ರಾಜ್ಯ

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ನವರಾತ್ರಿ ಉತ್ಸವದ ಆಚರಣೆಯ ಹಿನ್ನಲೆಯಲ್ಲಿ ಅ.3ರಿಂದ 13ರ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ವಿಸರ್ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದಸರಾ ಮೆರವಣಿಗೆ ಸಾಗುವ ಪ್ರದೇಶಗಳಲ್ಲಿ ಆಯಾ ದಿನಗಳಂದು ಬಾರ್‌ ಮತ್ತು ಮದ್ಯದ ಅಂಗಡಿಗಳಲ್ಲಿ, ಶೇಂದಿ ಅಂಗಡಿಗಳಲ್ಲಿ ಅಮಲು ಪದಾರ್ಥ ಮಾರಾಟ ಮಾಡದಂತೆ ಹಾಗೂ […]

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ Read More »

ಕಲಬುರ್ಗಿಯಲ್ಲಿ ‘KSRP’ ಪೊಲೀಸ್ ಸಿಬ್ಬಂದಿಯಿಂದ ಯುವತಿಯ ಮೇಲೆ ಅತ್ಯಾಚಾರ ದೂರು ದಾಖಲು

ಸಮಗ್ರ ನ್ಯೂಸ್: ಇಸ್ಟ್ರಾಗ್ರಾಮ್ ಮೂಲಕ ಪರಿಚಯವಾಗಿ, ಬಳಿಕ ಲಾಡ್ಜ್‌ ಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ ಎಸೆಗಿರುವ ಕೆ ಎಸ್ ಆರ್ ಪಿ ಪೊಲೀಸ್ ಸಿಬ್ಬಂದಿಯ ವಿರುದ್ಧ ಇದೀಗ ಸಂತ್ರಸ್ತ ಯುವತಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಹೌದು ಅತ್ಯಾಚಾರ ಎಸಗಿರುವ KSRP ಸಿಬ್ಬಂದಿಯನ್ನು ಯಲ್ಲಾಲಿಂಗ ಮೇತ್ರಿ ಎಂದು ಹೇಳಲಾಗುತ್ತಿದ್ದು, ಇಬ್ಬರು ಸುಮಾರು ಐದು ತಿಂಗಳು ಇನ್‌ಸ್ಟಾಗ್ರಾಮ್‌ನಲ್ಲಿ ಮೇಸೆಜ್ ಮಾಡಿದ್ದಾರೆ. ಬಳಿಕ ಮೊಬೈಲ್ ನಂಬ‌ರ್ ಬದಲಾಯಿಸಿಕೊಂಡಿದ್ದಾರೆ. ಇಬ್ಬರ ಸ್ನೇಹ ಪ್ರೀತಿಗೆ

ಕಲಬುರ್ಗಿಯಲ್ಲಿ ‘KSRP’ ಪೊಲೀಸ್ ಸಿಬ್ಬಂದಿಯಿಂದ ಯುವತಿಯ ಮೇಲೆ ಅತ್ಯಾಚಾರ ದೂರು ದಾಖಲು Read More »

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಟಾಟಾ ಇನ್ಸ್ಸ್ಟಿಟ್ಯೂಟ್ ಮುಂಭಾಗ ನಡೆದಿದೆ. ಈತ ಫುಲ್ ಹೆಲ್ಮೆಟ್ ಧರಿಸಿದ್ದರೂ ಜೀವ ಉಳಿದಿಲ್ಲ. ಈಶ್ವರ್(43) ಮೃತ ಬೈಕ್ ಸವಾರ. ಬಿಎಂಟಿಸಿ ಬಸ್ ಚಾಲಕರ ನಿರ್ಲಕ್ಷ್ಯಕ್ಕೆ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಲಹಂಕದಿಂದ ಯಶವಂತಪುರಕ್ಕೆ ಬಿಎಂಟಿಸಿ ಬಸ್ ತೆರಳುತ್ತಿದ್ದು, ಈ ವೇಳೆ ಕಾರ್ ಗೆ ಬೈಕ್ ಟಚ್ ಆಗಿ ಕೆಳಗೆಬಿದ್ದ ಈಶ್ವರ್ ತಲೆ

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು Read More »

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದು, ಇದೀಗ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ಇದೀಗ ಆಗುತ್ತಿರುವ ರಾಜಕೀಯ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ, ಲೋಕಾಯುಕ್ತಕ್ಕೆ ಪತ್ರ Read More »

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »

ರಾಜ್ಯ ಮಾತೆ ಹಸು/ ಮಹಾರಾಷ್ಟ್ರ ಸರ್ಕಾರ ಘೋಷಣೆ

ಸಮಗ್ರ ನ್ಯೂಸ್‌: ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಇಂದು ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ್ದು, ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ. ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸುತ್ತಾ, ಮಹಾರಾಷ್ಟ್ರ ಸರ್ಕಾರವು ಸ್ಥಳೀಯ ಹಸುಗಳ ಸಂಖ್ಯೆಯಲ್ಲಿನ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು. ತನ್ನ ಅಧಿಕೃತ ಆದೇಶದಲ್ಲಿ ಮಹಾರಾಷ್ಟ್ರ ಸರ್ಕಾರವು ಕೃಷಿಯಲ್ಲಿ ಹಸುವಿನ ಸಗಣಿ ಬಳಕೆಯನ್ನು ಒತ್ತಿಹೇಳಿತು. ಅದರ

ರಾಜ್ಯ ಮಾತೆ ಹಸು/ ಮಹಾರಾಷ್ಟ್ರ ಸರ್ಕಾರ ಘೋಷಣೆ Read More »

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ‌ ಶಾಕ್| ED ಯಿಂದ ECIR ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ಇಸಿಆರ್ ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ‌ ಶಾಕ್| ED ಯಿಂದ ECIR ದಾಖಲು Read More »

ಇಳಿಕೆ ಕಂಡ ಚಿನ್ನ, ಬೆಳ್ಳಿ ಧಾರಣೆ| ಇಂದಿನ ಮಾರುಕಟ್ಟೆ ದರ ಹೀಗಿದೆ…

ಸಮಗ್ರ ನ್ಯೂಸ್: ಸೋಮವಾರ (ಸೆ.30) ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 7,095 ರೂ ಇದ್ದದ್ದು 7,080 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,724 ರೂ ಇದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಕಳೆದ ವಾರ ಭಾರೀ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶನಿವಾರದಿಂದ ಇಳಿಕೆ ಕಾಣುತ್ತಿವೆ. ಇಂದು ಸೋಮವಾರವೂ ಈ ಟ್ರೆಂಡ್ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಅಗ್ಗವಾಗಿದೆ.

ಇಳಿಕೆ ಕಂಡ ಚಿನ್ನ, ಬೆಳ್ಳಿ ಧಾರಣೆ| ಇಂದಿನ ಮಾರುಕಟ್ಟೆ ದರ ಹೀಗಿದೆ… Read More »

ದಂಡ ಕಟ್ಟಿ ಪಾನ್ – ಆಧಾರ್ ಲಿಂಕ್ ಮಾಡಿಕೊಂಡ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್| 1 ಲಕ್ಷಕ್ಕೂ ಮಿಕ್ಕಿದ ಬಿಪಿಎಲ್ ಕಾರ್ಡ್ ಗಳು ರದ್ದು!?

ಸಮಗ್ರ ನ್ಯೂಸ್: ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ -ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. ಆಹಾರ ಇಲಾಖೆ ರಾಜ್ಯದಲ್ಲಿ 1,06,152 ಆದಾಯ ತೆರಿಗೆ ಪಾವತಿದಾರರು ಹೊಂದಿದ ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಪಡಿಸಲು ಮುಂದಾಗಿದೆ. ಆದರೆ, ಇದರಲ್ಲಿ

ದಂಡ ಕಟ್ಟಿ ಪಾನ್ – ಆಧಾರ್ ಲಿಂಕ್ ಮಾಡಿಕೊಂಡ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್| 1 ಲಕ್ಷಕ್ಕೂ ಮಿಕ್ಕಿದ ಬಿಪಿಎಲ್ ಕಾರ್ಡ್ ಗಳು ರದ್ದು!? Read More »

ಬಂಗಾಲಿ ನಟ ಮಿಥುನ್ ಚಕ್ರವರ್ತಿ ದಾದಾ ಸಾಹೇಬ್ ‌ಫಾಲ್ಕೆ ಪ್ರಶಸ್ತಿಗೆ ಆಯ್ಕೆ

ಸಮಗ್ರ ನ್ಯೂಸ್: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯ ಪ್ರಕಟಿಸಿದ್ದಾರೆ. “ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ ಶ್ರೀ ಮಿಥುನ್ ಚಕ್ರವರ್ತಿ ಜಿ ಅವರಿಗೆ ಪ್ರಶಸ್ತಿ ನೀಡಲು ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರು ನಿರ್ಧರಿಸಿದ್ದಾರೆ ಎಂದು ಘೋಷಿಸಲು ಗೌರವವಾಗಿದೆ. ಅಕ್ಟೋಬರ್ 8, 2024 ರಂದು ನಡೆಯಲಿರುವ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು” ಎಂದು ಅವರು

ಬಂಗಾಲಿ ನಟ ಮಿಥುನ್ ಚಕ್ರವರ್ತಿ ದಾದಾ ಸಾಹೇಬ್ ‌ಫಾಲ್ಕೆ ಪ್ರಶಸ್ತಿಗೆ ಆಯ್ಕೆ Read More »