ರಾಜ್ಯ

ಇಂದು ರಾಷ್ಟ್ರೀಯ ಏಕತಾ ದಿನ/ ಸರ್ದಾರ್ ಪಟೇಲರಿಗೆ ನಮನ ಸಲ್ಲಿಸಿದ ಗಣ್ಯರು

ಸಮಗ್ರ ನ್ಯೂಸ್: ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ಇಂದು ‘ರಾಷ್ಟ್ರೀಯ ಏಕತಾ ದಿನ’ ಎಂಬುದಾಗಿ ಆಚರಿಸಲಾಗುತ್ತಿದೆ. ಪಟೇಲ್ ಅವರ 148ನೇ ಜನ್ಮದಿನದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಹಲವರು ಪಟೇಲರಿಗೆ ನಮನ ಸಲ್ಲಿಸಿದ್ದಾರೆ. 1875ರಲ್ಲಿ ಗುಜರಾತ್‍ನಲ್ಲಿ ಜನಿಸಿದ ಪಟೇಲರು ವಕೀಲರಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು. ಸ್ವತಂತ್ರ ಭಾರತದ ಮೊದಲ ಗೃಹಮಂತ್ರಿಯಾಗಿದ್ದುಕೊಂಡು ನೂರಾರು ರಾಜಪ್ರಭುತ್ವಗಳನ್ನು ಭಾರತದ ಒಕ್ಕೂಟದಲ್ಲಿ ಸೇರ್ಪಡಿಸಿದ ಕೀರ್ತಿ ಪಟೇಲರಿಗೆ ಸಲ್ಲುತ್ತದೆ. ಇಂದು ಗುಜರಾತ್‍ನ ಏಕತಾ ಪ್ರತಿಮೆ ಬಳಿ ಪುಷ್ಪ

ಇಂದು ರಾಷ್ಟ್ರೀಯ ಏಕತಾ ದಿನ/ ಸರ್ದಾರ್ ಪಟೇಲರಿಗೆ ನಮನ ಸಲ್ಲಿಸಿದ ಗಣ್ಯರು Read More »

ಮರಾಠಾ ಮೀಸಲಾತಿ ಹೋರಾಟಕ್ಕೆ ರಾಜ್ಯ ಸಾರಿಗೆ ಬಸ್ ಗೆ ಬೆಂಕಿ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆ.ಎ-38 ಎಫ್-1201 ಬಸ್‌ಗೆ ಬೆಂಕಿ ಹಚ್ಚಿದ್ದರಿಂದ ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು, ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದಿಂದ ಬಸ್‌ನಲ್ಲಿದ್ದ 39 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನಂತರ ಪ್ರಯಾಣಿಕರಿಗೆ ಸುರಕ್ಷಿತವಾಗಿ ಅವರ ತಲುಪುವ

ಮರಾಠಾ ಮೀಸಲಾತಿ ಹೋರಾಟಕ್ಕೆ ರಾಜ್ಯ ಸಾರಿಗೆ ಬಸ್ ಗೆ ಬೆಂಕಿ Read More »

ನೇತ್ರಾವತಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಂಗಳೂರಿನ ಸಮೀಪದಲ್ಲಿ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ ಬೈರಾಪುರ ಗ್ರಾಮದ ಪ್ರಸನ್ನ ಕುಮಾರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಬೈರಾಪುರ ಗ್ರಾಮದ ಶಂಕರೇಗೌಡ ಎಂಬುವವರ ಪುತ್ರ ಪ್ರಸನ್ನ ಕುಮಾರ್ (40 ವರ್ಷ) ನದಿಗೆ ಹಾರಿರುವ ವ್ಯಕ್ತಿ. ಪ್ರಸನ್ನಕುಮಾರ್ ತರಕಾರಿ, ಕೊತ್ತಂಬರಿ ಸೊಪ್ಪು ವ್ಯಾಪಾರ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ಕೊತ್ತಂಬರಿ ಸೊಪ್ಪು ಸರಬರಾಜು ಮಾಡುತ್ತಿದ್ದರು. ಇವತ್ತು

