ರಾಜ್ಯ

ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ಶಾಲೆಗೆ ರಜೆ ಮಾಡಿದರೆ 1000 ರೂ. ದಂಡ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಡೆಯುವ ಜನವರಿ 22ರಂದು ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ. ರಾಜ್ಯ ಸರ್ಕಾರ ಕೂಡ ರಜೆ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಆದರೆ,ಇದರ ಬಗ್ಗೆ ರಾಜ್ಯ ಸರ್ಕಾರ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಆದರೆ ಚಿಕ್ಕಮಗಳೂರಿನ ಶಾಲೆಯೊಂದರಲ್ಲಿ ರಾಮಮಂದಿರ ಕಾರ್ಯಕ್ರಮದ ದಿನ ಶಾಲೆಗೆ ರಜೆ ಹಾಕಿದರೆ ದಂಡ ವಿಧಿಸಲಾಗುವುದು. ಸೋಮವಾರ ಶಾಲೆಗೆ ರಜೆ ಮಾಡಿದರೆ 1000 ರೂ. ದಂಡ ತೆರಬೇಕಾಗುತ್ತದೆ ಎಂದು ಚಿಕ್ಕಮಗಳೂರು ನಗರದ ಸೇಂಟ್​​​ ಜೋಸೆಫ್ ಶಾಲಾ

ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ಶಾಲೆಗೆ ರಜೆ ಮಾಡಿದರೆ 1000 ರೂ. ದಂಡ Read More »

ಕೊಡಗು: ಜ.25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ|ಕಾನೂನು ಕಾಲೇಜು ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲು ಡಾ.ಎನ್.ವಿ.ಪ್ರಸಾದ್ ಸಲಹೆ

ಸಮಗ್ರ ನ್ಯೂಸ್: ಜ 25ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಕೊಡಗು ಜಿಲ್ಲೆಗೆ ಅತ್ಯಗತ್ಯವಾಗಿ ಬೇಕಿರುವ ಯೋಜನೆಗಳ ಪ್ರಸ್ತಾವನೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾದ ಡಾ.ಎನ್.ವಿ.ಪ್ರಸಾದ್ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕಾನೂನು ಕಾಲೇಜು ಇಲ್ಲದಿರುವುದರಿಂದ ಕಾನೂನು ಕಾಲೇಜು ಆರಂಭ ಸೇರಿದಂತೆ

ಕೊಡಗು: ಜ.25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ|ಕಾನೂನು ಕಾಲೇಜು ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲು ಡಾ.ಎನ್.ವಿ.ಪ್ರಸಾದ್ ಸಲಹೆ Read More »

ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಕೊಡಗಿನ ಜಲಧಾರೆ ಯಾವುದು ಗೊತ್ತೇ?

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಉದ್ಘಾಟನೆಗೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ಈ ಹೊತ್ತಿನಲ್ಲಿ ದೇಶದಾದ್ಯಂತ ರಾಮನ ವಿಶೇಷತೆ ಮತ್ತು ಆತ ಬಿಟ್ಟು ಹೋದ ಹೆಜ್ಜೆಗುರುತುಗಳನ್ನು ಪರಿಚಯಿಸುವ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಕೊಡಗು ಜಿಲ್ಲೆಗೂ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ ಎಂದು ತಿಳಿದುಬಂದಿದೆ.ವನವಾಸದ ಕಾಲದಲ್ಲಿ ಸೀತೆಯನ್ನು ಅರಸುತ್ತಾ ಕೊಡಗಿಗೆ ಲಕ್ಷ್ಮಣ ಸಹ ಶ್ರೀರಾಮನ ಜೊತೆಗೆ ಬಂದಿದ್ದ ಎಂಬ ಐತಿಹ್ಯ ಇದೆ. ಅಷ್ಟೇ ಅಲ್ಲದೇ ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಜಲವೇ ಇವತ್ತು ಕೊಡಗಿನಿಂದ

ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಕೊಡಗಿನ ಜಲಧಾರೆ ಯಾವುದು ಗೊತ್ತೇ? Read More »

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್ |ಬಿಬಿಎಂಪಿಯಿಂದ ಅಂಗಡಿಗಳ ಮಾಲೀಕರಿಗೆ ನೋಟಿಸ್

ಸಮಗ್ರ ನ್ಯೂಸ್:ಸಿಲಿಕಾನ್ ಸಿಟಿಯಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ಬಿಬಿಎಂಪಿ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತಿದೆ. ಫೆಬ್ರವರಿ 28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್ ಹಿನ್ನಲೆ ಎಚ್ಚೆತ್ತುಕೊಂಡ ಪಾಲಿಕೆಯಿಂದ 28 ರೊಳಗಾಗಿ ಕನ್ನಡ ಬೋರ್ಡ್ ಅಳವಡಿಕೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಗಳು, ವ್ಯಾಪಾರಸ್ಥರಿಗೆ ನೋಟಿಸ್ ನೀಡುತ್ತಿದೆ. ಈ ವರೆಗೆ ಒಟ್ಟು 34262 ಸಾವಿರಕ್ಕೂ ಅಧಿಕ ನೋಟಿಸ್ ನೀಡಲಾಗಿದೆ. ಬೊಮ್ಮನಹಳ್ಳಿ – 6762 ಯಲಹಂಕ

