ರಾಜ್ಯ

ಕೊಡಗಿನಲ್ಲಿ ಕಾಡಾನೆಗಳ ಹಾವಳಿ| ಮನೆಯಂಗಳದಲ್ಲಿ ವಾರ್ಕಿಂಗ್ ಮಾಡುತ್ತಿರುವ ಕಾಡಾನೆಗಳು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಬೇಟೋಳ್ಳಿ ಗ್ರಾಮದದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ ಕಾಡಾನೆಗಳ ಹಿಂಡು ಕಾಡಿನಿಂದ ನಾಡಿಗೆ ಬಂದು ತೋಟಕ್ಕೆ ತೋಟದಿಂದ ಮನೆಯಂಗಳಕ್ಕೆ ಬಂದು ಉಪಟಳ ನೀಡಲು ಆರಂಭಿಸಿದೆ. ಬೇಟೋಳ್ಳಿ ಗ್ರಾಮದಲ್ಲಿ ಸುಮಾರು 4 ಕಾಡಾನೆಗಳು ಕಾಣಿಸಿಕೊಂಡಿದ್ದು ಕಳೆದ ಮೂರು ದಿನಗಳಿಂದ ರಸ್ತೆಯಲ್ಲಿ ಸಂಚಾರಿಸುತ್ತಿದೆ. ಮಾತ್ರವಲ್ಲ ಸ್ಥಳಿಯ ಡಿ.ಎಚ್.ಎಸ್.ಮಿಲ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಕಾರುಗಳ ಪಕ್ಕದಲ್ಲಿ ಸ್ವಲ್ಪ ಹೊತ್ತು ಅಡ್ಡಾಡಿದ 2 ಕಾಡಾನೆಗಳು ಯಾವುದೇ ಹಾನಿ ಮಾಡದೆ ಮರಳಿದೆ ಆನೆಗಳ ಹಿಂಡು ಇಲ್ಲಿನ ಶ್ರೀ ಭದ್ರಕಾಳಿ

ಕೊಡಗಿನಲ್ಲಿ ಕಾಡಾನೆಗಳ ಹಾವಳಿ| ಮನೆಯಂಗಳದಲ್ಲಿ ವಾರ್ಕಿಂಗ್ ಮಾಡುತ್ತಿರುವ ಕಾಡಾನೆಗಳು Read More »

ಮಡಿಕೇರಿ: ವಕೀಲರ ಸಂಘದಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ| ಜಿಲ್ಲಾ ಕ್ರೀಡಾಂಗಣದಲ್ಲಿ ವಕೀಲರ ಕ್ರೀಡಾಕಲರವ

ಸಮಗ್ರ ನ್ಯೂಸ್: ಸಂವಿಧಾನ ಭಾರತೀಯರ ಆಶೋತ್ತರಗಳಿಗೆ ಸೂಕ್ತವಾಗಿ ಸ್ಪಂದಿಸುತ್ತದೆ -ಹೈಕೋಟ್೯ ನ್ಯಾಯಮೂರ್ತಿ ಮತ್ತು ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಉಮಾ ಅಭಿಪ್ರಾಯಸಿದ್ದಾರೆ. ಜನತೆಯ ಆಶೋತ್ತರಗಳಿಗೆ ಭಾರತೀಯ ಸಂವಿಧಾನ ಅರ್ಥಪೂರ್ಣವಾಗಿ ಸ್ಪಂದಿಸುತ್ತದೆ ಎಂದು ಹೇಳಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿತವಾದ ಜಿಲ್ಲಾ ಮಟ್ಟದ ವಕೀಲರ ಕ್ರೀಡಾಕೂಟ ಸಂದಭ೯ ಸಂವಿಧಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಈ ಸಂದರ್ಭದಲ್ಲಿ ಮಾತನಾಡಿ, ಭಾರತದ ಸಂವಿಧಾನ ಸದಾ ನಮ್ಮೊಂದಿಗೆ

