ರಾಜ್ಯ

ಶಂಕಿತ ನಿಫಾ ವೈರಸ್ ಗೆ ಕೇರಳದಲ್ಲಿ ಎರಡು ಸಾವು| ಮೂರು ಜಿಲ್ಲೆಗಳಲ್ಲಿ ಹೈ ಅಲರ್ಟ್

ಸಮಗ್ರ ವಾರ್ತೆ: ಕೇರಳದ ಕೊಯಿಕ್ಕೋಡ್‌ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕು ಪತ್ತೆಯಾಗಿದೆ. ಇಬ್ಬರು ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆಯೇ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಸಹ ಮುನ್ನೆಚ್ಚರಿಕೆ ಘೋಷಣೆ ಮಾಡಲಾಗಿದೆ. ಕೇರಳ ರಾಜ್ಯದ ಆರೋಗ್ಯ ಇಲಾಖೆ ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ. ಕಣ್ಣೂರು, ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಘೋಷಿಸಲಾಗಿದೆ. ಇತ್ತ ಕರ್ನಾಟಕ, ಕೇರಳ ಗಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದ ಆರೋಗ್ಯ ಸಚಿವ ವೀಣಾ ಜಾರ್ಜ್ ಮಾತನಾಡಿ, “ಆರೋಗ್ಯ ಇಲಾಖೆ ಐಸಿಎಂಆರ್‌ ಸಂಪರ್ಕಿಸಿದೆ. ಖಾಸಗಿ

ಶಂಕಿತ ನಿಫಾ ವೈರಸ್ ಗೆ ಕೇರಳದಲ್ಲಿ ಎರಡು ಸಾವು| ಮೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ Read More »

ಆಶ್ಲೇಷಾ ನಕ್ಷತ್ರ ಶುಭ ಮಂಗಳವಾರ| ಸೆ. 12ರಂದು ಕುಕ್ಕೆಗೆ ಹರಿದು ಬಂದ ಭಕ್ತರ ದಂಡು

ಸಮಗ್ರ ನ್ಯೂಸ್: ಆಶ್ಲೇಷಾ ನಕ್ಷತ್ರ ಶುಭ ದಿನವಾದ ಮಂಗಳವಾರ(ಸೆ ೧೨) ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದರು. ಈ ವರ್ಷದ ದಾಖಲೆ ಪ್ರಮಾಣದಲ್ಲಿ ಆಶ್ಲೇಷ ಬಲಿ ಸೇವೆ ನಡೆದಿದೆ. ಮಂಗಳವಾರ ಬೆಳಿಗ್ಗೆ 1,719 ಆಶ್ಲೇಷ ಬಲಿ ಹಾಗೂ ಸಂಜೆ ಸುಮಾರು 190 ಆಶ್ಲೇಷ ಬಲಿ ಸೇವೆಗಳು ನಡೆದಿವೆ. ಇದು ಈ ವರ್ಷದ ದಾಖಲೆಯಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ. ಕ್ಷೇತ್ರದ ರಥಬೀದಿ ಮತ್ತು ಹೋರಾಂಗಣ ಭಕ್ತರಿಂದ ತುಂಬಿತ್ತು. ಪೇಟೆಯಲ್ಲಿ ವಾಹನಗಳ ಓಡಾಟವೂ

ಆಶ್ಲೇಷಾ ನಕ್ಷತ್ರ ಶುಭ ಮಂಗಳವಾರ| ಸೆ. 12ರಂದು ಕುಕ್ಕೆಗೆ ಹರಿದು ಬಂದ ಭಕ್ತರ ದಂಡು Read More »

ಬಾಲಕಿಯನ್ನು ಮದುವೆಯಾದ ಗ್ರಾ.ಪಂ ಅಧ್ಯಕ್ಷ; ಪ್ರಕರಣ ದಾಖಲು

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್ ಅಧ್ಯಕ್ಷನೊಬ್ಬ ಬಾಲಕಿಯನ್ನು ಮದುವೆಯಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಿಂದ ವರದಿಯಾಗಿದೆ. ಬಾಲಕಿಯನ್ನು ಮದುವೆಯಾಗಿ ತಂದೆಯಾಗಲು ಹೊರಟ ಈ ಗ್ರಾಪಂ ಅಧ್ಯಕ್ಷನ ವಿರುದ್ಧ ನಂಜನಗೂಡು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಘದ ಉಪಾಧ್ಯಕ್ಷ ಮಹೇಶ್‌ ಸೇರಿದಂತೆ ಗ್ರಾಮದ ಪ್ರಮುಖರು ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಮಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಿದ ದೂರಿನ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಕವಿತಾ

