ರಾಜ್ಯ

ಮಹಿಳೆಯರೇ ಗಮನಿಸಿ…| ಶಕ್ತಿ ಯೋಜನೆಯಲ್ಲಿ ಮತ್ತೊಂದು ಬದಲಾವಣೆ ಮಾಡಿದ KSRTC

ಸಮಗ್ರ ನ್ಯೂಸ್: ರಾಜ್ಯದ ಮಹಿಳೆಯರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆಯಡಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಈಗ ನಿಗದಿತ ಗುರುತಿನ ಚೀಟಿಗಳ ಝರಾಕ್ಸ್ ಪ್ರತಿಗಳನ್ನು ಮಾನ್ಯ ಮಾಡಲು ರಾಜ್ಯ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಮೊಬೈಲ್ ನಲ್ಲಿರುವ ಆಧಾರ್ ಕಾರ್ಡ್ ಸಾಫ್ಟ್ ಕಾಪಿ ತೋರಿಸಿಯೂ ಪ್ರಯಾಣಿಸಬಹುದು. ಹೀಗಾಗಿ ಉಚಿತ ಬಸ್ ಪ್ರಯಾಣಕ್ಕೆ ಐಡಿ ಕಾರ್ಡ್ ಒರಿಜನಲ್ ಕಡ್ಡಾಯ ಎಂಬ ಹಿಂದಿನ ಆದೇಶದಿಂದ ನಿರಾಳರಾಗಿದ್ದಾರೆ. ಸರ್ಕಾರದ ಸೂಚನೆಗಳನ್ನು ಪಾಲಿಸಲು ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಶಕ್ತಿ

ಮಹಿಳೆಯರೇ ಗಮನಿಸಿ…| ಶಕ್ತಿ ಯೋಜನೆಯಲ್ಲಿ ಮತ್ತೊಂದು ಬದಲಾವಣೆ ಮಾಡಿದ KSRTC Read More »

ಪೋಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿ/ ಮರು ಪರೀಕ್ಷೆ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪೋಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆಯನ್ನು ನಡೆಸುತ್ತಿದ್ದು, ಡಿಸೆಂಬರ್ 23, 2023, ಶನಿವಾರರಂದು ಮರು ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಈ ಹಿಂದಿನ ಪರೀಕ್ಷೆಗೆ ಆರ್ಹತೆ ಪಡೆದವರು, ಮುಂದೆ ನಡೆಯಲಿರುವ ಪರೀಕ್ಷೆಗೂ ಆರ್ಹತೆ ಪಡೆಯಲಿದ್ದಾರೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಪೋಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿ/ ಮರು ಪರೀಕ್ಷೆ ದಿನಾಂಕ ಪ್ರಕಟ Read More »

ನವೆಂಬರ್ 25 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 25ರಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಲಿದ್ದಾರೆ. ಹೆಚ್‍ಎಎಲ್ ಆಯೋಜಿಸಿರುವ ಕಾರ್ಯಕ್ರಮದ ನಿಮಿತ್ತ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಹೆಚ್‍ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

ನವೆಂಬರ್ 25 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ Read More »

ಬೆಂಗಳೂರಿಗೆ ಮತ್ಸ್ಯವಾಹಿನಿ/ ಮನೆ ಬಾಗಿಲಲ್ಲೇ ಸಿಗಲಿದೆ ತಾಜಾ ಮೀನು

ಸಮಗ್ರ ನ್ಯೂಸ್: ರಾಜಧಾನಿಯ ನಾಗರಿಕರ ಮನೆ ಬಾಗಿಲಿಗೆ ತಾಜಾ ಮೀನು ಒದಗಿಸುವ ಮತ್ತು ಮೀನುಗಾರಿಕೆ ಕ್ಷೇತ್ರದ ಮಾರುಕಟ್ಟೆಯ ಸಮಸ್ಯೆಗೆ ಪರಿಹಾರ ಒದಗಿಸಲು ಕರ್ನಾಟಕ ರಾಜ್ಯ ಸರ್ಕಾರ ಮತ್ಸ್ಯ ವಾಹಿನಿ ಯೋಜನೆ ಪ್ರಾರಂಭಿಸಿದೆ. 150 ಮತ್ಸ್ಯ ವಾಹಿನಿ ವಾಹನಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಇದು ಬೆಂಗಳೂರಿನ ಮನೆಗಳಿಗೆ ತಾಜಾ ಮೀನುಗಳನ್ನು ಒದಗಿಸಲಿದೆ. ವಿಧಾನಸೌಧದಲ್ಲಿ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಿದ್ದಾರೆ. 150 ಮತ್ಸ್ಯವಾಹಿನಿ ವಾಹನಗಳು ಬೆಂಗಳೂರು ನಗರದಾದ್ಯಂತ ಸಂಚರಿಸಲಿದ್ದು, ಬೆಳಗ್ಗಿನ