ಮಡಿಕೇರಿ: ವಕೀಲರ ಸಂಘದಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟ| ಜಿಲ್ಲಾ ಕ್ರೀಡಾಂಗಣದಲ್ಲಿ ವಕೀಲರ ಕ್ರೀಡಾಕಲರವ Read More »

ಬೆಂಗಳೂರು ಕಂಬಳ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ದುರ್ಘಟನೆ| ದ.ಕ ಜಿಲ್ಲೆಯ ಇಬ್ಬರು ಯುವಕರು ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿ ವಾಪಾಸಾಗುತ್ತಿದ್ದ ವೇಳೆ ಕಾರು ಮತ್ತು ಬೋರ್‌ವೆಲ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಯುವಕರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಪೆರಾರ ಬಜ್ರೆ ಗ್ರಾಮದ ನಿವಾಸಿ ಕಿಶನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ನಿವಾಸಿ ಫಿಲೀಪ್ ಲೋಬೋ (32) ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ನಿತೀಶ್ ಬಂಡಾರಿ,

ಬೆಂಗಳೂರು ಕಂಬಳ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ದುರ್ಘಟನೆ| ದ.ಕ ಜಿಲ್ಲೆಯ ಇಬ್ಬರು ಯುವಕರು ದುರ್ಮರಣ Read More »

ಕಾರವಾರ: ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಕ್ಕಳನ್ನು ಬಸ್‌ನಿಲ್ದಾಣದಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಡ್‌ ಬಂದರ್ ಬಳಿ ಸಮುದ್ರದಲ್ಲಿ ನ. 25ರಂದು ಸಂಜೆ ನಡೆದಿದೆ. ಮೃತ ನಿವೇದಿತಾ ನಾಗರಾಜ ಭಂಡಾರಿ ಸಾಂತಗಲ್ ಗ್ರಾಮದ ನಿವಾಸಿಯಾಗಿದ್ದು, ನಿವೇದಿತಾ, ಮನೆಯಿಂದ ಸ್ಕೂಟಿಯಲ್ಲಿ ಇಬ್ಬರೂ ಗಂಡು ಮಕ್ಕಳನ್ನು ಕರೆದುಕೊಂಡು ಬಂದಿದ್ದರು. ಕುಮಟಾದ ಪಿಕ್‌ಅಪ್ ಬಸ್‌ ನಿಲ್ದಾಣದ ಬಳಿ ಮಕ್ಕಳನ್ನು ಬಿಟ್ಟು ತೆರಳಿದ್ದಾರೆ. ಇನ್ನು, ಆತ್ಮಹತ್ಯೆಗೂ ಮುನ್ನ ಸ್ಕೂಟಿಯಲ್ಲಿ ಮಾಂಗಲ್ಯ, ಕಾಲುಂಗುರ, ಮೊಬೈಲ್

ಕಾರವಾರ: ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ Read More »

ವಂಚನೆ ಪ್ರಕರಣ; ಬಿಟಿವಿ ವಾಹಿನಿ ಎಂ.ಡಿ ಕುಮಾರ್ ಅರೆಸ್ಟ್

ಸಮಗ್ರ ನ್ಯೂಸ್: ವಂಚನೆ ಪ್ರಕರಣವೊಂದಕ್ಕೆ ಬಂಧಿಸಿ ‘ಬಿಟಿವಿ’ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಜಿ.ಎಂ. ಕುಮಾರ್ ಅವರನ್ನು ಶನಿವಾರ ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕುಮಾರ್ ರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕುಮಾರ್ ವಿರುದ್ಧ ಅಶ್ವಿನ್ ಮಹೇಂದ್ರ ಎಂಬವರು 2022ರಲ್ಲಿ ವಿಜಯನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ದೂರುದಾರ ಅಶ್ವಿನ್ ಮಹೇಂದ್ರ ಹಾಗೂ ಕುಮಾರ್ ಇಬ್ಬರೂ ಪಾಲುದಾರಿಕೆಯಲ್ಲಿ ‘ಈಗಲ್