ಬಾಲಕಿಯನ್ನು ಮದುವೆಯಾದ ಗ್ರಾ.ಪಂ ಅಧ್ಯಕ್ಷ; ಪ್ರಕರಣ ದಾಖಲು Read More »

ಎಂಎಲ್ಎ ಟಿಕೆಟ್ ಆಮಿಷವೊಡ್ಡಿ ಬಹುಕೋಟಿ ವಂಚನೆ| ಚೈತ್ರಾ ಕುಂದಾಪುರ ಸೇರಿ‌ ನಾಲ್ವರು ಅರೆಸ್ಟ್

ಸಮಗ್ರ ನ್ಯೂಸ್: ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು

ಎಂಎಲ್ಎ ಟಿಕೆಟ್ ಆಮಿಷವೊಡ್ಡಿ ಬಹುಕೋಟಿ ವಂಚನೆ| ಚೈತ್ರಾ ಕುಂದಾಪುರ ಸೇರಿ‌ ನಾಲ್ವರು ಅರೆಸ್ಟ್ Read More »

ಗಣೇಶ ಚತುರ್ಥಿ ರಜೆ ಸೆ.19ಕ್ಕೆ ನೀಡಿ| ವೇದವ್ಯಾಸ ಕಾಮತ್ ರಿಂದ ಸರ್ಕಾರಕ್ಕೆ ಆಗ್ರಹ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರ ಸೆಪ್ಟೆಂಬರ್ 18ರ ಸೋಮವಾರ ಗಣೇಶ ಚತುರ್ಥಿ ರಜೆಯನ್ನು ಘೋಷಣೆ ಮಾಡಿದೆ. ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಸೆಪ್ಟೆಂಬರ್ 19ರ ಮಂಗಳವಾರ ಗಣೇಶ ಚತುರ್ಥಿ ಹಬ್ಬದ ಸರ್ಕಾರಿ ರಜೆ ನೀಡಲು ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಿರುವ ಅವರು, ‘ನಾಡಿನ ಹಾಗೂ ಹಿಂದೂಗಳ ಅತ್ಯಂತ ಪ್ರಮುಖ ಹಬ್ಬವಾಗಿರುವ ಗಣೇಶ ಚತುರ್ಥಿಯು ಈ ಬಾರಿ ಸೆ.19ರಂದು ಇರುವುದರಿಂದ ಸರಕಾರಿ ರಜೆಯನ್ನು ಅಂದೇ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ. ಈ

ಗಣೇಶ ಚತುರ್ಥಿ ರಜೆ ಸೆ.19ಕ್ಕೆ ನೀಡಿ| ವೇದವ್ಯಾಸ ಕಾಮತ್ ರಿಂದ ಸರ್ಕಾರಕ್ಕೆ ಆಗ್ರಹ Read More »

ನಾಯಿ ಕಚ್ಚಿದ ಬಾಲಕ ರೇಬಿಸ್‍ನಿಂದ ಸಾವು

ಸಮಗ್ರ ನ್ಯೂಸ್: ನಾಯಿ ಕಚ್ಚಿದ ವಿಚಾರವನ್ನು ಪೋಷಕರಿಂದ ಮುಚ್ಚಿಟ್ಟಿದ 14 ವರ್ಷದ ಬಾಲಕ ರೇಬಿಸ್ ನಿಂದ ಮೃತಪಟ್ಟಿರುವ ಘಟನೆ ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿಯಲ್ಲಿ ನಡೆದಿದೆ. ಶಹವಾಜ್ ಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಆದರೆ ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಆದರೆ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 1 ರಿಂದ ಊಟ

ನಾಯಿ ಕಚ್ಚಿದ ಬಾಲಕ ರೇಬಿಸ್‍ನಿಂದ ಸಾವು Read More »

