ರಾಜ್ಯ

ಶ್ರೀಕಾಂತ್ ಪೂಜಾರಿಗೆ ಜಾಮೀನು… ನಾಳೆ ರಿಲೀಸ್

ಸಮಗ್ರ ನ್ಯೂಸ್: 1992ರ ರಾಮಜನ್ಮಭೂಮಿ ಹೋರಾಟದಲ್ಲಿ ಗಲಭೆ ಕೇಸ್ ನಲ್ಲಿ ಬಂಧಿತನಾಗಿರುವ ಕರಸೇವಕ ಶ್ರೀಕಾಂತ್ ಪೂಜಾರಿಗೆ ಇದೀಗ ಜಾಮೀನು ಸಿಕ್ಕಿದೆ. ಶ್ರೀಕಾಂತ್ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯ, ತೀರ್ಪನ್ನು ಇಂದಿಗೆ ಕಾದಿರಿಸಿತ್ತು. ಇದೀಗ ಶ್ರೀಕಾಂತ್‌ ಪೂಜಾರಿಗೆ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ. ಶ್ರೀಕಾಂತ್ ಪೂಜಾರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನು ಪಡೆದರು ಶ್ರೀಕಾಂತ್ ಪುಜಾರಿ ಬಿಡುಗಡೆ ಆಗಿಲ್ಲ. ನಾಳೆ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಆದೇಶ ಪ್ರತಿ ತಲುಪದ

ಶ್ರೀಕಾಂತ್ ಪೂಜಾರಿಗೆ ಜಾಮೀನು… ನಾಳೆ ರಿಲೀಸ್ Read More »

ಹಾಸನ: ಒಂಟಿ ಸಲಗ ದಾಳಿ| ಕೂಲಿ ಕಾರ್ಮಿಕ ಬಲಿ

ಸಮಗ್ರ ನ್ಯೂಸ್: ಒಂಟಿ ಸಲಗ ದಾಳಿಗೆ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮತ್ತಾವರ ಗ್ರಾಮದಲ್ಲಿ ಜ. 4ರಂದು ನಡೆದಿದೆ. ಮತ್ತಾವರ ಗ್ರಾಮದ ವಸಂತ ಮೃತಪಟ್ಟಿದ್ದು, ಅವರು ಸಂಜೆ ಕೆಲಸ ಮುಗಿಸಿ ತನ್ನ ಆಪ್ತನ ಜೊತೆಗೆ ವಾಪಸ್ ಮರಳುತ್ತಿದ್ದರು. ಈ ವೇಳೆ ಏಕಾಏಕಿ ಕಾಣಿಸಿದ ಒಂಟಿ ಸಲಗ ವಸಂತ್ ಮೇಲೆ ದಾಳಿ ಮಾಡಿದೆ. ಜೊತೆಗಿದ್ದ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಓಡಿ ಅಪಾಯದಿಂದ ಪಾರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆ ಮುಂದಾಗಿದ್ದು, ಮನುಷ್ಯನ ಬಲಿಯಾದ

ಹಾಸನ: ಒಂಟಿ ಸಲಗ ದಾಳಿ| ಕೂಲಿ ಕಾರ್ಮಿಕ ಬಲಿ Read More »

ಕೊಡಗಿನ ಕಂದಾಯ ಸಮಸ್ಯೆಗಳ ಬಗ್ಗೆ ಸಚಿವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರುಗಳ ಮಹತ್ವದ ಸಭೆ ಚರ್ಚೆ|ಕಂದಾಯ ಸಚಿವರಿಂದ ಸಕಾರಾತ್ಮಕ ಸ್ಪಂದನೆ

ಸಮಗ್ರ ನ್ಯೂಸ್:ಬೆಂಗಳೂರಿನಲ್ಲಿ ಜ. 4ರಂದು ಕಂದಾಯ ಸಚಿವರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಕೊಡಗು ಜಿಲ್ಲೆಯ ಉತ್ತುವರಿ ಸಚಿವರು ಹಾಗೂ ಶಾಸಕರು ಅವರೊಂದಿಗೆ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಜಿಲ್ಲೆಯ ಕಂದಾಯ ಇಲಾಖೆ ಸಂಬಂಧಿತ ಸಮಸ್ಯೆಗಳ ಪರಿಹಾರದ ಬಗ್ಗೆ ಕೂಡ ಚರ್ಚೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜ್ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಏರ್ಸ್ಟ್ರೀಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನ ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡುವ ನಿಟ್ಟಿನಲ್ಲ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ಕೂಡ ಕಂದಾಯ ಸಚಿವರು ಭರವಸೆ ನೀಡಿದ್ದಾರೆ.