ಬೆಂಗಳೂರಿಗೆ ಮತ್ಸ್ಯವಾಹಿನಿ/ ಮನೆ ಬಾಗಿಲಲ್ಲೇ ಸಿಗಲಿದೆ ತಾಜಾ ಮೀನು Read More »

ಪೊನ್ನಂಪೇಟೆ: ಕಾರು ಬೈಕ್ ಡಿಕ್ಕಿ- ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ಬೈಕ್ ಮತ್ತು ವ್ಯಾಗನರ್ ಕಾರ್ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ಕಿರುಗೂರು ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಶಶಿ(22) ಕೋತೂರು ಅವರನ್ನು ಗೋಣಿಕೊಪ್ಪಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಸಾಗಿಸುವ ಸಂದರ್ಭ ಮಾರ್ಗಮದ್ಯೆ ಕೊನೆಯುಸಿರೆಳೆದಿದ್ದಾರೆ. ಪೊನ್ನಂಪೇಟೆ ಕಡೆಯಿಂದ ಬಾಳಲೆ ಕಡೆಗೆ ಹೋಗುತ್ತಿದ ಬೈಕ್ ಹಾಗೂ ಬಾಳಲೆ ಕಡೆಯಿಂದ ಪೊನ್ನಂಪೇಟೆ ಕಡೆಗೆ ಹೋಗುತ್ತಿದ್ದ ಕಾರ್ ಅಳಮೇಂಗಡ ಬೋಸ್ ಮಂದಣ್ಣ ಎಂಬುವರಿಗೆ ಸೇರಿದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಪೊನ್ನಂಪೇಟೆ: ಕಾರು ಬೈಕ್ ಡಿಕ್ಕಿ- ಬೈಕ್ ಸವಾರ ಸಾವು Read More »

ಪೋಲಿಯೊ ಪೀಡಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಹಳೆಯ ಮನೆಯನ್ನು ದುರಸ್ತಿ ಮಾಡಲು ಕಾಮಗಾರಿ ಮಾಡುವ ಸಂದರ್ಭದಲ್ಲಿ ತಮ್ಮನೆ ಅಣ್ಣನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ವಿರಾಜಪೇಟೆ ಹೊರವಲಯದ ಕಾಕೋಟು ಪರಂಬುವಿನಲ್ಲಿ ನಡೆದಿದೆ. ದಯಾನಂದ ಕೆ.ಜಿ.(67) ಹುಟ್ಟು ಅಂಗವಿಕಲರಾಗಿದ್ದು ಅವರಿಗೆ ಸೇರಿದ ಮೂವತ್ತೈದು ವರ್ಷಗಳು ಹಿಂದಿನ ಮನೆಯು ಮಳೆಗಾಲದಲ್ಲಿ ಸಂಪೂರ್ಣವಾಗಿ ಸೋರುತ್ತಿದ್ದ ಕಾರಣ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಮನೆ ರಿಪೇರಿ ಕೆಲಸ ಮಾಡಲು ದಯಾನಂದ ಕುಟುಂಬದ ಸದಸ್ಯರು ನಿರ್ಧಾರ ಮಾಡಿದರು. ಅದರಂತೆ ರಿಪೇರಿ ಕೆಲಸ ಮಾಡುವ ಸಮಯದಲ್ಲಿ ದಯಾನಂದ ಅವರ ಸಹೋದರ

ಪೋಲಿಯೊ ಪೀಡಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ Read More »

