ರಾಜ್ಯ

ಸೌಜನ್ಯ ಪ್ರಕರಣದ ಮರುತನಿಖೆ‌ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರ

ಸಮಗ್ರ ನ್ಯೂಸ್: ಸರ್ವೋಚ್ಚ ನ್ಯಾಯಾಲಯವು ಸೌಜನ್ಯ ಪ್ರಕರಣ ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಕ್ಷೇತ್ರದ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ತಿಳಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸೌಜನ್ಯಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ

ಸೌಜನ್ಯ ಪ್ರಕರಣದ ಮರುತನಿಖೆ‌ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರ Read More »

ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ‌‌ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ. ಸೆಪ್ಟೆಂಬರ್ 22ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡದಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ

ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ‌‌ ಮುನ್ಸೂಚನೆ Read More »

ಪುತ್ತೂರು: ಕಾರ್ತಿಕ್ ಮೇರ್ಲ‌ ಕೊಲೆ ಪ್ರಕರಣ| ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ಏಳು ವರ್ಷದ ಹಿಂದೆ ಪುತ್ತೂರಿನ ಸಂಪ್ಯ ಪೊಲೀಸ್ ಠಾಣೆ ಮುಂಭಾಗ ನಡೆಯುತ್ತಿದ್ದ ಸಾರ್ವಜನಿಕ ಗಣೇಶೋತ್ಸವ ಪೆಂಡಾಲ್‌ನಲ್ಲಿ ನಡೆದಿದ್ದ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಕಾರ್ತಿಕ್‌ ಸುವರ್ಣ ಮೇರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದ್ದು, ಸೆ.22‌ರಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಲಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಾಧಾರಗಳಿಂದ ಆರೋಪಿಗಳಾದ ಕಿರಣ್ ಹಾಗೂ ಪ್ರೀತೇಶ್ ಎಂಬುವರ ಮೇಲಿನ ಆರೋಪ ಸಾಬೀತಾಗಿರುವುದಾಗಿ ತೀರ್ಮಾನಿಸಿದ್ದು,

ಪುತ್ತೂರು: ಕಾರ್ತಿಕ್ ಮೇರ್ಲ‌ ಕೊಲೆ ಪ್ರಕರಣ| ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ Read More »

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರೈ ಆರೋಗ್ಯ ವಿಚಾರಿಸಿದ ಸಂಸದ ಚೌಟ

ಸಮಗ್ರ ನ್ಯೂಸ್: ಮೂಡುಬಿದಿರೆ ಮತ್ತು ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಹಿರಿಯ ನಾಯಕ, ಮಾಜಿ ಸಚಿವ ರಮಾನಾಥ್ ರೈ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಸ್ತುತ ಅವರ ಚೇತರಿಕೆ ಕಂಡುಬರುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ರಮಾನಾಥ್ ರೈ ಅವರನ್ನು ನೇರವಾಗಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಇದೇ ವೇಳೆ ಘಟನೆಯಲ್ಲಿ

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರೈ ಆರೋಗ್ಯ ವಿಚಾರಿಸಿದ ಸಂಸದ ಚೌಟ Read More »

ಮುಂಬೈ: ಫಿಟ್ನೆಸ್ ರೇಸ್ ನಲ್ಲಿ ಕಮಾಲ್ ಮಾಡಿದ ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಹಾಗೂ ಮಂಗಳೂರಿನ ಪ್ರಸಿದ್ಧ ಫಿಟ್ನೆಸ್ ತರಬೇತುದಾರ ಪ್ರದೀಪ್ ಕುಮಾರ್ ಆಚಾರ್ಯ ಜೋಡಿಯು ಮುಂಬೈನಲ್ಲಿ ನಡೆದ ವಿಶ್ವಪ್ರಸಿದ್ಧ ‘ಹೈರಾಕ್ಸ್’ (HYROX) ಜಾಗತಿಕ ಫಿಟ್ನೆಸ್ ಸ್ಪರ್ಧೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಅಪರೂಪದ ಸಾಧನೆ ಮಾಡಿದೆ. ಮುಂಬೈನ ಗೋರೆಗಾಂವ್‌ನಲ್ಲಿರುವ ನೆಸ್ಕೋ ಸೆಂಟರ್‌ನಲ್ಲಿ ಸೆಪ್ಟೆಂಬರ್ 17ರಿಂದ 20ರವರೆಗೆ ಆಯೋಜಿಸಲಾಗಿದ್ದ ಈ ಕ್ರೀಡಾಕೂಟದ ಪುರುಷರ ಡಬಲ್ಸ್ ವಿಭಾಗದಲ್ಲಿ ಕಣಕ್ಕಿಳಿದಿದ್ದ ಈ ಜೋಡಿಯು, ಅತ್ಯಂತ ಕಠಿಣ ಸವಾಲುಗಳನ್ನು ಮೀರಿ ನಿಗದಿತ ಗುರಿ ತಲುಪಿದೆ. ಅಂತರರಾಷ್ಟ್ರೀಯ ಪವರ್‌ಲಿಫ್ಟರ್