ಕುಡಿದು ದೇವಸ್ಥಾನದ ಗೋಡೆಗೆ ಮೂತ್ರ ಮಾಡಿದ್ದನ್ನು ಪ್ರಶ್ನಿಸಿದ ಬಾಲಕನ ಕೊಲೆಗೈದ ಪಾತಕಿ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ 10ನೇ ತರಗತಿ ಬಾಲಕನನ್ನು ಅಪಘಾತ ಮಾಡಿ ಕೊಲೆ ಮಾಡಿದ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಅದಿಶೇಖರ್ (15) ಎಂದು ಗುರುತಿಸಲಾಗಿದೆ. ಸಂಬಂಧಿಕನೇ ಈತನನ್ನು ಕೊಲೆ ಮಾಡಿರುವುದು ಬಯಲಾಗಿದೆ. ಅರುಣ್ ಕುಮಾರ್ ಹಾಗೂ ದೀಪಾ ಮಗನಾಗಿರುವ ಅದಿಶೇಖರ್, ಆಗಸ್ಟ್ 31ರಂದು ಮೃತಪಟ್ಟಿದ್ದಾನೆ. ಈತ ಕತ್ತಕ್ಕಡ ಚಿನ್ಮಯ ಮಿನ್ ಸ್ಕೂಲ್‌ನಲ್ಲಿ 10ನೇ ತರಗತಿ ಓದುತ್ತಿದ್ದನು. ಈ ಘಟನೆ ಪುಳಿಂಕೋಡ್ ದೇವಸ್ಥಾನದ ಬಳಿ ಸಂಜೆ

ಕುಡಿದು ದೇವಸ್ಥಾನದ ಗೋಡೆಗೆ ಮೂತ್ರ ಮಾಡಿದ್ದನ್ನು ಪ್ರಶ್ನಿಸಿದ ಬಾಲಕನ ಕೊಲೆಗೈದ ಪಾತಕಿ Read More »

ಲೆಫ್ಟಿನೆಂಟ್ ಪದವಿಗೇರಿದ ಮುರುವಂಡ ತನುಷ್ ಅಪ್ಪಯ್ಯ

ಸಮಗ್ರ ನ್ಯೂಸ್: ಕೊಡಗಿನ ಮುರುವಂಡ ತನುಷ್ ಅಪ್ಪಯ್ಯ ಅವರು ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ಭಾರತೀಯ ಸೇನೆಯಲ್ಲಿ ಸೆ .11 ರಂದು ತೇರ್ಗಡೆಯಾಗಿ ಲೆಫ್ಟಿನೆಂಟ್ ಪದವಿಗೇರಿದ್ದಾರೆ. ತನುಷ್ ಅಪ್ಪಯ್ಯ ಅವರು ಕೊಳತೋಡು ಬೈಗೋಡು ಗ್ರಾಮದವರಾಗಿದ್ದು, ಭವಿಷ್ಯದಲ್ಲಿ ಭಾರತೀಯ ಸೇನೆಯ ಉನ್ನತಾಧಿಕಾರಿಯಾಗಿ ಪದೋನ್ನತಿ ಪಡೆಯಲಿರುವ ಕೊಡಗಿನ ಸೇನಾಧಿಕಾರಿಗಳ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಇವರು ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ (ಕಾಪ್ಸ್) ದ್ವಿತೀಯ ಪಿಯುಸಿವರೆಗೆ ವ್ಯಾಸಂಗ ಮಾಡಿದ್ದು. ಬೆಂಗಳೂರಿನ ದಯಾನಂದ ಸಾಗರ ಇಂಜಿನಿಯರಿಂಗ್ ಕಾಲೇಜಿನಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಅಲಹಾಬಾದ್

ಲೆಫ್ಟಿನೆಂಟ್ ಪದವಿಗೇರಿದ ಮುರುವಂಡ ತನುಷ್ ಅಪ್ಪಯ್ಯ Read More »

ರಾಜ್ಯ, ರಾಷ್ಟ್ರ ರಾಜಕಾರಣದ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ| ಯುಗಾದಿ ಬಳಿಕ ಭಾರೀ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯ ಹಾಗೂರಾಷ್ಟ್ರ ರಾಜಕಾರಣದ ಬಗ್ಗೆ ಇಂದು ಕೋಡಿಮಠದ ಶಿವಾನದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಅಸ್ಥಿರತೆ ಉಂಟಾಗಲಿದೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣ, ರಾಷ್ಟ್ರ ರಾಜಕಾರಣದಲ್ಲಿ ಅಸ್ಥಿರತೆ ಉಂಟಾಗಲಿದೆ. ಯುಗಾದಿಯ ನಂತ್ರ ಏನಾಗುತ್ತೆ ಅಂತ ಕಾದು ನೋಡಿ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಅಚ್ಚರಿಯನ್ನು ಎದುರು ನೋಡುವಂತೆ ಹೇಳಿದ್ದಾರೆ.

ರಾಜ್ಯ, ರಾಷ್ಟ್ರ ರಾಜಕಾರಣದ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ| ಯುಗಾದಿ ಬಳಿಕ ಭಾರೀ ಬದಲಾವಣೆ Read More »