ರಾಜ್ಯ

ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್/ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್‍ನ್ಯೂಸ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಸಿದ್ಧರಾಮಯ್ಯ ಮಾತನಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಕನ್ನಡ ಶಾಲೆಗಳ ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಹೀಗಾಗಿ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ನೀರು ಮತ್ತು ವಿದ್ಯುತ್ ಪೂರೈಸಲಾಗುವುದು ಎಂದು ಅವರು ಹೇಳಿದರು.

ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್/ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್‍ನ್ಯೂಸ್ Read More »

ಅನ್ನ ಸುವಿಧಾ ಯೋಜನೆ/ ವಯೋವೃದ್ಧರ ಮನೆಗೆ ಪಡಿತರ

ಸಮಗ್ರ ನ್ಯೂಸ್: ವೃದ್ಧಾಪ್ಯದ ಕಾರಣಕ್ಕೆ ಸರಕಾರ ಒದಗಿಸುವ ಪಡಿತರವನ್ನು ಪಡೆದುಕೊಳ್ಳಲಾಗದ ವೃದ್ಧರ ಮನೆಗಳಿಗೆ ತೆರಳಿ ಪಡಿತರ ಒದಗಿಸುವ ಯೋಜನೆಯನ್ನು ರಾಜ್ಯ ಸರಕಾರ ಪ್ರಾಯೋಗಿಕವಾಗಿ ಆರಂಭಿಸಿದೆ. ಅನ್ನ ಸುವಿಧ ಎಂಬ ಹೆಸರಿನ ಯೋಜನೆಯನ್ನು ರಾಜ್ಯ ಸರಕಾರ ಆರಂಭಿಸುತ್ತಿದ್ದು, ಇದು ಕಾರ್ಡ್‍ನಲ್ಲಿ ಓರ್ವ ಸದಸ್ಯರಿರುವ ಹಿರಿಯರಿಗೆ ಪಡಿತರ ವಿತರಿಸುವ ಕೆಲಸವನ್ನು ಮಾಡುತ್ತಿದೆ. ಇದಕ್ಕೂ ಮೊದಲು ಇಂತಹ ವೃದ್ಧರಿಗೆ ಓಟಿಪಿ ರಹಿತವಾಗಿ ಪಡಿತರ ಪಡೆಯಲು ಅವಕಾಶವನ್ನು ನೀಡಲಾಗುತ್ತಿದ್ದು, ಇತರ ವ್ಯಕ್ತಿಗಳ ಮೂಲಕ ಪಡಿತರವನ್ನು ಪಡೆದುಕೊಳ್ಳುತ್ತಿದ್ದರು. ಇದೀಗ ಪಡಿತರವನ್ನು ನೇರವಾಗಿ ಅವರ ಮನೆಗಳಿಗೆ

ಅನ್ನ ಸುವಿಧಾ ಯೋಜನೆ/ ವಯೋವೃದ್ಧರ ಮನೆಗೆ ಪಡಿತರ Read More »

ಮೂಡಿಗೆರೆ: ನ. 3ರಂದು ಸೌಜನ್ಯಳ ‌ನ್ಯಾಯಕ್ಕಾಗಿ ಜನಾಗ್ರಹ ಸಭೆ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲಾ ಪ್ರಗತಿಪರ ಸಂಘಟನೆಗಳೊಂದಿಗೆ ನ. 3ರಂದು ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ ಜನಾಗ್ರಹ ಸಭೆ ಹಾಗೂ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೂಡಿಗೆರೆ ನಾಗರೀಕ ಒಕ್ಕೂಟದ ಕಾರ್ಯದರ್ಶಿ ಜಗದೀಶ್ ಚಕ್ರವರ್ತಿ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮ ಯಾವುದೇ ರಾಜಕೀಯ ಪ್ರೇರಿತವಲ್ಲ. ಯಾವುದೇ ಜಾತಿ, ಧರ್ಮ, ವ್ಯಕ್ತಿ, ಕ್ಷೇತ್ರಕ್ಕೆ ಅಪಮಾನ ಮಾಡುವ ಉದ್ದೇಶವಿಲ್ಲ.

