ರಾಜ್ಯ

ಮಂಗಳೂರು ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್; ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸಹಿತ 35 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದ‌ 2008ರ ಬ್ಯಾಚ್‌ನ ಅನುಪಮ್ ಅಗರ್ವಾಲ್ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.ಕುಲದೀಪ್ ಕುಮಾರ್ ಜೈನ್‌ಗೆ ಯಾವುದೇ ಹುದ್ದೆ ತೋರಿಸಿಲ್ಲ. ಕೋಸ್ಟಲ್ ಸೆಕ್ಯುರಿಟಿ ಪೊಲೀಸ್ ಉಡುಪಿ ಇಲ್ಲಿನ ಎಸ್ಪಿಯಾಗಿದ್ದ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ. ಉಳಿದಂತೆ ಡಾ. ಶರಣಪ್ಪ,

ಮಂಗಳೂರು ಕಮಿಷನರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಪ್ರಜ್ವಲ್ ಬಳಿಕ ರೇವಣ್ಣಗೂ ಅನರ್ಹತೆ ಭೀತಿ| ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಚುನಾವಣೆ ವೇಳೆ ಅಕ್ರಮ ಎಸಗಿರುವ ಆರೋಪದ ಮೇಲೆ ಹೊಳೆನರಸೀಪುರ ಕ್ಷೇತ್ರದ ಹೆಚ್ ಡಿ ರೇವಣ್ಣ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿರುವ ಅರ್ಜಿ ಸಂಬಂಧ, ವಿಧಾನಸಭೆ ಕಾರ್ಯದರ್ಶಿ ಮೂಲಕ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಈ ಮೂಲಕ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಬಳಿಕ, ಈಗ ಹೆಚ್ ಡಿ ರೇವಣ್ಣ ಮೇಲೂ ಅನರ್ಹತೆ ತೂಗುಗತ್ತಿ ನೇತಾಡುವಂತೆ ಆಗಿದೆ. ಹೆಚ್.ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ ದೇವರಾಜೇಗೌಡ ಅವರು ಸಲ್ಲಿಸಿದ್ದಂತ ಚುನಾವಣಾ ತಕರಾರು

ಪ್ರಜ್ವಲ್ ಬಳಿಕ ರೇವಣ್ಣಗೂ ಅನರ್ಹತೆ ಭೀತಿ| ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ Read More »

ರಾಜ್ಯಮಟ್ಟದ ಆನ್ ಲೈನ್ ಶಿಕ್ಷಕರ ದಿನಾಚರಣೆ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಉದ್ಘಾಟನೆ

ಸಮಗ್ರ ನ್ಯೂಸ್: ಸೆ.5ರಂದು ರಾತ್ರಿ 9 ಗಂಟೆಗೆ ಝೂಮ್ ಮೂಲಕ ‘ಆಲ್ ಇಂಡಿಯಾ ಐಡಿಯಲ್ ಟೀಚರ್ಸ್‌ ಅಸೋಸಿಯೇಶನ್'(AIITA) ಕರ್ನಾಟಕವು ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಯೋಜಸಿದೆ. ರಾಜ್ಯದ ಉನ್ನತ ಶಿಕ್ಷಣ ಸಚಿವ ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಕರ್ನಾಟಕ ಸರ್ಕಾರ ಡಾ.ಎಂ.ಸಿ.ಸುಧಾಕರ್ ಉದ್ಘಾಟಿಸಲಿದ್ದಾರೆ ಎಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ದೇಹಲಿಯ ಮಹಿಳಾ ಶಿಕ್ಷಣ ಮತ್ತು ಸಬಲೀಕರಣ ಟ್ರಸ್ಟ್ (TWEET) ಇದರ

ರಾಜ್ಯಮಟ್ಟದ ಆನ್ ಲೈನ್ ಶಿಕ್ಷಕರ ದಿನಾಚರಣೆ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಉದ್ಘಾಟನೆ Read More »

ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಲು ಸಿಎಂ ಗೆ ಮನವಿ ಮಾಡಿದ ಕರಾವಳಿಯ ಬಿಜೆಪಿ ಶಾಸಕರು

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸೋಮವಾರ ಪತ್ರದ ಮೂಲಕ ಕರಾವಳಿಯ ಬಿಜೆಪಿ ಶಾಸಕರು ಮನವಿ ಮಾಡಿದರು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಶಾಸಕರುಗಳು ಸೇರಿ ಸಿಎಂ ಅವರನ್ನು ಬೇಟಿ ಮಾಡಿದರು. ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯರವರು ‘ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ’ ಎಂದು ಸ್ಪಷ್ಟೀಕರಣ ಮಾಡಿದರು. ಈಗಾಗಲೇ ಈ ವಿಷಯದ ಕುರಿತು ಸೌಜನ್ಯ

ಸೌಜನ್ಯ ಪ್ರಕರಣವನ್ನು ಮರುತನಿಖೆ ನಡೆಸಲು ಸಿಎಂ ಗೆ ಮನವಿ ಮಾಡಿದ ಕರಾವಳಿಯ ಬಿಜೆಪಿ ಶಾಸಕರು Read More »

