ರಾಜ್ಯ

ಹವಾಮಾನ ವರದಿ| ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದಂತ ಮಳೆ, ಮತ್ತೆ ಶುರುವಾಗಲಿದೆ. ಮುಂದಿನ ಎರಡು ದಿನ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಜುಲೈ.16ರಿಂದ ಜುಲೈ.19ರವರೆಗೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಜುಲೈ.18ರಿಂದ ಮುಂದಿನ ಎರಡು ದಿನ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಹವಾಮಾನ ವರದಿ| ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ Read More »

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ ತಡೆಯಲು ಟಾಸ್ಕ್ ಪೋರ್ಸ್ ರಚನೆ

ಸಮಗ್ರ ನ್ಯೂಸ್:‌ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾಯಕ ನಾರಾಯಣಸ್ವಾಮಿ ಮೊಟ್ಟೆ ವಿಚಾರವನ್ನು ಪ್ರಸ್ತಾಪಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿ ಬೆಳೆದಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ ತಡೆಯಲು ಟಾಸ್ಕ್ ಪೋರ್ಸ್ ರಚನೆ Read More »

ವಿರಾಜಪೇಟೆ: ಮಾನವೀಯ ನೆಲೆಯಲ್ಲಿ ಆಸ್ಪತ್ರೆಗೆ ಹೊದಿಕೆ ದಾನ ನೀಡಿದ ಸಮಾಜ ಸೇವಕ ಕೆ.ಎ ಕುಶಲಪ್ಪ

ಸಮಗ್ರ ನ್ಯೂಸ್:‌ ಮಾನವೀಯ ಗುಣಗಳನ್ನು ಹೊಂದಿರುವವರು ಹಣದ ಮೌಲ್ಯ ನಿರ್ಣಯ ಮಾಡುವುದಿಲ್ಲ. ಪರರಿಗೆ ಉಪಯುಕ್ತವಾಗುವ ಕಾರ್ಯವನ್ನು ತೆರೆಯ ಹಿಂದೆ ಮಾಡುತ್ತಾರೆ. ಇದಕ್ಕೆ ಸಾಕ್ಷಿಯಂತೆ ವ್ಯಕ್ತಿಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಉಚಿತವಾಗಿ ಹೊದಿಕೆಗಳನ್ನು ನೀಡಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಪಟ್ಟಣದ ಆರ್.ಐ.ಹೆಚ್.ಪಿ. ಆಸ್ಪತ್ರೆಗೆ ರಿ ಬಿಲ್ಡ್ ಕೊಡಗು ಸಂಸ್ಥಾಪಕರಾದ ಕೆ.ಎ. ಕುಶಾಲಪ್ಪ ಅವರು ತನ್ನ ತಂದೆಯಾದ ದಿವಂಗತ ಕೆ.ಪಿ. ಅಯ್ಯಪ್ಪ ಹೆಸರಿನಲ್ಲಿ ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಅರವತ್ತು ಹೊದಿಕೆಗಳನ್ನು ಉಚಿತವಾಗಿ ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ. ಕೊಡಗು

ವಿರಾಜಪೇಟೆ: ಮಾನವೀಯ ನೆಲೆಯಲ್ಲಿ ಆಸ್ಪತ್ರೆಗೆ ಹೊದಿಕೆ ದಾನ ನೀಡಿದ ಸಮಾಜ ಸೇವಕ ಕೆ.ಎ ಕುಶಲಪ್ಪ Read More »

KAR TET-2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯು, ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಪರೀಕ್ಷಾ ದಿನಾಂಕ ಮತ್ತು ಇನ್ನಿತರ ಮಾಹಿತಿಯನ್ನು ನೀಡಿದೆ.‌ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್ https://www.schooleducation.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ

KAR TET-2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ Read More »

ಚಿಕ್ಕಮಗಳೂರು: ರಸ್ತೆಯಲ್ಲಿ ಸಿಕ್ಕ 12900 ಹಣವನ್ನು ವಾರಸುದಾರರಿಗೆ ತಲುಪಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್:‌ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ರಸ್ತೆಯಲ್ಲಿ ಹೋಗುವಾಗ ದಾರಿಯಲ್ಲಿ ಸಿಕ್ಕ 12 ಸಾವಿರ ಹಣವನ್ನ ವಿದ್ಯಾರ್ಥಿಗಳು ಪೊಲೀಸರಿಗೆ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಎಸ್.ವಿ.ಟಿ.ರಸ್ತೆಯ ಚಂದು ಆಟ್ರ್ಸ್ ಬಳಿ ಕಲ್ಕೆರೆ ಗ್ರಾಮದ ಜಯಂತ್ ಎಂಬುವರು 12900 ರೂಪಾಯಿ ಹಣವನ್ನ ಕಳೆದುಕೊಂಡಿದ್ದರು. ಕೊಪ್ಪಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗುವಾಗ ರಸ್ತೆಯಲ್ಲಿ 12900 ರೂಪಾಯಿ ಹಣ ಸಿಕ್ಕಿತ್ತು. ಆ ಹಣವನ್ನ ವಿದ್ಯಾರ್ಥಿಗಳು ಶುಕ್ರವಾರ ಪೊಲೀಸರಿಗೆ ನೀಡಿ,