ಮೂಡಿಗೆರೆ: ನ. 3ರಂದು ಸೌಜನ್ಯಳ ‌ನ್ಯಾಯಕ್ಕಾಗಿ ಜನಾಗ್ರಹ ಸಭೆ Read More »

ಮಡಿಕೇರಿ:ಕೊಂಗಣ ಹೊಳೆಯಲ್ಲಿ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್:ಪೊನ್ನಂಪೇಟೆ ತಾಲೂಕು ಬಿ.ಶೆಟ್ಟಿಗೇರಿ ಗ್ರಾಮದ ಕೊಂಗಣ ಹೊಳೆಯಲ್ಲಿ ಯುವಕನೋರ್ವನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಮಡಿಕೇರಿ ತಾಲೂಕು ಚೆಟ್ಟಳ್ಳಿಯ ಪುತ್ತರಿರ ಗಗನ್ ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಅವರು ಬಿ.ಶೆಟ್ಟಿಗೇರಿ ಸಮೀಪ ಕಾಫಿ ಎಸ್ಟೇಟ್ ಒಂದರಲ್ಲಿ ವ್ಯವಸ್ಥಾಪಕ ಹುದ್ದೆಯನ್ನು ನಿರ್ವಹಿಸುತ್ತಿದ್ದರು.

ಮಡಿಕೇರಿ:ಕೊಂಗಣ ಹೊಳೆಯಲ್ಲಿ ಯುವಕನ ಮೃತದೇಹ ಪತ್ತೆ Read More »

ಕನ್ನಡ ನಾಡನ್ನು ಕಟ್ಟಿದ್ದು ಹೇಗೆ? ಮೈಸೂರು ರಾಜ್ಯ ಕರ್ನಾಟಕವಾದ ಕಥೆ…

ಸಮಗ್ರ ವಾರ್ತೆ: ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ಇತಿಹಾಸ ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ

ಕನ್ನಡ ನಾಡನ್ನು ಕಟ್ಟಿದ್ದು ಹೇಗೆ? ಮೈಸೂರು ರಾಜ್ಯ ಕರ್ನಾಟಕವಾದ ಕಥೆ… Read More »

ಪುನೀತ್ ಹೃದಯ ಜ್ಯೋತಿ ಯೋಜನೆ/ ರಾಜ್ಯದಲ್ಲಿ ಮುಂದಿನ ತಿಂಗಳು ಜಾರಿಗೆ

ಸಮಗ್ರ ನ್ಯೂಸ್: ಹೃದಯಾಘಾತಕ್ಕೆ ಒಳಗಾದವರಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ಪುನೀತ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡಿದ್ದು, ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಹೃದಯಾಘಾತ ಆದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮಾಡಿ, ಸಾವಿನ ಪ್ರಮಾಣ ಕಡಿಮೆ ಮಾಡುವ

ಪುನೀತ್ ಹೃದಯ ಜ್ಯೋತಿ ಯೋಜನೆ/ ರಾಜ್ಯದಲ್ಲಿ ಮುಂದಿನ ತಿಂಗಳು ಜಾರಿಗೆ Read More »

ಮಡಿಕೇರಿ: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ| ಚಿಕ್ಕೋಡಿ‌ ಮೂಲದ ಮೂವರು ಕಾರ್ಮಿಕರು ಸಾವು

ಸಮಗ್ರ ನ್ಯೂಸ್: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಬರೆ ಮಣ್ಣು ಕುಸಿದು ಮೂವರು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಗರದ ಸ್ಟಿವರ್ಟ್ ಹಿಲ್ ಬಳಿ ವರದಿಯಾಗಿದೆ. ಬಸಪ್ಪ,ಲಿಂಗಪ್ಪ, ಆನಂದ ಮೃತ ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಚಿಕ್ಕೊಡಿ ಮೂಲದವರೆಂದು ತಿಳಿದು ಬಂದಿದೆ. ಕಟ್ಟಡದ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಬರೆ ಮಣ್ಣು ಕುಸಿದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಮಡಿಕೇರಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಕಾರ್ಯಾಚರಣೆ ನಡೆಸಿ ಒಬ್ಬರ ಮೃತದೇಹವನ್ನು ಮೇಲೆತ್ತಲಾಯಿತು. ಮತ್ತಿಬ್ಬರ

