ರಾಜ್ಯ

ಕಾಫಿನಾಡಲ್ಲಿ ಮಳೆ-ಗಾಳಿ ಅಬ್ಬರ| ಕುಸಿದು ಬಿದ್ದ ಮನೆಗಳು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ. ದಟ್ಟಕಾನನದ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕಳಸ ಭಾಗದಲ್ಲಿ ತುಸು ಹೆಚ್ಚಾಗೇ ಮಳೆ ಇದೆ. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಮಳೆ-ಗಾಳಿಗೆ ತರೀಕೆರೆ ಹಾಗೂ ಎನ್.ಆರ್.ಪುರ ತಾಲೂಕಿನಲ್ಲಿ ಮನೆ ಕುಸಿದು ಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಖಾಂಡ್ಯಾ ಹೋಬಳಿಯ ಚಾಕಲುಮನೆ ಮನೆ ಗ್ರಾಮದ ರಮೇಶ್ ಎಂಬುವರ

ಕಾಫಿನಾಡಲ್ಲಿ ಮಳೆ-ಗಾಳಿ ಅಬ್ಬರ| ಕುಸಿದು ಬಿದ್ದ ಮನೆಗಳು Read More »

ರಾಜ್ಯದ ಜನತೆಗೆ ಬಿಗ್ ಶಾಕ್| ನಂದಿನಿ ಹಾಲಿನ ದರ ಲೀಟರ್‌ ಗೆ ₹.3 ಏರಿಕೆ

ಸಮಗ್ರ ನ್ಯೂಸ್: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋ ದರ 100ರೂ ಗಡಿದಾಟಿದೆ. ಹೀಗಿರುವಾಗ, ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. ಈ ಸಭೆಯಲ್ಲಿ ಹಾಲು ಒಕ್ಕೂಟಗಳು

ರಾಜ್ಯದ ಜನತೆಗೆ ಬಿಗ್ ಶಾಕ್| ನಂದಿನಿ ಹಾಲಿನ ದರ ಲೀಟರ್‌ ಗೆ ₹.3 ಏರಿಕೆ Read More »

ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ವ್ಯಕ್ತಿ

ಸಮಗ್ರ ನ್ಯೂಸ್:‌ ವ್ಯಕ್ತಿಯೊಬ್ಬ ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ಟ್ರ್ಯಾಕ್ ಮೇಲೆ ಕಾರನ್ನು ಚಲಾಯಿಸಿದ ವ್ಯಕ್ತಿಯನ್ನು ಕಣ್ಣೂರಿನ ಜಯಪ್ರಕಾಶ್ ಎಂದು ಗುರುತಿಸಲಾಗಿದೆ.ಈತ ಕಣ್ಣೂರು ಬಳಿಯ ತಾಜಿ ರೈಲ್ವೆ ಕ್ರಾಸಿಂಗ್‌ನಲ್ಲಿ ಟ್ರ್ಯಾಕ್ ಮೇಲೆ ಸುಮಾರು 15 ಮೀಟರ್ ಕಾರು ಚಲಾಯಿಸಿಕೊಂಡು ಹೋಗಿದ್ದ ಬಳಿಕ ಮುಂದಕ್ಕೆ ಹೋಗಲಾಗದೇ ಅಲ್ಲಿಯೇ ಕೆಲಹೊತ್ತು ಕಾರಿನಲ್ಲಿ ಕೂತಿದ್ದಾನೆ. ಇದನ್ನು ನೋಡಿದ

ಟೈಟ್ ಆಗಿ ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ವ್ಯಕ್ತಿ Read More »