ಮುಂಬೈ: ಫಿಟ್ನೆಸ್ ರೇಸ್ ನಲ್ಲಿ ಕಮಾಲ್ ಮಾಡಿದ ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ Read More »

ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸೋಮವಾರ ಆದೇಶಿಸಿರುವ ಸುಪ್ರೀಂ ಕೋರ್ಟ್‌, ಮೂರು ತಿಂಗಳ ಗಡುವು ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ), ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ, ಸೌಜನ್ಯಾ ತಾಯಿ ಕುಸುಮಾವತಿ ಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿದ್ದ ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಆ ಬಳಿಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಕಳಪೆ ಹಾಗೂ ಸ್ವತಂತ್ರವಲ್ಲದ ಪರಾವಲಂಬಿ ತನಿಖೆ ನಡೆಸಲಾಗಿದೆ

ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ Read More »

ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಈ ಕಲಾಪ ನಡೆಯಲಿದೆ. ಇತ್ತೀಚೆಗೆ ನಡೆದ ಅಧಿವೇಶನದ ಅವಧಿಯಲ್ಲಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ

ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ Read More »

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಭೇಟಿ ನೀಡಿದ ಸಿಎಂ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ನಿನ್ನೆ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಗಳೂರು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಬಂದರಿನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ತದನಂತರ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಜೀವನೋಪಾಯದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸೇರಿದಂತೆ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಭೇಟಿ ನೀಡಿದ ಸಿಎಂ Read More »

ತುಳುವಿಗೆ ಎರಡನೇ ರಾಜ್ಯ ಭಾಷೆ ಮಾನ್ಯತೆ; ಮಂದಿರ ಮಸೀದಿಗಳಿಗೆ ಅನುದಾನ| ದ.ಕ ಜಿಲ್ಲೆಯ ಮರುನಾಮಕರಣಕ್ಕೆ ಅಭಿಪ್ರಾಯ ಸಂಗ್ರಹ| ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ

ಸಮಗ್ರ ನ್ಯೂಸ್: ರಾಜ್ಯದ ಹೆಚ್ಚುವರಿ ಭಾಷೆಯಾಗಿ ತುಳುವಿಗೆ ಸ್ಥಾನಮಾನ ನೀಡಲು ಸಚಿವ ಸಂಪುಟ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಜತೆಗೆ ಶೀಘ್ರದಲ್ಲಿಯೇ ದಕ್ಷಿಣ ಕನ್ನಡವನ್ನು ಮಂಗಳೂರು ಜಿಲ್ಲೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ತುಳು ಭಾಷೆ ಎರಡು ಸಾವಿರ ವರ್ಷಗಳಿಗೂ ಹಳೆಯದು. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿದೆ. ತುಳು ಭಾಷೆಯ ಸರ್ವತೋಮುಖ ಅಭಿವೃದ್ಧಿಗೆ ಸಚಿವ ಸಂಪುಟ ಸಭೆಯು ಆಡಳಿತದಲ್ಲಿ ಕನ್ನಡ ಭಾಷೆಯ ಜೊತೆಗೆ ತುಳು ಭಾಷೆಯನ್ನು ಸರ್ಕಾರಿ

ತುಳುವಿಗೆ ಎರಡನೇ ರಾಜ್ಯ ಭಾಷೆ ಮಾನ್ಯತೆ; ಮಂದಿರ ಮಸೀದಿಗಳಿಗೆ ಅನುದಾನ| ದ.ಕ ಜಿಲ್ಲೆಯ ಮರುನಾಮಕರಣಕ್ಕೆ ಅಭಿಪ್ರಾಯ ಸಂಗ್ರಹ| ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನ Read More »

ಪುತ್ತೂರು: ಮನೆಯಂಗಳದಲ್ಲಿ ವಾಹನ ತೊಳೆಯುತ್ತಿದ್ದ ಯುವಕ ವಿದ್ಯುತ್ ಶಾಕ್ ಗೆ ಬಲಿ

ಸಮಗ್ರ ನ್ಯೂಸ್: ಮನೆ ಅಂಗಳದಲ್ಲಿ ಯಂತ್ರದ ಮೂಲಕ ವಾಹನ ತೊಳೆಯುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ಸಮೀಪದ ಬಡಾವು ಎಂಬಲ್ಲಿ ಶುಕ್ರವಾರ ನಡೆದಿದ್ದು, ವಿದ್ಯುತ್ ಆಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಬಡಾವು ನಿವಾಸಿ ಈಶ್ವರ ನಾಯ್ಕ ಅವರ ಪುತ್ರ, ಪುತ್ತೂರು ನಗರದ ಮೆಡಿಕಲ್‌ ಸೆಂಟರ್‌ನಲ್ಲಿ ಉದ್ಯೋಗಿಯಾದ್ದ ರಕ್ಷಿತ್ (29) ಮೃತಪಟ್ಟವರು. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು: ಮನೆಯಂಗಳದಲ್ಲಿ ವಾಹನ ತೊಳೆಯುತ್ತಿದ್ದ ಯುವಕ ವಿದ್ಯುತ್ ಶಾಕ್ ಗೆ ಬಲಿ Read More »