ರಾಜ್ಯ

ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ| ಇಂದೂ ಸುರಿಯಲಿದೆ ಭಾರೀ ಮಳೆ| ಕರಾವಳಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಕರಾವಳಿ, ಮಲೆನಾಡು ಭಾಗದ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ಉಡುಪಿ ಸಮೀಪದ ಬಜೆ ಹಾಗೂ ಶಿವಮೊಗ್ಗದ ಗಾಜನೂರು ಜಲಾಶಯಗಳು ಭರ್ತಿಯಾಗಿವೆ. ರಾಜ್ಯಾದ್ಯಂತ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್

ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ| ಇಂದೂ ಸುರಿಯಲಿದೆ ಭಾರೀ ಮಳೆ| ಕರಾವಳಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read More »

ಕರ್ನಾಟಕ ವಕ್ಫ್ ಬೋರ್ಡ್ ಸ್ಥಾನಕ್ಕೆ ಶಾಫಿ ಸ ಅದಿ ರಾಜೀನಾಮೆ

ಸಮಗ್ರ ನ್ಯೂಸ್: ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಇಂದು (ಜು.5) ರಾಜೀನಾಮೆ ಸಲ್ಲಿಸಿದ್ದಾರೆ. ಶಾಫಿ ಸಅದಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಸರಕಾರವು ಅಂಗೀಕರಿಸಿದ್ದು, ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಶಾಫಿ ಸಅದಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ವಕ್ಫ್ ಬೋರ್ಡ್ ಸ್ಥಾನಕ್ಕೆ ಶಾಫಿ ಸ ಅದಿ ರಾಜೀನಾಮೆ Read More »

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಪ್ರಸ್ತಾವನೆ ಇಲ್ಲ – ಸಚಿವ ಕೆ. ವೆಂಕಟೇಶ್

ಸಮಗ್ರ ನ್ಯೂಸ್: 2020 ರ ಗೋಹತ್ಯೆ ವಿರೋಧಿ ಕಾಯ್ದೆಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿದ್ದರೂ, ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದಿಂದ ಸ್ಪಷ್ಟವಾದ ಹೇಳಿಕೆಯನ್ನು ಪದೇ ಪದೇ ಬಯಸುತ್ತಿದೆ. ಜೊತೆಗೆ ಕಲಾಪದಲ್ಲಿ ಈ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ಗೋಹತ್ಯೆಗೆ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಆರೋಪಿಸಿ ಜುಲೈ 5 ರಂದು ವಿಧಾನ ಮಂಡಲದ ಕಲಾಪವನ್ನು ಸ್ಥಗಿತಗೊಳಿಸಿದ್ದಾರೆ. ಮೈಸೂರಿನಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಪ್ರಸ್ತಾವನೆ ಇಲ್ಲ – ಸಚಿವ ಕೆ. ವೆಂಕಟೇಶ್ Read More »

ಮುಂದುವರಿದ ರಣ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜು.6) ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆ (ಜು. 6) ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ಮುಂದುವರಿದ ರಣ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜು.6) ರಜೆ ಘೋಷಣೆ Read More »

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »

ಭಾರೀ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ| ಆತಂಕದಲ್ಲಿ ಜನತೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ ಮಳೆಯಿಂದಾಗಿ ಕುಸಿದಿದ್ದು, ಮತ್ತಷ್ಟು ಕುಸಿಯುವ ಭೀತಿ ಎದುರಾಗಿದ್ದು, ಸ್ಥಳೀಯ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ ಗುಡ್ಡ ಕುಸಿದ ಸ್ಥಳದಲ್ಲಿ ಜಿಲ್ಲಾಡಳಿತ ಟಾರ್ಪಲ್ ಹೊದಿಸಲಾಗಿದೆ. ಸದ್ಯ ಪಿವಿಎಸ್-ಕೆ.ಎಸ್. ರಾವ್ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇನ್ನು ಮಂಗಳೂರು ನಗರದ ಹೊರವಲಯ‌ ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದ ಜೊಹರಾ ಎಂಬವರ ಮನೆಗೆ