ವಂಚನೆ ಪ್ರಕರಣ; ಬಿಟಿವಿ ವಾಹಿನಿ ಎಂ.ಡಿ ಕುಮಾರ್ ಅರೆಸ್ಟ್ Read More »

ಶಬರಿಮಲೆ ಯಾತ್ರೆ/ ಹುಬ್ಬಳ್ಳಿಯಿಂದ ವಿಶೇಷ ರೈಲು

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆಯ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಹುಬ್ಬಳ್ಳಿಯಿಂದ ಕೊಟ್ಟಾಯಂ ಗೆ ಎರಡು ವಿಶೇಷ ರೈಲು ಆರಂಭಿಸಿದ್ದು, ಯಾತ್ರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ತಿಳಿಸಿದ್ದಾರೆ. ಶಬರಿಮಲೆಗೆ ಹೋಗುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಕಳೆದ ವರ್ಷ ಸಾಲುಮರದ ತಿಮ್ಮಕ್ಕ, ಭಾರತೀಯ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಳ್ಳೂರ ಉಮೇಶ ಅವರ ನೇತೃತ್ವದಲ್ಲಿ ರೈಲ್ವೆ ಹಾಗೂ ಕೇಂದ್ರ

ಶಬರಿಮಲೆ ಯಾತ್ರೆ/ ಹುಬ್ಬಳ್ಳಿಯಿಂದ ವಿಶೇಷ ರೈಲು Read More »

ಜನರ ಬಳಿಗೆ ಸರಕಾರ/ ನವೆಂಬರ್ 27ರಂದು ಸಿಎಂ ಜನತಾ ದರ್ಶನ

ಸಮಗ್ರ ನ್ಯೂಸ್: ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಕಳೆದ ತಿಂಗಳೇ ಮುಖ್ಯಮಂತ್ರಿಗಳ ಜನತಾದರ್ಶನ ನಿಗದಿಯಾಗಿತ್ತಾದರೂ ಎಐಸಿಸಿ ನಾಯಕರು ದೆಹಲಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವರ ಸಭೆ ಕರೆದ ಹಿನ್ನೆಲೆಯಲ್ಲಿ ಜನತಾದರ್ಶನವನ್ನು ಮುಂದೂಡಲಾಗಿತ್ತು. ಮುಖ್ಯಮಂತ್ರಿಗಳ ಸೂಚನೆಯಂತೆ ಹಲವು ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಲ್ಲಿ ಜನತಾದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿಯವರು

ಜನರ ಬಳಿಗೆ ಸರಕಾರ/ ನವೆಂಬರ್ 27ರಂದು ಸಿಎಂ ಜನತಾ ದರ್ಶನ Read More »

ಮೂಡಿಗೆರೆ: ಕಾಡಾನೆ ದಾಳಿಯಿಂದ ಸಾವಿಗೀಡಾದ ಕಾರ್ತಿಕ್| ಪಾರ್ಥಿವ ಶರೀರದ ಎದುರು ಕಣ್ಣೀರಿಟ್ಟ ಮುದ್ದಿನ ನಾಯಿ

ಸಮಗ್ರ ನ್ಯೂಸ್: ಕಾಡಾನೆ ದಾಳಿಯಿಂದ ಮೃತಪಟ್ಟ ಕಾರ್ತಿಕ್ ಗೌಡ ಅವರ ಅಂತಿಮ ದರ್ಶನ ದುಃಖಭರಿತ ಭಾವುಕ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ಕಾರ್ತಿಕ್ ಗೌಡ ಅವರ ಮುದ್ದಿನ ಸಾಕುನಾಯಿ ತನ್ನ ಒಡೆಯನ ಪಾರ್ಥಿವ ಶರೀರದೆದುರು ಮೂಕವಾಗಿ ಕಣ್ಣೀರು ಹಾಕಿ ನೆರೆದಿದ್ದ ನೂರಾರು ಜನರ ಕಣ್ಣಾಲಿಗಳು ತೇವವಾಗುವಂತೆ ಮಾಡಿತು. ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ಬುಧವಾರ ಸಂಜೆ ಆನೆಯನ್ನು ಕಾಡಿಗಟ್ಟುತ್ತಿದ್ದ ಸಂದರ್ಭದಲ್ಲಿ ಆನೆ ಕಾರ್ಯಾಚರಣೆ ಪಡೆಯ ನೌಕರ ಕಾರ್ತಿಕ್ ಗೌಡ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಮರಣೋತ್ತರ ಪರೀಕ್ಷೆಯ ನಂತರ ಕಾರ್ತಿಕ್