ಕೊಡಗಿನ ಕಂದಾಯ ಸಮಸ್ಯೆಗಳ ಬಗ್ಗೆ ಸಚಿವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರುಗಳ ಮಹತ್ವದ ಸಭೆ ಚರ್ಚೆ|ಕಂದಾಯ ಸಚಿವರಿಂದ ಸಕಾರಾತ್ಮಕ ಸ್ಪಂದನೆ Read More »

ನನ್ನನ್ನೂ ಬಂಧಿಸಿ ಎಂದು ಪ್ರತಿಭಟಿಸಿದ ಶಾಸಕ ವಿ. ಸುನಿಲ್ ಕುಮಾರ್ ಅರೆಸ್ಟ್

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕರೂ‌ ಆಗಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ನನ್ನನ್ನೂ ಬಂಧಿಸಿ ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌ ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

ನನ್ನನ್ನೂ ಬಂಧಿಸಿ ಎಂದು ಪ್ರತಿಭಟಿಸಿದ ಶಾಸಕ ವಿ. ಸುನಿಲ್ ಕುಮಾರ್ ಅರೆಸ್ಟ್ Read More »

ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಸಮಗ್ರ ನ್ಯೂಸ್: ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥೀಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವಿಷು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ಕೊಡಗು ಮೂಲದ ಮೃತ ವಿಷು ಉತ್ತಪ್ಪನ ತಂದೆ ತಮ್ಮಯ್ಯ ರೇಷನ್ ತರಲು ಹೋದಾಗ ಪುತ್ರ ವಿಷು ಉತ್ತಪ್ಪ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಎದೆಗೆ ಶೂಟ್ ಮಾಡಿಕೊಂಡು ತಂದೆಗೆ ಕರೆ ಮಾಡಿ ಇನ್ಮುಂದೆ ತಪ್ಪು ಮಾಡುವುದಿಲ್ಲ ಅಂತ ಹೇಳಿದ್ದಾನೆ ಎನ್ನಲಾಗಿದೆ. ಈ ನಡುವೆ ಕೂಡಲೇ ಮನೆಗೆ ಬಂದ ತಮ್ಮಯ್ಯ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ Read More »

ಭಾರತ ಹಿಂದುರಾಷ್ಟ್ರ ಆಗಬಾರದು, ಹಿಂದು ರಾಷ್ಟ್ರವಾದರೆ ಅದಕ್ಕಿಂತಲೂ ದೊಡ್ಡ ಅಪಾಯ ಮತ್ತೊಂದಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಭಾರತ ಹಿಂದುರಾಷ್ಟ್ರ ಆಗಬಾರದು, ಹಿಂದು ರಾಷ್ಟ್ರವಾದರೆ ಅದಕ್ಕಿಂತಲೂ ದೊಡ್ಡ ಅಪಾಯ ಮತ್ತೊಂದಿಲ್ಲ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಮಾತನಾಡಿ, ಭಾರತವೇನಾದರೂ ಹಿಂದು ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಆಗುತ್ತದೆ. ನಮ್ಮ ದೇಶ ಹಿಂದು ರಾಷ್ಟ್ರವಾಗಬಾರದು, ಹಾಗೇನಾದರೂ ಆದರೆ ಅದಕ್ಕಿಂತಲೂ ದೊಡ್ಡ ಅಪಾಯ ಮತ್ತೊಂದಿಲ್ಲ ಎಂದು ಡಾ.ಬಿ.ಆರ್‌. ಅಂಬೇಡ್ಕರ್‌ ಅವರೇ ಹೇಳಿದ್ದಾರೆ. ನಮ್ಮ ದೇಶ ಹಿಂದು ರಾಷ್ಟ್ರವಾದರೆ ದೇಶಕ್ಕೆ ತೊಂದರೆಯಾಗಲಿದೆ ಎಂದು ಹೇಳಿದರು. ಧರ್ಮದ ಹೆಸರಿನಲ್ಲಿ ಸರ್ವಾಧಿಕಾರ

ಭಾರತ ಹಿಂದುರಾಷ್ಟ್ರ ಆಗಬಾರದು, ಹಿಂದು ರಾಷ್ಟ್ರವಾದರೆ ಅದಕ್ಕಿಂತಲೂ ದೊಡ್ಡ ಅಪಾಯ ಮತ್ತೊಂದಿಲ್ಲ: ಯತೀಂದ್ರ ಸಿದ್ದರಾಮಯ್ಯ Read More »

ಕೊಡಗಿನಲ್ಲಿ ಯುವ ಪ್ರತಿಭೆಗಳಿಗೆ ಮುಕ್ತ ಅವಕಾಶವಿದೆ, ಕ್ರೀಡೆಗೆ ಹೆಚ್ಚು ಒತ್ತು ನೀಡುವ ಜಿಲ್ಲೆ ನಮ್ಮದು: ಮಂತರ್ ಗೌಡ

