ರಾಜ್ಯ

ಶಿರಾಡಿ ಘಾಟ್ ನಲ್ಲಿ ಹೊತ್ತಿ‌ ಉರಿದ ಲಾರಿ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಮಿನಿ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ಬುಧವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ ಎಂದು ವರದಿಯಾಗಿದೆ. ಇದೇ ರಸ್ತೆಯಲ್ಲಿ ಬರುತ್ತಿದ್ದ ಅಂಬ್ಯುಲೆನ್ಸ್ ಚಾಲಕ ಲಾರಿಗೆ ಬೆಂಕಿ […]

ಶಿರಾಡಿ ಘಾಟ್ ನಲ್ಲಿ ಹೊತ್ತಿ‌ ಉರಿದ ಲಾರಿ Read More »

ರಾಜ್ಯದಲ್ಲಿ 20+ ಲಕ್ಷ ಅನರ್ಹ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ರದ್ದತಿಗೆ ಆಹಾರ‌ ಇಲಾಖೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್ ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ. ಅನರ್ಹ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದ್ದು, ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ ಹೊಣೆ ನೀಡಲು ಪ್ಲಾನ್ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯ ಅನಗತ್ಯ ವೆಚ್ಚ ಉಳಿಸಲು ಈ ಕಾರ್ಡ್ ಗಳನ್ನು ರದ್ದು ಮಾಡಲು ಚಿಂತನೆ ನಡೆಸಲಾಗಿದೆ. ಆಹಾರ ಭದ್ರತೆ

ರಾಜ್ಯದಲ್ಲಿ 20+ ಲಕ್ಷ ಅನರ್ಹ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ರದ್ದತಿಗೆ ಆಹಾರ‌ ಇಲಾಖೆ ಚಿಂತನೆ Read More »

ಮೀಸಲಾತಿ ರದ್ದು ಹೇಳಿಕೆ/ ನಾಳೆ ರಾಹುಲ್‌ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸಮಗ್ರ ನ್ಯೂಸ್‌: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಅಮೆರಿಕದಲ್ಲಿ ಮೀಸಲಾತಿ ರದ್ದು ಕುರಿತು ನೀಡಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿದ್ದು, ರಾಹುಲ್ ದೇಶದ ಜನರ ಕ್ಷಮೆ ಕೇಳಬೇಕು. ಕಾಂಗ್ರೆಸ್ ಮೀಸಲಾತಿ ವಿರೋಧಿ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತಿತ್ತು. ರಾಹುಲ್ ಹೇಳಿಕೆಯಿಂದ ಎಸ್ಸಿ, ಎಸ್‌ಟಿ ಸಮುದಾಯ ಗಾಬರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿಗೆ ನಾಚಿಕೆ

ಮೀಸಲಾತಿ ರದ್ದು ಹೇಳಿಕೆ/ ನಾಳೆ ರಾಹುಲ್‌ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ/ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯಮಿಗಳಿಗೆ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಮಹಿಳಾ ಉದ್ಯಮಿಗಳಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ. ಕುಟುಂಬದ ಯಜಮಾನಿಗೆ ಮಾಸಿಕ 3,000 ಹಣ, ಜೊತೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯಗಳನ್ನು ನೀಡುವ ಯೋಜನೆಯ ಮರುಜಾರಿ ಮಾಡುವುದಾಗಿ, ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ/ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌ Read More »

