರ್ಯವು ಪ್ರಧಾನಿ

ಹನಿಮೂನ್ ಗೆ ಹೋಗಬೇಕಿದ್ದ ದಂಪತಿ‌ ಬೀಚ್ ಸ್ವಚ್ಛ ಮಾಡಿದ್ರು| ಅವರ ಕೆಲಸಕ್ಕೆ ಸಿಕ್ತು ಭಾರೀ ಗೌರವ| ಏನದು ಕುಂದಾಪುರದ ಈ ಜೋಡಿ ಕಥೆ!? Read More »

ಹಳೆ ಪಿಂಚಣಿ‌ ಯೋಜನೆ ಮರುಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಸರಕಾರಿ ನೌಕರರ ‘ಒಪಿಎಸ್‌’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಮಣಿದಿದೆ. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ.‌ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ. 2006ರ ಏಪ್ರಿಲ್​ಗೆ

ಹಳೆ ಪಿಂಚಣಿ‌ ಯೋಜನೆ ಮರುಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ Read More »

ಫೆ.8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ

ಸಮಗ್ರ ನ್ಯೂಸ್: ಫೆ.08 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಿಎಂ ಅವರು ‘ವ್ಯವಸ್ಥಿತ, ಶಿಸ್ತುಬದ್ದ, ಪರಿಣಾಮಕಾರಿ ಜನಸ್ಪಂದನೆಗೆ ಸಕಲ ತಯಾರಿಯ ಜೊತೆಗೆ ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಗಮನ ಹರಿಸಿದ್ದಾರೆ. ಇನ್ನೂ ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಉಚಿತ ಬಸ್‌ ವ್ಯವಸ್ಥೆ ಮಾಡಲು ಸೂಚಿಸಿದ್ದು, ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪನೆ ಮಾಡಲಾಗುವುದು. ಜೊತೆಗೆ

ಫೆ.8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ Read More »