ನೇತ್ರಾವತಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಆತ್ಮಹತ್ಯೆ Read More »

ರಾಜ್ಯೋತ್ಸವ ಹಿನ್ನಲೆ: ನಾಳೆ ಈ ಐದು ಹಾಡುಗಳ ಗಾಯನ ಕಡ್ಡಾಯ| ಸರ್ಕಾರದಿಂದ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸುತ್ತೋಲೆ

ಸಮಗ್ರ ನ್ಯೂಸ್: ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನ ಅಂಗವಾಗಿ ಸರ್ಕಾರ ಆಯ್ಕೆಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಹಾಡುಗಳನ್ನು ಜಿಲ್ಲಾ, ತಾಲೂಕು ಹಾಗೂ ಗ್ರಾಮ‌ ಪಂಚಾಯತಿ ಮಟ್ಟದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ಗೀತ ಗಾಯನದ ನಮನ ಸಲ್ಲಿಸಬೇಕೆಂದು ಸೂಚನೆ ನೀಡಲಾಗಿದೆ. ಕರ್ನಾಟಕ-50 ಸಂಭ್ರಮ ಹಿನ್ನೆಲೆಯಲ್ಲಿ 2023 ನವೆಂಬರ್

ರಾಜ್ಯೋತ್ಸವ ಹಿನ್ನಲೆ: ನಾಳೆ ಈ ಐದು ಹಾಡುಗಳ ಗಾಯನ ಕಡ್ಡಾಯ| ಸರ್ಕಾರದಿಂದ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸುತ್ತೋಲೆ Read More »

ನಿಮ್ಮ ಕೂದಲು ಚೆನ್ನಾಗಿ ಕಾಣಬೇಕು ಅಂದ್ರೆ ಪಾರ್ಲರ್ ಗೆ ಹೋಗಬೇಕು ಅಂತೇನಿಲ್ಲ? ಈ ಟಿಪ್ಸ್ ಫಾಲೋ ಮಾಡಿ ಸಾಕು

ಕೂದಲು ನಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಕೂದಲನ್ನು ಆರೋಗ್ಯಕರವಾಗಿ, ಬಲವಾಗಿಡಲು ಸರಿಯಾದ ಪೋಷಣೆಯ ಅಗತ್ಯವಿದೆ. ಕೂದಲಿನ ಆರೈಕೆಗಾಗಿ ಹಲವು ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದರಲ್ಲೂ ನಾವು ಸೇವಿಸುವ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ಕೂದಲಿಗೆ ಪ್ರೋಟೀನ್ ಮತ್ತು ಕ್ಯಾಲ್ಸಿಯಂನ ಅಗತ್ಯವನ್ನು ಪೂರೈಸಲು ಮೊಸರು ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮೊಸರು ಹೆಚ್ಚಾಗಿ ಪ್ರೋಬಯಾಟಿಕ್ಗಳನ್ನು ಹೊಂದಿರುತ್ತದೆ. ಅದು ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ ಮತ್ತು ಬೋಳು ತಲೆಯಿಂದ ನಿಮ್ಮನ್ನು ರಕ್ಷಿಸುತ್ತದೆ. ಮೊಟ್ಟೆಗಳು ಕೂದಲಿಗೆ ಸಂಪೂರ್ಣ ಪೋಷಣೆಯ ಪ್ರಮುಖ ಮೂಲವಾಗಿದೆ. ಇವುಗಳಲ್ಲಿ

ನಿಮ್ಮ ಕೂದಲು ಚೆನ್ನಾಗಿ ಕಾಣಬೇಕು ಅಂದ್ರೆ ಪಾರ್ಲರ್ ಗೆ ಹೋಗಬೇಕು ಅಂತೇನಿಲ್ಲ? ಈ ಟಿಪ್ಸ್ ಫಾಲೋ ಮಾಡಿ ಸಾಕು Read More »