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್ |ಬಿಬಿಎಂಪಿಯಿಂದ ಅಂಗಡಿಗಳ ಮಾಲೀಕರಿಗೆ ನೋಟಿಸ್ Read More »

ಚಂದ್ರನನ್ನು ನಾಚಿಸುವ ಬಾಲರಾಮನ ವಿಗ್ರಹದ ವಿಶೇಷತೆ ಏನು?| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಬಾಲರಾಮನ ಸಂಪೂರ್ಣ ವಿಗ್ರಹವನ್ನು ತೋರಿಸುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಇದೀಗ ಈ ಫೋಟೋ ವೈರಲ್‌ ಆಗುತ್ತಿದೆ. ಬಾಲರಾಮನ ವಿಗ್ರಹದ ಫೋಟೋ ಹೊರಬೀಳುತ್ತಿದ್ದಂತೆಯೇ ರಾಮಭಕ್ತರು ತಮ್ಮ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡು ಜೈ ಶ್ರೀ ರಾಮ್‌ ಎಂದು ಬರೆದುಕೊಂಡರು. ಹಾಗಿದ್ರೆ ಈ ವಿಗ್ರಹದಲ್ಲಿ ಏನೇನು ವಿಶೇಷತೆಗಳು ಇವೆ ಎಂಬುದನ್ನು ನೋಡೋಣ. ಬಾಲರಾಮನ ವಿಗ್ರಹದ ವಿಶೇಷತೆ?:51 ಇಂದು ಎತ್ತರವಿರುವ ಮಂದಸ್ಮಿತ ಮುಖ ಹೊಂದಿರುವ ರಾಮನ ಮೂರ್ತಿಯು ಬಲಗೈಯಲ್ಲಿ ಬಾಣ, ಎಡಗೈಯಲ್ಲಿ ಬಿಲ್ಲು ಹಿಡಿದಿರುವ ಭಂಗಿಯಲ್ಲಿದೆ.

ಚಂದ್ರನನ್ನು ನಾಚಿಸುವ ಬಾಲರಾಮನ ವಿಗ್ರಹದ ವಿಶೇಷತೆ ಏನು?| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ದೇವರಕೊಲ್ಲಿ: ಭೀಕರ ರಸ್ತೆ ಅಪಘಾತ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ ಓರ್ವ ಗಂಭೀರ ಗಾಯಗೊಂಡ ಘಟನೆಮಾಣಿ-ಮೈಸೂರು ಹೆದ್ದಾರಿಯ ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಬೈಕ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ಬರುತ್ತಿದ್ದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಸುಳ್ಯ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಮಂಗಳೂರಿಗೆ ಕೊಂಡೊಯ್ಯಲಾಗಿದೆ.ಇನ್ನೊರ್ವ ಗಾಯಾಳನ್ನು ಕೆವಿಜಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.

ದೇವರಕೊಲ್ಲಿ: ಭೀಕರ ರಸ್ತೆ ಅಪಘಾತ Read More »

ಕಪಿಲಾ ನದಿಯಲ್ಲಿ ಕೊಚ್ಚಿ ಹೋದ ಅಯ್ಯಪ್ಪ ಮಾಲಾಧಾರಿಗಳು

ಸಮಗ್ರ ನ್ಯೂಸ್:ನಂಜನಗೂಡು ಕಪಿಲಾ ನದಿಯಲ್ಲಿ ಮೂವರು ಅಯ್ಯಪ್ಪ ಮಾಲಾಧಾರಿಗಳ ಕೊಚ್ಚಿಹೋದ ಘಟನೆ ನಡೆದಿದೆ. ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗವಿರಂಗ, ರಾಕೇಶ್ (19), ಅಪ್ಪು (16) ನೀರು ಪಾಲಾಗಿದ್ದರು. ಇದೀಗ ಗವಿರಂಗ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬಾಲಕ ಅಪ್ಪು ಮೃತ ದೇಹ ಪತ್ತೆಯಾಗಿದೆ. ಇವರನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಟು ಜನ ಅಯ್ಯಪ್ಪ ಮಾಲಾಧಾರಿಗಳು ಕಳೆದ ಮೂರು ದಿನಗಳ ಹಿಂದೆ

ಕಪಿಲಾ ನದಿಯಲ್ಲಿ ಕೊಚ್ಚಿ ಹೋದ ಅಯ್ಯಪ್ಪ ಮಾಲಾಧಾರಿಗಳು Read More »

ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಮೈಸೂರು ಒಡೆಯರಿಗೆ ಆಹ್ವಾನ| ಜ.21ರ ಅಯೋಧ್ಯೆಗೆ ಒಡೆಯರ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಇನ್ನು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಗಣ್ಯಾತಿ ಗಣ್ಯರನ್ನು ಆಹ್ವಾನಿಸಲಾಗಿದೆ. ಹಾಗೆಯೇ ಈ ಕಾರ್ಯಕ್ರಮಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 21 ರಂದು ಅಯೋಧ್ಯೆಗೆ ತೆರಳುತ್ತಿದ್ದಾರೆ. ಈ ಬಗ್ಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ರಾಮಲಲ್ಲಾ ಪ್ರಾಣ

ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಮೈಸೂರು ಒಡೆಯರಿಗೆ ಆಹ್ವಾನ| ಜ.21ರ ಅಯೋಧ್ಯೆಗೆ ಒಡೆಯರ್ Read More »

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ:ಕೆ.ಜಿ. ಬೊಪಯ್ಯ

ಸಮಗ್ರ ನ್ಯೂಸ್: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕೊಡಗು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ತಾನು ಯಾವುದೇ ರೀತಿಯ ಪ್ರಯತ್ನ ಪಟ್ಟಿಲ್ಲ ಹಾಗೆ ಬೇಡಿಕೆಯನ್ನು ಕೂಡ ವರಿಷ್ಠರ ಮುಂದೆ ಇಟ್ಟಿಲ್ಲ ಎಂದು ಮಾಜಿ ವಿಧಾನಸಭಾ ಅಧ್ಯಕ್ಷರಾದ ಕೆ.ಜಿ ಬೊಪಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಕೆಲವು ಮಾಧ್ಯಮದಲ್ಲಿ ಈ ಹಿಂದೆ ಬಂದ ವರದಿಯ ಬಗ್ಗೆ ಮಾತನಾಡಿದ ಅವರು ಪಕ್ಷದ ವರಿಷ್ಠರು ತೀರ್ಮಾನಿಸಿ ಯಾರೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಅವರ ಪರವಾಗಿ, ಪಕ್ಷದ ಪರವಾಗಿ ಕ್ಷೇತ್ರದಾದ್ಯಂತ ಓಡಾಡಿ ಮತ ಕೇಳುತ್ತೇವೆ ಹೊರತು

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ:ಕೆ.ಜಿ. ಬೊಪಯ್ಯ Read More »

ಮಡಿಕೇರಿ:ನಗರಸಭೆಯಿಂದ ರಾಜಾಸೀಟ್ ಎದುರಲ್ಲೇ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿ|ತೀವ್ರ ಪ್ರತಿರೋಧ ರಾತ್ರಿ ನಗರಸಭೆ ಮುಂಭಾಗ ಪ್ರತಿಭಟನೆ

ಸಮಗ್ರ ನ್ಯೂಸ್: ಕೊಡಗಿನ ಪ್ರಮುಖ ಪ್ರವಾಸಿ ಕೇಂದ್ರ ರಾಜ ಸೀಟ್ ಮುಂಭಾಗ ಎಗ್ಗಿಲ್ಲದೆ ಆಹಾರ ಪದಾರ್ಥಗಳನ್ನು ಹಾಗೂ ಅಲಂಕಾರಿಕ ವಸ್ತುಗಳನ್ನು ಇಟ್ಟು ವ್ಯಾಪಾರ ನಡೆಸುತ್ತಿದ್ದು ಇದರಿಂದ ಪ್ರವಾಸಿಗರಿಗೆ ಹಾಗೂ ರಾಜ ಸೀಟ್ ಮುಂಭಾಗದ ರಸ್ತೆಯಲ್ಲಿ ಸಂಚರಿಸುವವರೆಗೆ ತೀವ್ರ ಸ್ವರೂಪದ ತೊಂದರೆ ಹಾಗೂ ಅಡಚಣೆ ಉಂಟಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಅನ್ವಯ ಹಿಂದಿನ ಜಿಲ್ಲಾಧಿಕಾರಿ ಸತೀಶ್ ರಾಜಾಸೀಟ್ ದ್ವಾರದಲ್ಲೇ ಬೀದಿ ಬದಿ ವ್ಯಾಪಾರದ ಹೆಸರಲ್ಲಿ ಗಾಡಿಗಳನ್ನಿಟ್ಟುಕೊಂಡು ಸಾರ್ವಜನಿಕರ ಓಡಾಟಕ್ಕೆ ತೊಂದರೆಯುಂಟು ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು

ಮಡಿಕೇರಿ:ನಗರಸಭೆಯಿಂದ ರಾಜಾಸೀಟ್ ಎದುರಲ್ಲೇ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿ|ತೀವ್ರ ಪ್ರತಿರೋಧ ರಾತ್ರಿ ನಗರಸಭೆ ಮುಂಭಾಗ ಪ್ರತಿಭಟನೆ Read More »