ಪದೇಪದೇ ಕೈಕೊಟ್ಟ ಎಲೆಕ್ಟ್ರಿಕ್ ಬೈಕ್| ಶೋರೂಂಗೆ ಬೆಂಕಿ ಇಟ್ಟ ಗ್ರಾಹಕ

ಸಮಗ್ರ ನ್ಯೂಸ್: ಖರೀದಿಸಿದ ಎಲೆಕ್ಟ್ರಿಕ್ ಬೈಕ್ ಆಗಾಗ್ಗೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೇಸತ್ತು ಗ್ರಾಹಕನೋರ್ವ ಶೋ ರೂಂಗೆ ಬೆಂಕಿ ಇಟ್ಟ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಸೆ.10ರಂದು ಕಲಬುರ್ಗಿಯ ಹುಮನಾಬಾದ್ ರಸ್ತೆಯಲ್ಲಿರುವ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಬಿದ್ದಿರುವ ಪ್ರಕರಣ ನಡೆದಿತ್ತು. ಆದರೆ ಇದು ಆಕಸ್ಮಿಕವಾಗಿ ನಡೆದಂತಹ ಘಟನೆ ಎಂದು ಊಹಿಸಲಾಗಿತ್ತು. ಆದರೆ ಯಾವಾಗ ಠಾಣೆಗೆ ಗ್ರಾಹಕನೊಬ್ಬ ಬಂದು ಶರಣಾಗಿ ನಾನೇ ಬೆಂಕಿ ಹಚ್ಚಿದ್ದೇನೆ ಎಂಬ ತಪ್ಪು ಒಪ್ಪಿಕೊಂಡಾಗ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಮೊಹಮ್ಮದ್ ನದೀಮ್ ಎಂಬಾತ ಈ ಕೃತ್ಯ

ಪದೇಪದೇ ಕೈಕೊಟ್ಟ ಎಲೆಕ್ಟ್ರಿಕ್ ಬೈಕ್| ಶೋರೂಂಗೆ ಬೆಂಕಿ ಇಟ್ಟ ಗ್ರಾಹಕ Read More »

ಮಂಗಳೂರು: ತಾಯಿಯನ್ನು ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

ಸಮಗ್ರ ನ್ಯೂಸ್: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ

ಮಂಗಳೂರು: ತಾಯಿಯನ್ನು ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ Read More »

ಬೆಂಗಳೂರಿನಲ್ಲಿ ಐವರು ನಕಲಿ GST ಅಧಿಕಾರಿಗಳನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: 1.5 ಕೋಟಿ ರೂ. ಹಣ ಪಡೆದಿದ್ದ ಕೇಂದ್ರದ ನಾಲ್ವರು GST ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಮೊಟ್ಟ ಮೊದಲ ಬಾರಿಗೆ ಬಂಧಿಸಿರುವಂತಹ ಘಟನೆ ನಡೆದಿದೆ. ಜಿಎಸ್ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳು. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಉದ್ಯಮಿ ಕೇಶವ್ ದೂರು ನೀಡಿದ್ದರು. ದೂರು ಆಧರಿಸಿ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ನಾಲ್ವರನ್ನು

ಬೆಂಗಳೂರಿನಲ್ಲಿ ಐವರು ನಕಲಿ GST ಅಧಿಕಾರಿಗಳನ್ನು ಬಂಧಿಸಿದ ಸಿಸಿಬಿ Read More »

ಸೆ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ್ತಾರೋಗಣೆ ಹಿನ್ನೆಲೆ| ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯದ ಪ್ರಸಿದ್ಧ ಯಾತ್ರಾ‌ ಕ್ಷೇತ್ರ‌ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಇರುವುದರಿಂದ ಸೆ. 12ರಂದು ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸೆ. 12 ರ ಗುರುವಾರದಂದು ದೇವಾಲಯದ ಪೂರ್ವ ಸಂಪ್ರದಾಯದಂತೆ ನವಾನ್ನ ಪ್ರಸಾದ ಅಥವಾ ಪುದ್ವಾರ್ ಊಟ ಹಾಗೂ ಕದಿರು(ತೆನೆ) ಹಂಚಿಕೆ ನಡೆಯುವ ಕಾರಣ ಭಕ್ತಾದಿಗಳಿಗೆ 10 ಗಂಟೆಯ ನಂತರ ದರ್ಶನವಿರಲಿದೆ ಹಾಗೂ ಎಂದಿನಂತೆ ನಡೆಯುವ ಆಶ್ಲೇಷ ಬಲಿ ಪೂಜೆಯು ಬೆಳಿಗ್ಗೆ 9 ಗಂಟೆಗೆ ಶುರುವಾಗಿ 2 ಪಾಳಿಯಲ್ಲಿ ಮಾತ್ರವಿರಲಿದೆ.