ಚಿಕ್ಕಮಗಳೂರು: ರಸ್ತೆಯಲ್ಲಿ ಸಿಕ್ಕ 12900 ಹಣವನ್ನು ವಾರಸುದಾರರಿಗೆ ತಲುಪಿಸಿದ ವಿದ್ಯಾರ್ಥಿಗಳು Read More »

ಕೊಟ್ಟಿಗೆಹಾರ: ಕಾಡಾನೆ ದಾಳಿ, ಮೇಯಲು ಕಟ್ಟಿ ಹಾಕಿದ್ದ ಹಸು ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ತೋಟದಲ್ಲಿ ಮೇಯಲು ಕಟ್ಟಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದ ಬೋಬೇಗೌಡ ಅವರ ತೋಟದಲ್ಲಿ ಹಾಡುಹಗಲೇ ಕಾಡಾನೆ ದಾಳಿ ಮಾಡಿದೆ. ತೋಟದಲ್ಲಿದ್ದ ಬಾಳೆಗಿಡವನ್ನ ಸಂಪೂರ್ಣ ನಾಶ ಮಾಡಿದ್ದು ಇನ್ನು ಅಡಿಕೆ ಹಾಗೂ ತೆಂಗಿನ ಮರಗಳನ್ನ ಬುಡಸಮೇತ ಕಿತ್ತು ಹಾಕಿದೆ. ತೋಟದಲ್ಲಿ ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೂ ಕಾಡಾನೆ ದಾಳಿ ಮಾಡಿದ್ದು ಹಸು ಕೂಡ

ಕೊಟ್ಟಿಗೆಹಾರ: ಕಾಡಾನೆ ದಾಳಿ, ಮೇಯಲು ಕಟ್ಟಿ ಹಾಕಿದ್ದ ಹಸು ಸಾವು Read More »

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ರಿಲೀಪ್

ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳ ಇಲ್ಲವೆಂದು ಬಿ ರಿಪೋರ್ಟ್​​ ಸಲ್ಲಿಸಿದ್ದರು. ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ರಿಲೀಪ್ Read More »

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೊಡವ ನ್ಯಾಷನಲ್ ಕೌನ್ಸಿಲ್ ನಿಯೋಗ

ಸಮಗ್ರ ನ್ಯೂಸ್:‌ ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಶಾಸಕ ಎ. ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ನಿಯೋಗವು ಜು.15 ರಂದು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಕೊಡಗರು ಎಂದು ನಮೂದಾಗಿರುವ ಕೊಡವ ಸಮುದಾಯದ ಹೆಸರನ್ನು ಕೊಡವ ಎಂದು ತಿದ್ದುಪಡಿ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲು ಕೂಡ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೊಡವ ನ್ಯಾಷನಲ್ ಕೌನ್ಸಿಲ್ ನಿಯೋಗ Read More »

ಕೊಡಗು: ಮಾನಸಿಕ ಅಸ್ವಸ್ಥ ಮಹಿಳೆಯನ್ನು ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಸಂಘಟನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಗ್ರಾಮ ಪಂಚಾಯತ್ ಬಸ್ ನಿಲ್ದಾಣದಲ್ಲಿ ಮಾನಸಿಕವಾಗಿ ಅಸ್ವಸ್ಥಗೊಂಡ ಮಹಿಳೆಯೊಬ್ಬರು ಕಳೆದ ಒಂದು ವರ್ಷದಿಂದ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದುದಲ್ಲದೆ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮಹಿಳೆಯನ್ನು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಕರವೇ ಸಂಘಟನೆ ಸೇರಿಕೊಂಡು ಅನಾಥಾಶ್ರಮಕ್ಕೆ ಸೇರಿಸಲಾಗಿದೆ. ಮಹಿಳೆಯೊಬ್ಬರು ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದನ್ನು ಅರಿತ ಕೊಡ್ಲಿಪೇಟೆ ಜನರು ಗ್ರಾಮ ಪಂಚಾಯತ್‌ಗೆ ಮನವಿ ಸಲ್ಲಿಸಿದ್ದರು. ಇದರಿಂದ ಕೊಡ್ಲಿಪೇಟೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್

ಕೊಡಗು: ಮಾನಸಿಕ ಅಸ್ವಸ್ಥ ಮಹಿಳೆಯನ್ನು ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಸಂಘಟನೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ ಆರೋಪಿಗಳಿಗೆ ಮತ್ತೆ ಎಚ್ಚರಿಕೆ

ಸಮಗ್ರ ನ್ಯೂಸ್: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎನ್ನುವ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಮತ್ತೊಮ್ಮೆ ಎನ್‌ಐಎ (NIA) ಹೊರಡಿಸಿದೆ. ಇದು ತಲೆಮರೆಸಿಕೊಂಡಿರುವ ಹಂತಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದೆ. ಸುಳ್ಯ‌ ನಗರ ಹಾಗೂ ಬೆಳ್ಳಾರೆಯಲ್ಲಿ ಈ ಕುರಿತಂತೆ ಮೈಕ್ ಮೂಲಕ ಅನೌನ್ಸ್ ಮೆಂಟ್ ಮಾಡಿದ ಎನ್ಐಎ ಅಧಿಕಾರಿಗಳು,ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ ಆರೋಪಿಗಳಿಗೆ ಮತ್ತೆ ಎಚ್ಚರಿಕೆ Read More »