ಕುಶಾಲನಗರ: ಹೋಟೆಲ್ ಗೆ ನುಗ್ಗಿದ ಟ್ಯಾಂಕರ್

ಸಮಗ್ರ ನ್ಯೂಸ್: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್ ಇದ್ದಕ್ಕಿದ್ದಂತೆ ಅಂಗಡಿಯೊಳಗೆ ನುಸುಲಿರುವ ಘಟನೆ ನ. 21ರ ನಡು ರಾತ್ರಿ 1ಗಂಟೆ ಸಮಯದಲ್ಲಿ ವರದಿಯಾಗಿದೆ. ಕುಶಾಲನಗರ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರ್ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳದಲ್ಲಿ (ಮಸೀದಿ ಸಮೀಪ) ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹಂಸ ಎಂಬುವವರ ಹೋಟೆಲ್ ಒಳಗೆ ನುಗ್ಗಿ ನಿಂತುಕೊಂಡಿದೆ. ಇದರಿಂದಾಗಿ ಹೋಟೆಲ್ ನ ಮುಂಭಾಗ ಸಂಪೂರ್ಣವಾಗಿ ಹಾಗೂ ಅದರ ಒತ್ತಿನಲ್ಲಿರುವ ಕೆ.ಕೆ. ಸೌಂಡ್ಸ್ ಶಾಮಿಯಾನದ ಅಂಗಡಿ ಹಾನಿಗೊಳಗಾಗಿವೆ. ಅದೃಷ್ಟವಶಾತ್ ಹೋಟೆಲ್ ಮತ್ತು ಕೆ.ಕೆ. ಸೌಂಡ್ಸ್

ಕುಶಾಲನಗರ: ಹೋಟೆಲ್ ಗೆ ನುಗ್ಗಿದ ಟ್ಯಾಂಕರ್ Read More »

ರಾಜ್ಯ ಸರ್ಕಾರದ ಮುಖ್ಯ‌ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. 1986 ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಈಗ ಗೃಹ ಇಲಾಖೆಯ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನ.30ಕ್ಕೆ ನಿವೃತ್ತರಾಗಲಿರುವ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಸ್ಥಾನಕ್ಕೆ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ‌ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ Read More »

ಬೆಂಗಳೂರಿನ ಕಂಬಳಕ್ಕೆ ಬ್ರಿಜ್ ಭೂಷಣ್ ಅನುಪಸ್ಥಿತಿ

ಸಮಗ್ರ ನ್ಯೂಸ್: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯಲಿರುವ ಕಂಬಳದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಕಂಬಳ ಸಮಿತಿ ಅಧ್ಯಕ್ಷ ಅಶೋಕ್‍ಕುಮಾರ್ ರೈ ತಿಳಿಸಿದ್ದಾರೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಡೆಯುತ್ತಿರುವ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು. ಇದು ಕಾಂಗ್ರೆಸ್ ಕಾರ್ಯಕರ್ತರ ಕೋಪಕ್ಕೆ ಕಾರಣವಾಗಿತ್ತು. ಇದೀಗ ಬ್ರಿಜ್ ಭೂಷಣ್ ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸುವುದರೊಂದಿಗೆ ಕೋಪ

ಬೆಂಗಳೂರಿನ ಕಂಬಳಕ್ಕೆ ಬ್ರಿಜ್ ಭೂಷಣ್ ಅನುಪಸ್ಥಿತಿ Read More »

ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲು/ ಪ್ರಾಯೋಗಿಕ ಸಂಚಾರ ಆರಂಭ

ಸಮಗ್ರ ನ್ಯೂಸ್: ಬೆಂಗಳೂರು-ಧಾರವಾಡ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದ್ದು, ಇಂದಿನಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಬೆಳಿಗ್ಗೆ 5.45ಕ್ಕೆ ಹೊರಟ ರೈಲು, ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದ್ದು, ಅಲ್ಲಿಂದ ಮಧ್ಯಾಹ್ನ 2ಕ್ಕೆ ವಾಪಸ್ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರು ಮತ್ತು ಧಾರವಾಡ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ ಹಿನ್ನಲೆಯಲ್ಲಿ ಅದನ್ನು ಬೆಳಗಾವಿವರೆಗೆ ವಿಸ್ತರಿಸಲು

ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲು/ ಪ್ರಾಯೋಗಿಕ ಸಂಚಾರ ಆರಂಭ Read More »