ಬಸ್‍ನಲ್ಲೂ ಫೋನ್ ಪೇ, ಗೂಗಲ್ ಪೇ ಯೂಸ್ ಮಾಡಿ

ಸಮಗ್ರ ನ್ಯೂಸ್: ಇದೀಗ ಸಾರಿಗೆ ನಿಮಗದ ಬಸದ ಗಳು ಸ್ಮಾರ್ಟ್ ಆಗಿ ತಿಂಕ್ ಮಾಡಲು ಮುಂದಾಗಿದ್ದು ವಾಯುವ ಸಾರಿಗೆ ನಿಗಮದಲ್ಲಿ ಇದೀಗ UPI ಸ್ಕ್ಯಾನ್ ಕೋಡ್ ಮೂಲಕ ಟಿಕೆಟ್ ಪಡೆಯಲು ಅವಕಾಶ ಮಾಡಿಕೊಡಲಾಗ್ತಿದೆ. ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಆಗ್ತಿದ್ದ ಚಿಲ್ಲರೆ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ಈ ಸೇವೆ ಒದಗಿಸಲಾಗ್ತಿದೆ ಎಂದು ಸಾರಿಗೆ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್ ಗಳಲ್ಲಿ ಟಿಕೆಟ್ ಪಡೆಯಲು ಇನ್ನಷ್ಟು ಅನುಕೂಲ ಮಾಡಿಕೊಟ್ಟಿರುವ ಸಾರಿಗೆ ಇಲಾಖೆ, ಇನ್ಮುಂದೆ ನಿಮ್ಮ ಮೊಬೈಲ್ ನಲ್ಲಿ

ಬಸ್‍ನಲ್ಲೂ ಫೋನ್ ಪೇ, ಗೂಗಲ್ ಪೇ ಯೂಸ್ ಮಾಡಿ Read More »

ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಸಮಗ್ರ ನ್ಯೂಸ್: ಚಿತ್ರದುರ್ಗ‌, ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-13ರಲ್ಲಿ (National Highway-13) ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಭೀಕರ ಅಪಘಾತಕ್ಕೆ ನಾಲ್ವರು ಬಲಿ Read More »

ಉಡುಪಿ: ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ| ನಾಳೆ(ಸೆ. ೫) ಬ್ರಹ್ಮಾವರದಲ್ಲಿ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಲಾಗಿದ್ದು, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಲಾ ಐವರಂತೆ 15 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಸೆ. 5ರಂದು ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕಿರಿಯ ಪ್ರಾಥಮಿಕ ವಿಭಾಗ ಪ್ರೌಢಶಾಲಾ ವಿಭಾಗ

ಉಡುಪಿ: ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ| ನಾಳೆ(ಸೆ. ೫) ಬ್ರಹ್ಮಾವರದಲ್ಲಿ ಪ್ರಶಸ್ತಿ ಪ್ರಧಾನ Read More »

ಕೊಟ್ಟಿಗೆಹಾರ: ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಅಧ್ಯಕ್ಷರಾಗಿ ಪದ್ಮರಾಜ್ ಆಯ್ಕೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಅಧ್ಯಕ್ಷರಾಗಿ ಸುಂಕಸಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪದ್ಮರಾಜ್ ಅವರು ಸೆ. 2ರಂದು ಅವಿರೋಧವಾಗಿ ಆಯ್ಕೆಯಾದರು. ಈ ಹಿಂದಿನ ಅಧ್ಯಕ್ಷರಾಗಿದ್ದ ಗ್ರಾಮ ಲೆಕ್ಕಾಧಿಕಾರಿ ಕೃಷ್ಣಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೆ. 2ರಂದು ರಾತ್ರಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಪದ್ಮರಾಜ್ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಪದ್ಮರಾಜ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಹಾಗೂ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾಗಿಯೂ ಸೇವೆ

ಕೊಟ್ಟಿಗೆಹಾರ: ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಅಧ್ಯಕ್ಷರಾಗಿ ಪದ್ಮರಾಜ್ ಆಯ್ಕೆ Read More »

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ|

ಸಮಗ್ರ ನ್ಯೂಸ್: 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಶನಿವಾರ ಪ್ರಕಟಗೊಂಡಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2023-24 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಸಹ ಶಿಕ್ಷಕರು/ವಿಶೇಷ ಶಿಕ್ಷಕರು/ಮುಖ್ಯ ಶಿಕ್ಷಕರುಗಳಿಗೆ

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ| Read More »

ಎನ್ಐಎ ನಿಂದ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ| ಉಗ್ರ ದಾಳಿಗೆ ಸಂಬಂಧಿಸಿದ ಡಿಜಿಟಲ್ ಉಪಕರಣಗಳ ವಶ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ದಳ(NIA) ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಉಗ್ರ ಸಂಘಟನೆಗಳ ಚಟುವಟಿಕೆಗೆ ಬಳಕೆ ಮಾಡುತ್ತಿದ್ದ ಡಿಜಿಟಲ್ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ತಪಾಸಣೆ ವೇಳೆ ವಶಕ್ಕೆ ಪಡೆದಿದೆ. ಭಾರತದಲ್ಲಿ ಭಯೋತ್ಪಾದನೆ ಹರಡುವ ಸಲುವಾಗಿ ದೇಶದಲ್ಲಿ ಯುವಕರನ್ನು ನೇಮಿಸಿ ಉಗ್ರಗಾಮಿಗಳನ್ನಾಗಿಸಲು ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (ಎಕ್ಯೂಐಎಸ್) ಮತ್ತು ತೆಹರಿಕ್-ಇ-ತಾಲಿಬಾನ್ ನಡೆಸಿದ ಪಿತೂರಿಗೆ ಸಂಬಂಧಿಸಿದಂತೆ ಎನ್​ಐಎ ಗುರುವಾರ ಈ ದಾಳಿಗಳನ್ನು ನಡೆಸಿದೆ. ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ

ಎನ್ಐಎ ನಿಂದ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ| ಉಗ್ರ ದಾಳಿಗೆ ಸಂಬಂಧಿಸಿದ ಡಿಜಿಟಲ್ ಉಪಕರಣಗಳ ವಶ Read More »