ಬೆಂಗಳೂರಿನಲ್ಲಿ ಬಿಎಂಟಿಸಿಗೆ ಒಂದೇ ದಿನ ಇಬ್ಬರು ಬಲಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಟಿಸಿ ಜನರಿಗೆ ಯಮನಂತಾಗಿದೆ. ಈ ಬಿಎಂಟಿಸಿ ಗೆ ಬಲಿಯಾಗುವವರು ಒಬ್ಬರಿಬ್ಬರಲ್ಲ. ಈಗ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಿಎಂಟಿಸಿಗೆ ನಿನ್ನೆ ಬೆಳ್ಳಂಬೆಳಿಗ್ಗೆ ಇಬ್ಬರು ಬಲಿಯಾಗಿದ್ದಾರೆ. ರಸ್ತೆ ದಾಟುವ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಣಾ ಬಿಎಂಟಿಸಿ ಬಸ್‌ಗೆ ಬಲಿಯಾದ ಮಹಿಳೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಬಿಎಂಟಿಸಿಗೆ ಒಂದೇ ದಿನ ಇಬ್ಬರು ಬಲಿ Read More »

ಚಿಕ್ಕಮಗಳೂರು: ಹೃದಯಾಘಾತದಿಂದ ಮೃತಪಟ್ಟ ಮಹಿಳೆಯ ಕೈಯಲ್ಲಿದ್ದ ಬಳೆ ಕಳವು| ಆಸ್ಪತ್ರೆಯೊಳಗೆ ಕದ್ದವರಾರು?

ಸಮಗ್ರ ನ್ಯೂಸ್: ಹೃದಯಾಘಾತವಾಗಿದ್ದ ಮಹಿಳೆಯೋರ್ವರನ್ನು ಆಸ್ಪತ್ರೆಗೆ ತಂದಾಗ ಅವರು ಮೃತಪಟ್ಟಿದ್ದು, ಮೃತದೇಹವನ್ನು ಆಸ್ಪತ್ರೆಯಿಂದ ಹೊರತಂದಾಗ ಅವರ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳು ಕಾಣೆಯಾಗಿವೆ ಎಂದು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತ ಮಹಿಳೆಯ ಕಡೆಯ ಶಮಂತ್ ಎಂಬವರು ನೀಡಿದ ದೂರಿನಲ್ಲಿ ದಿನಾಂಕ 23-10-2023 ರಂದು ತಳವಾರದ ನಮ್ಮ ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ನನ್ನ ಆಪ್ತ ಸ್ನೇಹಿತರಾದ ಶೇಖರ್ ಮತ್ತು ಅವರ ಹೆಂಡತಿ ಅನಿತ, ತಾಯಿ ಲಕ್ಷ್ಮಿದೇವಿ ಹಾಗೂ ಅವರ ಕುಟುಂಬದವರೊಂದಿಗೆ ನನ್ನ ಮನೆಗೆ ಬಂದಿರುತ್ತಾರೆ. ಮರುದಿನ

ಚಿಕ್ಕಮಗಳೂರು: ಹೃದಯಾಘಾತದಿಂದ ಮೃತಪಟ್ಟ ಮಹಿಳೆಯ ಕೈಯಲ್ಲಿದ್ದ ಬಳೆ ಕಳವು| ಆಸ್ಪತ್ರೆಯೊಳಗೆ ಕದ್ದವರಾರು? Read More »

ಮೀಸಲಾತಿ ವಿವಾದಕ್ಕೆ ಶಾಸಕರ ಮನೆಯೇ ಭಸ್ಮ!!