ಭಾರೀ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ| ಆತಂಕದಲ್ಲಿ ಜನತೆ Read More »

ಮೂಡಬಿದ್ರೆ: ಪರಸ್ತ್ರೀ ಜೊತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಪುತ್ರ ಆತ್ಮಹತ್ಯೆ| ರಾಸಕ್ರೀಡೆಯ ವಿಡಿಯೋ ವೈರಲ್ ಮಾಡಿದಾತ ಅರೆಸ್ಟ್

ಸಮಗ್ರ ನ್ಯೂಸ್ : ಮಧ್ಯವಯಸ್ಸಿನ ಜೋಡಿಯ ರಾಸಕ್ರೀಡೆಯ ವಿಡಿಯೋ ವೈರಲ್ ಬಳಿಕ ವಿಡಿಯೋದಲ್ಲಿದ್ದ ವ್ಯಕ್ತಿಯ ಪುತ್ರ ಆತ್ಮಹತ್ಯೆಗೆ ಶರಣಾಗಿರುವ ಬೆನ್ನಲ್ಲೇ ವಿಡಿಯೋ ಮಾಡಿ ಬಳಿಕ ವಿಡಿಯೋ ವೈರಲ್ ಮಾಡಿದ್ದ ಆರೋಪಿಯನ್ನು ಮೂಡಬಿದ್ರಿ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದೆ. ಕೆಲ ಸಮಯದ ಹಿಂದೆಯೇ ಘಟನೆಯ ವಿಡಿಯೋ ಚಿತ್ರೀಕರಣವಾಗಿದೆ ಎನ್ನಲಾಗುತ್ತಿದ್ದು, ವಿಡಿಯೋ ಚಿತ್ರೀಕರಿಸಿದ ಆರೋಪಿ ವಿಡಿಯೋದಲ್ಲಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣ ಕೂಡ ಸುಲಿಗೆ ಮಾಡಿದ್ದ ಎಂಬ ಆರೋಪ ಸಾಮಾಜಿಕ

ಮೂಡಬಿದ್ರೆ: ಪರಸ್ತ್ರೀ ಜೊತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಪುತ್ರ ಆತ್ಮಹತ್ಯೆ| ರಾಸಕ್ರೀಡೆಯ ವಿಡಿಯೋ ವೈರಲ್ ಮಾಡಿದಾತ ಅರೆಸ್ಟ್ Read More »

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೇರಳದಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇದೇ ರೀತಿ ಕರ್ನಾಟಕದ ಕರಾವಳಿಯಲ್ಲಿಯೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಸುರಿಯುವ ಮನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಇಡುಕ್ಕಿ, ತ್ರಿಶೂರ್ ಮತ್ತು ಎರ್ನಾಕುಲಂ ಜಿಲ್ಲಾಧಿಕಾರಿಗಳು ಬುಧವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ಗಳನ್ನು ಹೊರಡಿಸಿದ್ದು, ಬುಧವಾರ ಈ

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿಯಲ್ಲಿ ವರುಣಾರ್ಭಟ| ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಳೆಯಿಂದಾಗಿ ಕಾರವಾರದ ಹಬ್ಬುವಾಡದಲ್ಲಿರುವ ಸರಕಾರಿ ಬಸ್ ನಿಲ್ದಾಣ ಡಿಪೋ ಕಚೇರಿಯೊಳಗೆ ಮಳೆ‌ ನೀರು ನುಗ್ಗಿತ್ತು. ಡಿಪೋ ಕಚೇರಿಯ ಎಲೆಕ್ಟ್ರಾನಿಕ್

ಕರಾವಳಿಯಲ್ಲಿ ವರುಣಾರ್ಭಟ| ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜು.5 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಅವರು ಜಿಲ್ಲೆಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಘೋಷಣೆ Read More »