ಸಮಗ್ರ ನ್ಯೂಸ್: ಕೂಡಿಗೆ ಕ್ರೀಡಾ ಶಾಲೆಯಲ್ಲಿ ಇಂದಿನಿಂದ ಆರಂಭವಾದ 67ನೇ ವರ್ಷದ ರಾಷ್ಟ್ರ ಮಟ್ಟದ 17 ವರ್ಷದ ಬಾಲಕಿಯರ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಮಂತರ ಗೌಡರವರು ಮಾತನಾಡಿ ಕೊಡಗಿನಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗಿದೆ. ಕೊಡಗು ಹಾಕಿ ಕ್ರೀಡೆಯಲ್ಲಿ ಹೆಸರುವಾಸಿ ಆಗಿದ್ದು ಯುವಪ್ರತಿಭೆಗಳಿಗೆ ಮುಕ್ತ ಅವಕಾಶ ನೀಡಲಾಗಿದೆ. ಇಂದು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಕೊಡಗಿನಲ್ಲಿ ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಇಲ್ಲಿ ಭಾಗವಹಿಸುತ್ತಿರುವ ಎಲ್ಲಾ ತಂಡಗಳು ಕೂಡ ಉತ್ತಮವಾಗಿ ಪ್ರದರ್ಶನವನ್ನು ನೀಡಿ ತಮ್ಮ ಸಾಮರ್ಥ್ಯವನ್ನು

ಕೊಡಗಿನಲ್ಲಿ ಯುವ ಪ್ರತಿಭೆಗಳಿಗೆ ಮುಕ್ತ ಅವಕಾಶವಿದೆ, ಕ್ರೀಡೆಗೆ ಹೆಚ್ಚು ಒತ್ತು ನೀಡುವ ಜಿಲ್ಲೆ ನಮ್ಮದು: ಮಂತರ್ ಗೌಡ Read More »

ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ: ಪತ್ನಿಗೆ ಬೆದರಿಕೆ ಹಾಕಿದ ಪತಿ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಒಂದಲ್ಲ ಒಂದು ಘಟನೆ ನಡೆಯುತ್ತಲೇ ಇದೆ. ಈಗ ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ತನ್ನ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಮದುವೆಯಾಗಲು ಹೆಂಡತಿಯಿಂದ ವಿಚ್ಛೇದನ ಪಡೆಯಲು ಈ ರೀತಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಬೆಳಗಾವಿ ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು. ಇದಕ್ಕಾಗಿಯೇ ವಿಚ್ಛೇದನ ನೀಡುವಂತೆ ಪತ್ನಿಗೆ ಕಿರುಕುಳ

ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ: ಪತ್ನಿಗೆ ಬೆದರಿಕೆ ಹಾಕಿದ ಪತಿ Read More »

ಜರ್ಮನ್ ಯುವತಿ ಜೊತೆ ಕುಂದಾಪುರ ಯುವಕನ ಮದುವೆ

ಸಮಗ್ರ ನ್ಯೂಸ್: ಜರ್ಮನ್ ಯುವತಿಯನ್ನು ಕುಂದಾಪುರ ತಾಲೂಕಿನ ಚಂದನ್ ಎಂಬ ಯುವಕ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವರಸ್ಥಾನದಲ್ಲಿ ಇವರ ವಿವಾಹ ನಡೆಯಿತು. ಅತ್ರಿಯ ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ. ಜರ್ಮನಿಯಲ್ಲಿ ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಚಂದನ್ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡೂ ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು. ಅದರಂತೆ, ಎರಡೂ ಕಡೆಯ ಬಂಧು-ಮಿತ್ರರು, ಹಿತೈಷಿಗಳ ಶುಭಾಹಾರೈಕೆಯೊಂದಿಗೆ

ಜರ್ಮನ್ ಯುವತಿ ಜೊತೆ ಕುಂದಾಪುರ ಯುವಕನ ಮದುವೆ Read More »

ಕೊಡಗು:ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಗೆ ಗಂಭೀರ ಗಾಯ|ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಘಟ್ಟದಳ ಸಮೀಪದ ಹೇರೂರು ಎಂಬಲ್ಲಿ ಕಾರ್ಮಿಕರೊಂದಿಗೆ ಬೆಳಿಗ್ಗೆ ಕೆಲಸಕ್ಕೆ ತೆರಳಿದ ವೇಳೆ ದಾಳಿ ಮಾಡಿದ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಕಾರ್ಮಿಕ ಮಹಿಳೆ ಪಲ್ಲವಿ ಸಿದ್ದಾಪುರ ಆಸ್ಪತ್ರೆಗೆ ದಾಖಲು. ದಾಳಿ ಸಂದರ್ಭ ಇತರ ಕಾರ್ಮಿಕರು ಪ್ರಾಣಾಪಾಯದಿಂದ ಪರಾಗಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಪೊಲೀಸರ ಭೇಟಿ ನೀಡಿದ್ದು, ಕಾಡಾನೆ ಹಾವಳಿ ತಡೆಗಟ್ಟಲು ಸ್ಥಳೀಯರ ಒತ್ತಾಯಿಸಿದ್ದಾರೆ.

ಕೊಡಗು:ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಗೆ ಗಂಭೀರ ಗಾಯ|ಆಸ್ಪತ್ರೆಗೆ ದಾಖಲು Read More »