ರಾಜ್ಯ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ|20 ಕಾರ್ಮಿಕರಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು, ಇಬ್ಬರೂ ಕಾರ್ಮಿಕರು ದುರ್ಮರಣ ಹಾಗೂ 20 ಜನ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಸೆಂಟ್ ಆಗ್ನೇಸ್ ಎಂಬ ಶಾಲೆಯ ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ|20 ಕಾರ್ಮಿಕರಿಗೆ ಗಂಭೀರ ಗಾಯ Read More »

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಜ್ಯದ ಶಾಲೆಗಳಿಗೆ ರಜೆಯಿಲ್ಲ| ನೇರಪ್ರಸಾರಕ್ಕೆ ಖಾಸಗಿ‌ ಶಾಲೆಗಳ ಒಕ್ಕೂಟ ನಿರ್ಧಾರ

ಸಮಗ್ರ ನ್ಯೂಸ್: ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ’ಯ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಲ್ಲಿಯೂ ರಜೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಅಂದು ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ನಡುವೆ, ಖಾಸಗಿ ಶಾಲಾ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಗೆ ಸಮಾರಂಭವನ್ನು ಲೈವ್-ಸ್ಟ್ರೀಮ್(ನೇರಪ್ರಸಾರ) ಮೂಲಕ ತೋರಿಸಲು ಯೋಜಿಸಿವೆ ಎಂದು ತಿಳಿದುಬಂದಿದೆ. ಜನವರಿ 22ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಿಯಾದರು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಜ್ಯದ ಶಾಲೆಗಳಿಗೆ ರಜೆಯಿಲ್ಲ| ನೇರಪ್ರಸಾರಕ್ಕೆ ಖಾಸಗಿ‌ ಶಾಲೆಗಳ ಒಕ್ಕೂಟ ನಿರ್ಧಾರ Read More »

ಸೋಮವಾರಪೇಟೆ: ಕೆರೆಗೆ ಬಿದ್ದ ಮಾರುತಿ ವ್ಯಾನ್|ಕಾರ್ಮಿಕರು ಅಪಾಯದಿಂದ ಪಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ವ್ಯಾನ್ ರಸ್ತೆ ಬದಿಯ ಕೆರೆಗೆ ಬಿದ್ದ ಘಟನೆ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ಜ. 18ರಂದು ಸಂಜೆ ನಡೆದಿದೆ. ಅದೃಷ್ಟವಶಾತ್ ಅದರಲ್ಲಿದ್ದ 8 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾನಗಲ್ಲು ಗ್ರಾಮದ ನಿವಾಸಿ ಶಿವಣ್ಣಎಂಬವರು ತಮ್ಮ ತೋಟದಲ್ಲಿ ಕಕಾಫ ಕೊಯ್ಲು ಮುಗಿಸಿ ಸಂಜೆ ಮಾರುತಿ ಓಮಿನಿ ವ್ಯಾನ್ ನಲ್ಲಿ ಯಡೂರು ಮಾರ್ಗವಾಗಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಸೋಮವಾರಪೇಟೆ – ಶಾಂತಳ್ಳಿ ರಾಜ್ಯ ಹೆದ್ದಾರಿ ಬದಿಯಲ್ಲಿರುವ ಯಡೂರು ಕೆರೆಗೆ

ಸೋಮವಾರಪೇಟೆ: ಕೆರೆಗೆ ಬಿದ್ದ ಮಾರುತಿ ವ್ಯಾನ್|ಕಾರ್ಮಿಕರು ಅಪಾಯದಿಂದ ಪಾರು Read More »

‘ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’| ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಘೋಷಣೆ

ಸಮಗ್ರ ನ್ಯೂಸ್‌: ಜಗಜ್ಯೋತಿ ಬಸವೇಶ್ವರ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯು ತೀರ್ಮಾನಿಸಿದೆ. ಸದ್ಯದಲ್ಲೇ ಸರ್ಕಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ. ಸಂಪುಟದಲ್ಲಿ ಯಾವುದೇ ಚರ್ಚೆಯಾಗದೇ ಎಲ್ಲರ ಸಮ್ಮತಿಯೊಂದಿಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದರು. ಕಾಯಕವೇ ಕೈಲಾಸ, ಅರಿವೇ ಗುರು”

‘ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’| ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಘೋಷಣೆ Read More »

