ರಾಜ್ಯ

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ

ಸಮಗ್ರ ನ್ಯೂಸ್: 14 ವರ್ಷಗಳಿಂದ ಬಳ್ಳಾರಿಯಿಂದ ದೂರವಾಗಿದ್ದ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿ ಸೇರಿದಂತೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕಡಪ ಜಿಲ್ಲೆಗಳ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆ ತವರು ಜಿಲ್ಲೆಯ ಪ್ರವೇಶವಿಲ್ಲದೆ ವನವಾಸ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ […]

ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ Read More »

ರಾಜ್ಯ ಮಾತೆ ಹಸು/ ಮಹಾರಾಷ್ಟ್ರ ಸರ್ಕಾರ ಘೋಷಣೆ

ಸಮಗ್ರ ನ್ಯೂಸ್‌: ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಇಂದು ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ್ದು, ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ. ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸುತ್ತಾ, ಮಹಾರಾಷ್ಟ್ರ ಸರ್ಕಾರವು ಸ್ಥಳೀಯ ಹಸುಗಳ ಸಂಖ್ಯೆಯಲ್ಲಿನ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು. ತನ್ನ ಅಧಿಕೃತ ಆದೇಶದಲ್ಲಿ ಮಹಾರಾಷ್ಟ್ರ ಸರ್ಕಾರವು ಕೃಷಿಯಲ್ಲಿ ಹಸುವಿನ ಸಗಣಿ ಬಳಕೆಯನ್ನು ಒತ್ತಿಹೇಳಿತು. ಅದರ

ರಾಜ್ಯ ಮಾತೆ ಹಸು/ ಮಹಾರಾಷ್ಟ್ರ ಸರ್ಕಾರ ಘೋಷಣೆ Read More »

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ‌ ಶಾಕ್| ED ಯಿಂದ ECIR ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮುಡಾ ಹಗರಣದಲ್ಲಿ ಇಸಿಆರ್ ದಾಖಲಿಸಲಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಲೋಕಾಯುಕ್ತದ ಬೆನ್ನಲ್ಲೇ ಇಡಿ ಸಂಕಷ್ಟ ಕೂಡ ಎದುರಾಗಿದೆ. ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಂಸ್ಥೆ ತನ್ನ

ಮುಡಾ ಅಕ್ರಮ ಹಗರಣ| ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ‌ ಶಾಕ್| ED ಯಿಂದ ECIR ದಾಖಲು Read More »

ಇಳಿಕೆ ಕಂಡ ಚಿನ್ನ, ಬೆಳ್ಳಿ ಧಾರಣೆ| ಇಂದಿನ ಮಾರುಕಟ್ಟೆ ದರ ಹೀಗಿದೆ…

ಸಮಗ್ರ ನ್ಯೂಸ್: ಸೋಮವಾರ (ಸೆ.30) ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 7,095 ರೂ ಇದ್ದದ್ದು 7,080 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,724 ರೂ ಇದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಕಳೆದ ವಾರ ಭಾರೀ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶನಿವಾರದಿಂದ ಇಳಿಕೆ ಕಾಣುತ್ತಿವೆ. ಇಂದು ಸೋಮವಾರವೂ ಈ ಟ್ರೆಂಡ್ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಅಗ್ಗವಾಗಿದೆ.

ಇಳಿಕೆ ಕಂಡ ಚಿನ್ನ, ಬೆಳ್ಳಿ ಧಾರಣೆ| ಇಂದಿನ ಮಾರುಕಟ್ಟೆ ದರ ಹೀಗಿದೆ… Read More »

ದಂಡ ಕಟ್ಟಿ ಪಾನ್ – ಆಧಾರ್ ಲಿಂಕ್ ಮಾಡಿಕೊಂಡ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್| 1 ಲಕ್ಷಕ್ಕೂ ಮಿಕ್ಕಿದ ಬಿಪಿಎಲ್ ಕಾರ್ಡ್ ಗಳು ರದ್ದು!?

ಸಮಗ್ರ ನ್ಯೂಸ್: ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ -ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ. ಆಹಾರ ಇಲಾಖೆ ರಾಜ್ಯದಲ್ಲಿ 1,06,152 ಆದಾಯ ತೆರಿಗೆ ಪಾವತಿದಾರರು ಹೊಂದಿದ ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಪಡಿಸಲು ಮುಂದಾಗಿದೆ. ಆದರೆ, ಇದರಲ್ಲಿ

ದಂಡ ಕಟ್ಟಿ ಪಾನ್ – ಆಧಾರ್ ಲಿಂಕ್ ಮಾಡಿಕೊಂಡ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್| 1 ಲಕ್ಷಕ್ಕೂ ಮಿಕ್ಕಿದ ಬಿಪಿಎಲ್ ಕಾರ್ಡ್ ಗಳು ರದ್ದು!? Read More »

ಬಂಗಾಲಿ ನಟ ಮಿಥುನ್ ಚಕ್ರವರ್ತಿ ದಾದಾ ಸಾಹೇಬ್ ‌ಫಾಲ್ಕೆ ಪ್ರಶಸ್ತಿಗೆ ಆಯ್ಕೆ

ಸಮಗ್ರ ನ್ಯೂಸ್: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯ ಪ್ರಕಟಿಸಿದ್ದಾರೆ. “ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ ಶ್ರೀ ಮಿಥುನ್ ಚಕ್ರವರ್ತಿ ಜಿ ಅವರಿಗೆ ಪ್ರಶಸ್ತಿ ನೀಡಲು ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರು ನಿರ್ಧರಿಸಿದ್ದಾರೆ ಎಂದು ಘೋಷಿಸಲು ಗೌರವವಾಗಿದೆ. ಅಕ್ಟೋಬರ್ 8, 2024 ರಂದು ನಡೆಯಲಿರುವ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು” ಎಂದು ಅವರು

