ರಾಜ್ಯ

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯಂತೆ ಮೇ 29, 2026 ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 29ರಿಂದಲೇ ಶಾಲೆಗಳು ಪುನರಾರಂಭಗೊಳ್ಳಲಿವೆ. ಒಟ್ಟು 245 ದಿನಗಳ ಶಾಲಾ ಕರ್ತವ್ಯದ ಅವಧಿಯಲ್ಲಿ ದಸರಾ ಮತ್ತು

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ Read More »

ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪಾದಚಾರಿಗಳ ಮೇಲೆ ಉರುಳಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಮಹಿಳೆಯೊಬ್ಬರು

ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ Read More »

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್

ಸುಳ್ಯ: ಇಲ್ಲಿನ ನೆಹರೂ ಸ್ಮಾರಕ ಮಹಾವಿದ್ಯಾಲಯದ ಎರಡನೇ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮಂಡೆಕೋಲಿನ ಅಭಿಷೇಕ್ ಕಣೆಮರಡ್ಕ ನಿರಂತರ 24 ಗಂಟೆಗಳ ಕಾಲ ಕೂಚುಪುಡಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ದಾಖಲೆ ಬರೆದಿದ್ದಾರೆ. ನೆಹರೂ‌‌ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ಏ.11ರಂದು ಸಂಜೆ 6.30ರಿಂದ ಆರಂಭಗೊಂಡು ಏ.12ರ ಸಂಜೆ 6.30ರ ತನಕ ನಿರಂತರ 24 ಗಂಟೆ ಕುಚ್ಚುಪುಡಿ ನೃತ್ಯ ಮಾಡಿದರು. ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದು ದಾಖಲೆ ನಿರ್ಮಿಸಬೇಕೆಂಬ ಹಂಬಲದಿಂದ ಅಭಿಷೇಕ್ ಕುಚುಪುಡಿ

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್ Read More »

ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ರವಿವಾರದಂದು ಕಲಬುರಗಿಯಲ್ಲಿ ಅತ್ಯಾಧಿಕ ಉಷ್ಣಾಂಶ ದಾಖಲಾಗಿದ್ದು, ಗರಿಷ್ಟ ತಾಪಮಾನವು 41.6 ಸೆಲ್ಸಿಯಸ್‍ಗೆ ಏರಿಕೆಯಾಗಿದೆ. ಎ.13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ, ಎ.14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ

ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ Read More »

ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 102 ನೆಕ್ಕಿಲಾಡಿ ಹಾಗೂ ಕೋರಿಯರ್ ಸಮೀಪದ ಕುಮಾರಧಾರಾ ನದಿ ತೀರದಲ್ಲಿ ಶನಿವಾರ 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ನದಿ ತೀರದಲ್ಲಿ ಆನೆಗಳು ಗುಂಪಾಗಿ ಸಂಚರಿಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆನೆಗಳು ಜನವಸತಿ ಪ್ರದೇಶಕ್ಕೆ ನುಗ್ಗದಂತೆ ತಡೆಯಲು ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಾಡಾನೆಗಳನ್ನು ಅರಣ್ಯದತ್ತ

ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ Read More »

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ -ಮಗಳು ಇಬ್ಬರೂ ಪಾಸ್

ಸಮಗ್ರ ನ್ಯೂಸ್: “ಸಾಧಿಸುವ ಛಲವಿದ್ದರೆ ಸಾಧನೆಗೆ ವಯಸ್ಸು ಅಡ್ಡಿಯಾಗದು” ಎಂಬ ಮಾತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‌ನಲ್ಲಿ ನಡೆದ ಈ ಅಪರೂಪದ ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ತಾಯಿ ಮತ್ತು ಮಗಳು ಏಕಕಾಲಕ್ಕೆ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ. ಬಿ.ಸಿ. ರೋಡ್ ಕೈಕಂಬ ನಿವಾಸಿಯಾಗಿರುವ ನೇತ್ರಾವತಿ ವಿ.ಆರ್. ಅವರು ವೃತ್ತಿಯಲ್ಲಿ ಗೃಹಿಣಿ. ಸಂಸಾರದ ಜವಾಬ್ದಾರಿಗಳ ನಡುವೆಯೂ ಶಿಕ್ಷಣ ಮುಂದುವರಿಸಬೇಕೆಂಬ ಹಳೆಯ ಕನಸನ್ನು ಅವರು ಕೈಬಿಟ್ಟಿರಲಿಲ್ಲ. ಈ ಬಾರಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ -ಮಗಳು ಇಬ್ಬರೂ ಪಾಸ್ Read More »