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ/ ವಾಹನ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ದೇವನಹಳ್ಳಿ ಏರೋಸ್ಪೇಸ್ ಪಾರ್ಕ್‍ನಲ್ಲಿ ಬೋಯಿಂಗ್ ಇಂಡಿಯಾ ಅಡ್ವಾನ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಯಾಂಪಸ್ ಅನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಜನವರಿ 19 ರಂದು ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಬೆಂಗಳೂರಿನ ಕೆಲವು ಭಾಗಗಳಲ್ಲಿ ಸಂಚಾರ ನಿಯಮಗಳನ್ನು ಬದಲಾಯಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 2:10 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಬಿಐಇಟಿಸಿ ಕ್ಯಾಂಪಸ್ ತಲುಪಿ

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ/ ವಾಹನ ಸಂಚಾರದಲ್ಲಿ ವ್ಯತ್ಯಯ Read More »

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ. ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯ ನಿರ್ವಹಿಸುವ ವಿದ್ಯಾರ್ಥ್ ಎಂಬವರ ಪತ್ನಿ ಶಮಿತಾ (24) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ Read More »

ಶ್ರೀರಾಮನಿಗೆ ತುಳಸಿ ಸೇವೆ| ಅಯೋಧ್ಯೆ ಸಮೀಪ 2 ಎಕರೆ ಜಾಗ ಖರೀದಿಸಿ ತುಳಸಿ ಕೃಷಿ ಮಾಡಿದ ಬೆಂಗಳೂರಿನ ಭಕ್ತ

ಸಮಗ್ರ ನ್ಯೂಸ್: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಈಗಾಗಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ಕೋಟ್ಯಾಂತರ ಜನರ ಕನಸು ಈಡೇರುತ್ತಿರುವ ಸನಿಹದಲ್ಲಿ ರಾಮ ಭಕ್ತರು ವಿವಿಧ ರೀತಿಯಲ್ಲಿ ಭಕ್ತಿಯನ್ನು ಅರ್ಪಿಸುತ್ತಿದ್ದಾರೆ. ಇದೀಗ ಬೆಂಗಳೂರು ನಗರದ ಭಕ್ತರೊಬ್ಬರು ಶ್ರೀರಾಮನಿಗೆ ತುಳಸಿ ಸೇವೆ ಮಾಡಲೆಂದೇ ಅಯೋಧ್ಯೆ ಸಮೀಪ ಎರಡು ಎಕರೆ ಜಾಗ ಖರೀದಿಸಿ ತುಳಸಿ ಬೆಳೆದಿದ್ದು, ನಿನ್ನೆಯಿಂದ ನಿರಂತರವಾಗಿ ತುಳಸಿ ಸೇವೆ ನಡೆಸುತ್ತಿದ್ದಾರೆ. ಬೆಂಗಳೂರು ನಗರದ ಜಯನಗರದ ನಿವಾಸಿಯಾಗಿರುವ ರಾಮ ಭಕ್ತ ಡಾ. ಶಿವಕಜಮಾರ್ ಅವರು ಪ್ರಭು ಶ್ರೀರಾಮನಿಗೆ ತುಳಸಿ ಸೇವೆ ಮಾಡಲೆಂದೇ

ಶ್ರೀರಾಮನಿಗೆ ತುಳಸಿ ಸೇವೆ| ಅಯೋಧ್ಯೆ ಸಮೀಪ 2 ಎಕರೆ ಜಾಗ ಖರೀದಿಸಿ ತುಳಸಿ ಕೃಷಿ ಮಾಡಿದ ಬೆಂಗಳೂರಿನ ಭಕ್ತ Read More »

ಜ.22ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ‌ ರಜೆ ಘೋಷಣೆ

ಸಮಗ್ರ ನ್ಯೂಸ್: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ‘ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ’ ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದ್ದಾರೆ. ಐತಿಹಾಸಿಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ರಜೆ ಘೋಷಿಸಿರುವುದಾಗಿ ತಿಳಿಸಿರುವ ಸಚಿವರು, ಅಧಿಕಾರಿಗಳೂ ಈ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶ ನೀಡುವುದಾಗಿ‌ ತಿಳಿಸಿದ್ದಾರೆ. ರಾಮ್ ಲಲ್ಲಾ ವಿಗ್ರಹವನ್ನು ಬುಧವಾರ ರಾತ್ರಿ ರಾಮ ದೇವಾಲಯದ ಗರ್ಭಗುಡಿಗೆ ತರಲಾಯಿತು ಎಂದು ಶ್ರೀ ರಾಮ್ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ

ಜ.22ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ‌ ರಜೆ ಘೋಷಣೆ Read More »

ಜ.22ರಂದು ಶಾಲೆಗಳಿಗೆ ರಜೆ ಬೇಡ, ನೇರಪ್ರಸಾರಕ್ಕೆ ಅವಕಾಶ ಕಲ್ಪಿಸಿ |ಖಾಸಗಿ‌ ಶಾಲೆಗಳ ಒಕ್ಕೂಟ ಸಲಹೆ

ಸಮಗ್ರ ನ್ಯೂಸ್: ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನೇರ ಪ್ರಸಾರವನ್ನು ನಡೆಸುವಂತೆ ಖಾಸಗಿ ಶಾಲೆಗಳ ಒಕ್ಕೂಟ (ಕ್ಯಾಮ್ಸ್‌)ನ ಪ್ರಧಾನ ಕಾರ್ಯದರ್ಶಿ ಡಿ. ಶಶಿ ಕುಮಾರ್‌ ಖಾಸಗಿ ಶಾಲೆಗಳಿಗೆ ಸಲಹೆ ನೀಡಿದ್ದಾರೆ. ಒಕ್ಕೂಟದ ಎಲ್ಲ ಸದಸ್ಯರು ಧಾರ್ಮಿಕ ಮನೋಭಾವವನ್ನು ಮಕ್ಕಳಿಗೆ ತಿಳಿಸುವ ಹಿನ್ನೆಲೆಯಲ್ಲಿ ಆಯಾ ಶಾಲೆಯಲ್ಲಿ ತಮ್ಮಲ್ಲಿರುವ ಲಭ್ಯ ವ್ಯವಸ್ಥೆಗೆ ಅನುಗುಣವಾಗಿ ಒಂದೂವರೆ ಘಂಟೆ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಬೇಕು. ಹೈಬ್ರಿಡ್‌ ಮಾದರಿಯಲ್ಲಿ ಪಾಠ

ಜ.22ರಂದು ಶಾಲೆಗಳಿಗೆ ರಜೆ ಬೇಡ, ನೇರಪ್ರಸಾರಕ್ಕೆ ಅವಕಾಶ ಕಲ್ಪಿಸಿ |ಖಾಸಗಿ‌ ಶಾಲೆಗಳ ಒಕ್ಕೂಟ ಸಲಹೆ Read More »

ಸರ್ಕಾರಿ ನಿವಾಸ ಬೇಕೆಂದು ಆರ್. ಅಶೋಕ ಮನವಿ: ಡಿ.ಕೆ ಶಿವಕುಮಾರ್​​ಗೆ ಕೊಟ್ಟಿರುವ ನಿವಾಸದ ಮೇಲೆ ಕಣ್ಣು

ಸಮಗ್ರ ನ್ಯೂಸ್: ವಿಪಕ್ಷ ನಾಯಕರಾಗಿ ಆಯ್ಕೆಯಾದ ಬಿಜೆಪಿ ನಾಯಕ ಆರ್. ಅಶೋಕ ತಮಗೂ ಸರ್ಕಾರಿ ನಿವಾಸ ಒದಗಿಸುವಂತೆ ಮನವಿ ಮಾಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅಶೋಕ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ಎರಡು ತಿಂಗಳು ಪೂರ್ಣಗೊಳ್ಳುತ್ತಿದೆ. ನಿರ್ದಿಷ್ಟ ಮೂರು ಸರ್ಕಾರಿ ಬಂಗಲೆ ಕೇಳಿರುವ ಅಶೋಕ್, ಅದರಲ್ಲಿ ಡಿಸಿಎಂ ಮತ್ತು ಇಬ್ಬರು ಸಚಿವರಿಗೆ ಈಗಾಗಲೇ ಹಂಚಿಕೆಯಾಗಿದೆ ಅಶೋಕ್ ಇದೀಗ ಅದೇ ಮನೆಗಳಿಗೇ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಒದಗಿಸುವಂತೆ ಅಶೋಕ ಮನವಿ

ಸರ್ಕಾರಿ ನಿವಾಸ ಬೇಕೆಂದು ಆರ್. ಅಶೋಕ ಮನವಿ: ಡಿ.ಕೆ ಶಿವಕುಮಾರ್​​ಗೆ ಕೊಟ್ಟಿರುವ ನಿವಾಸದ ಮೇಲೆ ಕಣ್ಣು Read More »