ಮೂಡಿಗೆರೆ: ಕಾಡಾನೆ ದಾಳಿಯಿಂದ ಸಾವಿಗೀಡಾದ ಕಾರ್ತಿಕ್| ಪಾರ್ಥಿವ ಶರೀರದ ಎದುರು ಕಣ್ಣೀರಿಟ್ಟ ಮುದ್ದಿನ ನಾಯಿ Read More »

ಬಿಹಾರ: ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಸಮಗ್ರ ನ್ಯೂಸ್: ಒಂದೇ ಬಾರಿ ಹೆರಿಗೆಯಲ್ಲಿ ಅವಳಿ ಮಕ್ಕಳ ಜನನವನ್ನು ನಾವು ಅನೇಕ ಸಂದರ್ಭಗಳಲ್ಲಿ ನೋಡುತ್ತೇವೆ. ಇದು ಸಾಮಾನ್ಯ ವಿಷಯವೆಂದೇ ಹೇಳಬಹುದು. ಆದರೆ ಒಂದೇ ಬಾರಿಗೆ ನಾಲ್ಕು ಮಕ್ಕಳು ಹುಟ್ಟುವುದು ತೀರಾ ಅಪರೂಪ; ಅಸಾಧಾರಣವೂ ಕೂಡ. ಆದರೆ, ಇಲ್ಲಿ ಗರ್ಭಿಣಿಯೊಬ್ಬರು ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಜಿಲ್ಲೆಯ ನೈನಿಜೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಚೋಟ್ಕಿ ನೈನಿಜೋರ್ ಗ್ರಾಮದ ಭರತ್ ಯಾದವ್ ಅವರ ಪತ್ನಿ ಜ್ಞಾನತಿ

ಬಿಹಾರ: ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ! Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಒಳ್ಳೆ ಹುಡುಗ ಪ್ರಥಮ್

ಸಮಗ್ರ ನ್ಯೂಸ್: ನಟ ಪ್ರಥಮ್ ಸರಳವಾಗಿ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಮಂಡ್ಯದ ಭಾನುಶ್ರೀ ಎಂಬುವವರ ಜತೆಗೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪ್ರಥಮ್, ಸೋಷಿಯಲ್‌ ಮೀಡಿಯಾದಲ್ಲಿ ಶೀಘ್ರದಲ್ಲಿಯೇ ಮದುವೆ ಎಂದೂ ಹೇಳಿಕೊಂಡಿದ್ದರು. ಅದರಂತೆ ಹೊಸ ಜೀವನಕ್ಕೆ ಕಾಲು ಇಟ್ಟಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಒಳ್ಳೆ ಹುಡುಗ ಪ್ರಥಮ್ ಗೆನಟರಾದ ಧ್ರುವ ಸರ್ಜಾ, ನೆನಪಿರಲಿ ಪ್ರೇಮ್‌ ಸೇರಿ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು ಈ ಜೋಡಿಗೆ ಶುಭ ಹಾರೈಸಿದ್ದಾರೆ. ಅಷ್ಟೇ ಅಲ್ಲದೆ, ಇತ್ತೀಚೆಗಷ್ಟೇ ಬಿಗ್‌ಬಾಸ್‌ನಿಂದ ಹೊರಬಂದ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಒಳ್ಳೆ ಹುಡುಗ ಪ್ರಥಮ್ Read More »