ಬಂಗಾಲಿ ನಟ ಮಿಥುನ್ ಚಕ್ರವರ್ತಿ ದಾದಾ ಸಾಹೇಬ್ ‌ಫಾಲ್ಕೆ ಪ್ರಶಸ್ತಿಗೆ ಆಯ್ಕೆ Read More »

ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್ 11’ ಇದೀಗ ಆರಂಭವಾಗಿದ್ದು, ನಿನ್ನೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಒಟ್ಟು 17 ಮಂದಿ ಬಿಗ್ ಬಾಸ್ ಕಂಟೆಸ್ಟೆಂಟ್ ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. *ಭವ್ಯಾ ಗೌಡ’ ಅವರು ‘ಬಿಗ್ ಬಾಸ್’ ಮನೆಗೆ ಮೊದಲ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಅವರು ದೊಡ್ಮನೆಯಲ್ಲಿ ಸ್ವರ್ಗದ ಬಾಗಿಲು ತೆಗೆದಿದ್ದಾರೆ. ಅವರು ಈ ಮೊದಲು ‘ಗೀತಾ’ ಧಾರಾವಾಹಿಯಲ್ಲಿ ನಟಿಸಿದ್ದರು.*ಎರಡನೇ ಸ್ಪರ್ಧಿಯಾಗಿ ಯಮುನಾ ಶ್ರೀನಿಧಿ ಅವರು ಎಂಟ್ರಿ ನೀಡಿದ್ದು ಧಾರಾವಾಹಿಗಳಲ್ಲಿ, ಸಿನಿಮಾಗಳಲ್ಲಿ ಪೋಷಕ ಪಾತ್ರ

ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ Read More »

ರಾಜ್ಯದಲ್ಲಿ ಸೆ.30ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆ ವರದಿಯಾಗಿದೆ. ಮುಂದುವರಿದಂತೆ ಭಾನುವಾರ(ಸೆ.29) ಕೂಡಾ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳಭಾಗದಿಂದ

ರಾಜ್ಯದಲ್ಲಿ ಸೆ.30ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29 ರಿಂದ ಅ.5ರವರೆಗೆ ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ಗ್ರಹಗಳು, ರಾಶಿ, ನಕ್ಷತ್ರಗಳು ಸಾಮಾನ್ಯರ ಮೇಲೆ ಅಸಾಮಾನ್ಯ ಪ್ರಭಾವ ಬೀರುತ್ತವೆ ಎಂಬುದು ಶಾಸ್ತ್ರ ನಂಬಿಕೆ. ದಿನಚರಿ ಆರಂಭದಲ್ಲಿ ಜ್ಯೋತಿಷ ಶಾಸ್ತ್ರವು ರಾಶಿಗಳ ಫಲವನ್ನು ತಿಳಿದುಕೊಳ್ಳಲು ಸಲಹೆ ನೀಡುತ್ತದೆ. ಈ ವಾರ (ಸೆ.29-ಅ.05) ಯಾವ ರಾಶಿಗಳಿಗೆ ಶುಭ? ಯಾರಿಗೆ ಲಾಭ? ತರುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ ರಾಶಿ:ಅಮಾವಾಸ್ಯೆ ನಂತರ ಕಾಲರಾತ್ರಿಯೆಂಬ ದೇವಿಯು ಶರದ್ರುತುವಿನಲ್ಲಿ ಉದಯಿಸಿ ನವರಾತ್ರಿ ಆರಂಭವಾಗುತ್ತದೆ. ಈ ಪರ್ವವು ಮೇಷ ರಾಶಿಯವರಿಗೆ ಅತ್ಯಂತ ಲಾಭವನ್ನು ತರುತ್ತದೆ. ಮಾತಾಪಿತರನ್ನು ವಂದಿಸಿ.

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29 ರಿಂದ ಅ.5ರವರೆಗೆ ನಿಮ್ಮ ರಾಶಿಗಳ ಗೋಚಾರಫಲ Read More »

ಗೃಹಲಕ್ಷ್ಮಿ ಹಣದ ನಿರೀಕ್ಷೆಯ ಮಹಿಳೆಯರಿಗೆ ಸಿಹಿಸುದ್ದಿ

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಹಣದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನ ಸಿಹಿಸುದ್ದಿ, ಒಂದು ತಿಂಗಳ ಹಣ ಜಮಾವಣೆ ಮಾಡಲು ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬ‌ರ್ ತಿಂಗಳು ಕೊನೆಗೆ ಬಂದರೂ ಜುಲೈ, ಆಗಸ್ಟ್ ತಿಂಗಳುಗಳ ಗೃಹಲಕ್ಷ ಹಣ ಮಾತ್ರ ಮಹಿಳೆಯರ ಖಾತೆಯನ್ನು ಸೇರಿಲ್ಲ. ಇದೀಗ ಜುಲೈ ತಿಂಗಳ ಹಣ ಒದಗಿಸಲು ಸಚಿವರು ಹಣಕಾಸು ಇಲಾಖೆಗೆ ತಾಕೀತು ಮಾಡಿದ್ದಾರೆ.ಹಣ ಜಮೆ ಆಗದಿರುವುದಕ್ಕೆ ಕಾರಣ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗದಿರುವುದು. ಸದ್ಯ ಇಲಾಖೆಯಿಂದ ಮೂರು ತಿಂಗಳ

ಗೃಹಲಕ್ಷ್ಮಿ ಹಣದ ನಿರೀಕ್ಷೆಯ ಮಹಿಳೆಯರಿಗೆ ಸಿಹಿಸುದ್ದಿ Read More »