ಮಡಿಕೇರಿ: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ| ಚಿಕ್ಕೋಡಿ‌ ಮೂಲದ ಮೂವರು ಕಾರ್ಮಿಕರು ಸಾವು Read More »

ಮೂಡಬಿದಿರೆ: ಡಾ. ಮೋಹನ ಆಳ್ವಾರಿಗೆ ಪಿತೃವಿಯೋಗ| ಶತಾಯುಷಿ ಆನಂದ ಆಳ್ವ ದೈವಾಧೀನ

ಸಮಗ್ರ ನ್ಯೂಸ್: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ಮಕ್ಕಳಾದ ಸೀತಾರಾಮ, ಬಾಲಕೃಷ್ಣ, ಡಾ.ಮೋಹನ್ ಆಳ್ವ, ಮೀನಾಕ್ಷಿ ಸೇರಿದಂತೆ ಅಸಂಖ್ಯಾತ ಬಂಧು-ಮಿತ್ರರನ್ನು ಅಗಲಿರುವ ಆನಂದ ಆಳ್ವ

ಮೂಡಬಿದಿರೆ: ಡಾ. ಮೋಹನ ಆಳ್ವಾರಿಗೆ ಪಿತೃವಿಯೋಗ| ಶತಾಯುಷಿ ಆನಂದ ಆಳ್ವ ದೈವಾಧೀನ Read More »

ಚಿಕ್ಕಮಗಳೂರು: ಬಸ್ ನಿಲ್ದಾಣದಲ್ಲಿ ಕಳ್ಳತನ ಕೈ ಚಳಕ | ಸರಕಾರಿ ಬಸ್ಸಿಗೆ ಹತ್ತುವಾಗ್ಲೇ ಮಾಂಗಲ್ಯ ಕಿತ್ತ ಖದೀಮರು

ಸಮಗ್ರ ನ್ಯೂಸ್: ಕೆ ಎಸ್ ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮೂಡಿಗೆರೆಯಿಂದಾ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ಆ.31 ರಂದು ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ ಕಳೆದುಕೊಂಡ ಮಹಿಳೆ ಕೊಟ್ಟಿಗೆಹಾರದ ತರುವೆ ಮೂಲದವರಾಗಿದ್ದು, 1 ಲಕ್ಷ ಕ್ಕಿಂತಾ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರಎಂದು ತಿಳಿದಿದೆ. ಇನ್ನು ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಸಿ.ಸಿ.ಕ್ಯಾಮರಾ ಇಲ್ಲದೇ ಇರುವುದಕ್ಕೆ ಈ ಕಳ್ಳತನ ಮಾಡುವುದಕ್ಕೆ

ಚಿಕ್ಕಮಗಳೂರು: ಬಸ್ ನಿಲ್ದಾಣದಲ್ಲಿ ಕಳ್ಳತನ ಕೈ ಚಳಕ | ಸರಕಾರಿ ಬಸ್ಸಿಗೆ ಹತ್ತುವಾಗ್ಲೇ ಮಾಂಗಲ್ಯ ಕಿತ್ತ ಖದೀಮರು Read More »

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಮಂದಿ ಸಾಧಕರಿಗೆ ಸನ್ಮಾನ

ಸಮಗ್ರ ನ್ಯೂಸ್: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರಶಸ್ತಿ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, 2023ನೇ ಸಾಲಿನಲ್ಲಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಪ್ರತಿನಿತ್ಯ ನೀಡಲಾಗಿದೆ. ‘ಕರ್ನಾಟಕ ಸಂಭ್ರಮ-50’ರ ಪ್ರಯುಕ್ತ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಮಂದಿ ಸಾಧಕರಿಗೆ ಸನ್ಮಾನ Read More »