ಮಹೇಶ್ ತಿಮರೋಡಿಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್| ಮೂರನೇ ಬಾರಿ ಗಡೀಪಾರು ಆದೇಶಕ್ಕೆ ತಡೆ

ಸಮಗ್ರ ನ್ಯೂಸ್: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏಪ್ರಿಲ್ 16ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ಪೊಲೀಸ್‌ ಠಾಣಾ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು

ಮಹೇಶ್ ತಿಮರೋಡಿಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್| ಮೂರನೇ ಬಾರಿ ಗಡೀಪಾರು ಆದೇಶಕ್ಕೆ ತಡೆ Read More »

ಹುಲಿಕಲ್ ಘಾಟ್ ನಲ್ಲಿ ಗುಡ್ಡ ಕುಸಿತ| ಮೂವರು ಕಾರ್ಮಿಕರು ಸಾವು; ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಹುಲಿಕಲ್ ಘಾಟಿಯ ಚಂಡಿಕಾಂಬಾ ದೇವಾಲಯದ ಸಮೀಪವಿರುವ ಹೇರ್ ಪಿನ್ ತಿರುವಿನಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಗುರುವಾರ ಸಂಜೆ ಸುಮಾರು 6:30ರ ವೇಳೆಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಏಕಾಏಕಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ಏಳು ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು.

ಹುಲಿಕಲ್ ಘಾಟ್ ನಲ್ಲಿ ಗುಡ್ಡ ಕುಸಿತ| ಮೂವರು ಕಾರ್ಮಿಕರು ಸಾವು; ನಾಲ್ಕು ಮಂದಿ ಗಂಭೀರ Read More »

ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ| ಉಡುಪಿ ಪ್ರಥಮ, ದ.ಕ ದ್ವಿತೀಯ ಸ್ಥಾನ| ಆಳ್ವಾಸ್ ನ ದಿಶಾ, ಬೆಂಗಳೂರಿನ ಅದಿತಿ‌ ರಾಜ್ಯಕ್ಕೆ ಟಾಪರ್ಸ್

ಸಮಗ್ರ ನ್ಯೂಸ್: ಗುರುವಾರ ಪ್ರಕಟಗೊಂಡ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ.96.39 ಉತ್ತೀರ್ಣದ ಫಲಿತಾಂಶದೊಂದಿಗೆ ರಾಜ್ಯದಲ್ಲೇ ಸತತ ಎರಡನೇ ವರ್ಷವೂ ಅಗ್ರಸ್ಥಾನವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಸತತ ಎರಡನೇ ವರ್ಷ ನೆರೆಯ ದಕ್ಷಿಣ ಕನ್ನಡ ಜಿಲ್ಲೆ ನಿಕಟ ಸ್ಪರ್ಧೆ ನೀಡಿ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡುವಂತಾಗಿದೆ. ಈ ಬಾರಿ ಉಡುಪಿ ಶೇ.96.39 ಫಲಿತಾಂಶದೊಂದಿಗೆ ಅಗ್ರಸ್ಥಾನಿಯಾದರೆ ದಕ್ಷಿಣ ಕನ್ನಡ ಜಿಲ್ಲೆ ಶೇ.96.35 ಉತ್ತೀರ್ಣತೆಯೊಂದಿಗೆ ಎರಡನೇ ಸ್ಥಾನದಲ್ಲಿದೆ. 2025ರಲ್ಲಿ ಉಡುಪಿ ಜಿಲ್ಲೆ ಶೇ.93.90 ಫಲಿತಾಂಶದೊಂದಿಗೆ ಅಗ್ರಸ್ಥಾನಿಯಾಗಿದ್ದರೆ,

ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ| ಉಡುಪಿ ಪ್ರಥಮ, ದ.ಕ ದ್ವಿತೀಯ ಸ್ಥಾನ| ಆಳ್ವಾಸ್ ನ ದಿಶಾ, ಬೆಂಗಳೂರಿನ ಅದಿತಿ‌ ರಾಜ್ಯಕ್ಕೆ ಟಾಪರ್ಸ್ Read More »

ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ| SMS ಮೂಲಕ ಸಿಗಲಿದೆ ರಿಸಲ್ಟ್

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ(ಪರೀಕ್ಷೆ-1) ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದ್ದು, ಇಂದಿನಿಂದಲೇ ತಮ್ಮ ಸಾಧನೆಯನ್ನು ವೀಕ್ಷಿಸಬಹುದಾಗಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳ ಮೊಬೈಲ್ ಗೆ ಸದ್ಯ ಫಲಿತಾಂಶವನ್ನು ಎಸ್ ಎಂ ಎಸ್

ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ| SMS ಮೂಲಕ ಸಿಗಲಿದೆ ರಿಸಲ್ಟ್ Read More »