ಸೆ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ್ತಾರೋಗಣೆ ಹಿನ್ನೆಲೆ| ದೇವರ ದರ್ಶನ ಸಮಯದಲ್ಲಿ ಬದಲಾವಣೆ Read More »

ಮಂಗಳೂರು: ಮಾರ್ಬಲ್ ವ್ಯಾಪಾರಿಯಿಂದ 2.5 ಕೋಟಿ ವಂಚನೆ; ದೂರು ದಾಖಲು

ಸಮಗ್ರ ನ್ಯೂಸ್: ವ್ಯಾಪಾರದಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಪಡೆಯಬಹುದು ಎಂದು ನಂಬಿಸಿ ಮಾರ್ಬಲ್‌ ವ್ಯಾಪಾರಿಯೊಬ್ಬರು ವ್ಯಕ್ತಿಯೊಬ್ಬರಿಂದ ₹2.50 ಕೋಟಿ ಹಣ ಪಡೆದು ಮರಳಿಸದೇ ವಂಚಿಸಿದ ಬಗ್ಗೆ ನಗರ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ‘ಪರಿಚಯದವರೇ ಆದ ಮಹಮ್ಮದ್ ಶರೀಫ್ ಎಲ್. 2020 ನೇ ಮೇ ತಿಂಗಳಲ್ಲಿ ಸಿಕ್ಕಿದ್ದ. ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಈ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ತುಂಬಾ ಲಾಭವಿದೆ ಎಂದು ನಂಬಿಸಿದ್ದ. 2022ರ ಮೇ 20ರಂದು ಅತ್ತಾವರದಲ್ಲಿರುವ ನನ್ನ ಮನೆಗೆ

ಮಂಗಳೂರು: ಮಾರ್ಬಲ್ ವ್ಯಾಪಾರಿಯಿಂದ 2.5 ಕೋಟಿ ವಂಚನೆ; ದೂರು ದಾಖಲು Read More »

ಪ್ರೀತಿಸಿದ ಯುವತಿಗೆ ಕೈಕೊಟ್ಟು ಬ್ಲ್ಯಾಕ್ ಮೇಲ್| ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪ್ರೀತಿಸಿದ ಯುವತಿ ಕೈ ಕೊಟ್ಟ ಬಳಿಕ, ಆಕೆಯ ಖಾಸಗಿ ಪೋಟೋಗಳನ್ನು ಇಟ್ಟುಕೊಂಡು ಕೆಲ ತಿಂಗಳಿಂದ ಬ್ಲಾಕ್ ಮೇಲ್ ಮಾಡುತ್ತಿದ್ದ ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಪಶ್ಚಿಮ ವಿಭಾಗದ ಸೆನ್ ಠಾಣೆಯಲ್ಲಿ ದೂರು ನೀಡಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ತನಗೆ ಕಿರುತೆರೆ ನಟ ವರುಣ್ ಆರಾಧ್ಯ ಇನ್ಸ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ.ಪರಿಚಯ ಸ್ನೇಹಕ್ಕೆ ತಿರುಗಿ, ಆ ಬಳಿಕ ತಾವಿಬ್ಬರೂ ಪ್ರೀತಿಸುತ್ತಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಲ ತಿಂಗಳ ಹಿಂದಿನಿಂದ

ಪ್ರೀತಿಸಿದ ಯುವತಿಗೆ ಕೈಕೊಟ್ಟು ಬ್ಲ್ಯಾಕ್ ಮೇಲ್| ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು Read More »