ರಾಜ್ಯಾದ್ಯಂತ ವರುಣಾರ್ಭಟ| ಮುಂದಿನ ನಾಲ್ಕು ದಿನ ಮಳೆ ಜೋರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಿನ್ನೆಯಿಂದ (ಜುಲೈ 20) ಮಳೆ ಬಿರುಸುಗೊಂಡಿದ್ದು, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಮುಂದಿನ 4 ದಿನಗಳ ವರೆಗೆ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ನೈರುತ್ಯ ಮುಂಗಾರು ಜೋರಾಗುವ ಸಾಧ್ಯತೆಯಿದ್ದು, ಸಮುದ್ರ ಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಿರುತ್ತದೆ. ಹೀಗಾಗಿ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ರಾಜ್ಯಾದ್ಯಂತ ವರುಣಾರ್ಭಟ| ಮುಂದಿನ ನಾಲ್ಕು ದಿನ ಮಳೆ ಜೋರು Read More »

‌ಉಡುಪಿ: ನಿದ್ದೆ ಕಣ್ಣಿನಲ್ಲಿ ಮನೆಯಿಂದ ರಸ್ತೆಗೆ ಬಂದ ಮಗು| ಆಕೆಯನ್ನು ತಡೆದು ನಿಲ್ಲಿಸಿದ್ದು ಕೊರಗಜ್ಜನೇ!?

ಸಮಗ್ರ ನ್ಯೂಸ್: ಮಗುಯೊಂದು ರಾತ್ರಿ ವೇಳೆ ಮನೆಯಿಂದ ಎದ್ದು ರಸ್ತೆಯಲ್ಲಿ ನಡೆದುಕೊಂಡು ಹೋದ ಘಟನೆ ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ಜು.19ರ ರಾತ್ರಿ 3 ಗಂಟೆಗೆ ನಡೆದಿದೆ. ಪುಟ್ಟ ಬಾಲಕಿಯೊಬ್ಬಳು ನಿದ್ದೆ ಕಣ್ಣಿನಲ್ಲಿ ಮನೆಯಿಂದ ಎದ್ದು ರಸ್ತೆಯವರೆಗೆ ನಡೆದುಕೊಂಡು ಬಂದಿದ್ದಾಳೆ. ರಾತ್ರಿ 3 ಗಂಟೆಗೆ ಇದೇ ದಾರಿಯಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವಿಶ್ವ ಎನ್ನುವವರು ಮಗುವನ್ನು ನೋಡಿ ಕಾರು ನಿಲ್ಲಿಸಿದ್ದರು. ಬಳಿಕ ಮಗುವನ್ನು ಮಾತಾಡಿಸಿದಾಗ ನಿದ್ದೆ ಕಣ್ಣಿನಿಂದ ನಡೆದುಕೊಂಡು ಬಂದ ವಿಷಯ ಬೆಳಕಿಗೆ ಬಂದಿದೆ. ಬಳಿಕ

‌ಉಡುಪಿ: ನಿದ್ದೆ ಕಣ್ಣಿನಲ್ಲಿ ಮನೆಯಿಂದ ರಸ್ತೆಗೆ ಬಂದ ಮಗು| ಆಕೆಯನ್ನು ತಡೆದು ನಿಲ್ಲಿಸಿದ್ದು ಕೊರಗಜ್ಜನೇ!? Read More »

ಇಂದು ಕೆಎಂಎಫ್ ಜೊತೆ ಸಿಎಂ ಸಭೆ| ಹಾಲಿನ ದರ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ‘ಕೆಎಂಎಫ್’ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಮುಖ್ಯ ಮಂತ್ರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಸಭೆಯ ನಂತರ ಹಾಲಿನ ದರ ಪ್ರತಿ ಲೀಟರ್ಗೆ ರು. ಹೆಚ್ಚಳದ ಬಗ್ಗೆಯೂ ಅಂತಿಮ ನಿರ್ಧಾರ ಹೊರ ಬೀಳಲಿದೆ. ಹೈನೋದ್ಯಮ ಸಂಕಷ್ಟಕ್ಕೆ ಸಿಲುಕಿದೆ, ಹೀಗಾಗಿ ಹಾಲಿನ ದರ

ಇಂದು ಕೆಎಂಎಫ್ ಜೊತೆ ಸಿಎಂ ಸಭೆ| ಹಾಲಿನ ದರ ಏರಿಕೆ ಸಾಧ್ಯತೆ Read More »