ಸಮಗ್ರ ನ್ಯೂಸ್: ಮರಾಠ ಮೀಸಲಾತಿ ಹೋರಾಟಗಾರರು ಮಹಾರಾಷ್ಟ್ರದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಶಾಸಕರ ಮನೆ ಹೊತ್ತಿ ಉರಿದಿದೆ. ಮನೆಗೆ ಬೆಂಕಿ ಹಚ್ಚಿದ್ದ ವೇಳೆ ಶಾಸಕರು, ಅವರ ಕುಟುಂಬ ಮತ್ತು ಸಿಬ್ಬಂದಿ ಮನೆಯೊಳಗಡೆ ಇದ್ದರೂ ಅದೃಷ್ಟವಶಾತ್ ಬಚಾವಾಗಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಏಕನಾಥ್ ಶಿಂದೆ, ನಿಮ್ಮ ಹೋರಾಟ ದಾರಿ ತಪ್ಪುತ್ತಿದೆ ಎಂದು ಮರಾಠ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರುವ ಮನೋಜ್

ಮೀಸಲಾತಿ ವಿವಾದಕ್ಕೆ ಶಾಸಕರ ಮನೆಯೇ ಭಸ್ಮ!! Read More »

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್| ನ.15ರವರೆಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸಲು ಸೂಚನೆ

ಹೊಸದಿಲ್ಲಿ: ತಮಿಳುನಾಡಿಗೆ ನವೆಂಬರ್ 1 ರಿಂದ 15 ರವರೆಗೆ ಪ್ರತಿದಿನ 2600 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3 ಸಾವಿರ ಕ್ಯುಸೆಕ್​ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕಳೆದ ಬಾರಿ ಸಭೆಯಲ್ಲಿ ಆದೇಶಿಸಿತ್ತು. ಆದೇಶದ ಅವಧಿ ಮುಕ್ತಾಯವಾಗುತ್ತಿರುವ ಬೆನ್ನಲ್ಲೇ ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿಯು ಸಭೆ ನಡೆಸಿ ಕರ್ನಾಟಕದಿಂದ ನೀರು ಹರಿಸಲು ಸೂಚನೆ ನೀಡಿದೆ. ಕಾವೇರಿ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್| ನ.15ರವರೆಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸಲು ಸೂಚನೆ Read More »

ಬೆಂಗಳೂರು: ಅಗ್ನಿ ಅನಾಹುತಕ್ಕೆ 10ಕ್ಕೂ ಹೆಚ್ಚು ಬಸ್‌ಗಳು ಭಸ್ಮ

ಸಮಗ್ರ ನ್ಯೂಸ್: ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್‌ಗಳಿಗೆ ಬೆಂಕಿ ಬಿದ್ದಿದೆ. ಒಟ್ಟು ಹತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ ಆಗಿವೆ. ವೀರಭದ್ರನಗರದಲ್ಲಿ‌ ನಿಲ್ಲಿಸಲಾಗಿದ್ದ ಖಾಸಗಿ ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪಕ್ಕದಲ್ಲಿಯೇ ಶೆಡ್‌ಗಳಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ನಿಖರ ಕಾರಣ ತಿಳಿದು ಬರಬೇಕಿದೆ. ಸ್ಥಳದಲ್ಲಿ ನಿಲ್ಲಿಸಿರುವ ಎರಡು ಬಸ್‌ಗಳಿಗೆ ಮೊದಲು ಬೆಂಕಿ ಹೊತ್ತಿಕೊಂಡು ನಂತರ ಅದು ಹತ್ತಕ್ಕೂ ಹೆಚ್ಚು ಬಸ್‌ಗಳಿಗೆ ಚಾಚಿಕೊಂಡಿತು. ನೋಡು

ಬೆಂಗಳೂರು: ಅಗ್ನಿ ಅನಾಹುತಕ್ಕೆ 10ಕ್ಕೂ ಹೆಚ್ಚು ಬಸ್‌ಗಳು ಭಸ್ಮ Read More »