ಇಂದಿನಿಂದ ಮದ್ಯ ದುಬಾರಿ| ಎಣ್ಣೆಪ್ರಿಯರಿಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ದುಬಾರಿ ದುನಿಯಾದಲ್ಲಿ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, (ಜುಲೈ 21) ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ. ಶೇ.20ರಷ್ಟು ಹೆಚ್ಚಿನ ಹಿನ್ನೆಲೆಯಲ್ಲಿ ಗರಿಷ್ಟ ದರದೊ೦ದಿಗೆ ಹೊಸ ಬೆಲೆಯಲ್ಲಿ ಶುಕ್ರವಾರ ರದಿಂದ ಮದ್ಯ ಮಾರಾಟವಾಗಲಿದೆ.ಸಿಎ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಮದ್ಯದ ಅಧಿಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ ಎಲ್ಲಾ ಘೋಷಿತ 18 ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹಾಲಿ ಇರುವ

ಇಂದಿನಿಂದ ಮದ್ಯ ದುಬಾರಿ| ಎಣ್ಣೆಪ್ರಿಯರಿಗೆ ಬಿಗ್ ಶಾಕ್ Read More »

ಭಾರೀ ಮಳೆ ಹಿನ್ನೆಲೆ; ರಾಜ್ಯದ ಕೆಲವೆಡೆ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೆಲದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಇಂದು(ಜು.21) ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೆರಾ, ಗುರುಮಠಕಲ್ ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಭಾನುವಾರ ಶಾಲೆಗಳನ್ನು ನಡೆಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಾದ್ಯಂತ

ಭಾರೀ ಮಳೆ ಹಿನ್ನೆಲೆ; ರಾಜ್ಯದ ಕೆಲವೆಡೆ ಶಾಲೆಗಳಿಗೆ ರಜೆ Read More »

ಮಾಜಿ ಸಿಎಂ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇನ್ನು ಮುಂದೆ ಡಾ. ಯಡಿಯೂರಪ್ಪ ಆಗಲಿದ್ದಾರೆ. ಶಿವಮೊಗ್ಗದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ವತಿಯಿಂದ ಯಡಿಯೂರಪ್ಪ ಅವರು ಗೌರವ ಡಾಕ್ಟರೇಟ್ ಪದವಿಗೆ ಪಾತ್ರರಾಗಿದ್ದಾರೆ ಶುಕ್ರವಾರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ವರ್ಷದ ಘಟಿಕೋತ್ಸವ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ Read More »

ಬಣಕಲ್: ದೇವಸ್ಥಾನದ ಹುಂಡಿ ಕಳವು

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ ಬಣಕಲ್ ನ ಶ್ರೀಮಹಮ್ಮಾಯಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿಯನ್ನು ಹೊಡೆದು ಕಳ್ಳರು ಹಣವನ್ನು ದೋಚಿದ ಘಟನೆ ಬುಧವಾರ ನಡೆದಿದೆ. ಹಾಡು ಹಗಲಲ್ಲೇ ಬುಧವಾರ ಸಂಜೆ 4ಗಂಟೆಯ ಸಮಯದಲ್ಲಿ ದೇವಸ್ಥಾನಕ್ಕೆ ಹೋದಾಗ ರಾಡಿನಿಂದ ಹುಂಡಿಯ ಬೀಗ ಮುರಿದು ಹಣ ಕಳವು ಮಾಡಿರುವುದು ಗೊತ್ತಾಗಿದೆ. ಯಾರೋ ಅಪರಿಚಿತ ವ್ಯಕ್ತಿ ದೇವಸ್ಥಾನದಿಂದ ಹೋಗಿರುವುದನ್ನು ಸ್ಥಳೀಯರು ನೋಡಿರುವುದಾಗಿ ತಿಳಿಸಿದ್ದಾರೆ.ದೇವಸ್ಥಾನದ ಹಣವನ್ನು ಕಳವು ಮಾಡಿರುವ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಣಕಲ್: ದೇವಸ್ಥಾನದ ಹುಂಡಿ ಕಳವು Read More »